2 ಅರಸುಗಳು 22:7 - ಪರಿಶುದ್ದ ಬೈಬಲ್7 ನೀವು ಕೆಲಸಗಾರರಿಗೆ ಕೊಡುವ ಹಣವನ್ನು ಲೆಕ್ಕಹಾಕಬೇಡಿ. ಯಾಕೆಂದರೆ ಆ ಕೆಲಸಗಾರರು ನಂಬಿಗಸ್ತರಾಗಿದ್ದಾರೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಅವರು ನಂಬಿಗಸ್ತರಾಗಿರುವುದರಿಂದ ಅವರ ವಶಕ್ಕೆ ಕೊಡಲ್ಪಡುವ ಹಣದ ಲೆಕ್ಕವನ್ನು ಕೇಳಬಾರದು” ಎಂದು ಆಜ್ಞಾಪಿಸಿ ಅವನನ್ನು ಯೆಹೋವನ ಆಲಯಕ್ಕೆ ಕಳುಹಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಅವರು ನಂಬಿಗಸ್ತರಾಗಿರುವುದರಿಂದ ಅವರ ವಶಕ್ಕೆ ಕೊಡಲಾಗುವ ಹಣದ ಲೆಕ್ಕವನ್ನು ಕೇಳಬಾರದು,” ಎಂದು ಆಜ್ಞಾಪಿಸಿ ಅವನನ್ನು ಸರ್ವೇಶ್ವರನ ಆಲಯಕ್ಕೆ ಕಳುಹಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಅವರು ನಂಬಿಗಸ್ತರಾಗಿರುವದರಿಂದ ಅವರ ವಶಕ್ಕೆ ಕೊಡಲ್ಪಡುವ ಹಣದ ಲೆಕ್ಕವನ್ನು ಕೇಳಬಾರದು ಎಂದು ಆಜ್ಞಾಪಿಸಿ ಅವನನ್ನು ಯೆಹೋವನ ಆಲಯಕ್ಕೆ ಕಳುಹಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಆದರೆ ಅವರು ನಂಬಿಗಸ್ತರಾಗಿ ಕೆಲಸ ಮಾಡಿದ್ದರಿಂದ, ಅವರ ಕೈಗೆ ಒಪ್ಪಿಸಿದ ಹಣವನ್ನು ಕುರಿತು ಅವರಿಂದ ಲೆಕ್ಕ ಕೇಳುವ ಅವಶ್ಯಕತೆ ಇಲ್ಲ, ಎಂದು ಹೇಳು,” ಎಂದನು. ಅಧ್ಯಾಯವನ್ನು ನೋಡಿ |
ಕೆಲಸಗಾರರು ತಮ್ಮ ಕೆಲಸವು ಮುಗಿದ ಬಳಿಕ ಉಳಿದ ಹಣವನ್ನು ಅರಸನಾದ ಯೆಹೋವಾಷನಿಗೆ ಮತ್ತು ಯೆಹೋಯಾದನಿಗೆ ತಂದುಕೊಟ್ಟರು. ಆ ಹಣವನ್ನು ದೇವಾಲಯದ ಉಪಕರಣಗಳನ್ನು ಮಾಡಿಸಲು ಉಪಯೋಗಿಸಿದರು. ಅವು ದೇವಾಲಯದೊಳಗಿನ ಸೇವೆಗೂ ಸರ್ವಾಂಗಹೋಮಕ್ಕೂ ಉಪಯುಕ್ತವಾಗಿದ್ದವು. ಮಾತ್ರವಲ್ಲದೆ ಬೆಳ್ಳಿಬಂಗಾರಗಳಿಂದ ಬೋಗುಣಿ ಮತ್ತು ಇತರ ವಸ್ತುಗಳನ್ನು ಮಾಡಿದರು. ಯೆಹೋಯಾದನು ಜೀವದಿಂದಿರುವ ತನಕ ಪ್ರತೀ ದಿವಸ ಸರ್ವಾಂಗಹೋಮವನ್ನರ್ಪಿಸುತ್ತಿದ್ದನು.