2 ಅರಸುಗಳು 22:17 - ಪರಿಶುದ್ದ ಬೈಬಲ್17 ಯೆಹೂದದ ರಾಜರು ನನ್ನನ್ನು ತ್ಯಜಿಸಿದರು ಮತ್ತು ಇತರ ದೇವರುಗಳಿಗೆ ಧೂಪವನ್ನು ಸುಟ್ಟರು. ಅವರು ನನ್ನಲ್ಲಿ ಹೆಚ್ಚು ಕೋಪವನ್ನು ಉಂಟುಮಾಡಿದರು. ಅವರು ಅನೇಕ ವಿಗ್ರಹಗಳನ್ನು ನಿರ್ಮಿಸಿದರು. ಆದಕಾರಣವೇ ನಾನು ನನ್ನ ಕೋಪವನ್ನು ಈ ಸ್ಥಳದ ವಿರುದ್ಧ ತೋರ್ಪಡಿಸುತ್ತೇನೆ. ನನ್ನ ಕೋಪವು ಆರಿಹೋಗದ ಬೆಂಕಿಯಂತಿರುತ್ತದೆ!’ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಅವರು ನನ್ನನ್ನು ಬಿಟ್ಟು ಅನ್ಯದೇವತೆಗಳಿಗೆ ಧೂಪಹಾಕಿ ತಮ್ಮ ದುಷ್ಕೃತ್ಯಗಳಿಂದ ನನ್ನನ್ನು ಕೋಪಗೊಳ್ಳುವಂತೆ ಮಾಡಿರುವುದರಿಂದ ನನ್ನ ಕೋಪಾಗ್ನಿಯು ಈ ದೇಶದ ಮೇಲೆ ಉರಿಯಹತ್ತಿದೆ, ಅದು ಆರಿಹೋಗುವುದೇ ಇಲ್ಲ’ ಎನ್ನುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಅವರು ನನ್ನನ್ನು ಬಿಟ್ಟು ಅನ್ಯದೇವತೆಗಳಿಗೆ ಧೂಪಾರತಿಯೆತ್ತಿ ತಮ್ಮ ದುಷ್ಕೃತ್ಯಗಳಿಂದ ನನ್ನನ್ನು ರೇಗಿಸಿದ್ದಾರೆ. ಆದ್ದರಿಂದ ನನ್ನ ಕೋಪಾಗ್ನಿ ಈ ನಾಡಿನ ಮೇಲೆ ಉರಿಯಹತ್ತಿ ಆರಿಹೋಗುವುದೇ ಇಲ್ಲ,’ ಎನ್ನುತ್ತಾರೆ ಸರ್ವೇಶ್ವರ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಅವರು ನನ್ನನ್ನು ಬಿಟ್ಟು ಅನ್ಯದೇವತೆಗಳಿಗೆ ಧೂಪಸುಟ್ಟು ತಮ್ಮ ದುಷ್ಕೃತ್ಯಗಳಿಂದ ನನ್ನನ್ನು ರೇಗಿಸಿದ್ದರಿಂದ ನನ್ನ ಕೋಪಾಗ್ನಿಯು ಈ ದೇಶದ ಮೇಲೆ ಉರಿಯಹತ್ತಿ ಆರಿ ಹೋಗುವದೇ ಇಲ್ಲ ಅನ್ನುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಏಕೆಂದರೆ ಅವರು ನನ್ನನ್ನು ಬಿಟ್ಟುಬಿಟ್ಟು, ತಮ್ಮ ಸಮಸ್ತ ಕ್ರಿಯೆಗಳಿಂದ ನನಗೆ ಕೋಪವನ್ನು ಎಬ್ಬಿಸುವಂತೆ ಇತರ ದೇವರುಗಳಿಗೆ ಧೂಪವನ್ನು ಸುಟ್ಟಿದ್ದಾರೆ. ಆದ್ದರಿಂದ ನನ್ನ ಕೋಪವು ಈ ಸ್ಥಳದ ಮೇಲೆ ಹೊತ್ತಿ ಉರಿಯುತ್ತಿದೆ, ಅದು ಆರಿಹೋಗುವುದಿಲ್ಲ.’ ಅಧ್ಯಾಯವನ್ನು ನೋಡಿ |
“‘ನೀವು ನನ್ನ ಮಾತನ್ನು ಕೇಳದಿದ್ದರೆ ಮತ್ತು ನನ್ನ ಆಜ್ಞೆಯನ್ನು ಪಾಲಿಸದಿದ್ದರೆ ಕೇಡಾಗುವುದು. ಸಬ್ಬತ್‌ದಿನದಲ್ಲಿ ಹೊರೆಗಳನ್ನು ಹೊತ್ತುಕೊಂಡು ಜೆರುಸಲೇಮಿಗೆ ಹೋದರೆ ನೀವು ಆ ದಿನವನ್ನು ಪವಿತ್ರದಿನವೆಂದು ಆಚರಿಸಿದಂತೆ ಆಗುವುದಿಲ್ಲ. ಆಗ ನಾನು ನಂದಿಸಲಾಗದ ಬೆಂಕಿಯನ್ನು ಹೊತ್ತಿಸುತ್ತೇನೆ. ಆ ಬೆಂಕಿಯು ಜೆರುಸಲೇಮಿನ ದ್ವಾರಗಳಲ್ಲಿ ಪ್ರಾರಂಭವಾಗಿ ಅರಮನೆಗಳನ್ನು ಸುಡುವವರೆಗೂ ಉರಿಯುತ್ತಿರುವುದು.’”