Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 21:23 - ಪರಿಶುದ್ದ ಬೈಬಲ್‌

23 ಆಮೋನನ ಸೇವಕರು ಅವನ ವಿರುದ್ಧ ಒಳಸಂಚು ಮಾಡಿದರು ಮತ್ತು ಅವನ ಸ್ವಂತ ಮನೆಯಲ್ಲಿಯೇ ಅವನನ್ನು ಕೊಂದುಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಮನಸ್ಸೆಯ ಸೇವಕರು ಆಮೋನನಿಗೆ ವಿರುದ್ಧವಾಗಿ ಒಳಸಂಚು ಮಾಡಿ ಅವನನ್ನು ಅರಸನ ಅರಮನೆಯಲ್ಲಿಯೇ ಕೊಂದುಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಅವನ ಸೇವಕರು ಅವನಿಗೆ ವಿರುದ್ಧ ಒಳಸಂಚು ಮಾಡಿ ಅವನನ್ನು ಅರಮನೆಯಲ್ಲಿಯೇ ಕೊಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಅವನ ಸೇವಕರು ಅವನಿಗೆ ವಿರೋಧವಾಗಿ ಒಳಸಂಚುಮಾಡಿ ಅವನನ್ನು ಅರಮನೆಯಲ್ಲಿಯೇ ಕೊಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಆಮೋನನ ಸೇವಕರು ಅವನ ವಿರುದ್ಧ ಒಳಸಂಚುಮಾಡಿ, ಅರಮನೆಯಲ್ಲಿಯೇ ಅವನನ್ನು ಕೊಂದುಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 21:23
8 ತಿಳಿವುಗಳ ಹೋಲಿಕೆ  

ಯೆಹೋವಾಷನ ಅಧಿಕಾರಿಗಳು ಅವನ ವಿರುದ್ಧವಾಗಿ ಸಂಚುಮಾಡಿ ಅವನನ್ನು ಸಿಲ್ಲಾಕ್ಕೆ ಹೋಗುವ ರಸ್ತೆಯಲ್ಲಿದ್ದ ಮಿಲ್ಲೋ ಮನೆಯಲ್ಲಿ ಕೊಂದುಹಾಕಿದರು.


ಜನರು ಜೆರುಸಲೇಮಿನಲ್ಲಿ ಅಮಚ್ಯನ ವಿರುದ್ಧವಾಗಿ ಒಳಸಂಚು ಮಾಡಿದರು. ಅಮಚ್ಯನು ಲಾಕೀಷಿಗೆ ಓಡಿಹೋದನು. ಆದರೆ ಜನರು ಅಮಚ್ಯನ ಹಿಂದೆ ಲಾಕೀಷಿಗೆ ಆಳುಗಳನ್ನು ಕಳುಹಿಸಿದರು. ಅವರು ಲಾಕೀಷಿನಲ್ಲಿ ಅಮಚ್ಯನನ್ನು ಕೊಂದುಹಾಕಿದರು.


ಏಲನ ಮಗನಾದ ಹೋಶೇಯನು ರೆಮಲ್ಯನ ಮಗನಾದ ಪೆಕಹನ ವಿರುದ್ಧ ಸಂಚುಗಳನ್ನು ಮಾಡಿ ಪೆಕಹನನ್ನು ಕೊಂದುಹಾಕಿದನು. ಪೆಕಹನ ನಂತರ ಹೋಶೇಯನು ಹೊಸ ರಾಜನಾದನು. ಉಜ್ಜೀಯನ ಮಗನಾದ ಯೋತಾಮನು ಯೆಹೂದದ ರಾಜನಾಗಿದ್ದ ಇಪ್ಪತ್ತನೆಯ ವರ್ಷದಲ್ಲಿ ಹೀಗಾಯಿತು.


ಪೆಕಹ್ಯನ ಸೇನೆಗೆ ರೆಮಲ್ಯನ ಮಗನಾದ ಪೆಕಹನು ಸೇನಾಧಿಪತಿಯಾಗಿದ್ದನು. ಅವನು ಪೆಕಹ್ಯನನ್ನು ಕೊಂದುಹಾಕಿದನು. ಅವನು ಸಮಾರ್ಯದಲ್ಲಿರುವ ರಾಜನ ಅರಮನೆಯಲ್ಲಿ ಪೆಕಹ್ಯನು ಅರ್ಗೋಬ್ ಮತ್ತು ಅರ್ಯೇ ಎಂಬವರನ್ನು ಸಹ ಕೊಂದುಹಾಕಿದನು. ಪೆಕಹ್ಯನನ್ನು ಪೆಕಹನು ಕೊಂದುಹಾಕಿದಾಗ ಅವನ ಸಂಗಡ ಗಿಲ್ಯಾದಿನ ಐವತ್ತು ಜನರಿದ್ದರು. ಪೆಕಹ್ಯನ ನಂತರ ಪೆಕಹನು ಹೊಸ ರಾಜನಾದನು.


ಜಿಮ್ರಿಯು ಏಲನ ಅಧಿಕಾರಿಗಳಲ್ಲಿ ಒಬ್ಬನಾಗಿದ್ದನು. ಏಲನ ರಥಬಲದ ಅರ್ಧಭಾಗಕ್ಕೆ ಜಿಮ್ರಿಯು ಅಧಿಪತಿ. ಆದರೆ ಏಲನ ವಿರುದ್ಧ ಜಿಮ್ರಿಯು ಸಂಚುಮಾಡಿದನು. ರಾಜನಾದ ಏಲನು ತಿರ್ಚದಲ್ಲಿದ್ದನು. ಅವನು ಅರ್ಚನ ಮನೆಯಲ್ಲಿ ಕುಡಿದು ಮತ್ತನಾದನು. ಅರ್ಚನು ತಿರ್ಚದಲ್ಲಿದ್ದ ಅರಮನೆಯ ಮೇಲ್ವಿಚಾರಕ.


ಬಾಷನು ಅಹೀಯನ ಮಗ. ಅವನು ಇಸ್ಸಾಕಾರನ ಕುಲದವನಾಗಿದ್ದನು. ರಾಜನಾದ ನಾದಾಬನನ್ನು ಕೊಲ್ಲಲು ಬಾಷನು ಸಂಚು ಮಾಡಿದನು. ನಾದಾಬನು ಇಸ್ರೇಲರೊಡನೆ ಗಿಬ್ಬೆತೋನ್ ಪಟ್ಟಣದ ವಿರುದ್ಧ ಹೋರಾಟ ಮಾಡುತ್ತಿದ್ದ ಸಂದರ್ಭವಿದು. ಇದು ಫಿಲಿಷ್ಟಿಯ ಪಟ್ಟಣ. ಆ ಸ್ಥಳದಲ್ಲಿ ಬಾಷನು ನಾದಾಬನನ್ನು ಕೊಂದುಹಾಕಿದನು.


ಯೆಹೂದದ ರಾಜನಾದ ಅಹಜ್ಯನು ಇದನ್ನು ಕಂಡು ತೋಟದ ಮನೆಯ ಮೂಲಕ ಓಡಿಹೋದನು. ಯೇಹು ಅವನನ್ನು ಹಿಂಬಾಲಿಸಿಕೊಂಡು ಹೋಗಿ, “ಅಹಜ್ಯನನ್ನೂ ಅವನ ರಥದಲ್ಲಿಯೇ ಹೊಡೆಯಿರಿ!” ಎಂದು ಹೇಳಿದನು. ಯೇಹುವಿನ ಜನರು ಅಹಜ್ಯನನ್ನು ಇಬ್ಲೆಯಾಮಿನ ಬಳಿಯಿರುವ ಗೂರ್‌ನಲ್ಲಿ ಹೊಡೆದುಹಾಕಿದರು. ಅಹಜ್ಯನು ಮೆಗಿದ್ದೋವಿಗೆ ಓಡಿಹೋದರೂ ಅಲ್ಲಿ ಸತ್ತುಹೋದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು