2 ಅರಸುಗಳು 22:13 - ಪರಿಶುದ್ದ ಬೈಬಲ್13 ರಾಜನಾದ ಯೋಷೀಯನು, “ಈಗ ನಾವು ಏನು ಮಾಡಬೇಕೆಂದು ಯೆಹೋವನನ್ನು ಕೇಳಿ. ನನಗಾಗಿ, ಜನರಿಗಾಗಿ ಮತ್ತು ಎಲ್ಲಾ ಯೆಹೂದಕ್ಕಾಗಿ ಯೆಹೋವನನ್ನು ಕೇಳಿ. ಈಗ ಸಿಕ್ಕಿರುವ ಈ ಗ್ರಂಥದ ವಾಕ್ಯಗಳನ್ನು ಕುರಿತಾಗಿಯೂ ಕೇಳಿ. ಯೆಹೋವನು ನಮ್ಮ ಮೇಲೆ ಕೋಪಗೊಂಡಿದ್ದಾನೆ. ಏಕೆಂದರೆ ನಮ್ಮ ಪೂರ್ವಿಕರು ಈ ಗ್ರಂಥದ ವಾಕ್ಯಗಳಿಗೆ ಕಿವಿಗೊಡಲಿಲ್ಲ; ಅವುಗಳನ್ನು ಕೈಕೊಂಡು ನಡೆಯಲಿಲ್ಲ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 “ನಮ್ಮ ಪೂರ್ವಿಕರು ನಮಗೆ ಸಿಕ್ಕಿರುವ ಈ ಗ್ರಂಥದಲ್ಲಿನ ಧರ್ಮೋಪದೇಶ ವಾಕ್ಯಗಳಿಗೆ ಕಿವಿಗೊಡದೆಯೂ, ಅವುಗಳನ್ನು ಕೈಕೊಳ್ಳದೆಯೂ ಹೋದುದರಿಂದ ನಾವು ಯೆಹೋವನ ಉಗ್ರಕೋಪಕ್ಕೆ ಪಾತ್ರರಾಗಿದ್ದೇವೆ. ಆದುದರಿಂದ ನೀವು ನನಗಾಗಿಯೂ, ಜನರಿಗಾಗಿಯೂ, ಮತ್ತು ಎಲ್ಲಾ ಯೆಹೂದ್ಯರಿಗಾಗಿಯೂ ಯೆಹೋವನ ಬಳಿಗೆ ಹೋಗಿ ಈ ಗ್ರಂಥದಲ್ಲಿನ ಧರ್ಮೋಪದೇಶ ವಾಕ್ಯಗಳ ಕುರಿತಾಗಿ ವಿಚಾರಿಸಿರಿ” ಎಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 “ನಮ್ಮ ಪೂರ್ವಜರು ನಮಗೆ ಸಿಕ್ಕಿರುವ ಈ ಗ್ರಂಥವಾಕ್ಯಗಳಿಗೆ ಕಿವಿಗೊಡದೆ ಹಾಗು ಅವುಗಳನ್ನು ಕೈಕೊಳ್ಳದೆಹೋದುದರಿಂದ ಸರ್ವೇಶ್ವರನ ಉಗ್ರಕೋಪಕ್ಕೆ ಪಾತ್ರರಾಗಿದ್ದೇವೆ. ಆದುದರಿಂದ ನೀವು ನನಗಾಗಿ ಜನರಿಗಾಗಿ ಹಾಗು ಎಲ್ಲಾ ಯೆಹೂದ್ಯರಿಗಾಗಿ ಸರ್ವೇಶ್ವರನ ಬಳಿಗೆ ಹೋಗಿ ಈ ಗ್ರಂಥವಾಕ್ಯಗಳ ವಿಷಯವಾಗಿ ವಿಚಾರಿಸಿರಿ,” ಎಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ನಮ್ಮ ಪೂರ್ವಿಕರು ನಮಗೆ ಸಿಕ್ಕಿರುವ ಈ ಗ್ರಂಥವಾಕ್ಯಗಳಿಗೆ ಕಿವಿಗೊಡದೆಯೂ ಅವುಗಳನ್ನು ಕೈಕೊಳ್ಳದೆಯೂ ಹೋದದರಿಂದ ನಾವು ಯೆಹೋವನ ಉಗ್ರಕೋಪಕ್ಕೆ ಪಾತ್ರರಾಗಿದ್ದೇವೆ. ಆದದರಿಂದ ನೀವು ನನಗೋಸ್ಕರವೂ ಜನರಿಗೋಸ್ಕರವೂ ಎಲ್ಲಾ ಯೆಹೂದ್ಯರಿಗೋಸ್ಕರವೂ ಯೆಹೋವನ ಬಳಿಗೆ ಹೋಗಿ ಈ ಗ್ರಂಥವಾಕ್ಯಗಳ ವಿಷಯವಾಗಿ ವಿಚಾರಿಸಿರಿ ಎಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 “ನೀವು ಹೋಗಿ ಸಿಕ್ಕಿದ ಈ ಗ್ರಂಥದ ವಾಕ್ಯಗಳ ಕುರಿತು ನನಗೋಸ್ಕರವೂ, ಜನರಿಗೋಸ್ಕರವೂ, ಸಮಸ್ತ ಯೆಹೂದ್ಯರಿಗೋಸ್ಕರವೂ ಯೆಹೋವ ದೇವರ ಬಳಿಯಲ್ಲಿ ವಿಚಾರಿಸಿರಿ. ಏಕೆಂದರೆ ನಮ್ಮನ್ನು ಕುರಿತು ಬರೆದಿರುವ ಎಲ್ಲವನ್ನೂ ಕೈಗೊಂಡು ನಡೆಯಲು ನಮ್ಮ ಪಿತೃಗಳು ಈ ಗ್ರಂಥದ ಮಾತುಗಳನ್ನು ಕೇಳದೆ ಹೋದುದರಿಂದ, ದೇವರ ಮಹಾಕೋಪಕ್ಕೆ ಪಾತ್ರರಾಗಿದ್ದೇವೆ,” ಎಂದನು. ಅಧ್ಯಾಯವನ್ನು ನೋಡಿ |
ನಾವು ಸ್ವರ್ಗದ ರಾಣಿಗೆ ನೈವೇದ್ಯವನ್ನು ಅರ್ಪಿಸುವದಾಗಿ ಹರಕೆ ಮಾಡಿದ್ದೇವೆ ಮತ್ತು ನಮ್ಮ ಹರಕೆಗಳನ್ನೆಲ್ಲ ಪೂರೈಸುತ್ತೇವೆ. ನಾವು ನೈವೇದ್ಯವನ್ನು ಕೊಡುತ್ತೇವೆ ಮತ್ತು ಅವಳ ಪೂಜೆಗಾಗಿ ಪಾನನೈವೇದ್ಯವನ್ನು ಅರ್ಪಿಸುತ್ತೇವೆ. ನಾವು ಮೊದಲು ಹಾಗೆಯೇ ಮಾಡಿದ್ದೇವೆ. ನಮ್ಮ ಪೂರ್ವಿಕರು, ನಮ್ಮ ರಾಜರು, ನಮ್ಮ ಅಧಿಕಾರಿಗಳು ಮೊದಲು ಮಾಡಿದಂತೆಯೇ ನಾವೆಲ್ಲರೂ ಜೆರುಸಲೇಮಿನ ಬೀದಿಗಳಲ್ಲಿ ಮತ್ತು ಯೆಹೂದದ ಪಟ್ಟಣಗಳಲ್ಲಿ ಮಾಡಿದ್ದೆವು. ನಾವು ಸ್ವರ್ಗದ ರಾಣಿಯನ್ನು ಪೂಜಿಸುವ ಕಾಲದಲ್ಲಿ ನಮ್ಮಲ್ಲಿ ಸಾಕಷ್ಟು ಆಹಾರವಿತ್ತು. ನಾವು ಜಯಶೀಲರಾಗಿದ್ದೆವು. ನಮಗೆ ಕೆಟ್ಟದ್ದೇನೂ ಆಗಿರಲಿಲ್ಲ.