Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 21:10 - ಪರಿಶುದ್ದ ಬೈಬಲ್‌

10 ಯೆಹೋವನು ತನ್ನ ಸೇವಕರಾದ ಪ್ರವಾದಿಗಳಿಂದ ಈ ಸಂಗತಿಗಳನ್ನು ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಆಗ ಯೆಹೋವನು ತನ್ನ ಸೇವಕರಾದ ಪ್ರವಾದಿಗಳ ಮುಖಾಂತರವಾಗಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಆಗ ಸರ್ವೇಶ್ವರ ತನ್ನ ದಾಸರಾದ ಪ್ರವಾದಿಗಳ ಮುಖಾಂತರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಆಗ ಯೆಹೋವನು ತನ್ನ ಸೇವಕರಾದ ಪ್ರವಾದಿಗಳ ಮುಖಾಂತರವಾಗಿ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಯೆಹೋವ ದೇವರು ಪ್ರವಾದಿಗಳಾದ ತನ್ನ ಸೇವಕರ ಮುಖಾಂತರ ಹೇಳಿದ್ದೇನೆಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 21:10
8 ತಿಳಿವುಗಳ ಹೋಲಿಕೆ  

“ನೀನು ನಮ್ಮ ಪೂರ್ವಿಕರ ವಿಷಯದಲ್ಲಿ ತಾಳ್ಮೆಯಿಂದಿದ್ದೆ. ನಿನ್ನ ವಿಷಯದಲ್ಲಿ ತಪ್ಪಾಗಿ ನಡೆದುಕೊಳ್ಳಲು ಅನೇಕ ವರ್ಷಗಳವರೆಗೆ ಅವರನ್ನು ಬಿಟ್ಟುಬಿಟ್ಟೆ. ನೀನು ಅವರನ್ನು ನಿನ್ನ ಆತ್ಮನಿಂದ ಎಚ್ಚರಿಸಿದೆ; ಅವರನ್ನು ಎಚ್ಚರಿಸಲು ನಿನ್ನ ಪ್ರವಾದಿಗಳನ್ನು ಕಳುಹಿಸಿದೆ. ಆದರೆ ನಮ್ಮ ಪೂರ್ವಿಕರು ಕಿವಿಗೊಡಲಿಲ್ಲ. ಆದ್ದರಿಂದ ಪರರಾಜ್ಯದ ಜನರಿಗೆ ಅವರನ್ನು ಒಪ್ಪಿಸಿದೆ.


ಅವರು ನಿನಗೆ ಎದುರುಬಿದ್ದು ನಿನ್ನ ಬೋಧನೆಯನ್ನು ತಾತ್ಸಾರ ಮಾಡಿದರು; ನಿನ್ನ ಪ್ರವಾದಿಗಳನ್ನು ಕೊಂದರು. ಆ ಪ್ರವಾದಿಗಳಾದರೋ ಜನರನ್ನು ಎಚ್ಚರಿಸಿದರು; ನಿನ್ನ ಬಳಿಗೆ ಹಿಂತಿರುಗುವಂತೆ ಜನರನ್ನು ಪ್ರೋತ್ಸಾಹಿಸಿದರು. ಆದರೆ ನಮ್ಮ ಪೂರ್ವಿಕರು ನಿನಗೆ ವಿರೋಧವಾಗಿ ಭಯಂಕರವಾದ ಕೃತ್ಯಗಳನ್ನು ಮಾಡಿದರು.


ಅವರ ಪೂರ್ವಿಕರ ದೇವರಾದ ಯೆಹೋವನು ಆಗಾಗ್ಗೆ ತನ್ನ ಪ್ರವಾದಿಗಳನ್ನು ಕಳುಹಿಸಿ ತನ್ನ ಜನರನ್ನು ಎಚ್ಚರಿಸಿದನು. ಯಾಕೆಂದರೆ ಆತನಿಗೆ ತನ್ನ ಜನರೂ ತನ್ನ ಮಂದಿರವೂ ನಾಶವಾಗುವದರಲ್ಲಿ ಇಷ್ಟವಿರಲಿಲ್ಲ.


ಯೆಹೋವನು ಮನಸ್ಸೆಯ ಮತ್ತು ಅವನ ಜನರ ಸಂಗಡ ಮಾತಾಡಿದರೂ ಅವರು ಆತನ ಮಾತನ್ನು ಕೇಳಲಿಲ್ಲ.


ಆದರೆ ಜನರು ದೇವರ ಮಾತನ್ನು ಆಲಿಸಲಿಲ್ಲ. ಇಸ್ರೇಲರು ಕಾನಾನಿಗೆ ಬರುವುದಕ್ಕೆ ಮುಂಚೆ ಅಲ್ಲಿ ವಾಸಿಸುತ್ತಿದ್ದ ಜನಾಂಗಗಳು ಮಾಡಿದ್ದಕ್ಕಿಂತ ಹೆಚ್ಚು ಕೆಟ್ಟಕಾರ್ಯಗಳನ್ನು ಮನಸ್ಸೆಯಿಂದ ಪ್ರೇರಿತರಾಗಿ ಮಾಡಿದರು. ಇಸ್ರೇಲರು ಅವರ ದೇಶಗಳನ್ನು ವಶಪಡಿಸಿಕೊಳ್ಳಲು ಬಂದಾಗ ಯೆಹೋವನು ಆ ಜನಾಂಗಗಳನ್ನು ನಾಶಪಡಿಸಿದನು.


“ಯೆಹೂದದ ರಾಜನಾದ ಮನಸ್ಸೆಯು ತನಗಿಂತಲೂ ಮುಂಚೆ ಇದ್ದ ಅಮೋರಿಯರಿಗಿಂತ ಹೆಚ್ಚು ಅಸಹ್ಯವಾದ ಕೃತ್ಯಗಳನ್ನು ಮಾಡಿದನು. ಮನಸ್ಸೆಯು ತನ್ನ ವಿಗ್ರಹಗಳಿಂದ ಯೆಹೂದವನ್ನು ಪಾಪಕ್ಕೆ ಪ್ರೇರೇಪಿಸಿದನು.


ಇಸ್ರೇಲ್ ಮತ್ತು ಯೆಹೂದಗಳನ್ನು ಎಚ್ಚರಿಸಲು ಯೆಹೋವನು ಪ್ರತಿಯೊಬ್ಬ ಪ್ರವಾದಿಯನ್ನು ಮತ್ತು ದೇವದರ್ಶಿಯನ್ನು ಬಳಸಿಕೊಂಡನು. ಯೆಹೋವನು, “ನಿಮ್ಮ ಕೆಟ್ಟಕಾರ್ಯಗಳಿಂದ ದೂರವಾಗಿ! ನನ್ನ ಆಜ್ಞೆಗಳಿಗೆ ಮತ್ತು ಧರ್ಮಶಾಸ್ತ್ರಗಳಿಗೆ ವಿಧೇಯತೆಯಿಂದಿರಿ. ನಿಮ್ಮ ಪೂರ್ವಿಕರಿಗೆ ನಾನು ನೀಡಿದ ಕಟ್ಟಳೆಗಳನ್ನೆಲ್ಲಾ ಅನುಸರಿಸಿ. ನಾನು ನನ್ನ ಸೇವಕರಾದ ಪ್ರವಾದಿಗಳ ಮೂಲಕ ಇವುಗಳನ್ನು ನೀಡಿದ್ದೇನೆ” ಎಂದು ಹೇಳಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು