Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 22:8 - ಪರಿಶುದ್ದ ಬೈಬಲ್‌

8 ಪ್ರಧಾನಯಾಜಕನಾದ ಹಿಲ್ಕೀಯನು ಕಾರ್ಯದರ್ಶಿಯಾದ ಶಾಫಾನನಿಗೆ, “ದೇವಾಲಯದಲ್ಲಿ ನನಗೆ ಧರ್ಮಶಾಸ್ತ್ರವು ಸಿಕ್ಕಿತು” ಎಂದು ಹೇಳಿದನು. ಹಿಲ್ಕೀಯನು ಅದನ್ನು ಶಾಫಾನನಿಗೆ ನೀಡಿದನು. ಶಾಫಾನನು ಅದನ್ನು ಓದಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಪ್ರಧಾನ ಯಾಜಕನಾದ ಹಿಲ್ಕೀಯನು ಲೇಖಕನಾದ ಶಾಫಾನನಿಗೆ, “ಯೆಹೋವನ ಆಲಯದಲ್ಲಿ ನನಗೆ ಧರ್ಮೋಪದೇಶಗ್ರಂಥವು ಸಿಕ್ಕಿರುತ್ತದೆ” ಎಂದು ಹೇಳಿ, ಅದನ್ನು ಅವನ ಕೈಯಲ್ಲಿ ಕೊಟ್ಟನು. ಶಾಫಾನನು ಅದನ್ನು ಓದಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಪ್ರಧಾನ ಯಾಜಕ ಹಿಲ್ಕೀಯನು ಲೇಖಕ ಶಾಫಾನನಿಗೆ, “ಸರ್ವೇಶ್ವರನ ಆಲಯದಲ್ಲಿ ನನಗೆ ಧರ್ಮೋಪದೇಶ ಗ್ರಂಥವು ಸಿಕ್ಕಿರುತ್ತದೆ,” ಎಂದು ಹೇಳಿ ಅದನ್ನು ಅವನ ಕೈಯಲ್ಲಿ ಕೊಟ್ಟನು; ಶಾಫಾನನು ಓದಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಮಹಾಯಾಜಕನಾದ ಹಿಲ್ಕೀಯನು ಲೇಖಕನಾದ ಶಾಫಾನನಿಗೆ - ಯೆಹೋವನ ಆಲಯದಲ್ಲಿ ನನಗೆ ಧರ್ಮೋಪದೇಶ ಗ್ರಂಥವು ಸಿಕ್ಕಿರುತ್ತದೆ ಎಂದು ಹೇಳಿ ಅದನ್ನು ಅವನ ಕೈಯಲ್ಲಿ ಕೊಟ್ಟನು; ಶಾಫಾನನು ಓದಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಆಗ ಮಹಾಯಾಜಕನಾದ ಹಿಲ್ಕೀಯನು ಕಾರ್ಯದರ್ಶಿಯಾದ ಶಾಫಾನನಿಗೆ, “ನನಗೆ ಯೆಹೋವ ದೇವರ ಆಲಯದಲ್ಲಿ ಮೋಶೆಯ ನಿಯಮದ ಗ್ರಂಥವು ಸಿಕ್ಕಿರುತ್ತದೆ,” ಎಂದನು. ಹಿಲ್ಕೀಯನು ಆ ಗ್ರಂಥವನ್ನು ಶಾಫಾನನಿಗೆ ಒಪ್ಪಿಸಿದನು. ಅವನು ಅದನ್ನು ಓದಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 22:8
5 ತಿಳಿವುಗಳ ಹೋಲಿಕೆ  

ಕಾರ್ಯದರ್ಶಿಯಾದ ಶಾಫಾನನು ರಾಜನಾದ ಯೋಷಿಯನ ಬಳಿಗೆ ಬಂದು ಅವನಿಗೆ, “ನಿನ್ನ ಸೇವಕರು ದೇವಾಲಯದಲ್ಲಿದ್ದ ಹಣವನ್ನು ವ್ಯಯಮಾಡಿದರು. ಅವರು ಆ ಹಣವನ್ನು ದೇವಾಲಯದಲ್ಲಿ ಕೆಲಸ ಮಾಡಿಸುವ ಮೇಲ್ವಿಚಾರಕರಿಗೆ ಒಪ್ಪಿಸಿದರು” ಎಂದು ಹೇಳಿದನು.


ನಂತರ ರಾಜನು ದೇವಾಲಯಕ್ಕೆ ಹೋದನು. ಯೆಹೂದದ ಜನರೆಲ್ಲರು ಮತ್ತು ಜೆರುಸಲೇಮಿನಲ್ಲಿ ವಾಸಿಸುತ್ತಿದ್ದ ಜನರೆಲ್ಲರು ಅವನ ಜೊತೆಯಲ್ಲಿ ಹೋದರು. ಯಾಜಕರು, ಪ್ರವಾದಿಗಳು, ಚಿಕ್ಕವರು ಮತ್ತು ದೊಡ್ಡವರು ಅವನೊಡನೆ ಹೋದರು. ಆಗ ಅವನು ನಿಬಂಧನ ಗ್ರಂಥವನ್ನು ಓದಿದನು. ಇದು ದೇವಾಲಯದಲ್ಲಿ ಸಿಕ್ಕಿದ ಗ್ರಂಥವಾಗಿತ್ತು. ಜನರೆಲ್ಲರಿಗೂ ಕೇಳಿಸುವಂತೆ ಯೋಷೀಯನು ಗ್ರಂಥವನ್ನು ಓದಿದನು.


ಯೋಷೀಯನು ಮಾಂತ್ರಿಕರನ್ನು, ತಾಂತ್ರಿಕರನ್ನು, ಮನೆಯ ದೇವರುಗಳನ್ನು, ವಿಗ್ರಹಗಳನ್ನು, ಯೆಹೂದದಲ್ಲಿ ಮತ್ತು ಜೆರುಸಲೇಮಿನಲ್ಲಿ ಜನರು ಪೂಜಿಸುತ್ತಿದ್ದ ತೆರಾಫೀಮ್ ಎಂಬ ಗೊಂಬೆಗಳನ್ನು ನಾಶಪಡಿಸಿದನು. ಯಾಜಕನಾದ ಹಿಲ್ಕೀಯನಿಗೆ ದೇವಾಲಯದಲ್ಲಿ ಸಿಕ್ಕಿದ ಧರ್ಮಶಾಸ್ತ್ರದಲ್ಲಿ ಬರೆದಿರುವ ನಿಯಮಗಳಿಗೆ ವಿಧೇಯನಾಗಿರಲು ಯೋಷೀಯನು ಹೀಗೆ ಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು