2 ಅರಸುಗಳು 22:9 - ಪರಿಶುದ್ದ ಬೈಬಲ್9 ಕಾರ್ಯದರ್ಶಿಯಾದ ಶಾಫಾನನು ರಾಜನಾದ ಯೋಷಿಯನ ಬಳಿಗೆ ಬಂದು ಅವನಿಗೆ, “ನಿನ್ನ ಸೇವಕರು ದೇವಾಲಯದಲ್ಲಿದ್ದ ಹಣವನ್ನು ವ್ಯಯಮಾಡಿದರು. ಅವರು ಆ ಹಣವನ್ನು ದೇವಾಲಯದಲ್ಲಿ ಕೆಲಸ ಮಾಡಿಸುವ ಮೇಲ್ವಿಚಾರಕರಿಗೆ ಒಪ್ಪಿಸಿದರು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಅನಂತರ ಲೇಖಕನಾದ ಶಾಫಾನನು ಹಿಂತಿರುಗಿ ಅರಸನ ಬಳಿಗೆ ಹೋಗಿ, “ನಿನ್ನ ಸೇವಕರು ಯೆಹೋವನ ದೇವಾಲಯದಲ್ಲಿ ಸಂಗ್ರಹವಾದ ಹಣವನ್ನು ತೆಗೆದು ದೇವಾಲಯದ ಕೆಲಸವನ್ನು ಮಾಡಿಸುವ ಮುಖ್ಯಸ್ಥರಿಗೆ ಒಪ್ಪಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಅನಂತರ ಅವನು ಹಿಂದಿರುಗಿ ಅರಸನ ಬಳಿಗೆ ಹೋಗಿ, “ನಿಮ್ಮ ಸೇವಕರು ದೇವಾಲಯಲ್ಲಿ ಸಂಗ್ರಹವಾದ ಹಣವನ್ನು ತೆಗೆದು ದೇವಾಲಯದ ಕೆಲಸವನ್ನು ಮಾಡಿಸುವ ಮೇಸ್ತ್ರಿಗಳಿಗೆ ಒಪ್ಪಿಸಿದರು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಅನಂತರ ಅವನು ಹಿಂದಿರುಗಿ ಅರಸನ ಬಳಿಗೆ ಹೋಗಿ - ನಿನ್ನ ಸೇವಕರು ದೇವಾಲಯದಲ್ಲಿ ಸಂಗ್ರಹವಾದ ಹಣವನ್ನು ತೆಗೆದು ದೇವಾಲಯದ ಕೆಲಸವನ್ನು ಮಾಡಿಸುವ ಮೊಕ್ತೇಸರರಿಗೆ ಒಪ್ಪಿಸಿದರು; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಕಾರ್ಯದರ್ಶಿಯಾದ ಶಾಫಾನನು ಅರಸನ ಬಳಿಗೆ ಬಂದು ಅರಸನಿಗೆ, “ಯೆಹೋವ ದೇವರ ಆಲಯದಲ್ಲಿ ದೊರಕಿದ ಹಣವನ್ನು ನಿನ್ನ ಸೇವಕರು ಕೂಡಿಸಿ, ಯೆಹೋವ ದೇವರ ಆಲಯದ ಕೆಲಸಕ್ಕೆ ನೇಮಕಗೊಂಡ ಮೇಲ್ವಿಚಾರಕರ ಕೈಯಲ್ಲಿ ಒಪ್ಪಿಸಿದ್ದಾರೆ,” ಎಂದನು. ಅಧ್ಯಾಯವನ್ನು ನೋಡಿ |
ಅವರು ಯೆರೆಮೀಯನನ್ನು ಕಾರಾಗೃಹದ ಅಂಗಳದಿಂದ ಹೊರಗೆ ಕರೆದು ತಂದರು. ಬಾಬಿಲೋನಿನ ಆ ಸೈನ್ಯಾಧಿಕಾರಿಗಳು ಯೆರೆಮೀಯನನ್ನು ಗೆದಲ್ಯನ ವಶಕ್ಕೆ ಕೊಟ್ಟರು. ಗೆದಲ್ಯನು ಅಹೀಕಾಮನ ಮಗ ಮತ್ತು ಅಹೀಕಾಮನು ಶಾಫಾನನ ಮಗನಾಗಿದ್ದನು. ಯೆರೆಮೀಯನನ್ನು ಮನೆಗೆ ಕರೆದುಕೊಂಡು ಹೋಗಬೇಕೆಂದು ಗೆದಲ್ಯನಿಗೆ ಆಜ್ಞಾಪಿಸಲಾಯಿತು. ಅದರಂತೆ ಯೆರೆಮೀಯನನ್ನು ಮನೆಗೆ ಕರೆದುಕೊಂಡು ಹೋಗಲಾಯಿತು; ಅವನು ತನ್ನ ಜನರೊಂದಿಗೆ ವಾಸಿಸತೊಡಗಿದನು.