Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 22:15 - ಪರಿಶುದ್ದ ಬೈಬಲ್‌

15 ಆಗ ಹುಲ್ದಳು ಅವರಿಗೆ, “ನಿಮ್ಮನ್ನು ನನ್ನ ಬಳಿಗೆ ಕಳುಹಿಸಿದವನ ಬಳಿಗೆ ಹೋಗಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಹುಲ್ದಳು ಅವರಿಗೆ, “ನಿಮ್ಮನ್ನು ಕಳುಹಿಸಿದವನಿಗೆ ಇಸ್ರಾಯೇಲರ ದೇವರಾದ ಯೆಹೋವನ ಮಾತನ್ನು ತಿಳಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಹುಲ್ದಳು ಅವರಿಗೆ, “ನಿಮ್ಮನ್ನು ಕಳುಹಿಸಿದವರಿಗೆ ಇಸ್ರಯೇಲ್ ದೇವರಾದ ಸರ್ವೇಶ್ವರನ ಮಾತುಗಳನ್ನು ತಿಳಿಸಿರಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಹುಲ್ದಳು ಅವರಿಗೆ - ನಿಮ್ಮನ್ನು ಕಳುಹಿಸಿದವನಿಗೆ ಇಸ್ರಾಯೇಲ್‍ದೇವರಾದ ಯೆಹೋವನ ಮಾತುಗಳನ್ನು ತಿಳಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಹುಲ್ದಳು ಅವರಿಗೆ, “ನಿಮ್ಮನ್ನು ನನ್ನ ಬಳಿಗೆ ಕಳುಹಿಸಿದವನಿಗೆ ನೀವು ಇಸ್ರಾಯೇಲ್ ದೇವರಾದ ಯೆಹೋವ ದೇವರ ಮಾತುಗಳನ್ನು ತಿಳಿಸಿರಿ:

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 22:15
6 ತಿಳಿವುಗಳ ಹೋಲಿಕೆ  

ಹೊಟ್ಟು, ಗೋಧಿಯ ಕಾಳಲ್ಲ. ಅದೇ ರೀತಿ, ಆ ಪ್ರವಾದಿಗಳ ಕನಸುಗಳು ನನ್ನ ಸಂದೇಶಗಳಲ್ಲ. ಒಬ್ಬ ವ್ಯಕ್ತಿಗೆ ತನ್ನ ಕನಸಿನ ಬಗ್ಗೆ ಹೇಳಬೇಕೆನಿಸಿದರೆ, ಅವನು ಹೇಳಲಿ. ಆದರೆ ನನ್ನ ಸಂದೇಶವನ್ನು ಕೇಳಿದ ಮನುಷ್ಯನು ಆ ಸಂದೇಶವನ್ನು ಯಥಾರ್ಥವಾಗಿ ಹೇಳಲಿ.


ಎಲೀಯನು ಅಹಜ್ಯನಿಗೆ, “ಇಸ್ರೇಲಿನಲ್ಲಿ ದೇವರಿದ್ದಾನೆ. ಹೀಗಿರುವಾಗ ನೀನು ಎಕ್ರೋನಿನ ದೇವರಾದ ಬಾಳ್ಜೆಬೂಬನನ್ನು ಪ್ರಶ್ನೆಗಳನ್ನು ಕೇಳಲು ಸಂದೇಶಕರನ್ನು ಏಕೆ ಕಳುಹಿಸಿದೆ? ನೀನು ಈ ಕಾರ್ಯವನ್ನು ಮಾಡಿದ್ದರಿಂದ ನಿನ್ನ ಹಾಸಿಗೆಯಿಂದ ನೀನು ಮೇಲಕ್ಕೇಳುವುದಿಲ್ಲ. ನೀನು ಅಲ್ಲೇ ಸಾಯುವೆ! ಎಂಬುದಾಗಿ ಯೆಹೋವನು ಅನ್ನುತ್ತಾನೆ.” ಎಂದು ಹೇಳಿದನು.


ಸಂದೇಶಕರು ಅಹಜ್ಯನಿಗೆ, “ಒಬ್ಬನು ನಮ್ಮನ್ನು ಭೇಟಿಯಾಗಿ ನಿಮ್ಮನ್ನು ಕಳುಹಿಸಿದ ರಾಜನ ಬಳಿಗೆ ಹಿಂದಿರುಗಿ ಹೋಗಿ ಯೆಹೋವನು ಹೇಳುವುದನ್ನು ಅವನಿಗೆ ತಿಳಿಸಿ. ಯೆಹೋವನು ಹೇಳುವುದೇನೆಂದರೆ: ‘ಇಸ್ರೇಲಿನಲ್ಲಿ ಒಬ್ಬ ದೇವರಿದ್ದಾನೆ! ಹೀಗಿರುವಾಗ ನೀನು ಎಕ್ರೋನಿನ ದೇವರಾದ ಬಾಳ್ಜೆಬೂಬನನ್ನು ವಿಚಾರಿಸುವುದಕ್ಕೆ ಸಂದೇಶಕರನ್ನು ಕಳುಹಿಸಿದುದೇಕೆ? ನೀನು ಈ ಕಾರ್ಯವನ್ನು ಮಾಡಿದ್ದರಿಂದ ನಿನ್ನ ಹಾಸಿಗೆಯಿಂದ ಮೇಲಕ್ಕೇಳುವುದಿಲ್ಲ. ನೀನು ಅಲ್ಲೇ ಸಾಯುವೆ!’” ಎಂಬುದಾಗಿ ಹೇಳಿದರು.


ಆದ್ದರಿಂದ ಯಾಜಕನಾದ ಹಿಲ್ಕೀಯ, ಅಹೀಕಾಮ್, ಅಕ್ಬೋರ್, ಶಾಫಾನ್ ಮತ್ತು ಅಸಾಯ ಎಂಬವರು ಪ್ರವಾದಿನಿಯಾದ ಹುಲ್ದಳ ಬಳಿಗೆ ಹೋದರು. ಹುಲ್ದಳು ಹರ್ಹಸನ ಮೊಮ್ಮಗನೂ ತಿಕ್ವನ ಮಗನೂ ಆದ ಶಲ್ಲೂಮನ ಹೆಂಡತಿ. ಅವನು ಯಾಜಕರ ವಸ್ತ್ರಗಳಿಗೆ ಮೇಲ್ವಿಚಾರಕನಾಗಿದ್ದನು. ಹುಲ್ದಳು ಜೆರುಸಲೇಮಿನ ಎರಡನೆಯ ಭಾಗದಲ್ಲಿ ವಾಸಿಸುತ್ತಿದ್ದಳು. ಅವರು ಹೋಗಿ ಹುಲ್ದಳ ಜೊತೆಯಲ್ಲಿ ಮಾತನಾಡಿದರು.


ಇಸ್ರೇಲಿನ ದೇವರಾದ ಯೆಹೋವನು ಹೀಗೆನ್ನುತ್ತಾನೆ: ‘ಈ ದೇಶದ ಮೇಲೆ ಮತ್ತು ಇಲ್ಲಿ ವಾಸಮಾಡುತ್ತಿರುವ ಜನರ ಮೇಲೆ ನಾನು ಕೇಡುಗಳನ್ನು ಬರಮಾಡುವೆನು. ಯೆಹೂದದ ರಾಜನು ಓದಿದ ಗ್ರಂಥದಲ್ಲಿ ಈ ಕೇಡುಗಳನ್ನು ತಿಳಿಸಲಾಗಿದೆ.


ಯೆರೆಮೀಯನು ಅವರಿಗೆ ಹೀಗೆ ಹೇಳಿದನು: “ಇಸ್ರೇಲರ ದೇವರಾದ ಯೆಹೋವನು ಹೀಗೆನ್ನುತ್ತಾನೆ. ನೀವು ನನ್ನನ್ನು ಆತನಲ್ಲಿಗೆ ಕಳುಹಿಸಿದಿರಿ. ನೀವು ಕೇಳೆಂದು ನನಗೆ ಹೇಳಿದ್ದನ್ನು ನಾನು ಯೆಹೋವನಿಗೆ ಕೇಳಿದೆ. ಯೆಹೋವನು ಹೀಗೆ ಹೇಳುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು