Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 21:4 - ಪರಿಶುದ್ದ ಬೈಬಲ್‌

4 ಮನಸ್ಸೆಯು ಸುಳ್ಳುದೇವತೆಗಳನ್ನು ಗೌರವಿಸಲು ದೇವಾಲಯದಲ್ಲಿ ಯಜ್ಞವೇದಿಕೆಗಳನ್ನು ನಿರ್ಮಿಸಿದನು. (“ನಾನು ನನ್ನ ಹೆಸರನ್ನು ಜೆರುಸಲೇಮಿನಲ್ಲಿ ಸ್ಥಾಪಿಸುತ್ತೇನೆ” ಎಂದು ಯೆಹೋವನು ಮಾತನಾಡುವಾಗ ಹೇಳುತ್ತಿದ್ದ ಸ್ಥಳವು ಇದೇ ಆಗಿತ್ತು.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಇದಲ್ಲದೆ, “ಯೆರೂಸಲೇಮಿನಲ್ಲಿ ನನ್ನ ಹೆಸರನ್ನು ಸ್ಥಾಪಿಸುವೆನು” ಎಂದು ಯೆಹೋವನು ಯಾವುದನ್ನು ಕುರಿತು ಹೇಳಿದ್ದನೋ, ಆ ಯೆಹೋವನ ಆಲಯದಲ್ಲಿ ಮನಸ್ಸೆಯು ಯಜ್ಞವೇದಿಗಳನ್ನು ಕಟ್ಟಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಸರ್ವೇಶ್ವರ ತಮ್ಮ ಹೆಸರನ್ನು ಸ್ಥಾಪಿಸುವುದಕ್ಕಾಗಿ ಆರಿಸಿಕೊಂಡ ಜೆರುಸಲೇಮಿನ ದೇವಾಲಯದ ಎರಡು ಪ್ರಾಕಾರಗಳಲ್ಲಿಯೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಯೆಹೋವನು ತನ್ನ ಹೆಸರನ್ನು ಸ್ಥಾಪಿಸುವದಕ್ಕಾಗಿ ಆರಿಸಿಕೊಂಡ ಯೆರೂಸಲೇವಿುನ ದೇವಾಲಯದ ಎರಡು ಪ್ರಾಕಾರಗಳಲ್ಲಿಯೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಇದಲ್ಲದೆ, “ಯೆರೂಸಲೇಮಿನಲ್ಲಿ ನನ್ನ ಹೆಸರನ್ನು ಸ್ಥಾಪಿಸುವೆನು,” ಎಂದು ಯೆಹೋವ ದೇವರು ಯಾವುದನ್ನು ಕುರಿತು ಹೇಳಿದ್ದರೋ, ಆ ಆಲಯದಲ್ಲಿ ಅವನು ಬಲಿಪೀಠಗಳನ್ನು ಕಟ್ಟಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 21:4
18 ತಿಳಿವುಗಳ ಹೋಲಿಕೆ  

‘ಅಲ್ಲಿ ನಾನು ಸನ್ಮಾನಿಸಲ್ಪಡುವೆನು’ ಎಂದು ನೀನು ಬಹುಕಾಲದ ಹಿಂದೆ ಹೇಳಿರುವೆ. ಆದ್ದರಿಂದ ಈ ಆಲಯವನ್ನು ಹಗಲಿರುಳೂ ದೃಷ್ಟಿಸು. ನಾನು ಈ ಆಲಯದಲ್ಲಿ ನಿನಗೆ ಮಾಡುವ ಪ್ರಾರ್ಥನೆಯನ್ನು ದಯವಿಟ್ಟು ಕೇಳು.


ಅವನು ನನ್ನ ಹೆಸರಿಗಾಗಿ ಒಂದು ಆಲಯವನ್ನು ನಿರ್ಮಿಸುತ್ತಾನೆ. ಅವನ ರಾಜ್ಯವು ಸದಾಕಾಲಕ್ಕೂ ಇರುವಂತೆ ನಾನು ಮಾಡುತ್ತೇನೆ.


ಆ ಜನರು ತಮಗಾಗಿ ವಿಗ್ರಹಗಳನ್ನು ಮಾಡಿಕೊಂಡಿದ್ದಾರೆ. ನಾನು ಆ ವಿಗ್ರಹಗಳನ್ನು ದ್ವೇಷಿಸುತ್ತೇನೆ. ನನ್ನ ಹೆಸರಿನಿಂದ ಖ್ಯಾತಿಗೊಂಡ ಆಲಯದಲ್ಲಿ ಆ ವಿಗ್ರಹಗಳನ್ನಿಟ್ಟು ನನ್ನ ಆಲಯವನ್ನು ‘ಹೊಲಸು’ ಮಾಡಿದ್ದಾರೆ.


ಯೆಹೋವನು ಅವನಿಗೆ ಹೀಗೆ ಹೇಳಿದನು: “ನಿನ್ನ ಪ್ರಾರ್ಥನೆಯು ನನಗೆ ಕೇಳಿಸಿತು. ನಿನ್ನ ಬಿನ್ನಹಗಳನ್ನು ಆಲಿಸಿದೆನು. ಈ ಆಲಯವನ್ನು ನೀನು ಕಟ್ಟಿಸಿದೆ. ನಾನು ಅದನ್ನು ಪವಿತ್ರಸ್ಥಳವನ್ನಾಗಿ ಮಾಡಿದೆ. ಆದ್ದರಿಂದ ನಾನಿಲ್ಲಿ ಸದಾಕಾಲ ಸನ್ಮಾನಿಸಲ್ಪಡುವೆನು. ನನ್ನ ದೃಷ್ಟಿಯೂ ಮನಸ್ಸೂ ಸದಾ ಅದರ ಮೇಲಿರುತ್ತದೆ.


ನಿಮ್ಮ ದೇವರಾದ ಯೆಹೋವನು ನಿಮ್ಮ ಕುಲದವರ ಪ್ರಾಂತ್ಯಗಳಿಂದ ಒಂದು ವಿಶೇಷ ಸ್ಥಳವನ್ನು ಆರಿಸಿಕೊಂಡು ಅದಕ್ಕೆ ತನ್ನ ಹೆಸರಿಡುವನು. ಅಲ್ಲಿ ಆತನ ಆಲಯ ಕಟ್ಟಲ್ಪಡುವುದು. ಆತನನ್ನು ಆರಾಧಿಸಲು ನೀವು ಅಲ್ಲಿಗೆ ಹೋಗಬೇಕು.


“ಒಂದು ವಿಶೇಷ ಯಜ್ಞವೇದಿಕೆಯನ್ನು ನನಗೋಸ್ಕರ ಮಣ್ಣಿನಿಂದ ಕಟ್ಟಿರಿ. ಈ ಯಜ್ಞವೇದಿಕೆಯ ಮೇಲೆ ಕುರಿದನಗಳನ್ನು ನನಗೆ ಸರ್ವಾಂಗಹೋಮಗಳನ್ನಾಗಿಯೂ ಸಮಾಧಾನಯಜ್ಞಗಳನ್ನಾಗಿಯೂ ಸಮರ್ಪಿಸಿರಿ. ನಾನು ನಿಮಗೆ ಹೇಳುವ ಪ್ರತಿಯೊಂದು ಸ್ಥಳದಲ್ಲಿಯೂ ನನ್ನನ್ನು ಜ್ಞಾಪಕಮಾಡಿಕೊಳ್ಳಲು ಹೀಗೆಯೇ ಮಾಡಿರಿ. ಆಗ ನಾನು ಬಂದು ನಿಮ್ಮನ್ನು ಆಶೀರ್ವದಿಸುವೆನು.


“ಜೆರುಸಲೇಮ್ ನಗರವು ನಿರ್ಮಾಣಗೊಂಡಂದಿನಿಂದ ಇಂದಿನವರೆಗೂ ಈ ನಗರದ ಜನರು ನನಗೆ ಕೋಪ ಬರುವಂತೆ ಮಾಡಿದ್ದಾರೆ. ಈ ನಗರವು ನನಗೆ ಅತಿಕೋಪ ಬರುವಂತೆ ಮಾಡಿದೆ. ಆದ್ದರಿಂದ ಕಣ್ಣಿಗೆ ಕಾಣದಂತೆ ಅದನ್ನು ಅಳಿಸಿಬಿಡುವೆನು.


ಅಲ್ಲದೆ ನನ್ನ ಪವಿತ್ರ ಆಲಯವನ್ನೂ ನನ್ನ ಪವಿತ್ರವಾದ ವಿಶೇಷ ವಿಶ್ರಾಂತಿ ದಿವಸಗಳನ್ನೂ ಆಲಕ್ಷ್ಯ ಮಾಡಿ ಅದಕ್ಕೆ ಮಹತ್ವವನ್ನು ಕೊಡದೆ ಹೋದರು.


ಪೂರ್ವಕಾಲದಲ್ಲಿ, ಯೆಹೂದದ ರಾಜರುಗಳು ಅಹಾಬನ ಕಟ್ಟಡದ ಮಾಳಿಗೆಯ ಮೇಲೆ ಯಜ್ಞವೇದಿಕೆಗಳನ್ನು ನಿರ್ಮಿಸಿದ್ದರು. ರಾಜನಾದ ಮನಸ್ಸೆಯು ದೇವಾಲಯದ ಎರಡು ಪ್ರಾಕಾರಗಳಲ್ಲಿ ಯಜ್ಞವೇದಿಕೆಗಳನ್ನು ನಿರ್ಮಿಸಿದ್ದನು. ಯೋಷೀಯನು ಆ ಯಜ್ಞವೇದಿಕೆಗಳನ್ನೆಲ್ಲ ನಾಶಗೊಳಿಸಿ, ಅವುಗಳ ಚೂರುಗಳನ್ನು ಕಿದ್ರೋನ್ ಕಣಿವೆಗೆ ಎಸೆದನು.


ಯೆಹೋವನು, “ನಾನು ಇಸ್ರೇಲರನ್ನು ತೆಗೆದುಹಾಕಿದಂತೆ ಯೆಹೂದ್ಯರನ್ನೂ ನನ್ನ ಸನ್ನಿಧಿಯಿಂದ ತೆಗೆದುಹಾಕುವೆನು. ನಾನು ಆರಿಸಿಕೊಂಡ ಜೆರುಸಲೇಮ್ ಪಟ್ಟಣವನ್ನೂ ನನ್ನ ನಾಮ ಮಹತ್ತಿಗಾಗಿ ಸ್ವೀಕರಿಸಿಕೊಂಡ ದೇವಾಲಯವನ್ನೂ ತಿರಸ್ಕರಿಸುವೆನು” ಎಂದು ಹೇಳಿದನು.


‘ಈಜಿಪ್ಟಿನಿಂದ ನನ್ನ ಜನರನ್ನು ಬಿಡಿಸಿ ಹೊರ ತಂದಂದಿನಿಂದ ನನ್ನ ಆಲಯಕೋಸ್ಕರ ಇಸ್ರೇಲರ ಕುಲಗಳ ಯಾವ ಪಟ್ಟಣವನ್ನೂ ನಾನು ಆರಿಸಿಕೊಳ್ಳಲಿಲ್ಲ. ಇಸ್ರೇಲರನ್ನು ನಡಿಸುವುದಕ್ಕಾಗಿ ಒಬ್ಬ ನಾಯಕನನ್ನೂ ನಾನು ಆರಿಸಿಕೊಳ್ಳಲಿಲ್ಲ.


ಆದರೆ ಈಗ ನಾನು ನನ್ನ ಹೆಸರನ್ನು ಸ್ಥಾಪಿಸಲು ಜೆರುಸಲೇಮನ್ನು ಆರಿಸಿಕೊಂಡಿದ್ದೇನೆ; ದಾವೀದನನ್ನು ನನ್ನ ಜನರ ನಾಯಕನನ್ನಾಗಿ ಆರಿಸಿಕೊಂಡಿದ್ದೇನೆ’ ಎಂದು ಹೇಳಿದನು.


ನೀನು ಹಾಗೆ ಮಾಡಲೇಬೇಕು ಯಾಕೆಂದರೆ, ಯೆಹೂದದ ಜನರು ಮಾಡುವ ದುಷ್ಕೃತ್ಯಗಳನ್ನು ನಾನು ನೋಡಿದ್ದೇನೆ.” ಯೆಹೋವನು ಹೀಗೆನ್ನುತ್ತಾನೆ: “ಅವರು ತಮ್ಮ ವಿಗ್ರಹಗಳನ್ನು ಸ್ಥಾಪಿಸಿದ್ದಾರೆ. ನಾನು ಆ ವಿಗ್ರಹಗಳನ್ನು ದ್ವೇಷಿಸುತ್ತೇನೆ. ನನ್ನ ಹೆಸರಿನಿಂದ ಖ್ಯಾತಿಪಡೆದ ಆಲಯದಲ್ಲಿ ಅವರು ವಿಗ್ರಹಗಳನ್ನು ಸ್ಥಾಪಿಸಿದ್ದಾರೆ. ಅವರು ನನ್ನ ಆಲಯವನ್ನು ‘ಮಲಿನ’ಗೊಳಿಸಿದ್ದಾರೆ.


“ಬೆನ್‌ಹಿನ್ನೊಮ್ ಕಣಿವೆಯಲ್ಲಿ ಅವರು ಸುಳ್ಳುದೇವರಾದ ಬಾಳನಿಗಾಗಿ ಎತ್ತರವಾದ ಸ್ಥಳಗಳನ್ನು ಕಟ್ಟಿದ್ದಾರೆ. ತಮ್ಮ ಮಕ್ಕಳನ್ನು ಆಹುತಿಕೊಡುವದಕ್ಕಾಗಿ ಈ ಪೂಜಾಸ್ಥಳಗಳನ್ನು ಕಟ್ಟಿಸಿದ್ದಾರೆ. ಇಂಥಾ ಭಯಂಕರವಾದ ಕೆಲಸವನ್ನು ಮಾಡಲು ನಾನು ಅವರಿಗೆ ಆಜ್ಞಾಪಿಸಿಲ್ಲ. ಯೆಹೂದದ ಜನರು ಇಂಥಾ ಭಯಂಕರವಾದ ಕಾರ್ಯವನ್ನು ಮಾಡುವರೆಂದು ನಾನೆಂದೂ ಊಹಿಸಿರಲಿಲ್ಲ.


ಅವರ ವಿಗ್ರಹಗಳಿಗೋಸ್ಕರ ತಮ್ಮ ಮಕ್ಕಳನ್ನು ಕೊಂದರು. ಅನಂತರ ಅದೇ ದಿನದಲ್ಲೇ ನನ್ನ ಪವಿತ್ರ ಆಲಯದೊಳಕ್ಕೆ ಹೋಗಿ ಅದನ್ನು ಹೊಲೆ ಮಾಡಿದರು. ನನ್ನ ಆಲಯದೊಳಗೆ ಅವರು ಹಾಗೆ ಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು