Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 21:13 - ಪರಿಶುದ್ದ ಬೈಬಲ್‌

13 ನಾನು ಸಮಾರ್ಯದ ಮೇಲೆ ಚಾಚಿದ ಮಟ್ಟಗೋಲನ್ನೂ ಅಹಾಬನ ಕುಟುಂಬದ ಮೇಲಿಟ್ಟ ತೂಕದ ಗುಂಡನ್ನೂ ಜೆರುಸಲೇಮಿನ ಮೇಲೆ ಚಾಚುತ್ತೇನೆ. ಒಬ್ಬನು ಒಂದು ಪಾತ್ರೆಯನ್ನು ಒರೆಸಿ, ಅದನ್ನು ಕೆಳಮುಖವಾಗಿ ತಿರುಗಿಸುವಂತೆ ನಾನು ಜೆರುಸಲೇಮಿಗೆ ಮಾಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ನೂಲು ಮಟ್ಟಗೋಲು ಇವುಗಳಿಂದಲೋ ಎಂಬಂತೆ ಸಮಾರ್ಯವನ್ನೂ, ಅಹಾಬನ ಮನೆಯನ್ನೂ ನೆಲಸಮಮಾಡಿದಂತೆ, ಯೆರೂಸಲೇಮನ್ನೂ ಅದರಂತೆಯೇ ಮಾಡುವೆನು. ಒಬ್ಬನು ಪಾತ್ರೆಯನ್ನು ಒರಸಿ ಬೋರಲು ಹಾಕುವ ಹಾಗೆ ನಾನು ಯೆರೂಸಲೇಮನ್ನು ಒರಸಿ ಬೋರಲು ಹಾಕುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ನೂಲು, ಮಟ್ಟಗೋಲು ಇವುಗಳಿಂದಲೋ ಎಂಬಂತೆ ಸಮಾರಿಯವನ್ನೂ ಅಹಾಬನ ಮನೆಯನ್ನೂ ನೆಲಸಮ ಮಾಡಿಬಿಟ್ಟೆನಲ್ಲವೆ? ಜೆರುಸಲೇಮನ್ನೂ ಅವುಗಳಂತೆಯೇ ಮಾಡುವೆನು. ಒಬ್ಬನು ಪಾತ್ರೆಯನ್ನು ಉಜ್ಜಿ ತಲೆ ಕೆಳಗಾಗಿ ಇಡುವಂತೆ ನಾನು ಜೆರುಸಲೇಮನ್ನು ಉಜ್ಜಿ ತಲೆ ಕೆಳಗಾಗಿ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ನೂಲು ಮಟ್ಟಗೋಲು ಇವುಗಳಿಂದಲೋ ಎಂಬಂತೆ ಸಮಾರ್ಯವನ್ನೂ ಅಹಾಬನ ಮನೆಯನ್ನೂ ನೆಲಸಮಮಾಡಿಬಿಟ್ಟೆನಲ್ಲಾ; ಯೆರೂಸಲೇಮನ್ನೂ ಅವುಗಳಂತೆಯೇ ಮಾಡುವೆನು. ಒಬ್ಬನು ಪಾತ್ರೆಯನ್ನು ಒರಸಿ ಡಬ್ಬುಹಾಕುವ ಮೇರೆಗೆ ನಾನು ಯೆರೂಸಲೇಮನ್ನು ಒರಸಿ ಡಬ್ಬು ಹಾಕುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ನಾನು ಯೆರೂಸಲೇಮಿನ ಮೇಲೆ ಸಮಾರ್ಯದ ವಿರುದ್ಧ ಬಳಸಿದ ನೂಲನ್ನೂ, ಅಹಾಬನ ಮನೆಯ ವಿರುದ್ಧ ಬಳಸಿದ ಮಟ್ಟಗೋಲನ್ನೂ ಚಾಚಿ, ಒಬ್ಬನು ತಟ್ಟೆಯನ್ನು ಒರೆಸಿದಂತೆ ಅದನ್ನು ಒರೆಸಿ ತಲೆಕೆಳಗಾಗಿ ಹಾಕುವ ಹಾಗೆ ನಾನು ಯೆರೂಸಲೇಮನ್ನು ಅಳಿಸಿಬಿಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 21:13
19 ತಿಳಿವುಗಳ ಹೋಲಿಕೆ  

ಯೆಹೋವನು ಚೀಯೋನ್ ಕುಮಾರಿಯ ಪೌಳಿಗೋಡೆಯನ್ನು ನಾಶಮಾಡಬೇಕೆಂದು ಯೋಚಿಸಿದ್ದಾನೆ. ಆತನು ಅಳತೆದಾರದಿಂದ ಒಡೆಯಬೇಕಾದ ಗೋಡೆಗೆ ಗುರುತು ಮಾಡಿದ್ದಾನೆ. ಆತನು ತಾನು ಮಾಡುತ್ತಿದ್ದ ನಾಶನವನ್ನು ನಿಲ್ಲಿಸಲಿಲ್ಲ. ಪೌಳಿಗೋಡೆಗಳು ಮತ್ತು ಗೋಪುರಗಳು ದುಃಖದಿಂದ ಗೋಳಾಡುವಂತೆ ಆತನು ಮಾಡಿದ್ದಾನೆ. ಅವೆರಡೂ ಕುಸಿದುಹೋಗಿವೆ.


ಪಕ್ಷಿಗಳು ಮತ್ತು ಚಿಕ್ಕಪ್ರಾಣಿಗಳೂ ಅದರಲ್ಲಿ ವಾಸಿಸುವವು. ಗೂಬೆಗಳೂ ಕಾಗೆಗಳೂ ಅಲ್ಲಿ ವಾಸಿಸುವವು. ಅದು “ಬೆಂಗಾಡಿನ ಮರುಭೂಮಿ” ಎಂದು ಕರೆಯಲ್ಪಡುವದು.


ಆದ್ದರಿಂದ ನಾನು ಉತ್ತರದ ಎಲ್ಲಾ ಜನಾಂಗಗಳನ್ನು ಕರೆಸುತ್ತೇನೆ.” ಇದು ಯೆಹೋವನ ಸಂದೇಶ. “ನಾನು ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನನ್ನು ಕೂಡಲೇ ಕರೆಸುವೆನು. ಅವನು ನನ್ನ ಸೇವಕ. ನಾನು ಆ ಜನರನ್ನು ಯೆಹೂದ ದೇಶದ ವಿರುದ್ಧವಾಗಿಯೂ ಯೆಹೂದ್ಯರ ವಿರುದ್ಧವಾಗಿಯೂ ತರುತ್ತೇನೆ. ನಾನು ನಿಮ್ಮ ಸುತ್ತಮುತ್ತಲಿನಲ್ಲಿದ್ದ ಜನಾಂಗಗಳ ವಿರುದ್ಧವಾಗಿಯೂ ಅವರನ್ನು ಕರೆತರುವೆನು. ನಾನು ಆ ದೇಶಗಳನ್ನೆಲ್ಲ ನಾಶಮಾಡುವೆನು. ನಾನು ಆ ಭೂಮಿಗಳನ್ನು ಶಾಶ್ವತವಾಗಿ ಬರಿದಾದ ಮರುಭೂಮಿಗಳನ್ನಾಗಿ ಮಾಡುವೆನು. ಜನರು ಆ ದೇಶಗಳನ್ನು ನೋಡಿ ಅವು ಹಾಳಾಗಿರುವುದನ್ನು ಕಂಡು ಬೆರಗಾಗಿ ಸಿಳ್ಳುಹಾಕುವರು.


“ಗೋಡೆಯು ನೆಟ್ಟಗಿದೆಯೆಂದು ನೋಡಲು ಜನರು ಗುಂಡನ್ನೂ ನೂಲನ್ನೂ ಉಪಯೋಗಿಸುತ್ತಾರೆ. ಅದೇ ರೀತಿಯಲ್ಲಿ ನಾನು ನ್ಯಾಯವನ್ನು ನೂಲನ್ನಾಗಿಯೂ ಕರುಣೆಯನ್ನು ಗುಂಡನ್ನಾಗಿಯೂ ಉಪಯೋಗಿಸುವೆನು. ನೀವು ದುಷ್ಟಜನರು. ನೀವು ನಿಮ್ಮ ಸುಳ್ಳುಮೋಸಗಳ ಹಿಂದೆ ಅವಿತುಕೊಳ್ಳುತ್ತಿದ್ದೀರಿ. ಆದರೆ ನೀವು ಶಿಕ್ಷಿಸಲ್ಪಡುವಿರಿ. ನೀವು ಅಡಗಿಕೊಂಡಿರುವ ಸ್ಥಳವನ್ನು ನಾಶಮಾಡುವ ಬಿರುಗಾಳಿಯಂತೆಯೂ ಪ್ರವಾಹದಂತೆಯೂ ಅದಿರುವುದು.


ನಿನ್ನ ಜನರು ಸಮುದ್ರದ ಮರಳಿನಂತೆ ಬಹಳವಿರುವರು. ಆದರೆ ಅವರಲ್ಲಿ ಕೆಲವರೇ ಉಳಿದು ಕರ್ತನ ಬಳಿಗೆ ಬರುವರು. ಆ ಜನರು ದೇವರ ಬಳಿಗೆ ಹಿಂತಿರುಗುವರು. ಅದಕ್ಕಿಂತ ಮೊದಲು ನಿನ್ನ ದೇಶವು ನಾಶವಾಗುವದು. ದೇಶವು ನಾಶವಾಗುವದೆಂದು ದೇವರು ಪ್ರಕಟಿಸಿದ್ದಾನೆ. ಆ ಬಳಿಕ ದೇವರ ಒಳ್ಳೆತನವು ಆ ದೇಶಕ್ಕೆ ಬರುವದು. ಅದು ದಡತುಂಬಿ ಹರಿಯುವ ನದಿಯೋಪಾದಿಯಲ್ಲಿರುವದು.


ಇಜ್ರೇಲಿನಲ್ಲಿ ವಾಸಿಸುತ್ತಿದ್ದ ಅಹಾಬನ ಕುಟುಂಬದ ಉಳಿದವರನ್ನೆಲ್ಲ ಯೇಹು ಕೊಂದುಹಾಕಿದನು. ಅಹಾಬನ ಆಪ್ತಮಿತ್ರರು, ಯಾಜಕರು ಮತ್ತು ಪ್ರಮುಖರನ್ನೆಲ್ಲ ಯೇಹುವು ಕೊಂದುಹಾಕಿದನು. ಅಹಾಬನ ಜನರಲ್ಲಿ ಯಾರನ್ನೂ ಉಳಿಸಲಿಲ್ಲ.


ಆದ್ದರಿಂದ ಯೆಹೋವನು ಹೀಗೆನ್ನುತ್ತಾನೆ: “ನಾನು ಜೆರುಸಲೇಮಿಗೆ ಹಿಂತಿರುಗಿ ಬರುವೆನು. ಬಂದು ಆಕೆಯನ್ನು ಸಂತೈಸುವೆನು.” ಸರ್ವಶಕ್ತನಾದ ಯೆಹೋವನು ಹೇಳುವುದೇನೆಂದರೆ, “ಜೆರುಸಲೇಮ್ ತಿರುಗಿ ಕಟ್ಟಲ್ಪಡುವದು ಮತ್ತು ನನ್ನ ಆಲಯವು ಅಲ್ಲಿ ಕಟ್ಟಲ್ಪಡುವದು.”


ಯೆಹೋವನು ಹೇಳುವುದೇನೆಂದರೆ: “ನಾನು ಬಾಬಿಲೋನನ್ನು ಪ್ರಾಣಿಗಳ ವಾಸಸ್ಥಳವನ್ನಾಗಿ ಬದಲಾಯಿಸುವೆನು. ಆ ಸ್ಥಳವು ಜವುಗು ನೆಲವಾಗಿರುವುದು. ‘ನಾಶನವೆಂಬ ಪೊರಕೆಯಿಂದ’ ಅದನ್ನು ಗುಡಿಸುವೆನು.” ಇದು ಸರ್ವಶಕ್ತನಾದ ಯೆಹೋವನ ನುಡಿ.


ಹೋಶೇಯನು ಇಸ್ರೇಲಿನ ರಾಜನಾಗಿದ್ದ ಒಂಭತ್ತನೆಯ ವರ್ಷದಲ್ಲಿ ಅಶ್ಶೂರದ ರಾಜನು ಸಮಾರ್ಯವನ್ನು ಸ್ವಾಧೀನಪಡಿಸಿಕೊಂಡನು. ಅಶ್ಶೂರದ ರಾಜನು ಇಸ್ರೇಲರನ್ನು ಸೆರೆಯಾಳುಗಳನ್ನಾಗಿ ಒಯ್ದು ಹಲಹು ಪ್ರಾಂತ್ಯದಲ್ಲಿಯೂ ಹಾಬೋರ್ ಹೊಳೆಯಿರುವ ಗೋಜಾನ್ ಪ್ರಾಂತ್ಯದಲ್ಲಿಯೂ ಮೇದ್ಯರ ನಗರಗಳಲ್ಲಿಯೂ ಇರಿಸಿದನು.


ಆದ್ದರಿಂದ ಯಾರೊಬ್ಬಾಮನೇ, ನಾನು ನಿನ್ನ ಕುಟುಂಬಕ್ಕೆ ಕೇಡುಗಳನ್ನು ಬರಮಾಡುತ್ತೇನೆ. ನಿನ್ನ ಕುಟುಂಬದ ಗಂಡಸರೆಲ್ಲರನ್ನು ನಾನು ಕೊಲ್ಲುತ್ತೇನೆ. ಬೆಂಕಿಯು ಕಸವನ್ನು ಸುಟ್ಟುಹಾಕುವಂತೆ ನಾನು ನಿನ್ನ ಕುಟುಂಬವನ್ನು ಸಂಪೂರ್ಣವಾಗಿ ನಾಶಪಡಿಸುತ್ತೇನೆ.


ಆದರೂ ಅಲ್ಲಿ ನನ್ನ ಕೆಲವು ಜನರು ಉಳಿದುಕೊಳ್ಳುತ್ತಾರೆ. ನಾನು ಅವರನ್ನು ಬಿಟ್ಟುಬಿಡುತ್ತೇನೆ. ನಾನು ಅವರನ್ನು ಅವರ ಶತ್ರುಗಳಿಗೆ ಒಪ್ಪಿಸುತ್ತೇನೆ. ಅವರ ಶತ್ರುಗಳು ಅವರನ್ನು ಸೆರೆಯಾಳುಗಳನ್ನಾಗಿ ಇಟ್ಟುಕೊಳ್ಳುವರು; ಯುದ್ಧಗಳಲ್ಲಿ ಸೈನಿಕರು ವಶಪಡಿಸಿಕೊಳ್ಳುವ ಬೆಲೆಯುಳ್ಳ ವಸ್ತುಗಳಂತೆ ಅವರಿರುವರು.


ಯೆಹೋವನು, “ನಾನು ಇಸ್ರೇಲರನ್ನು ತೆಗೆದುಹಾಕಿದಂತೆ ಯೆಹೂದ್ಯರನ್ನೂ ನನ್ನ ಸನ್ನಿಧಿಯಿಂದ ತೆಗೆದುಹಾಕುವೆನು. ನಾನು ಆರಿಸಿಕೊಂಡ ಜೆರುಸಲೇಮ್ ಪಟ್ಟಣವನ್ನೂ ನನ್ನ ನಾಮ ಮಹತ್ತಿಗಾಗಿ ಸ್ವೀಕರಿಸಿಕೊಂಡ ದೇವಾಲಯವನ್ನೂ ತಿರಸ್ಕರಿಸುವೆನು” ಎಂದು ಹೇಳಿದನು.


ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “ಒಂದರ ಮೇಲೊಂದು ದುರ್ಘಟನೆಗಳು ನಡೆಯುವವು.


ಅಹಾಬನ ಕುಟುಂಬವೆಲ್ಲ ಸಾಯುತ್ತದೆ. ಅಹಾಬನ ಕುಟುಂಬದಲ್ಲಿ ಒಬ್ಬ ಗಂಡಸಾದರೂ ಜೀವಿಸಿರಲು ನಾನು ಬಿಡುವುದಿಲ್ಲ. ಆ ಗಂಡಸು ಇಸ್ರೇಲಿನಲ್ಲಿ ಸ್ವತಂತ್ರವಾಗಿರಲಿ ಇಲ್ಲವೆ ಗುಲಾಮನಾಗಿರಲಿ ಅದು ನನಗೆ ಮುಖ್ಯವಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು