Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 21:24 - ಪರಿಶುದ್ದ ಬೈಬಲ್‌

24 ರಾಜನಾದ ಆಮೋನನ ವಿರುದ್ಧ ಒಳಸಂಚು ಮಾಡಿದ ಅವನ ಅಧಿಕಾರಿಗಳನ್ನು ಆ ದೇಶದ ಜನಸಾಮಾನ್ಯರು ಕೊಂದುಹಾಕಿದರು. ಆಮೋನನ ಮಗನಾದ ಯೋಷೀಯನನ್ನು ಜನರು ಅವನ ನಂತರ ಹೊಸ ರಾಜನನ್ನಾಗಿ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಆದರೆ ದೇಶದ ಜನರು ಒಳಸಂಚುಮಾಡಿದವರನ್ನೆಲ್ಲಾ ಕೊಂದುಹಾಕಿ, ಆಮೋನನ ಮಗನಾದ ಯೋಷೀಯನನ್ನು ಅರಸನನ್ನಾಗಿ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಆದರೆ ನಾಡಿನ ಜನರು ಒಳಸಂಚು ಮಾಡಿದವರನ್ನೆಲ್ಲಾ ಕೊಂದುಹಾಕಿ ಆಮೋನನಿಗೆ ಬದಲಾಗಿ ಅವನ ಮಗ ಯೋಷೀಯನನ್ನು ಅರಸನನ್ನಾಗಿ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಆದರೆ ದೇಶದ ಜನರು ಒಳಸಂಚುಮಾಡಿದವರನ್ನೆಲ್ಲಾ ಕೊಂದುಹಾಕಿ ಆಮೋನನಿಗೆ ಬದಲಾಗಿ ಅವನ ಮಗನಾದ ಯೋಷೀಯನನ್ನು ಅರಸನನ್ನಾಗಿ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಆದರೆ ದೇಶದ ಜನರು ಅರಸನಾದ ಆಮೋನನ ವಿರುದ್ಧ ಒಳಸಂಚು ಮಾಡಿದವರನ್ನೆಲ್ಲಾ ಕೊಂದುಹಾಕಿ, ಅವನ ಮಗ ಯೋಷೀಯನನ್ನು ಅವನಿಗೆ ಬದಲಾಗಿ ಅರಸನನ್ನಾಗಿ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 21:24
13 ತಿಳಿವುಗಳ ಹೋಲಿಕೆ  

ಅಮಚ್ಯನು ರಾಜ್ಯಾಧಿಕಾರವನ್ನು ಬಿಗಿಗೊಳಿಸಿಕೊಂಡ ಮೇಲೆ, ತನ್ನ ತಂದೆಯನ್ನು ಕೊಂದ ಅಧಿಕಾರಿಗಳನ್ನು ಕೊಂದುಹಾಕಿದನು.


ಆದರೆ ಅರಸನಾದ ಅಮೋನನಿಗೆ ವಿರೋಧವಾಗಿ ಎದ್ದ ಸೇವಕರನ್ನೆಲ್ಲಾ ಯೆಹೂದದ ಜನರು ಸಂಹರಿಸಿದರು. ಅನಂತರ ಅಮೋನನ ಮಗನಾದ ಯೋಷೀಯನನ್ನು ತಮ್ಮ ಅರಸನನ್ನಾಗಿ ಆರಿಸಿದರು.


ಆ ಬಳಿಕ ಯೆಹೂದದ ಜನರು ಅಮಚ್ಯನ ಮಗನಾದ ಉಜ್ಜೀಯನನ್ನು ತಮ್ಮ ಅರಸನನ್ನಾಗಿ ಆರಿಸಿಕೊಂಡರು. ಆಗ ಅವನಿಗೆ ಹದಿನಾರು ವರ್ಷ.


ಜೆರುಸಲೇಮಿನ ಜನರು ಯೆಹೋರಾಮನ ಕೊನೆಯ ಮಗನಾದ ಅಹಜ್ಯನನ್ನು ತಮ್ಮ ರಾಜನನ್ನಾಗಿ ಆರಿಸಿಕೊಂಡರು. ಯೆಹೋರಾಮನೊಂದಿಗೆ ಯುದ್ಧಕ್ಕೆ ಬಂದಿದ್ದ ಅರಬ್ಬಿಯರು ಅವನ ಮಕ್ಕಳನ್ನೆಲ್ಲಾ ಕೊಂದಿದ್ದರು. ಹೀಗಾಗಿ ಉಳಿದುಕೊಂಡಿದ್ದ ಅಹಜ್ಯನು ಜೆರುಸಲೇಮಿನಲ್ಲಿ ಯೆಹೂದ ರಾಜ್ಯವನ್ನು ಆಳತೊಡಗಿದನು.


ನಂತರ ಯೆಹೂದದ ಜನರೆಲ್ಲರೂ ಅಜರ್ಯನನ್ನು ನೂತನ ರಾಜನನ್ನಾಗಿ ಮಾಡಿದರು. ಅಜರ್ಯನಿಗೆ ಹದಿನಾರು ವರ್ಷ ವಯಸ್ಸಾಗಿತ್ತು.


ಅನಂತರ ಯೆಹೋಯಾದಾವನ ಪ್ರೇರಣೆಯಿಂದ ಅರಸನೂ ಪ್ರಜೆಗಳೂ ತಾವು ಯೆಹೋವನ ಪ್ರಜೆಗಳಾಗಿರುವುದಾಗಿ ಆತನಿಗೆ ಪ್ರಮಾಣಮಾಡಿದರು.


ಯಾರೊಬ್ಬಾಮನು ಹಿಂದಿರುಗಿ ಬಂದಿದ್ದಾನೆ ಎಂಬುದು ಇಸ್ರೇಲಿನ ಜನರೆಲ್ಲರಿಗೂ ತಿಳಿಯಿತು. ಅವರು ಅವನನ್ನು ಒಂದು ಸಭೆಗೆ ಕರೆಸಿ, ಅವನನ್ನು ಇಸ್ರೇಲಿನ ರಾಜನನ್ನಾಗಿ ನೇಮಿಸಿದರು. ಯೆಹೂದಕುಲವೊಂದು ಮಾತ್ರ ದಾವೀದನ ಕುಟುಂಬವನ್ನು ಅನುಸರಿಸಿತು.


ಸೊಲೊಮೋನನಿಂದ ಓಡಿಹೋಗಿದ್ದ ನೆಬಾಟನ ಮಗನಾದ ಯಾರೊಬ್ಬಾಮನು ಇನ್ನೂ ಈಜಿಪ್ಟಿನಲ್ಲಿಯೇ ಇದ್ದನು. ಸೊಲೊಮೋನನು ಸತ್ತುಹೋದ ಸುದ್ದಿಯನ್ನು ಕೇಳಿ ಅವನು ಎಫ್ರಾಯೀಮ್ ಬೆಟ್ಟದಲ್ಲಿರುವ ಜೆರೆಧ ಎಂಬ ಪಟ್ಟಣಕ್ಕೆ ಹಿಂದಿರುಗಿದನು. ರಾಜನಾದ ಸೊಲೊಮೋನನು ಸತ್ತುಹೋದನು ಮತ್ತು ಅವನನ್ನು ಅವನ ಪೂರ್ವಿಕರ ಬಳಿಯಲ್ಲಿ ಸಮಾಧಿಮಾಡಿದರು. ಅನಂತರ ಅವನ ಮಗನಾದ ರೆಹಬ್ಬಾಮನು ಹೊಸ ರಾಜನಾದನು.


ರಾಜನಾದ ದಾವೀದನಿದ್ದ ಹೆಬ್ರೋನಿಗೆ ಇಸ್ರೇಲಿನ ಎಲ್ಲಾ ನಾಯಕರೂ ಬಂದರು. ಹೆಬ್ರೋನಿನಲ್ಲಿ ರಾಜನಾದ ದಾವೀದನು ಯೆಹೋವನ ಸನ್ನಿಧಿಯಲ್ಲಿ ಈ ನಾಯಕರೊಂದಿಗೆ ಒಂದು ಒಪ್ಪಂದವನ್ನು ಮಾಡಿಕೊಂಡನು. ಆಗ ನಾಯಕರು ದಾವೀದನನ್ನು ಇಸ್ರೇಲಿನ ರಾಜನನ್ನಾಗಿ ಅಭಿಷೇಕಿಸಿದರು.


ಜನರೆಲ್ಲ ಗಿಲ್ಗಾಲಿಗೆ ಹೋದರು. ಅಲ್ಲಿ ಯೆಹೋವನ ಸಮ್ಮುಖದಲ್ಲಿ ಜನರೆಲ್ಲ ಸೌಲನನ್ನು ರಾಜನನ್ನಾಗಿ ಮಾಡಿದರು. ಅವರೆಲ್ಲರು ಯೆಹೋವನಿಗೆ ಸಮಾಧಾನಯಜ್ಞಗಳನ್ನು ಅರ್ಪಿಸಿದರು. ಸೌಲನು ಮತ್ತು ಇಸ್ರೇಲರೆಲ್ಲಾ ಒಂದು ದೊಡ್ಡ ಉತ್ಸವವನ್ನೇ ಮಾಡಿದರು.


“ಯೆಹೂದದ ರಾಜರುಗಳ ಇತಿಹಾಸ” ಎಂಬ ಪುಸ್ತಕದಲ್ಲಿ ಆಮೋನನು ಮಾಡಿದ ಇತರ ಕಾರ್ಯಗಳನ್ನು ಕುರಿತು ಬರೆಯಲಾಗಿದೆ.


ಯೆಹೂದದಲ್ಲಿ ಆಮೋನನ ಮಗನಾದ ಯೋಷೀಯನ ಆಳ್ವಿಕೆಯ ಹದಿಮೂರನೆಯ ವರ್ಷದಲ್ಲಿ ಯೆಹೋವನು ಯೆರೆಮೀಯನೊಂದಿಗೆ ಮಾತನಾಡಲು ಪ್ರಾರಂಭಿಸಿದನು.


ಯೋಷೀಯನು ಆಳಲಾರಂಭಿಸಿದಾಗ ಅವನಿಗೆ ಎಂಟು ವರ್ಷ ವಯಸ್ಸಾಗಿತ್ತು. ಅವನು ಮೂವತ್ತೊಂದು ವರ್ಷ ಜೆರುಸಲೇಮಿನಲ್ಲಿ ಆಳಿದನು. ಅವನ ತಾಯಿಯ ಹೆಸರು ಯದೀದಾ. ಇವಳು ಬೊಚ್ಕತ್ ಎಂಬ ಸ್ಥಳದ ಅದಾಯ ಎಂಬವನ ಮಗಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು