2 ಅರಸುಗಳು 22:16 - ಪರಿಶುದ್ದ ಬೈಬಲ್16 ಇಸ್ರೇಲಿನ ದೇವರಾದ ಯೆಹೋವನು ಹೀಗೆನ್ನುತ್ತಾನೆ: ‘ಈ ದೇಶದ ಮೇಲೆ ಮತ್ತು ಇಲ್ಲಿ ವಾಸಮಾಡುತ್ತಿರುವ ಜನರ ಮೇಲೆ ನಾನು ಕೇಡುಗಳನ್ನು ಬರಮಾಡುವೆನು. ಯೆಹೂದದ ರಾಜನು ಓದಿದ ಗ್ರಂಥದಲ್ಲಿ ಈ ಕೇಡುಗಳನ್ನು ತಿಳಿಸಲಾಗಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಯೆಹೋವನು, ‘ಈ ದೇಶದ ಮೇಲೆಯೂ ಮತ್ತು ಜನರ ಮೇಲೆಯೂ ಯೆಹೂದದ ಅರಸನು ಓದಿಸಿದ ಗ್ರಂಥದಲ್ಲಿ ಬರೆದಿರುವ ಎಲ್ಲಾ ಆಪತ್ತುಗಳನ್ನು ಬರಮಾಡುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ‘ಈ ನಾಡಿನ ಮೇಲೆ ಹಾಗು ಜನರ ಮೇಲೆ ಜುದೇಯದ ಅರಸನು ಓದಿಸಿದ ಗ್ರಂಥದಲ್ಲಿ ಬರೆದಿರುವ ಎಲ್ಲಾ ಶಿಕ್ಷೆಯನ್ನು ಬರಮಾಡುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಆತನು - ಈ ದೇಶದ ಮೇಲೆಯೂ ಜನರ ಮೇಲೆಯೂ ಯೆಹೂದದ ಅರಸನು ಓದಿಸಿದ ಗ್ರಂಥದಲ್ಲಿ ಬರೆದಿರುವ ಎಲ್ಲಾ ಶಿಕ್ಷೆಯನ್ನು ಬರಮಾಡುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ‘ನಾನು ಈ ಸ್ಥಳದ ಮೇಲೆಯೂ ಅದರ ನಿವಾಸಿಗಳ ಮೇಲೆಯೂ ಯೆಹೂದದ ಅರಸನು ಓದಿದ ಗ್ರಂಥದಲ್ಲಿ ಬರೆದಿರುವ ಪ್ರತಿಯೊಂದರಂತೆ ಕೇಡನ್ನು ಬರಮಾಡುವೆನು. ಅಧ್ಯಾಯವನ್ನು ನೋಡಿ |
ನಿಮ್ಮ ದೇವರಾದ ಯೆಹೋವನು ಶತ್ರುಗಳನ್ನು ಸೋಲಿಸಲು ನಿಮಗೆ ಸಹಾಯ ಮಾಡುವುದಿಲ್ಲ, ಅವರು ನಿಮಗೆ ಉರುಲಿನಂತಾಗುತ್ತಾರೆ. ಹೊಗೆ ಮತ್ತು ಧೂಳು ನಿಮ್ಮ ಕಣ್ಣಿಗೆ ನೋವನ್ನುಂಟು ಮಾಡುವಂತೆ ಅವರು ನಿಮಗೆ ನೋವನ್ನುಂಟು ಮಾಡುತ್ತಾರೆ; ಈ ಒಳ್ಳೆಯ ದೇಶದಿಂದ ನಿಮ್ಮನ್ನು ಬಲಾತ್ಕಾರದಿಂದ ಹೊರಗಟ್ಟಲಾಗುವುದು. ನಿಮ್ಮ ದೇವರಾದ ಯೆಹೋವನು ಈ ದೇಶವನ್ನು ನಿಮಗೆ ಕೊಟ್ಟಿದ್ದಾನೆ. ಆದರೆ ಯೆಹೋವನ ಆಜ್ಞೆಯನ್ನು ಪಾಲಿಸದಿದ್ದಲ್ಲಿ ನೀವು ಇದನ್ನು ಕಳೆದುಕೊಳ್ಳಬೇಕಾಗುತ್ತದೆ.