5 “ಹಿಂದಿರುಗಿ ಹೋಗಿ, ನನ್ನ ಜನರ ನಾಯಕನಾದ ಹಿಜ್ಕೀಯನಿಗೆ ಇದನ್ನು ಹೇಳು: ‘ನಿನ್ನ ಪೂರ್ವಿಕನಾದ ದಾವೀದನ ದೇವರಾದ ಯೆಹೋವನು ಹೀಗೆನ್ನುತ್ತಾನೆ: ನಾನು ನಿನ್ನ ಪ್ರಾರ್ಥನೆಯನ್ನು ಕೇಳಿದೆನು; ನಿನ್ನ ಕಣ್ಣೀರನ್ನು ನೋಡಿದೆನು. ಆದ್ದರಿಂದ ನಾನು ನಿನ್ನನ್ನು ಗುಣಪಡಿಸುತ್ತೇನೆ. ಮೂರನೆಯ ದಿನ, ನೀನು ದೇವಾಲಯಕ್ಕೆ ಹೋಗುವೆ.
5 “ನೀನು ಹಿಂದಿರುಗಿ ಹೋಗಿ, ನನ್ನ ಜನಗಳ ಪ್ರಭುವಾಗಿರುವ ಹಿಜ್ಕೀಯನಿಗೆ, ‘ನಿನ್ನ ಪಿತೃವಾದ ದಾವೀದನ ದೇವರಾದ ಯೆಹೋವನು ಹೇಳಿದ್ದೇನೆಂದರೆ, ನಾನು ನಿನ್ನ ಪ್ರಾರ್ಥನೆಯನ್ನು ಕೇಳಿದ್ದೇನೆ, ನಿನ್ನ ಕಣ್ಣೀರನ್ನು ನೋಡಿದ್ದೇನೆ. ನೀನು ಗುಣಹೊಂದಿ ಮೂರನೆಯ ದಿನ ನನ್ನ ಆಲಯಕ್ಕೆ ಬರುವೆ.
5 “ನೀನು ಹಿಂದಿರುಗಿ ಹೋಗಿ ನನ್ನ ಪ್ರಜೆಗಳ ಒಡೆಯನಾಗಿರುವ ಹಿಜ್ಕೀಯನಿಗೆ, “ನಾನು ನಿನ್ನ ಪ್ರಾರ್ಥನೆಯನ್ನು ಕೇಳಿದ್ದೇನೆ; ನಿನ್ನ ಕಣ್ಣೀರನ್ನು ನೋಡಿದ್ದೇನೆ; ನೀನು ಗುಣಹೊಂದಿ ಮೂರನೆಯ ದಿನ ನನ್ನ ಆಲಯಕ್ಕೆ ಬರುವೆ.
5 ನೀನು ಹಿಂದಿರುಗಿ ಹೋಗಿ ನನ್ನ ಪ್ರಜೆಗಳ ಪ್ರಭುವಾಗಿರುವ ಹಿಜ್ಕೀಯನಿಗೆ - ನಾನು ನಿನ್ನ ಪ್ರಾರ್ಥನೆಯನ್ನು ಕೇಳಿದ್ದೇನೆ; ನಿನ್ನ ಕಣ್ಣೀರನ್ನು ನೋಡಿದ್ದೇನೆ; ನೀನು ಗುಣಹೊಂದಿ ನಾಡದು ನನ್ನ ಆಲಯಕ್ಕೆ ಬರುವಿ.
5 ದೇವರು ಅವನಿಗೆ, “ನೀನು ಹಿಂದಿರುಗಿ ಹೋಗಿ ನನ್ನ ಜನರ ನಾಯಕನಾದ ಹಿಜ್ಕೀಯನಿಗೆ, ‘ನಿನ್ನ ತಂದೆಯಾದ ದಾವೀದನ ದೇವರಾದ ಯೆಹೋವ ದೇವರು ಹೇಳಿದ್ದೇನೆಂದರೆ: ನಾನು ನಿನ್ನ ಪ್ರಾರ್ಥನೆಯನ್ನು ಕೇಳಿದ್ದೇನೆ, ನಿನ್ನ ಕಣ್ಣೀರನ್ನೂ ಕಂಡಿದ್ದೇನೆ. ನಾನು ನಿನ್ನನ್ನು ಸ್ವಸ್ಥಮಾಡುತ್ತೇನೆ. ಮೂರನೆಯ ದಿವಸದಲ್ಲಿ ಯೆಹೋವ ದೇವರ ಆಲಯಕ್ಕೆ ಹೋಗುವೆ.
“ನಾಳೆ ಇದೇ ಸಮಯಕ್ಕೆ ನಾನು ನಿನ್ನ ಬಳಿಗೆ ಒಬ್ಬ ಮನುಷ್ಯನನ್ನು ಕಳುಹಿಸುತ್ತೇನೆ. ಅವನು ಬೆನ್ಯಾಮೀನ್ ಕುಟುಂಬಕ್ಕೆ ಸೇರಿದವನು. ನೀನು ಅವನನ್ನು ಅಭಿಷೇಕಿಸು. ನನ್ನ ಜನರಾದ ಇಸ್ರೇಲರಿಗೆ ಅವನು ರಾಜನಾಗುತ್ತಾನೆ. ಈ ಮನುಷ್ಯನು ನನ್ನ ಜನರನ್ನು ಫಿಲಿಷ್ಟಿಯರಿಂದ ರಕ್ಷಿಸುತ್ತಾನೆ. ನನ್ನ ಜನರ ಸಂಕಟವನ್ನು ನಾನು ನೋಡಿದ್ದೇನೆ; ನನ್ನ ಜನರ ಗೋಳನ್ನು ನಾನು ಆಲಿಸಿದ್ದೇನೆ” ಎಂದು ತಿಳಿಸಿದ್ದನು.
“ಹಿಜ್ಕೀಯನ ಬಳಿಗೆ ಹೋಗಿ ಹೇಳು, ನಿನ್ನ ಪೂರ್ವಿಕನಾದ ದಾವೀದನ ದೇವರಾದ ಯೆಹೋವನು ಹೇಳುವುದೇನೆಂದರೆ: ‘ನಿನ್ನ ಪ್ರಾರ್ಥನೆಯನ್ನು ನಾನು ಕೇಳಿದೆನು; ನಿನ್ನ ಕಣ್ಣೀರನ್ನು ನೋಡಿದೆನು. ನಿನ್ನ ಆಯುಷ್ಯಕ್ಕೆ ಹದಿನೈದು ವರ್ಷಗಳನ್ನು ಸೇರಿಸಿದ್ದೇನೆ.
ಯೆಹೋವನೇ, ನನ್ನ ಪ್ರಾರ್ಥನೆಯನ್ನು ಕೇಳು! ನನ್ನ ಮೊರೆಗೆ ಕಿವಿಗೊಡು! ನನ್ನ ಕಣ್ಣೀರನ್ನು ನೋಡು! ನಾನು ಈ ಜೀವಿತವನ್ನು ಕೇವಲ ಒಬ್ಬ ಪ್ರಯಾಣಿಕನಂತೆ ನಿನ್ನೊಂದಿಗೆ ಸಾಗಿಸುತ್ತಿರುವೆ. ನನ್ನ ಎಲ್ಲಾ ಪೂರ್ವಿಕರಂತೆ, ನಾನು ಇಲ್ಲಿ ಕೇವಲ ಸ್ವಲ್ಪಕಾಲ ಜೀವಿಸುವೆನು.
ಆಮೋಚನ ಮಗನಾದ ಯೆಶಾಯನು ಹಿಜ್ಕೀಯನಿಗೆ ಈ ಸಂದೇಶವನ್ನು ಕಳುಹಿಸಿದನು: “ಇಸ್ರೇಲಿನ ದೇವರಾದ ಯೆಹೋವನು ಹೀಗೆನ್ನುತ್ತಾನೆ: ಅಶ್ಶೂರದ ರಾಜನಾದ ಸನ್ಹೇರೀಬನ ವಿರುದ್ಧವಾಗಿ ನೀವು ನನ್ನಲ್ಲಿ ಪಾರ್ಥಿಸಿರುವಿರಿ. ನಾನು ನಿಮ್ಮ ಪ್ರಾರ್ಥನೆಯನ್ನು ಕೇಳಿದ್ದೇನೆ.
ಸಿಂಹಾಸನದ ಮಧ್ಯೆ ಇರುವ ಕುರಿಮರಿಯಾದಾತನು ಅವರ ಕುರುಬನಾಗಿರುತ್ತಾನೆ. ಆತನು ಅವರನ್ನು ಜೀವ ನೀಡುವ ನೀರಿನ ಬುಗ್ಗೆಗಳ ಬಳಿಗೆ ಕರೆದೊಯ್ಯುತ್ತಾನೆ. ಅವರ ಕಣ್ಣುಗಳಿಂದ ತೊಟ್ಟಿಕ್ಕುವ ಕಣ್ಣೀರನ್ನೆಲ್ಲ ದೇವರು ಒರಸಿಹಾಕುತ್ತಾನೆ” ಎಂದು ಹೇಳಿದನು.
ಅನಂತರ ಯೇಸು ಆ ಮನುಷ್ಯನನ್ನು ದೇವಾಲಯದಲ್ಲಿ ಕಂಡು ಅವನಿಗೆ, “ನೋಡು, ಈಗ ನೀನು ಗುಣಹೊಂದಿರುವೆ. ಆದರೆ ಪಾಪ ಮಾಡುವುದನ್ನು ಬಿಟ್ಟುಬಿಡು. ಇಲ್ಲದಿದ್ದರೆ ಹೆಚ್ಚಿನ ಕೇಡು ನಿನಗೆ ಸಂಭವಿಸಬಹುದು!” ಎಂದು ಹೇಳಿದನು.
ಆದರೆ ದೇವದೂತನು ಅವನಿಗೆ, “ಜಕರೀಯನೇ, ಹೆದರಬೇಡ. ನಿನ್ನ ಪ್ರಾರ್ಥನೆ ದೇವರಿಗೆ ಕೇಳಿಸಿತು. ನಿನ್ನ ಹೆಂಡತಿಯಾದ ಎಲಿಜಬೇತಳು ಒಂದು ಗಂಡುಮಗುವನ್ನು ಹೆರುವಳು. ನೀನು ಅವನಿಗೆ ಯೋಹಾನ ಎಂದು ಹೆಸರಿಡಬೇಕು.
‘ನಾನು ಅಬ್ರಹಾಮನ ದೇವರು, ಇಸಾಕನ ದೇವರು ಮತ್ತು ಯಾಕೋಬನ ದೇವರು’ ಎಂದು ಹೇಳಿರುವುದನ್ನು ನೀವು ಓದಿಲ್ಲವೇ? ಹೀಗಿರುವಲ್ಲಿ, ದೇವರು ಜೀವಿತರಿಗೆ ಮಾತ್ರ ದೇವರೇ ಹೊರತು ಸತ್ತವರಿಗಲ್ಲಾ” ಅಂದನು.
ಆತನು ಅವರಿಗೆ, “ನೀವು ನಿಮ್ಮ ದೇವರಾದ ಯೆಹೋವನ ಮಾತನ್ನು ಶ್ರದ್ಧೆಯಿಂದ ಕೇಳಿ ಆತನ ದೃಷ್ಟಿಗೆ ಯೋಗ್ಯವಾದವುಗಳನ್ನು ಮಾಡಬೇಕು; ಆತನ ಆಜ್ಞೆಗಳಿಗೆ ವಿಧೇಯರಾಗಿದ್ದು ಆತನ ಕಟ್ಟಳೆಗಳನ್ನೆಲ್ಲಾ ಅನುಸರಿಸಬೇಕು. ಆಗ ನಾನು ಈಜಿಪ್ಟಿನವರಿಗೆ ಉಂಟುಮಾಡಿದ ಕಾಯಿಲೆಗಳಲ್ಲಿ ಒಂದನ್ನೂ ನಿಮಗೆ ಬರಗೊಡಿಸುವುದಿಲ್ಲ. ಯೆಹೋವನೆಂಬ ನಾನೇ ನಿಮಗೆ ಆರೋಗ್ಯದಾಯಕನಾಗಿದ್ದೇನೆ” ಎಂದು ಹೇಳಿದನು.
ಸಮುವೇಲನು ವಿಶೇಷವಾದ ಎಣ್ಣೆಯ ಕುಪ್ಪಿಯನ್ನು ತೆಗೆದುಕೊಂಡು ಸೌಲನ ತಲೆಯ ಮೇಲೆ ಆ ಎಣ್ಣೆಯನ್ನು ಸುರಿದನು. ಸಮುವೇಲನು ಸೌಲನಿಗೆ ಮುದ್ದಿಟ್ಟು, “ಯೆಹೋವನು ತನ್ನ ಜನರನ್ನು ಮುಂದೆ ನಡೆಸಲು ನಿನ್ನನ್ನು ಅವರಿಗೆ ನಾಯಕನನ್ನಾಗಿ ಅಭಿಷೇಕಿಸಿದ್ದಾನೆ. ನೀನು ಯೆಹೋವನ ಜನರನ್ನು ಆಳುವೆ; ಅವರನ್ನು ಸುತ್ತುವರೆದಿರುವ ಶತ್ರುಗಳಿಂದ ರಕ್ಷಿಸುವೆ. ಯೆಹೋವನು ತನ್ನ ಜನರನ್ನು ಆಳುವುದಕ್ಕಾಗಿ ನಿನ್ನನ್ನು ಅಭಿಷೇಕಿಸಿದ್ದಾನೆ. ಇದು ನಿಜವೆಂಬುದಕ್ಕೆ ಸಾಕ್ಷಿಯೇನೆಂದರೆ:
ಸಮಸ್ತವನ್ನು ಸೃಷ್ಟಿಸಿದಾತನು ದೇವರೇ. ಸಮಸ್ತವು ಆತನ ಮಹಿಮೆಗಾಗಿಯೇ ಸೃಷ್ಟಿಯಾಯಿತು. ದೇವರು ತನ್ನವರೇ ಆದ ಅನೇಕ ಜನರನ್ನು ಹೊಂದಿಕೊಂಡು ಅವರೊಂದಿಗೆ ತನ್ನ ಮಹಿಮೆಯನ್ನು ಹಂಚಿಕೊಳ್ಳಲು ಬಯಸಿದನು. ಆದ್ದರಿಂದ ಆತನು ಅವರನ್ನು ರಕ್ಷಣೆಗೆ ನಡೆಸಲು ಪರಿಪೂರ್ಣನಾದ ಒಬ್ಬಾತನನ್ನು ನಿರ್ಮಿಸಿದನು. ಆತನೇ ಯೇಸು. ದೇವರು ಆತನನ್ನು ಬಾಧೆಗಳ ಮೂಲಕವೇ ಪರಿಪೂರ್ಣನಾದ ರಕ್ಷಕನನ್ನಾಗಿ ಮಾಡಿದನು.
ನಾನು ಹೇಳುವ ವಿಷಯಗಳಿಗೆ ಸರಿಯಾಗಿ ಕಿವಿಗೊಡಿರಿ. ನಿಮ್ಮ ಆತ್ಮಗಳು ಜೀವಿಸುವಂತೆ ನನ್ನ ಮಾತುಗಳನ್ನು ಕೇಳಿರಿ. ನನ್ನ ಬಳಿಗೆ ಬನ್ನಿರಿ, ನಾನು ನಿಮ್ಮೊಂದಿಗೆ ಶಾಶ್ವತವಾದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು. ನಾನು ದಾವೀದನೊಂದಿಗೆ ಮಾಡಿಕೊಂಡ ಒಡಂಬಡಿಕೆಯಂತೆ ಅದಿರುವುದು. ನಾನು ದಾವೀದನಿಗೆ ಅವನನ್ನು ಪ್ರೀತಿಸುವೆನೆಂದೂ ಅವನಿಗೆ ಪ್ರಾಮಾಣಿಕನಾಗಿರುವೆನೆಂದೂ ವಾಗ್ದಾನ ಮಾಡಿದ್ದೆನು. ಆ ಒಡಂಬಡಿಕೆಯನ್ನು ನೀವು ಖಂಡಿತವಾಗಿ ನಂಬಬಹುದು.
ಹಿಂದಿನ ದಿನಗಳಲ್ಲಿ, ಸೌಲನು ರಾಜನಾಗಿದ್ದಾಗಲೂ ನಮ್ಮನ್ನು ಯುದ್ಧದಲ್ಲಿ ಮುನ್ನಡೆಸಿದವನು ನೀನೇ. ಯೆಹೋವನು ನಿನ್ನನ್ನು ಕುರಿತು, ‘ನೀನು ನನ್ನ ಜನರಾದ ಇಸ್ರೇಲರ ನಾಯಕನೂ ಪಾಲಕನೂ ಆಗಿರುವೆ’ ಎಂದು ಹೇಳಿದ್ದಾನೆ” ಎಂದರು.
“‘ನಾನೇ ದೇವರು, ನನ್ನ ಹೊರತು ಬೇರೆ ದೇವರಿಲ್ಲ. ಜನರಿಗೆ ಮರಣವನ್ನೂ ಜೀವವನ್ನೂ ಕೊಡುವವನು ನಾನೇ. ಅವರಿಗೆ ಗಾಯ ಮಾಡುವವನೂ ನಾನೇ, ಅದನ್ನು ಗುಣಮಾಡುವವನೂ ನಾನೇ. ನನ್ನ ಶಕ್ತಿಯ ಹಿಡಿತದಿಂದ ಇನ್ನೊಬ್ಬನನ್ನು ರಕ್ಷಿಸಲು ಯಾರಿಗೂ ಸಾಧ್ಯವಿಲ್ಲ.
ಅವನ ಆಳ್ವಿಕೆಯ ಎಂಟನೆಯ ವರ್ಷದಲ್ಲಿ ತನ್ನ ಪಿತೃವಾದ ದಾವೀದನು ಅನುಸರಿಸಿದ್ದ ದೇವರನ್ನು ಅನುಸರಿಸಿದನು. ಆಗ ಅವನು ಇನ್ನೂ ಎಳೆಯ ಪ್ರಾಯದವನಾಗಿದ್ದನು. ಅವನು ಪಟ್ಟಕ್ಕೆ ಬಂದ ಹನ್ನೆರಡನೆಯ ವರ್ಷದಲ್ಲಿ, ಜೆರುಸಲೇಮಿನಲ್ಲಿ ಮತ್ತು ಯೆಹೂದದಲ್ಲಿದ್ದ ಎತ್ತರವಾದ ಸ್ಥಳಗಳನ್ನೂ ಅಶೇರಸ್ತಂಭಗಳನ್ನೂ ಎರಕದ ಮತ್ತು ಕೆತ್ತನೆಯ ವಿಗ್ರಹಗಳನ್ನೂ ನಾಶಮಾಡಿದನು.
ದೇವರು ನಮ್ಮೊಂದಿಗಿದ್ದಾನೆ. ನಮ್ಮನ್ನು ಆಳುವವನು ಆತನೇ. ಅವನ ಯಾಜಕರು ನಮ್ಮೊಂದಿಗಿದ್ದಾರೆ. ದೇವರ ಯಾಜಕರು ತುತ್ತೂರಿಯನ್ನೂದಿ ನಿಮ್ಮನ್ನು ಆತನ ಬಳಿಗೆ ಬರಲು ಎಚ್ಚರಿಸುತ್ತಾರೆ. ಇಸ್ರೇಲರೇ, ನಿಮ್ಮ ಪೂರ್ವಿಕರ ದೇವರಾದ ಯೆಹೋವನ ಜನರೊಂದಿಗೆ ಕಾದಾಡಬೇಡಿರಿ. ನೀವು ಜಯಹೊಂದುವದಿಲ್ಲ” ಎಂದು ಹೇಳಿದನು.
ಯೆಹೋವನು ಅವನಿಗೆ ಹೀಗೆ ಹೇಳಿದನು: “ನಿನ್ನ ಪ್ರಾರ್ಥನೆಯು ನನಗೆ ಕೇಳಿಸಿತು. ನಿನ್ನ ಬಿನ್ನಹಗಳನ್ನು ಆಲಿಸಿದೆನು. ಈ ಆಲಯವನ್ನು ನೀನು ಕಟ್ಟಿಸಿದೆ. ನಾನು ಅದನ್ನು ಪವಿತ್ರಸ್ಥಳವನ್ನಾಗಿ ಮಾಡಿದೆ. ಆದ್ದರಿಂದ ನಾನಿಲ್ಲಿ ಸದಾಕಾಲ ಸನ್ಮಾನಿಸಲ್ಪಡುವೆನು. ನನ್ನ ದೃಷ್ಟಿಯೂ ಮನಸ್ಸೂ ಸದಾ ಅದರ ಮೇಲಿರುತ್ತದೆ.
ಆಗ ಯೆಹೋವನು, “ನನ್ನ ಜನರು ಈಜಿಪ್ಟಿನಲ್ಲಿ ಅನುಭವಿಸುತ್ತಿರುವ ಕಷ್ಟಗಳನ್ನು ನೋಡಿದ್ದೇನೆ. ಅಧಿಕಾರಿಗಳು ಅವರನ್ನು ಹಿಂಸಿಸುವಾಗ ಅವರು ಇಟ್ಟ ಮೊರೆಯನ್ನು ಕೇಳಿದ್ದೇನೆ. ಅವರ ದುಃಖವನ್ನೆಲ್ಲಾ ಬಲ್ಲೆನು.
ಯೆಹೋವನು ಈಜಿಪ್ಟಿನ ಜನರನ್ನು ಶಿಕ್ಷಿಸುವನು. ಆಮೇಲೆ ಆತನು ಅವರನ್ನು ಕ್ಷಮಿಸುವನು. ಆಗ ಅವರು ಆತನ ಬಳಿಗೆ ಹಿಂದಿರುಗಿ ಬರುವರು. ಯೆಹೋವನು ಅವರ ಪ್ರಾರ್ಥನೆಯನ್ನು ಕೇಳಿ ಅವರನ್ನು ಕ್ಷಮಿಸುವನು.