Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 22:20 - ಪರಿಶುದ್ದ ಬೈಬಲ್‌

20 ‘ನೀನು ನಿನ್ನ ಪೂರ್ವಿಕರ ಜೊತೆ ಸೇರುವಂತೆ ನಾನು ಮಾಡುತ್ತೇನೆ. ನೀನು ಶಾಂತಿಯಿಂದ ಸತ್ತು ನಿನ್ನ ಸಮಾಧಿಯನ್ನು ಸೇರುವೆ. ಈ ದೇಶದ (ಜೆರುಸಲೇಮಿನ) ಮೇಲೆ ನಾನು ತರಲಿರುವ ಕೇಡುಗಳನ್ನು ನಿನ್ನ ಕಣ್ಣುಗಳು ನೋಡುವುದಿಲ್ಲ’ ಎಂಬುದೇ” ಎಂದು ಹೇಳಿದಳು. ನಂತರ ಯಾಜಕನಾದ ಹಿಲ್ಕೀಯ, ಅಹೀಕಾಮ್, ಅಕ್ಬೋರ್, ಶಾಫಾನ್ ಮತ್ತು ಅಸಾಯ ಹಿಂತಿರುಗಿ ಬಂದು ರಾಜನಿಗೆ ತಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಆದುದರಿಂದ, ‘ನಾನು ಈ ದೇಶಕ್ಕೆ ಬರಮಾಡುವ ಶಿಕ್ಷೆಗಳಲ್ಲಿ ನೀನು ಒಂದನ್ನೂ ನೋಡದೆ ಸಮಾಧಾನದಿಂದ ಮರಣಹೊಂದಿ ಸಮಾಧಿ ಸೇರುವಂತೆ ಆಶೀರ್ವದಿಸುವೆನು’ ಎಂದು ಹೇಳಿದ್ದನ್ನು ತಿಳಿಸಿರಿ” ಎಂದು ಹೇಳಿದಳು. ಅವರು ಹಿಂದಿರುಗಿ ಬಂದು ಅರಸನಿಗೆ ಆ ಮಾತುಗಳನ್ನು ತಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ನಾನು ಈ ನಾಡಿಗೆ ಬರಮಾಡುವ ಶಿಕ್ಷೆಗಳಲ್ಲಿ ನೀನು ಒಂದನ್ನೂ ನೋಡದೆ ಸಮಾಧಾನದಿಂದ ಮೃತಿಹೊಂದಿ ಸಮಾಧಿ ಸೇರುವಂತೆ ಅನುಗ್ರಹಿಸುವೆನು,’ ಎಂಬುದಾಗಿ ತಿಳಿಸಿರಿ,” ಎಂದು ಹೇಳಿದಳು. ಅವರು ಹಿಂದಿರುಗಿ ಬಂದು ಅರಸನಿಗೆ ಆ ಮಾತುಗಳನ್ನು ತಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ನಾನು ಈ ದೇಶಕ್ಕೆ ಬರಮಾಡುವ ಶಿಕ್ಷೆಗಳಲ್ಲಿ ನೀನು ಒಂದನ್ನೂ ನೋಡದೆ ಸಮಾಧಾನದಿಂದ ಮೃತಿಹೊಂದಿ ಸಮಾಧಿಸೇರುವಂತೆ ಅನುಗ್ರಹಿಸುವೆನು ಎಂಬದೇ ಎಂದು ಹೇಳಿದಳು. ಅವರು ಹಿಂದಿರುಗಿ ಬಂದು ಅರಸನಿಗೆ ಆ ಮಾತುಗಳನ್ನು ತಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಆದ್ದರಿಂದ ನಾನು ನಿನ್ನನ್ನು ನಿನ್ನ ಪಿತೃಗಳ ಬಳಿಯಲ್ಲಿ ಸೇರಿಸಿಕೊಳ್ಳುವೆನು; ನೀನು ಸಮಾಧಾನದಿಂದ ನಿನ್ನ ಸಮಾಧಿಗೆ ಸೇರುವೆ. ನಾನು ಈ ಸ್ಥಳದ ಮೇಲೆ ಬರಮಾಡುವ ಕೇಡನ್ನು ನಿನ್ನ ಕಣ್ಣುಗಳು ಕಾಣುವುದಿಲ್ಲ,’ ಎಂದು ಯೆಹೋವ ದೇವರು ಹೇಳುತ್ತಾರೆ,” ಎಂದಳು. ಅವರು ಹೋಗಿ ಈ ಉತ್ತರವನ್ನು ಅರಸನಿಗೆ ತಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 22:20
10 ತಿಳಿವುಗಳ ಹೋಲಿಕೆ  

ಪವಿತ್ರರನ್ನೂ ಯಥಾರ್ಥರನ್ನೂ ಗಮನಿಸು. ಶಾಂತಿಪ್ರಿಯರು ಅನೇಕ ಸಂತಾನಗಳನ್ನು ಹೊಂದಿಕೊಳ್ಳುವರು.


ನೀನು ಸತ್ತು ನಿನ್ನ ಪೂರ್ವಿಕರ ಬಳಿ ಸೇರಿದಾಗ ನಾನು ನಿನ್ನ ಮಕ್ಕಳಲ್ಲಿ ಒಬ್ಬನನ್ನು ಅರಸನನ್ನಾಗಿ ಮಾಡುವೆನು. ನಾನು ಅವನ ರಾಜ್ಯವನ್ನು ಸ್ಥಿರಪಡಿಸುವೆನು.


ಅವನು ಪೂರ್ಣಾಯುಷ್ಯದಿಂದ ದಿನತುಂಬಿದ ವೃದ್ಧನಾಗಿ ಪ್ರಾಣಬಿಟ್ಟು ತನ್ನ ಪಿತೃಗಳ ಬಳಿಗೆ ಸೇರಿದನು.


ಸತ್ತ ರಾಜನ ಬಗ್ಗೆ ಅಳಬೇಡಿ. ಅವನಿಗೋಸ್ಕರ ಅಳಬೇಡಿ. ಆದರೆ ಇಲ್ಲಿಂದ ಹೋಗುತ್ತಿರುವ ರಾಜನ ಬಗ್ಗೆ ಗಟ್ಟಿಯಾಗಿ ರೋಧಿಸಿರಿ. ಅವನು ಮತ್ತೆ ಇಲ್ಲಿಗೆ ಬರುವದಿಲ್ಲ. ಆದ್ದರಿಂದ ಅವನಿಗೋಸ್ಕರ ರೋಧಿಸಿರಿ. ಯೋಹಾಜನು ತನ್ನ ಜನ್ಮಭೂಮಿಯನ್ನು ಮತ್ತೆಂದಿಗೂ ನೋಡುವುದಿಲ್ಲ.


ನಿನ್ನನ್ನು ನಿನ್ನ ಪೂರ್ವಿಕರ ಬಳಿಗೆ ತೆಗೆದುಕೊಳ್ಳುತ್ತೇನೆ. ನಿನ್ನ ಪ್ರಾರ್ಥನೆಯನ್ನು ನಾನು ಕೇಳಿದೆ. ನೀನು ನಿನ್ನ ಸಮಾಧಿಗೆ ಸಮಾಧಾನದಿಂದ ಸೇರುವೆ. ನಾನು ಈ ಸ್ಥಳದ ಮೇಲೂ ಈ ಸ್ಥಳದಲ್ಲಿ ವಾಸಿಸುವವರ ಮೇಲೂ ತರುವ ಸಂಕಟಗಳಲ್ಲಿ ನೀನು ಒಂದಾನ್ನಾದರೂ ಅನುಭವಿಸುವದಿಲ್ಲ.’” ಹಿಲ್ಕೀಯನೂ ಅರಸನ ಸೇವಕರೂ ಈ ಸಂದೇಶವನ್ನು ಅರಸನಾದ ಯೋಷೀಯನಿಗೆ ತಂದರು.


ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ: “ನೀನು ಬೇಗನೇ ಸಾಯುವೆ. ನಿನ್ನ ಪೂರ್ವಿಕರ ಬಳಿಗೆ ನೀನು ಸೇರಿದಾಗ ಈ ಜನರು ನನಗೆ ನಂಬಿಗಸ್ತರಾಗಿರುವುದಿಲ್ಲ. ನಾನು ಅವರೊಡನೆ ಮಾಡಿರುವ ಒಡಂಬಡಿಕೆಯನ್ನು ಅವರು ಮುರಿಯುವರು. ಅವರು ನನ್ನನ್ನು ತೊರೆದು ತಾವು ಸ್ವಾಧೀನಮಾಡಿಕೊಳ್ಳುವ ದೇಶದ ಅನ್ಯದೇವತೆಗಳನ್ನು ಪೂಜಿಸುವರು.


ಹಿಜ್ಕೀಯನು ತನ್ನ ಜೀವಮಾನದಲ್ಲಿ ಹೇಗೂ ಶಾಂತಿಯಿರುವುದೆಂದು ತಿಳಿದುಕೊಂಡು ಯೆಶಾಯನಿಗೆ, “ಯೆಹೋವನ ಈ ಸಂದೇಶವು ಒಳ್ಳೆಯದಾಗಿದೆ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು