2 ಅರಸುಗಳು 21:16 - ಪರಿಶುದ್ದ ಬೈಬಲ್16 ಮನಸ್ಸೆಯು ಅನೇಕ ನಿರಪರಾಧಿಗಳನ್ನು ಕೊಂದುಹಾಕಿದನು; ಜೆರುಸಲೇಮನ್ನು ಒಂದು ಕೊನೆಯಿಂದ ಮತ್ತೊಂದು ಕೊನೆಯವರೆಗೆ ರಕ್ತದಿಂದ ತುಂಬಿಸಿದನು. ಯೆಹೂದವನ್ನು ಪಾಪಕ್ಕೆ ಪ್ರೇರೇಪಿಸಿದ್ದರ ಜೊತೆಗೆ ಅವನ ಈ ಪಾಪಗಳು ಕೂಡಿಕೊಂಡವು. ಯೆಹೋವನು ಕೆಟ್ಟದ್ದೆಂದು ಹೇಳಿದ ಕಾರ್ಯಗಳನ್ನು ಯೆಹೂದವು ಮಾಡುವಂತೆ ಮನಸ್ಸೆಯು ಪ್ರೇರೇಪಿಸಿದನು.’” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಮನಸ್ಸೆಯು ಯೆಹೂದ್ಯರನ್ನು ಯೆಹೋವನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಲು ಪ್ರೇರೇಪಿಸಿದ್ದಲ್ಲದೆ ಯೆರೂಸಲೇಮನ್ನೆಲ್ಲಾ ನಿರಪರಾಧಿಗಳ ರಕ್ತದಿಂದ ತುಂಬಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಮನಸ್ಸೆಯು ಯೆಹೂದ್ಯರನ್ನು ಸರ್ವೇಶ್ವರನ ದೃಷ್ಟಿಯಲ್ಲಿ ಕೆಟ್ಟದ್ದಾಗಿರುವುದನ್ನು ಮಾಡಲು ಪ್ರೇರಿಸಿದ್ದಲ್ಲದೆ, ನಿರಪರಾಧಿಗಳ ವಧೆಯಿಂದ ಜೆರುಸಲೇಮನ್ನೆಲ್ಲಾ ರಕ್ತಮಯವಾಗಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಮನಸ್ಸೆಯು ಯೆಹೂದ್ಯರನ್ನು ಯೆಹೋವನ ದೃಷ್ಟಿಯಲ್ಲಿ ಕೆಟ್ಟದ್ದಾಗಿರುವದನ್ನು ಮಾಡ ಪ್ರೇರಿಸಿದ್ದಲ್ಲದೆ ಯೆರೂಸಲೇಮನ್ನೆಲ್ಲಾ ನಿರಪರಾಧ ರಕ್ತದಿಂದ ತುಂಬಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಇದಲ್ಲದೆ ಮನಸ್ಸೆಯು ಯೆಹೋವ ದೇವರ ದೃಷ್ಟಿಯಲ್ಲಿ ಕೇಡನ್ನು ಮಾಡಿದ್ದರಲ್ಲಿ ಯೆಹೂದವು ಪಾಪವನ್ನು ಮಾಡಲು ಪ್ರೇರೇಪಿಸಿದ ತನ್ನ ಪಾಪದ ಹೊರತು ಅವನು ಯೆರೂಸಲೇಮನ್ನು ಒಂದು ಕೊನೆಯಿಂದ ಮತ್ತೊಂದು ಕೊನೆಯವರೆಗೂ ತಾನು ಬಹು ಹೆಚ್ಚಾಗಿ ಚೆಲ್ಲಿದ ನಿರಪರಾಧದ ರಕ್ತದಿಂದ ತುಂಬಿಸಿದನು. ಅಧ್ಯಾಯವನ್ನು ನೋಡಿ |
ಯೆಹೂದದ ಜನರು ನನ್ನ ಅನುಸರಣೆಯನ್ನು ಬಿಟ್ಟಿದ್ದರಿಂದ ನಾನು ಹೀಗೆ ಮಾಡುವೆನು. ಇದನ್ನು ಅವರು ಅನ್ಯದೇವರುಗಳ ಸ್ಥಳವನ್ನಾಗಿ ಮಾಡಿದ್ದಾರೆ. ಯೆಹೂದದ ಜನರು ಈ ಸ್ಥಳದಲ್ಲಿ ಅನ್ಯದೇವರುಗಳಿಗಾಗಿ ಧೂಪವನ್ನು ಹಾಕಿದ್ದಾರೆ. ಬಹಳ ಹಿಂದೆ ಈ ಜನರು ಆ ದೇವರುಗಳನ್ನು ಪೂಜಿಸುತ್ತಿರಲಿಲ್ಲ. ಅವರ ಹಿರಿಯರೂ ಆ ದೇವರುಗಳನ್ನು ಪೂಜಿಸುತ್ತಿರಲಿಲ್ಲ. ಇವುಗಳು ಅನ್ಯದೇಶದ ಹೊಸ ದೇವರುಗಳು. ಯೆಹೂದದ ರಾಜರು ಈ ಸ್ಥಳವನ್ನು ಮುಗ್ಧಮಕ್ಕಳ ರಕ್ತದಿಂದ ತುಂಬಿದರು.