2 ಅರಸುಗಳು 21:22 - ಪರಿಶುದ್ದ ಬೈಬಲ್22 ಆಮೋನನು ತನ್ನ ಪೂರ್ವಿಕರ ದೇವರಾದ ಯೆಹೋವನನ್ನು ತ್ಯಜಿಸಿದನು ಮತ್ತು ಯೆಹೋವನಿಗೆ ಮೆಚ್ಚಿಗೆಯಾದ ಮಾರ್ಗದಲ್ಲಿ ಜೀವಿಸಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ತನ್ನ ಪೂರ್ವಿಕರ ದೇವರಾದ ಯೆಹೋವನನ್ನೂ ಆರಾಧಿಸದೆ, ಆತನಿಗೆ ಮೆಚ್ಚಿಗೆಯಾಗುವಂತೆ ನಡೆಯುವ ಮಾರ್ಗವನ್ನೂ ಬಿಟ್ಟುಬಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಅವನು ಪೂಜಿಸಿದ ವಿಗ್ರಹಗಳನ್ನು ತಾನೂ ಪೂಜಿಸಿ ಅವುಗಳಿಗೆ ಅಡ್ಡಬಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ತನ್ನ ತಂದೆಯ ಮಾರ್ಗದಲ್ಲಿ ನಡೆದು ಅವನು ಪೂಜಿಸಿದ ವಿಗ್ರಹಗಳನ್ನು ತಾನೂ ಪೂಜಿಸಿ ಅವುಗಳಿಗೆ ಅಡ್ಡಬಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ತನ್ನ ತಂದೆಯು ನಡೆದ ಸಮಸ್ತ ಮಾರ್ಗದಲ್ಲಿ ನಡೆದು, ತನ್ನ ತಂದೆಯು ಸೇವಿಸಿದ ವಿಗ್ರಹಗಳನ್ನು ಸೇವಿಸಿ, ಅವುಗಳಿಗೆ ಅಡ್ಡಬಿದ್ದನು. ಅಧ್ಯಾಯವನ್ನು ನೋಡಿ |
ಸೊಲೊಮೋನನು ನನ್ನನ್ನು ಅನುಸರಿಸುವುದನ್ನು ನಿಲ್ಲಿಸಿದ ಕಾರಣ ನಾನು ಅವನ ರಾಜ್ಯವನ್ನು ಅವನಿಂದ ತೆಗೆದುಕೊಳ್ಳುವೆನು. ಅವನು ಚೀದೋನ್ಯರ ದೇವತೆಯಾದ ಅಷ್ಟೋರೆತಳನ್ನೂ ಮೋವಾಬ್ಯರ ದೇವರಾದ ಕೆಮೋಷನನ್ನೂ ಅಮ್ಮೋನಿಯರ ದೇವರಾದ ಮಿಲ್ಕೋಮನನ್ನೂ ಪೂಜಿಸಿದನು. ಸೊಲೊಮೋನನು ತಾನು ಮಾಡುತ್ತಿದ್ದ ಸರಿಯಾದ ಮತ್ತು ಉತ್ತಮವಾದ ಕಾರ್ಯಗಳನ್ನು ನಿಲ್ಲಿಸಿದನು. ಅವನು ನನ್ನ ಕಟ್ಟಳೆಗಳನ್ನು ಮತ್ತು ಆಜ್ಞೆಗಳನ್ನು ಅನುಸರಿಸಲಿಲ್ಲ. ತನ್ನ ತಂದೆಯಾದ ದಾವೀದನು ಜೀವಿಸಿದಂತೆ ಅವನು ಜೀವಿಸುತ್ತಿಲ್ಲ.