2 ಅರಸುಗಳು 22:18 - ಪರಿಶುದ್ದ ಬೈಬಲ್18-19 “ಯೆಹೂದದ ರಾಜನಾದ ಯೋಷೀಯನು ಯೆಹೋವನ ಸಲಹೆಯನ್ನು ಕೇಳಲು ನಿಮ್ಮನ್ನು ಕಳುಹಿಸಿದನು. ಯೋಷೀಯನಿಗೆ ಈ ಸಂಗತಿಗಳನ್ನು ಹೇಳಿ: ‘ನೀನು ಕೇಳುವ ಈ ಮಾತುಗಳನ್ನು ಇಸ್ರೇಲರ ದೇವರಾದ ಯೆಹೋವನು ಹೇಳಿದನು. ಈ ದೇಶವನ್ನು ಮತ್ತು ಇಲ್ಲಿ ವಾಸಿಸುವ ಜನರನ್ನು ಕುರಿತು ನಾನು ಹೇಳಿದ ಸಂಗತಿಗಳನ್ನು ನೀನು ಕೇಳಿರುವೆ. ನಿನ್ನ ಹೃದಯವು ಮೃದುವಾಗಿರುವುದರಿಂದ, ನೀನು ಅವುಗಳನ್ನು ಕೇಳಿದಾಗ ದೈನ್ಯತೆಯುಳ್ಳವನಾದೆ. ಈ ಸ್ಥಳಕ್ಕೆ (ಜೆರುಸಲೇಮಿಗೆ) ಆ ಭೀಕರ ಸಂಗತಿಗಳಾಗುತ್ತವೆಯೆಂದು ನಾನು ಹೇಳಿದೆ. ಆಗ ನೀನು ದುಃಖದಿಂದ ನಿನ್ನ ಬಟ್ಟೆಗಳನ್ನು ಹರಿದುಕೊಂಡು ಅಳಲಾರಂಭಿಸಿದೆ. ಆದಕಾರಣವೇ ನಾನು ನಿನಗೆ ಕಿವಿಗೊಟ್ಟೆನು.’ ಯೆಹೋವನು ಹೇಳುವುದೇನೆಂದರೆ: ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ತಾನು ಕೇಳಿದ ವಾಕ್ಯಗಳ ವಿಷಯವಾಗಿ ಯೆಹೋವನ ಬಳಿಯಲ್ಲಿ ವಿಚಾರಿಸುವುದಕ್ಕೆ ನಿಮ್ಮನ್ನು ಕಳುಹಿಸಿದ ಯೆಹೂದದ ಅರಸನಿಗೆ ನೀವು ತಿಳಿಸಬೇಕಾದ ಇಸ್ರಾಯೇಲರ ದೇವರಾದ ಯೆಹೋವನ ಮಾತೇನೆಂದರೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ತಾನು ಕೇಳಿದ ವಾಕ್ಯಗಳ ವಿಷಯವಾಗಿ ಸರ್ವೇಶ್ವರನ ಬಳಿಯಲ್ಲಿ ವಿಚಾರಿಸುವುದಕ್ಕೆ ನಿಮ್ಮನ್ನು ಕಳುಹಿಸಿದ ಜುದೇಯದ ಅರಸರಿಗೆ ನೀವು ತಿಳಿಸಬೇಕಾದ ಇಸ್ರಯೇಲ್ ದೇವರಾದ ಸರ್ವೇಶ್ವರನ ಮಾತು ಏನೆಂದರೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ತಾನು ಕೇಳಿದ ವಾಕ್ಯಗಳ ವಿಷಯವಾಗಿ ಯೆಹೋವನ ಬಳಿಯಲ್ಲಿ ವಿಚಾರಿಸುವದಕ್ಕೆ ನಿಮ್ಮನ್ನು ಕಳುಹಿಸಿದ ಯೆಹೂದದ ಅರಸನಿಗೆ ನೀವು ತಿಳಿಸಬೇಕಾದ ಇಸ್ರಾಯೇಲ್‍ದೇವರಾದ ಯೆಹೋವನ ಮಾತೇನಂದರೆ - ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಆದರೆ ಯೆಹೋವ ದೇವರನ್ನು ವಿಚಾರಿಸಲು ನಿಮ್ಮನ್ನು ಕಳುಹಿಸಿದ ಯೆಹೂದದ ಅರಸನಿಗೆ ನೀವು ಹೇಳಬೇಕಾದದ್ದು ಇದೇ, ‘ನೀವು ಕೇಳಿದ ಮಾತುಗಳನ್ನು ಕುರಿತು ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೇಳುವುದೇನೆಂದರೆ, ಅಧ್ಯಾಯವನ್ನು ನೋಡಿ |
“ಇಸ್ರೇಲಿನ ದೇವರಾದ ಯೆಹೋವನು ಹೀಗೆನ್ನುತ್ತಾನೆ: ‘ಯೆಹೂಕಲನೇ ಮತ್ತು ಚೆಫನ್ಯನೇ, ಯೆಹೂದದ ರಾಜನಾದ ಚಿದ್ಕೀಯನು ನನಗೆ ಪ್ರಶ್ನೆಗಳನ್ನು ಕೇಳುವದಕ್ಕಾಗಿ ನಿಮ್ಮನ್ನು ನನ್ನಲ್ಲಿಗೆ ಕಳಿಸಿದ್ದಾನೆಂಬುದು ನನಗೆ ಗೊತ್ತು. ರಾಜನಾದ ಚಿದ್ಕೀಯನಿಗೆ ಹೀಗೆ ಹೇಳಿರಿ. ಬಾಬಿಲೋನಿನ ಸೈನ್ಯದ ವಿರುದ್ಧ ನಿಮಗೆ ಸಹಾಯ ಮಾಡಲು ಇಲ್ಲಿಗೆ ಬರುವದಕ್ಕಾಗಿ ಫರೋಹನ ಸೈನ್ಯವು ಈಜಿಪ್ಟಿನಿಂದ ಹೊರಟಿತು. ಆದರೆ ಫರೋಹನ ಸೈನ್ಯವು ಈಜಿಪ್ಟಿಗೆ ಹಿಂದಿರುಗುವುದು.