8 ಇಸ್ರೇಲಿನ ಜನರು ತಮ್ಮ ದೇಶವನ್ನು ತೊರೆದು ಅಲೆದಾಡದೆ ತಮ್ಮ ಪೂರ್ವಿಕರಿಗೆ ಕೊಡಲ್ಪಟ್ಟ ದೇಶದಲ್ಲಿಯೇ ನೆಲೆಸುವಂತೆ ನಾನು ಮಾಡುತ್ತೇನೆ. ನಾನು ನನ್ನ ಸೇವಕನಾದ ಮೋಶೆಯ ಮೂಲಕ ಅವರಿಗೆ ಬೋಧಿಸಿದ ಆಜ್ಞೆಗಳಿಗೆಲ್ಲಾ ಅವರು ವಿಧೇಯರಾಗಿದ್ದರೆ, ನಾನು ಅವರನ್ನು ಅವರ ದೇಶದಲ್ಲಿ ನೆಲೆಗೊಳಿಸುವೆನು.”
8 ಇಸ್ರಾಯೇಲರು ತಮಗೆ ಮೋಶೆಯ ಮುಖಾಂತರವಾಗಿ ಕೊಡಲ್ಪಟ್ಟ ಧರ್ಮಶಾಸ್ತ್ರದ ನಿಯಮ ನಿಬಂಧನೆಗಳನ್ನು ಅನುಸರಿಸಿ, ನಡೆಯುವುದಾದರೆ, ನನ್ನ ನಾಮ ಮಹತ್ತು ಈ ದೇವಾಲಯದಲ್ಲಿಯೂ, ಇಸ್ರಾಯೇಲರ ಎಲ್ಲಾ ಊರುಗಳಲ್ಲಿಯೂ, ನನಗೆ ಇಷ್ಟವಾಗಿರುವ ಯೆರೂಸಲೇಮಿನಲ್ಲಿಯೂ ಸದಾಕಾಲ ಇರುವಂತೆ ಮಾಡುವೆನು, ಇಸ್ರಾಯೇಲರು ಇನ್ನು ಮುಂದೆ ದೇಶಭ್ರಷ್ಟರಾಗಿ ಅಲೆದಾಡದೆ ತಮ್ಮ ಪೂರ್ವಿಕರಿಗೆ ಕೊಡಲಾದ ದೇಶದಲ್ಲಿಯೇ ವಾಸವಾಗಿರುವಂತೆ ಮಾಡುವೆನು” ಎಂದು ಹೇಳಿದನು.
8 ನನ್ನ ನಾಮಮಹತ್ತು ಈ ದೇವಾಲಯದಲ್ಲು, ಇಸ್ರಯೇಲರ ಊರುಗಳಲ್ಲು ಹಾಗು ನನಗೆ ಪ್ರಿಯವಾಗಿರುವ ಜೆರುಸಲೇಮಿನಲ್ಲು ಸದಾಕಾಲ ಇರುವುದು. ಇಸ್ರಯೇಲರು ಇನ್ನು ಮುಂದೆ ದೇಶಭ್ರಷ್ಟರಾಗಿ ಅಲೆದಾಡದೆ ತಮ್ಮ ಪಿತೃಗಳಿಗೆ ಕೊಡಲಾದ ನಾಡಿನಲ್ಲಿಯೇ ವಾಸವಾಗಿರುವಂತೆ ಮಾಡುವೆನು,” ಎಂದು ಹೇಳಿದ್ದರು.
8 ನನ್ನ ನಾಮ ಮಹತ್ತು ಈ ದೇವಾಲಯದಲ್ಲಿಯೂ ಇಸ್ರಾಯೇಲ್ಯರ ಎಲ್ಲಾ ಊರುಗಳಲ್ಲಿ ನನಗೆ ಇಷ್ಟವಾಗಿರುವ ಯೆರೂಸಲೇವಿುನಲ್ಲಿಯೂ ಸದಾಕಾಲವಿರುವದು. ಇಸ್ರಾಯೇಲ್ಯರು ಇನ್ನು ಮುಂದೆ ದೇಶಭ್ರಷ್ಟರಾಗಿ ಅಲೆದಾಡದೆ ತಮ್ಮ ಪಿತೃಗಳಿಗೆ ಕೊಡಲ್ಪಟ್ಟ ದೇಶದಲ್ಲಿಯೇ ವಾಸವಾಗಿರುವಂತೆ ಮಾಡುವೆನು ಎಂದು ಹೇಳಿದ್ದನು.
8 ಯೆಹೋವ ದೇವರು, “ನಾನು ಅವರಿಗೆ ಆಜ್ಞಾಪಿಸಿದ ಎಲ್ಲದರ ಪ್ರಕಾರ ಮತ್ತು ನನ್ನ ಸೇವಕನಾದ ಮೋಶೆಯು ಅವರಿಗೆ ಆಜ್ಞಾಪಿಸಿದ ಸಮಸ್ತ ನಿಯಮದ ಪ್ರಕಾರ ಕೈಗೊಂಡು ನಡೆಯುವುದರಲ್ಲಿ ಅವರು ಜಾಗರೂಕರಾಗಿದ್ದರೆ, ನಾನು ಅವರ ಪಿತೃಗಳಿಗೆ ಕೊಟ್ಟ ದೇಶದಿಂದ ಪುನಃ ಇಸ್ರಾಯೇಲರು ಅಲೆದಾಡುವಂತೆ ಮಾಡುವುದಿಲ್ಲ,” ಎಂದು ಹೇಳಿದ್ದರು.
ನಾನು ನನ್ನ ಜನರಾದ ಇಸ್ರೇಲರಿಗೆ ಒಂದು ಸ್ಥಳವನ್ನು ಆರಿಸಿಕೊಂಡು ಅವರನ್ನು ನೆಲೆಗೊಳಿಸಿದ್ದೇನೆ. ವಾಸಿಸುವುದಕ್ಕಾಗಿ ಅವರ ಸ್ವಂತ ಸ್ಥಳವನ್ನು ಅವರಿಗೆ ಕೊಟ್ಟಿದ್ದೇನೆ. ಆದ್ದರಿಂದ ಈಗ ಅವರು ಅಲೆದಾಡುವ ಅಗತ್ಯವೇ ಇಲ್ಲ. ಮೊದಲು ನನ್ನ ಜನರಾದ ಇಸ್ರೇಲರನ್ನು ಮುನ್ನಡೆಸಲು ನ್ಯಾಯಾಧಿಪತಿಗಳನ್ನು ಕಳುಹಿಸಿದೆನು. ದುಷ್ಟಜನರು ಅವರಿಗೆ ತೊಂದರೆ ಕೊಟ್ಟರು. ಆದರೆ ಅದು ಈಗ ಸಂಭವಿಸುವುದಿಲ್ಲ. ನಿನಗೆ ಶತ್ರು ಭಯವಿಲ್ಲದಂತೆ ಮಾಡುತ್ತೇನೆ; ನಿನ್ನ ಕುಟುಂಬದಿಂದಲೇ ರಾಜರುಗಳನ್ನು ಬರಮಾಡುತ್ತೇನೆ.
ನಾನು ಅವರಿಗೆ, ‘ನನಗೆ ವಿಧೇಯರಾಗಿರಿ. ನಾನು ನಿಮಗೆ ದೇವರಾಗಿರುತ್ತೇನೆ, ನೀವು ನನ್ನ ಭಕ್ತರಾಗಿರುತ್ತೀರಿ. ನಾನು ಆಜ್ಞಾಪಿಸಿದ್ದನ್ನೆಲ್ಲವನ್ನು ಮಾಡಿರಿ, ಅದರಿಂದ ನಿಮಗೆ ಒಳ್ಳೆಯದಾಗುವುದು’ ಎಂದು ಮಾತ್ರ ಆಜ್ಞಾಪಿಸಿದ್ದೆ.
ನಾನು ಮೋಶೆಯ ಮೂಲಕ ಕೊಟ್ಟಿರುವ ನಿಯಮಗಳಿಗೆ ಮತ್ತು ಆಜ್ಞೆಗಳಿಗೆ ಇಸ್ರೇಲರು ವಿಧೇಯರಾಗಿರುವುದಾದರೆ, ಅವರ ಪೂರ್ವಿಕರಿಗೆ ಕೊಡಲು ನಾನು ಆರಿಸಿಕೊಂಡ ದೇಶದಿಂದ ಅವರನ್ನು ತೆಗೆದುಬಿಡುವುದೇ ಇಲ್ಲ” ಎಂದು ಹೇಳಿದನು.
ನಾನು ಈ ದೇಶವನ್ನು ನನ್ನ ಜನರಾದ ಇಸ್ರೇಲರಿಗೆ ಕೊಡುವೆನು; ಅವರು ಮರಗಳನ್ನು ನೆಟ್ಟು ಅದರ ನೆರಳಡಿಯಲ್ಲಿ ಸಮಾಧಾನದಿಂದ ವಾಸಿಸುವರು; ಅವರನ್ನು ಯಾರೂ ಬಾಧಿಸರು. ದುಷ್ಟರು ಮುಂಚಿನಂತೆ ಅವರಿಗೆ ಕೇಡುಮಾಡರು.