2 ಅರಸುಗಳು 21:5 - ಪರಿಶುದ್ದ ಬೈಬಲ್5 ಮನಸ್ಸೆಯು ಪರಲೋಕದ ನಕ್ಷತ್ರಗಳಿಗಾಗಿ ದೇವಾಲಯದ ಎರಡು ಪ್ರಾಕಾರಗಳಲ್ಲಿ ಯಜ್ಞವೇದಿಕೆಗಳನ್ನು ನಿರ್ಮಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಯೆಹೋವನ ಆಲಯದ ಎರಡು ಪ್ರಾಕಾರಗಳಲ್ಲಿಯೂ ಸರ್ವ ನಕ್ಷತ್ರಮಂಡಲಗಳಿಗಾಗಿ ಯಜ್ಞವೇದಿಗಳನ್ನು ಕಟ್ಟಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಸರ್ವ ನಕ್ಷತ್ರಮಂಡಲಕ್ಕಾಗಿ ಬಲಿಪೀಠಗಳನ್ನು ಕಟ್ಟಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಸರ್ವನಕ್ಷತ್ರಮಂಡಲಕ್ಕೋಸ್ಕರ ಯಜ್ಞವೇದಿಗಳನ್ನು ಕಟ್ಟಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಯೆಹೋವ ದೇವರ ಆಲಯದ ಎರಡು ಅಂಗಳಗಳಲ್ಲಿ ಆಕಾಶದ ಸಮಸ್ತ ನಕ್ಷತ್ರಮಂಡಲಕ್ಕಾಗಿ ಬಲಿಪೀಠಗಳನ್ನು ಕಟ್ಟಿಸಿದನು. ಅಧ್ಯಾಯವನ್ನು ನೋಡಿ |
ನಂತರ ರಾಜನು ಪ್ರಧಾನಯಾಜಕನಾದ ಹಿಲ್ಕೀಯನಿಗೆ, ಇತರ ಯಾಜಕರಿಗೆ, ದ್ವಾರಪಾಲಕರಿಗೆ, ಬಾಳ್‌ದೇವರಿಗೂ ಅಶೇರ ದೇವತೆಗೂ ಮತ್ತು ಆಕಾಶದ ನಕ್ಷತ್ರಗಳಿಗೂ ಉಪಯೋಗಿಸುತ್ತಿದ್ದ ಎಲ್ಲಾ ಸಲಕರಣೆಗಳನ್ನು ದೇವಾಲಯದಿಂದ ಹೊರತರುವಂತೆ ಆಜ್ಞಾಪಿಸಿದನು. ಯೋಷೀಯನು ಜೆರುಸಲೇಮಿನ ಹೊರಗೆ ಕಿದ್ರೋನ್ ಹೊಲಗಳಲ್ಲಿ ಅವುಗಳನ್ನು ಸುಟ್ಟುಹಾಕಿದನು. ಅವರು ಬೂದಿಯನ್ನು ಬೇತೇಲಿಗೆ ತೆಗೆದುಕೊಂಡು ಹೋದರು.
ಹೊರಗಿನ ಪ್ರಾಕಾರದಲ್ಲಿರುವ ಜನರ ಬಳಿಗೆ ಅವರು ಹೋಗುವಾಗ, ನನ್ನ ಸೇವೆಮಾಡಲು ಅವರು ಧರಿಸಿಕೊಂಡಿದ್ದ ವಸ್ತ್ರಗಳನ್ನು ತೆಗೆದಿಡುವರು. ಒಳಗಿನ ಪ್ರಾಕಾರದಲ್ಲಿರುವ ವಿಶೇಷವಾದ ಉಗ್ರಾಣ ಕೋಣೆಯಲ್ಲಿ ಅವರು ಆ ವಸ್ತ್ರಗಳನ್ನು ಇಡುವರು ಮತ್ತು ಹೊರಗಿನ ಪ್ರಾಕಾರದಲ್ಲಿರುವ ಜನರ ಬಳಿಗೆ ಹೋಗುವಾಗ ಬೇರೆ ಬಟ್ಟೆಗಳನ್ನು ಧರಿಸಿಕೊಳ್ಳುವರು. ಹೀಗೆ ಅವರು ಮಾಡುವದರಿಂದ ಸಾಮಾನ್ಯ ಜನರು ಆ ವಿಶೇಷವಾದ ಬಟ್ಟೆಗಳನ್ನು ಮುಟ್ಟಿದಂತಾಗುವುದು.
ಯೆಹೂದದ ರಾಜರುಗಳು ಯಾಜಕರಾಗಿ ಸೇವೆಮಾಡಲು ಕೆಲವು ಸಾಮಾನ್ಯ ಜನರನ್ನು ಆರಿಸಿಕೊಂಡರು. ಈ ಜನರು ಆರೋನನ ಕುಲದಿಂದ ಬಂದವರಲ್ಲ! ಈ ಸುಳ್ಳುಯಾಜಕರು ಯೆಹೂದದ ನಗರಗಳಲ್ಲಿನ ಮತ್ತು ಜೆರುಸಲೇಮಿನ ಊರುಗಳಲ್ಲಿನ ಉನ್ನತಸ್ಥಳಗಳಲ್ಲಿ ಧೂಪವನ್ನು ಸುಡುತ್ತಿದ್ದರು. ಅವರು ಬಾಳನನ್ನು, ಸೂರ್ಯನನ್ನು, ಚಂದ್ರನನ್ನು, ಆಕಾಶ ಸೈನ್ಯವಾದ ನಕ್ಷತ್ರಗಳನ್ನು ಗೌರವಿಸಲು ಧೂಪವನ್ನು ಸುಡುತ್ತಿದ್ದರು. ಆದರೆ ಯೋಷೀಯನು ಆ ಸುಳ್ಳು ಯಾಜಕರನ್ನು ನಿಲ್ಲಿಸಿದನು.