Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 23:1 - ಪರಿಶುದ್ದ ಬೈಬಲ್‌

1 ಯೆಹೂದದ ಮತ್ತು ಜೆರುಸಲೇಮಿನ ನಾಯಕರೆಲ್ಲರೂ ಬಂದು ತನ್ನನ್ನು ಭೇಟಿಯಾಗಬೇಕೆಂದು ರಾಜನಾದ ಯೋಷೀಯನು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಅನಂತರ ಅರಸನು ದೂತರ ಮುಖಾಂತರವಾಗಿ ಯೆರೂಸಲೇಮಿನ ಮತ್ತು ಯೆಹೂದ ಪ್ರಾಂತ್ಯಗಳಲ್ಲಿರುವ ಎಲ್ಲಾ ಊರುಗಳ ಹಿರಿಯರನ್ನು ತನ್ನ ಬಳಿಗೆ ಕರೆಯಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಅನಂತರ ಅರಸನು ದೂತರ ಮುಖಾಂತರ ಜೆರುಸಲೇಮಿನ ಮತ್ತು ಜುದೇಯ ಪ್ರಾಂತ್ಯದ ಬೇರೆ ಎಲ್ಲಾ ಊರುಗಳ ಹಿರಿಯರನ್ನು ತನ್ನ ಬಳಿಗೆ ಕರೆಯಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಅನಂತರ ಅರಸನು ದೂತರ ಮುಖಾಂತರವಾಗಿ ಯೆರೂಸಲೇವಿುನ ಮತ್ತು ಯೆಹೂದ ಪ್ರಾಂತದ ಬೇರೆ ಎಲ್ಲಾ ಊರುಗಳ ಹಿರಿಯರನ್ನು ತನ್ನ ಬಳಿಗೆ ಕರಿಸಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಅನಂತರ ಅರಸನಾದ ಯೋಷೀಯನು ಯೆಹೂದದ, ಯೆರೂಸಲೇಮಿನ ಹಿರಿಯರೆಲ್ಲರನ್ನು ಕರೆಕಳುಹಿಸಿ ತನ್ನ ಬಳಿಯಲ್ಲಿ ಒಟ್ಟಾಗಿ ಕೂಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 23:1
8 ತಿಳಿವುಗಳ ಹೋಲಿಕೆ  

ಹಿಜ್ಕೀಯ ಅರಸನೂ ಅಧಿಕಾರಿಗಳೂ ಜೆರುಸಲೇಮಿನ ಸಭೆಯವರೆಲ್ಲರೂ ಎರಡನೆಯ ತಿಂಗಳಲ್ಲಿ ಹಬ್ಬವನ್ನು ಆಚರಿಸಲು ನಿರ್ಧರಿಸಿದರು.


ಹಿಜ್ಕೀಯ ಅರಸನು ಪಟ್ಟಣದ ಅಧಿಕಾರಿಗಳನ್ನು ಮುಂಜಾನೆ ಕರೆಯಿಸಿ ಅವರೊಡನೆ ಯೆಹೋವನ ಆಲಯಕ್ಕೆ ಹೋದನು.


ಎಲ್ಲಾ ಕುಲಾಧಿಪತಿಗಳವರನ್ನು ಮತ್ತು ಗೋತ್ರಪ್ರಧಾನರನ್ನು ನನ್ನ ಬಳಿಗೆ ಕರೆದುತನ್ನಿರಿ; ಅವರಿಗೆ ನಾನಿದನ್ನು ತಿಳಿಸುವೆನು. ನಾನು ಆಕಾಶವನ್ನೂ ಭೂಮಿಯನ್ನೂ ಅದಕ್ಕೆ ಸಾಕ್ಷಿಯಾಗಿ ಮಾಡುವೆನು.


ಇಸ್ರೇಲಿನಲ್ಲಿ ಆರಿಸಲ್ಪಟ್ಟ ಮೂವತ್ತು ಸಾವಿರ ಮಂದಿಯನ್ನು ದಾವೀದನು ಮತ್ತೆ ಒಟ್ಟುಗೂಡಿಸಿದನು.


ನಂತರ ರಾಜನು ದೇವಾಲಯಕ್ಕೆ ಹೋದನು. ಯೆಹೂದದ ಜನರೆಲ್ಲರು ಮತ್ತು ಜೆರುಸಲೇಮಿನಲ್ಲಿ ವಾಸಿಸುತ್ತಿದ್ದ ಜನರೆಲ್ಲರು ಅವನ ಜೊತೆಯಲ್ಲಿ ಹೋದರು. ಯಾಜಕರು, ಪ್ರವಾದಿಗಳು, ಚಿಕ್ಕವರು ಮತ್ತು ದೊಡ್ಡವರು ಅವನೊಡನೆ ಹೋದರು. ಆಗ ಅವನು ನಿಬಂಧನ ಗ್ರಂಥವನ್ನು ಓದಿದನು. ಇದು ದೇವಾಲಯದಲ್ಲಿ ಸಿಕ್ಕಿದ ಗ್ರಂಥವಾಗಿತ್ತು. ಜನರೆಲ್ಲರಿಗೂ ಕೇಳಿಸುವಂತೆ ಯೋಷೀಯನು ಗ್ರಂಥವನ್ನು ಓದಿದನು.


ಯೆಹೋಶುವನು ಶೆಕೆಮಿನಲ್ಲಿ ಇಸ್ರೇಲಿನ ಎಲ್ಲ ಕುಲದವರನ್ನು, ಹಿರಿಯ ನಾಯಕರನ್ನು, ಕುಲದ ಪ್ರಧಾನರನ್ನು, ನ್ಯಾಯಾಧೀಶರನ್ನು, ಮುಖಂಡರನ್ನು ಮತ್ತು ಇಸ್ರೇಲಿನ ಅಧಿಕಾರಿಗಳನ್ನು ಒಟ್ಟಾಗಿ ಸೇರಿಸಿದನು. ಈ ಜನರು ದೇವರ ಸನ್ನಿಧಿಯಲ್ಲಿ ನಿಂತರು.


ಯೋಷೀಯನು ಅರಸನಾದಾಗ ಎಂಟು ವರ್ಷ ಪ್ರಾಯದವನಾಗಿದ್ದನು. ಅವನು ಮೂವತ್ತೊಂದು ವರ್ಷದ ತನಕ ಜೆರುಸಲೇಮಿನಲ್ಲಿ ರಾಜ್ಯಭಾರವನ್ನು ಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು