Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 20:6 - ಪರಿಶುದ್ದ ಬೈಬಲ್‌

6 ನಾನು ನಿನ್ನ ಜೀವಕ್ಕೆ ಹದಿನೈದು ವರ್ಷಗಳನ್ನು ಕೂಡಿಸುತ್ತೇನೆ. ನಾನು ನಿನ್ನನ್ನು ಮತ್ತು ಈ ನಗರವನ್ನು ಅಶ್ಶೂರದ ರಾಜನ ಅಧಿಕಾರದಿಂದ ರಕ್ಷಿಸುತ್ತೇನೆ. ನಾನು ಈ ನಗರವನ್ನು ಸಂರಕ್ಷಿಸುತ್ತೇನೆ. ನಾನು ನನ್ನ ಸೇವಕನಾದ ದಾವೀದನಿಗೆ ವಾಗ್ದಾನ ಮಾಡಿದ್ದಕ್ಕಾಗಿಯೂ ನನಗಾಗಿಯೂ ಇದನ್ನು ಮಾಡುತ್ತೇನೆ’” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಇದಲ್ಲದೆ, ನಿನ್ನ ಆಯುಷ್ಯಕ್ಕೆ ಹದಿನೈದು ವರ್ಷಗಳನ್ನು ಹೆಚ್ಚಿಸಿದ್ದೇನೆ, ನಿನ್ನನ್ನೂ, ಈ ಪಟ್ಟಣವನ್ನೂ ಅಶ್ಶೂರನ ಅರಸನ ಕೈಗೆ ಬೀಳದಂತೆ ತಪ್ಪಿಸುವೆನು. ನನಗಾಗಿಯೂ, ನನ್ನ ಸೇವಕನಾದ ದಾವೀದನಿಗಾಗಿಯೂ ಈ ಪಟ್ಟಣವನ್ನು ಉಳಿಸಿ ಕಾಪಾಡುವೆನು’ ಎಂಬುದಾಗಿ ನಿನ್ನ ಪೂರ್ವಿಕನಾದ ದಾವೀದನ ದೇವರಾಗಿರುವ ಯೆಹೋವನು ಹೇಳುತ್ತಾನೆ ಎಂದು ತಿಳಿಸು” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಅದಲ್ಲದೆ ನಿನ್ನ ಆಯುಷ್ಯಕ್ಕೆ ಹದಿನೈದು ವರ್ಷಗಳನ್ನು ಕೂಡಿಸುತ್ತೇನೆ. ನಿನ್ನನ್ನೂ ಈ ಪಟ್ಟಣವನ್ನೂ ಅಸ್ಸೀರಿಯದ ಅರಸನ ಕೈಗೆ ಬೀಳದಂತೆ ತಪ್ಪಿಸುವೆನು. ನನಗಾಗಿ ಹಾಗು ನನ್ನ ದಾಸ ದಾವೀದನಿಗಾಗಿ ಈ ಪಟ್ಟಣವನ್ನು ಉಳಿಸಿ ಕಾಪಾಡುವೆನು’ ಎಂಬುದಾಗಿ ನಿನ್ನ ಪೂರ್ವಜ ದಾವೀದನ ದೇವರಾಗಿರುವ ಸರ್ವೇಶ್ವರ ಹೇಳುತ್ತಾರೆ ಎಂದು ತಿಳಿಸು,” ಎಂದು ಆಜ್ಞಾಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಇದಲ್ಲದೆ ನಿನ್ನ ಆಯುಷ್ಯಕ್ಕೆ ಹದಿನೈದು ವರುಷಗಳನ್ನು ಕೂಡಿಸುತ್ತೇನೆ. ನಿನ್ನನ್ನೂ ಈ ಪಟ್ಟಣವನ್ನೂ ಅಶ್ಶೂರದ ಅರಸನ ಕೈಗೆ ಬೀಳದಂತೆ ತಪ್ಪಿಸುವೆನು; ನನಗೋಸ್ಕರವಾಗಿಯೂ ನನ್ನ ಸೇವಕನಾದ ದಾವೀದನಿಗೋಸ್ಕರವಾಗಿಯೂ ಈ ಪಟ್ಟಣವನ್ನು ಉಳಿಸಿ ಕಾಪಾಡುವೆನು ಎಂಬದಾಗಿ ನಿನ್ನ ಪೂರ್ವಿಕನಾದ ದಾವೀದನ ದೇವರಾಗಿರುವ ಯೆಹೋವನು ಹೇಳುತ್ತಾನೆ ಎಂದು ತಿಳಿಸು ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಇದಲ್ಲದೆ ನಾನು ನಿನ್ನ ಆಯುಷ್ಯಕ್ಕೆ ಹದಿನೈದು ವರ್ಷಗಳನ್ನು ಹೆಚ್ಚಾಗಿ ಕೂಡಿಸುತ್ತೇನೆ. ನಿನ್ನನ್ನೂ, ಈ ಪಟ್ಟಣವನ್ನೂ ಅಸ್ಸೀರಿಯದ ಅರಸನ ಕೈಯಿಂದ ಬಿಡಿಸುವೆನು. ಈ ಪಟ್ಟಣವನ್ನು ನನ್ನ ನಿಮಿತ್ತವಾಗಿಯೂ, ನನ್ನ ಸೇವಕನಾದ ದಾವೀದನ ನಿಮಿತ್ತವಾಗಿಯೂ ಕಾಪಾಡುವೆನು,’ ಎಂದು ಹೇಳು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 20:6
7 ತಿಳಿವುಗಳ ಹೋಲಿಕೆ  

ನಾನು ಈ ನಗರವನ್ನು ಕಾಪಾಡುತ್ತೇನೆ ಮತ್ತು ಇದನ್ನು ರಕ್ಷಿಸುತ್ತೇನೆ. ನನಗಾಗಿಯೂ ನನ್ನ ಸೇವಕನಾದ ದಾವೀದನಿಗಾಗಿಯೂ ನಾನು ಇದನ್ನು ಮಾಡುತ್ತೇನೆ.’”


ದೇವರ ದೂತನು, ‘ಪೌಲನೇ, ಭಯಪಡಬೇಡ! ನೀನು ಸೀಸರನ ಮುಂದೆ ನಿಂತುಕೊಳ್ಳಬೇಕು. ನಿನ್ನೊಂದಿಗೆ ನೌಕಾಯಾನ ಮಾಡತ್ತಿರುವ ಎಲ್ಲಾ ಜನರ ಪ್ರಾಣಗಳನ್ನು ಉಳಿಸುವುದಾಗಿ ದೇವರು ನಿನಗೆ ವಾಗ್ದಾನವನ್ನು ಮಾಡಿದ್ದಾನೆ’ ಎಂದು ಹೇಳಿದನು.


ನನ್ನ ಒಡೆಯನೂ ಸರ್ವಶಕ್ತನೂ ಆದ ಯೆಹೋವನು ಹೇಳುವುದೇನೆಂದರೆ: “ಚೀಯೋನಿನಲ್ಲಿ ವಾಸಿಸುವ ನನ್ನ ಜನರೇ, ಅಶ್ಶೂರಕ್ಕೆ ನೀವು ಭಯಪಡಬೇಡಿ. ಹಿಂದಿನ ಕಾಲದಲ್ಲಿ ಈಜಿಪ್ಟ್ ನಿಮ್ಮನ್ನು ಬಾಧಿಸಿದಂತೆ ಇವನೂ ನಿಮ್ಮನ್ನು ಬಾಧಿಸುವನು. ಅವನ ಬಾಧೆಯು ನಿಮ್ಮ ಬೆನ್ನಿನ ಮೇಲೆ ಬೆತ್ತದಿಂದ ಹೊಡೆದಂತೆ ಇರುವದು.


ಯೆಹೋವನು ತನ್ನ ಭಕ್ತರ ಮರಣವನ್ನು ಅಲ್ಪವೆಂದು ಎಣಿಸುವುದಿಲ್ಲ.


ಈ ರೀತಿಯಾಗಿ ದೇವರಾದ ಯೆಹೋವನು ಜೆರುಸಲೇಮಿನ ಜನರನ್ನು ಅಶ್ಶೂರದ ಅರಸನಾದ ಸನ್ಹೇರೀಬನಿಂದಲೂ ಮತ್ತು ಇತರ ಎಲ್ಲಾ ಜನರಿಂದಲೂ ಪಾರುಮಾಡಿದನು; ಹಿಜ್ಕೀಯನನ್ನು ಮತ್ತು ಜೆರುಸಲೇಮಿನ ಜನರನ್ನೂ ಪರಿಪಾಲನೆ ಮಾಡಿದನು.


ಆಗ ಯೆಶಾಯನು, “ಅಂಜೂರದ ಹಣ್ಣಿನಿಂದ ಒಂದು ಉಂಡೆಯನ್ನು ಮಾಡಿಸಿ ಅದನ್ನು ಕುರುವಿನ ಮೇಲೆ ಇಡು” ಎಂದು ಹೇಳಿದನು. ಅಂತೆಯೇ ಅವರು ಅಂಜೂರಹಣ್ಣಿನ ಒಂದು ಉಂಡೆಯನ್ನು ಹಿಜ್ಕೀಯನ ಕುರುವಿನ ಮೇಲೆ ಇಟ್ಟರು. ಆಗ ಹಿಜ್ಕೀಯನಿಗೆ ಗುಣವಾಯಿತು.


ನಾನು ಈ ಪಟ್ಟಣವನ್ನು ರಕ್ಷಿಸಿ ಕಾಪಾಡುವೆನು. ನನಗೋಸ್ಕರವಾಗಿಯೇ ಇದನ್ನು ಮಾಡುವೆನು. ನನ್ನ ಸೇವಕನಾದ ದಾವೀದನಿಗೋಸ್ಕರವಾಗಿಯೂ ಇದನ್ನು ಮಾಡುವೆನು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು