Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 21:20 - ಪರಿಶುದ್ದ ಬೈಬಲ್‌

20 ಆಮೋನನು ಅವನ ತಂದೆಯಾದ ಮನಸ್ಸೆಯಂತೆ ಯೆಹೋವನು ಕೆಟ್ಟದ್ದೆಂದು ಹೇಳಿದವುಗಳನ್ನೆಲ್ಲಾ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಅವನು ತನ್ನ ತಂದೆಯಾದ ಮನಸ್ಸೆಯ ಮಾರ್ಗದಲ್ಲಿಯೇ ನಡೆದು ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಅವನು ತನ್ನ ತಂದೆ ಮನಸ್ಸೆಯ ದುರ್ಮಾರ್ಗದಲ್ಲೇ ನಡೆದು ಸರ್ವೇಶ್ವರನ ದೃಷ್ಟಿಯಲ್ಲಿ ದ್ರೋಹಿಯಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಅವನು ತನ್ನ ತಂದೆಯಾದ ಮನಸ್ಸೆಯ ಮಾರ್ಗದಲ್ಲಿಯೇ ನಡೆದು ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಅವನು ತನ್ನ ತಂದೆ ಮನಸ್ಸೆಯು ಮಾಡಿದ ಹಾಗೆ ಯೆಹೋವ ದೇವರ ದೃಷ್ಟಿಯಲ್ಲಿ ಕೆಟ್ಟದ್ದನ್ನೇ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 21:20
11 ತಿಳಿವುಗಳ ಹೋಲಿಕೆ  

ಸ್ತೆಫನನು ಮಾತನ್ನು ಮುಂದುವರಿಸಿದನು: “ಮೊಂಡರಾದ ಯೆಹೂದ್ಯನಾಯಕರೇ! ನೀವು ನಿಮ್ಮ ಹೃದಯಗಳನ್ನು ದೇವರಿಗೆ ಕೊಟ್ಟಿಲ್ಲ. ನೀವು ಆತನಿಗೆ ಕಿವಿಗೊಡುವುದಿಲ್ಲ. ಪವಿತ್ರಾತ್ಮನು ನಿಮಗೆ ತಿಳಿಸಲು ಪ್ರಯತ್ನಿಸುತ್ತಿರುವ ವಿಷಯಕ್ಕೆ ನೀವು ಯಾವಾಗಲೂ ವಿರೋಧಿಗಳಾಗಿದ್ದೀರಿ. ನಿಮ್ಮ ಪಿತೃಗಳು ಹೀಗೆಯೇ ಮಾಡಿದರು ಮತ್ತು ನೀವೂ ಅವರಂತೆಯೇ ಇದ್ದೀರಿ!


ನಿಮ್ಮ ಪಿತೃಗಳು ಪ್ರಾರಂಭಿಸಿದ ಆ ಪಾಪವನ್ನು ನೀವು ಪೂರ್ತಿಮಾಡುವಿರಿ!


“ಯೆಹೂದದ ರಾಜನಾದ ಮನಸ್ಸೆಯು ತನಗಿಂತಲೂ ಮುಂಚೆ ಇದ್ದ ಅಮೋರಿಯರಿಗಿಂತ ಹೆಚ್ಚು ಅಸಹ್ಯವಾದ ಕೃತ್ಯಗಳನ್ನು ಮಾಡಿದನು. ಮನಸ್ಸೆಯು ತನ್ನ ವಿಗ್ರಹಗಳಿಂದ ಯೆಹೂದವನ್ನು ಪಾಪಕ್ಕೆ ಪ್ರೇರೇಪಿಸಿದನು.


ದುಷ್ಟ ಸಂತತಿಯವರೇ, ಈಗ ನೀವು ಯೆಹೋವನ ಭಯಂಕರವಾದ ಕೋಪವನ್ನು ಇನ್ನೂ ಹೆಚ್ಚಾಗಿ ಮಾಡಲು ನಿಮ್ಮ ಪೂರ್ವಿಕರ ಸ್ಥಾನವನ್ನು ತೆಗೆದುಕೊಂಡಿದ್ದೀರಿ.


ಆಮೋನನು ತನ್ನ ತಂದೆಯಂತೆ ಜೀವಿಸಿದ್ದನು. ತನ್ನ ತಂದೆಯು ಪೂಜಿಸಿದ ವಿಗ್ರಹಗಳನ್ನು ಆಮೋನನು ಪೂಜಿಸಿದನು.


ಯೆಹೋವಾಹಾಜನು ಯೆಹೋವನು ಕೆಟ್ಟದ್ದೆಂದು ಹೇಳಿದ ಕಾರ್ಯಗಳನ್ನು ಮಾಡಿದನು. ಯೆಹೋವಾಹಾಜನು ತನ್ನ ಪೂರ್ವಿಕರೆಲ್ಲರೂ ಮಾಡಿದಂತಹ ಕಾರ್ಯಗಳನ್ನು ಮಾಡಿದನು.


ಯೆಹೋಯಾಕೀಮನು ಯೆಹೋವನು ಕೆಟ್ಟದ್ದೆಂದು ಹೇಳಿದವುಗಳನ್ನು ಮಾಡಿದನು. ಯೆಹೋಯಾಕೀಮನು ತನ್ನ ಪೂರ್ವಿಕರು ಮಾಡಿದ ಕಾರ್ಯಗಳನ್ನು ಮಾಡಿದನು.


ಯೆಹೋವನು ಕೆಟ್ಟದ್ದೆಂದು ಹೇಳಿದ ಕಾರ್ಯಗಳನ್ನು ಯೆಹೋಯಾಖೀನನು ಮಾಡಿದನು. ಅವನು ತನ್ನ ತಂದೆಯು ಮಾಡಿದಂತಹ ಕಾರ್ಯಗಳನ್ನೆಲ್ಲ ಮಾಡಿದನು.


ಯೆಹೋವನು ಕೆಟ್ಟದ್ದೆಂದು ಹೇಳಿದ ಕಾರ್ಯಗಳನ್ನು ಚಿದ್ಕೀಯನು ಮಾಡಿದನು. ಚಿದ್ಕೀಯನು ಯೆಹೋಯಾಖೀನನು ಮಾಡಿದಂಥ ಕಾರ್ಯಗಳನ್ನು ಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು