9 ಯೆಶಾಯನು, “ನೆರಳು ಹತ್ತು ಮೆಟ್ಟಲು ಮುಂದಕ್ಕೆ ಹೋಗಬೇಕೋ ಅಥವಾ ಹತ್ತು ಮೆಟ್ಟಲು ಹಿಂದಕ್ಕೆ ಹೋಗಬೇಕೋ? ನಿನಗೆ ಯಾವುದು ಬೇಕಾಗಿದೆ? ಯೆಹೋವನು ತಾನು ಹೇಳಿದ್ದನ್ನು ಮಾಡುತ್ತಾನೆಂಬುದಕ್ಕೆ ಇದೇ ನಿನಗೆ ಗುರುತು” ಎಂದು ಹೇಳಿದನು.
9 ಅದಕ್ಕೆ ಯೆಶಾಯನು, “ಯೆಹೋವನು ನುಡಿದಿದ್ದನ್ನು ನೆರವೇರಿಸುವನು ಎಂಬುದಕ್ಕೆ ಯೆಹೋವನಿಂದ ಉಂಟಾದ ಗುರುತು ಕೇಳುತ್ತಿರುವೆ, ಹಾಗಾದರೆ ನೆರಳು ಹತ್ತು ಮೆಟ್ಟಲು ಮುಂದೆ ಹೋಗಬೇಕೋ? ಹಿಂದೆ ಬರಬೇಕೋ? ಹೇಳು ಹಿಂದೆ ಹೋಗಬೇಕೋ ಹೇಳು?” ಎಂದು ಕೇಳಿದನು.
9 ಅವನು, “ಸರ್ವೇಶ್ವರ ನುಡಿದದ್ದನ್ನು ನೆರವೇರಿಸುವರು ಎಂಬುದಕ್ಕೆ ಸರ್ವೇಶ್ವರನಿಂದ ಗುರುತು ಕೇಳುತ್ತಿರುವೆ; ಹಾಗಾದರೆ ನೆರಳು ಹತ್ತು ಮೆಟ್ಟಲು ಮುಂದೆ ಹೋಗಬೇಕೋ ಹಿಂದೆ ಬರಬೇಕೋ ಹೇಳು,” ಎಂದನು.
9 ಯೆಶಾಯನು, “ಯೆಹೋವ ದೇವರು, ತಾವು ಹೇಳಿದ ಕಾರ್ಯವನ್ನು ಮಾಡುವರೆಂಬುದಕ್ಕೆ ಯೆಹೋವ ದೇವರ ಕಡೆಯಿಂದ ನಿನಗೆ ಉಂಟಾಗುವ ಗುರುತು, ನೆರಳು ಹತ್ತು ಮೆಟ್ಟಲು ಮುಂದಕ್ಕೆ ಹೋಗಬೇಕೋ? ಇಲ್ಲವೆ ಹತ್ತು ಮೆಟ್ಟಲು ಹಿಂದಕ್ಕೆ ಬರಬೇಕೋ?” ಎಂದು ಕೇಳಿದನು.
“ನಾನು ನಿನಗೆ ಸಹಾಯ ಮಾಡುತ್ತೇನೆಂಬುದಕ್ಕೆ ಇದು ಸಾಕ್ಷಿಯ ಗುರುತಾಗಿದೆ: ಈ ವರ್ಷ ನೀವು ತಾನಾಗಿಯೇ ಬೆಳೆಯುವ ಧಾನ್ಯವನ್ನು ತಿನ್ನುತ್ತೀರಿ. ಮುಂದಿನ ವರ್ಷ ನೀವು ಬೀಜದಿಂದ ಬೆಳೆಯುವ ಧಾನ್ಯವನ್ನು ತಿನ್ನುತ್ತೀರಿ. ಆದರೆ ಮೂರನೆಯ ವರ್ಷದಲ್ಲಿ ನೀವು ಬೆಳೆಸಿದ ಧಾನ್ಯವನ್ನು ಒಟ್ಟುಗೂಡಿಸುತ್ತೀರಿ. ನೀವು ದ್ರಾಕ್ಷಿತೋಟಗಳನ್ನು ಬೆಳೆಸುತ್ತೀರಿ; ಅವುಗಳ ದ್ರಾಕ್ಷಿಯನ್ನು ತಿನ್ನುತ್ತೀರಿ.
ಆ ಸಮಯದಲ್ಲಿ ಹಿಜ್ಕೀಯನು ರೋಗಗ್ರಸ್ತನಾಗಿ ಸಾಯುವ ಸ್ಥಿತಿಯಲ್ಲಿದ್ದನು. ಆಮೋಚನ ಮಗನೂ ಪ್ರವಾದಿಯೂ ಆದ ಯೆಶಾಯನು ಅವನನ್ನು ನೋಡಲು ಹೋದನು. ಯೆಶಾಯನು ಅರಸನಿಗೆ, “ಯೆಹೋವನು ಈ ವಿಷಯಗಳನ್ನು ನಿನಗೆ ತಿಳಿಸಲು ಹೇಳಿದ್ದಾನೆ: ‘ನೀನು ಬೇಗನೇ ಸಾಯುವೆ. ಆದ್ದರಿಂದ ನೀನು ಸಾಯುವಾಗ ನಿನ್ನ ಕುಟುಂಬದವರು ಮಾಡಬೇಕಾದದ್ದನ್ನು ಅವರಿಗೆ ತಿಳಿಸು. ನಿನಗೆ ಗುಣವಾಗುವುದಿಲ್ಲ’” ಎಂದು ಹೇಳಿದನು.
ಆ ದಿನ ಯೆಹೋವನ ಸಹಾಯದಿಂದ ಇಸ್ರೇಲರು ಅಮೋರಿಯರನ್ನು ಸೋಲಿಸಿದರು. ಅಂದು ಯೆಹೋಶುವನು ಎಲ್ಲ ಜನರ ಎದುರಿಗೆ ನಿಂತುಕೊಂಡು ಯೆಹೋವನಿಗೆ ಹೀಗೆ ಮೊರೆಯಿಟ್ಟನು: “ಸೂರ್ಯನೇ, ಗಿಬ್ಯೋನಿನ ಆಕಾಶದಲ್ಲಿ ನಿಂತಿರು, ಚಲಿಸಬೇಡ. ಚಂದ್ರನೇ, ಅಯ್ಯಾಲೋನ್ ಕಣಿವೆಯ ಆಕಾಶದಲ್ಲಿ ನಿಂತಿರು, ಚಲಿಸಬೇಡ.”
ಆದರೆ ಫಿಲಿಷ್ಟಿಯರು, ‘ನಮ್ಮ ಬಳಿಗೆ ಹತ್ತಿ ಬನ್ನಿ’ ಎಂದರೆ, ನಾವು ಅವರ ಬಳಿಗೆ ಹತ್ತಿ ಹೋಗೋಣ; ಯಾಕೆಂದರೆ ಅದು ದೇವರ ಗುರುತು. ದೇವರು ಅವರನ್ನು ಸೋಲಿಸಲು ನಮಗೆ ಅವಕಾಶ ಕಲ್ಪಿಸಿದ್ದಾನೆ ಎಂಬುದೇ ಅದರ ಅರ್ಥ” ಎಂದು ಹೇಳಿದನು.