2 ಅರಸುಗಳು 20:15 - ಪರಿಶುದ್ದ ಬೈಬಲ್15 ಯೆಶಾಯನು, “ಅವರು ನಿನ್ನ ಮನೆಯಲ್ಲಿ ಏನನ್ನು ನೋಡಿದರು?” ಎಂದು ಕೇಳಿದನು. ಹಿಜ್ಕೀಯನು, “ಅವರು ನನ್ನ ಮನೆಯಲ್ಲಿರುವುದನ್ನೆಲ್ಲಾ ನೋಡಿದರು. ಅವರಿಗೆ ತೋರಿಸದೆ ಉಳಿದಿರುವುದು ನನ್ನ ಭಂಡಾರದಲ್ಲಿ ಏನೂ ಇಲ್ಲ” ಎಂದು ಉತ್ತರಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಯೆಶಾಯನು ತಿರುಗಿ ಹಿಜ್ಕೀಯನನ್ನು, “ಅವರು ನಿನ್ನ ಮನೆಯಲ್ಲಿ ಏನು ನೋಡಿದರು?” ಎಂದು ಕೇಳಲು ಅವನು, “ಅರಮನೆಯಲ್ಲಿ ಇರುವುದೆಲ್ಲವನ್ನೂ ನೋಡಿದರು. ನನ್ನ ಭಂಡಾರದಲ್ಲಿ ನಾನು ಅವರಿಗೆ ತೋರಿಸದಿದ್ದ ಒಂದು ವಸ್ತುವು ಇರುವುದಿಲ್ಲ” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಯೆಶಾಯನು ಮತ್ತೆ ಅವನನ್ನು, “ಅವರು ನಿನ್ನ ಅರಮನೆಯಲ್ಲಿ ಏನು ನೋಡಿದರು?” ಎಂದು ಕೇಳಲು ಹಿಜ್ಕೀಯನು, “ಅರಮನೆಯಲ್ಲಿರುವುದೆಲ್ಲವನ್ನೂ ನೋಡಿದರು. ನನ್ನ ಭಂಡಾರದಲ್ಲಿ ನಾನು ಅವರಿಗೆ ತೋರಿಸದಿದ್ದ ಒಡವೆ ವಸ್ತು ಒಂದೂ ಇಲ್ಲ,” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಯೆಶಾಯನು ತಿರಿಗಿ ಅವನನ್ನು - ಅವರು ನಿನ್ನ ಅರಮನೆಯಲ್ಲಿ ಏನು ನೋಡಿದರು ಎಂದು ಕೇಳಲು ಅವನು - ಅರಮನೆಯಲ್ಲಿರುವದೆಲ್ಲವನ್ನೂ ನೋಡಿದರು. ನನ್ನ ಭಂಡಾರದಲ್ಲಿ ನಾನು ಅವರಿಗೆ ತೋರಿಸದಿದ್ದ ವಸ್ತುವು ಒಂದೂ ಇರುವದಿಲ್ಲ ಅಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಅದಕ್ಕೆ ಯೆಶಾಯನು ಪುನಃ ಅವನನ್ನು, “ಅವರು ನಿನ್ನ ಅರಮನೆಯಲ್ಲಿ ಏನನ್ನು ನೋಡಿದರು?” ಎಂದು ಕೇಳಿದನು. ಹಿಜ್ಕೀಯನು, “ನನ್ನ ಅರಮನೆಯಲ್ಲಿ ಇರುವುದೆಲ್ಲವನ್ನು ಅವರು ನೋಡಿದರು, ನನ್ನ ಭಂಡಾರದಲ್ಲಿ ನಾನು ಅವರಿಗೆ ತೋರಿಸದೆ ಇದ್ದದ್ದು ಏನೂ ಇಲ್ಲ,” ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿ |