Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 21:1 - ಪರಿಶುದ್ದ ಬೈಬಲ್‌

1 ಮನಸ್ಸೆಯು ಆಳಲಾರಂಭಿಸಿದಾಗ ಅವನಿಗೆ ಹನ್ನೆರಡು ವರ್ಷ ವಯಸ್ಸಾಗಿತ್ತು. ಅವನು ಐವತ್ತೈದು ವರ್ಷ ಜೆರುಸಲೇಮಿನಲ್ಲಿ ಆಳಿದನು. ಅವನ ತಾಯಿಯ ಹೆಸರು ಹೆಫ್ಜೆಬಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಮನಸ್ಸೆಯು ಅರಸನಾದಾಗ ಹನ್ನೆರಡು ವರ್ಷದವನಾಗಿದ್ದು ಯೆರೂಸಲೇಮಿನಲ್ಲಿ ಐವತ್ತೈದು ವರ್ಷ ಆಳಿದನು. ಅವನ ತಾಯಿಯ ಹೆಸರು ಹೆಫ್ಚಿಬಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಮನಸ್ಸೆ ಅರಸನಾದಾಗ ಅವನಿಗೆ ಹನ್ನೆರಡು ವರ್ಷ ವಯಸ್ಸು. ಜೆರುಸಲೇಮಿನಲ್ಲಿ ಐವತ್ತೈದು ವರ್ಷ ಆಳಿದನು; ಅವನ ತಾಯಿಯ ಹೆಸರು ಹೆಫ್ಚಿಬಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಮನಸ್ಸೆಯು ಅರಸನಾದಾಗ ಹನ್ನೆರಡು ವರುಷದವನಾಗಿದ್ದು ಯೆರೂಸಲೇವಿುನಲ್ಲಿ ಐವತ್ತೈದು ವರುಷ ಆಳಿದನು; ಅವನ ತಾಯಿಯ ಹೆಸರು ಹೆಫ್ಚಿಬಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಮನಸ್ಸೆಯು ಅರಸನಾದಾಗ ಹನ್ನೆರಡು ವರ್ಷದವನಾಗಿದ್ದನು. ಅವನು ಐವತ್ತೈದು ವರ್ಷ ಯೆರೂಸಲೇಮಿನಲ್ಲಿ ಆಳಿದನು. ಅವನ ತಾಯಿಯ ಹೆಸರು ಹೆಫ್ಚಿಬಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 21:1
9 ತಿಳಿವುಗಳ ಹೋಲಿಕೆ  

ದೇವರು ತೊರೆದ ಜನಾಂಗವೆಂದೂ ದೇವರು ನಾಶಮಾಡಿದ ದೇಶವೆಂದೂ ನಿನ್ನನ್ನು ಇನ್ನು ಮುಂದೆ ಯಾರೂ ಕರೆಯುವದಿಲ್ಲ. “ದೇವರ ಪ್ರಿಯ ಜನರು” ಎಂದು ನೀನು ಕರೆಯಲ್ಪಡುವಿ. ನಿನ್ನ ದೇಶವು “ದೇವರ ಮದಲಗಿತ್ತಿ” ಎಂದು ಕರೆಯಲ್ಪಡುವದು. ಯಾಕೆಂದರೆ ಯೆಹೋವನು ನಿನ್ನನ್ನು ಪ್ರೀತಿಸುತ್ತಾನೆ; ನಿನ್ನ ದೇಶವು ಆತನಿಗೆ ಸೇರಿದೆ.


ಹಿಜ್ಕೀಯನು ಮನಸ್ಸೆಯ ತಂದೆ. ಮನಸ್ಸೆಯು ಆಮೋನನ ತಂದೆ. ಆಮೋನನು ಯೋಷೀಯನ ತಂದೆ.


ಆಕೆ ಸುಂದರವಾದ ಜಿಂಕೆಯಂತೆಯೂ ಅಂದವಾದ ಕಾಡುಮೇಕೆಯಂತೆಯೂ ಇದ್ದಾಳೆ. ಆಕೆಯ ಸ್ತನಗಳು ನಿನ್ನನ್ನು ಸಂಪೂರ್ಣವಾಗಿ ತೃಪ್ತಿಪಡಿಸಲಿ. ಆಕೆಯ ಪ್ರೀತಿಯಲ್ಲೇ ಲೀನವಾಗಿರು.


ಹಿಜ್ಕೀಯನು ಸತ್ತು ತನ್ನ ಪೂರ್ವಿಕರ ಬಳಿಗೆ ಸೇರಿದಾಗ ಅವನ ಶವವನ್ನು ದಾವೀದ ವಂಶದವರ ಕುಟುಂಬ ಸ್ಮಶಾನ ಭೂಮಿಯ ದಿಬ್ಬದ ಮೇಲೆ ಸಮಾಧಿಮಾಡಿದರು. ಅವನು ಸತ್ತಾಗ ಎಲ್ಲಾ ಯೆಹೂದದ ಜನರೂ ಜೆರುಸಲೇಮಿನ ಜನರೂ ಅವನಿಗೆ ಹೆಚ್ಚಾದ ಗೌರವವನ್ನು ಕೊಟ್ಟರು. ಹಿಜ್ಕೀಯನ ಬದಲು ಅವನ ಮಗನಾದ ಮನಸ್ಸೆಯು ಅರಸನಾದನು.


ಯೋತಾಮನ ಮಗನು ಅಹಾಜ. ಅಹಾಜನ ಮಗನು ಹಿಜ್ಕೀಯ. ಹಿಜ್ಕೀಯನ ಮಗನು ಮನಸ್ಸೆ.


ಹಿಜ್ಕೀಯನು ತೀರಿಕೊಂಡಾಗ ಅವನನ್ನು ಅವನ ಪೂರ್ವಿಕರ ಬಳಿ ಸಮಾಧಿಮಾಡಲಾಯಿತು. ಹಿಜ್ಕೀಯನ ನಂತರ ಅವನ ಮಗನಾದ ಮನಸ್ಸೆಯು ಹೊಸ ರಾಜನಾದನು.


ಮನಸ್ಸೆಯು ಪಟ್ಟಕ್ಕೆ ಬಂದಾಗ ಹನ್ನೆರಡು ವರ್ಷದವನಾಗಿದ್ದನು. ಅವನು ಜೆರುಸಲೇಮಿನಲ್ಲಿ ರಾಜನಾಗಿ ಐವತ್ತೈದು ವರ್ಷ ರಾಜ್ಯಭಾರ ಮಾಡಿದನು.


ಯೆಹೂದದ ಜನರನ್ನು ಭೂಲೋಕದ ಎಲ್ಲಾ ಜನರಿಗೆ ಒಂದು ಭಯಾನಕವಾದ ಉದಾಹರಣೆಯಾಗುವಂತೆ ಮಾಡುತ್ತೇನೆ. ಮನಸ್ಸೆಯು ಜೆರುಸಲೇಮಿನಲ್ಲಿ ಮಾಡಿದ ಪಾಪಕೃತ್ಯಗಳ ಫಲವಾಗಿ ನಾನು ಯೆಹೂದದಲ್ಲಿ ಹೀಗೆ ಮಾಡುತ್ತೇನೆ. ಮನಸ್ಸೆಯು ರಾಜನಾದ ಹಿಜ್ಕೀಯನ ಮಗನಾಗಿದ್ದನು. ಮನಸ್ಸೆಯು ಯೆಹೂದದ ರಾಜನಾಗಿದ್ದನು.’


ಆ ಜನರು ತಮಗಾಗಿ ವಿಗ್ರಹಗಳನ್ನು ಮಾಡಿಕೊಂಡಿದ್ದಾರೆ. ನಾನು ಆ ವಿಗ್ರಹಗಳನ್ನು ದ್ವೇಷಿಸುತ್ತೇನೆ. ನನ್ನ ಹೆಸರಿನಿಂದ ಖ್ಯಾತಿಗೊಂಡ ಆಲಯದಲ್ಲಿ ಆ ವಿಗ್ರಹಗಳನ್ನಿಟ್ಟು ನನ್ನ ಆಲಯವನ್ನು ‘ಹೊಲಸು’ ಮಾಡಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು