Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 23:10 - ಪರಿಶುದ್ದ ಬೈಬಲ್‌

10 ತೋಫೆತ್ ಎನ್ನುವುದು ಬೆನ್‌ಹಿನ್ನೋಮ್‌ನ ಮಗನಿಗೆ ಸೇರಿದ ಒಂದು ಕಣಿವೆ. ಅಲ್ಲಿ ಸುಳ್ಳುದೇವರಾದ ಮೋಲೆಕನ ಗೌರವಾರ್ಥವಾಗಿ ಜನರು ತಮ್ಮ ಮಕ್ಕಳನ್ನು ಆಹುತಿ ಕೊಡುತ್ತಿದ್ದರು ಮತ್ತು ಯಜ್ಞವೇದಿಕೆಯ ಮೇಲೆ ಸುಡುತ್ತಿದ್ದರು. ಯೋಷೀಯನು, ಜನರು ಮತ್ತೆ ಆ ಸ್ಥಳವನ್ನು ಉಪಯೋಗಿಸದಂತೆ ನಾಶಗೊಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ತಮ್ಮ ಗಂಡುಹೆಣ್ಣು ಮಕ್ಕಳನ್ನು ಮೋಲೆಕನಿಗೋಸ್ಕರ ಆಹುತಿ ಕೊಡದಂತೆ ಬೆನ್ ಹಿನ್ನೋಮ್ ತಗ್ಗಿನಲ್ಲಿದ್ದ “ತೋಫೆತ್” ಎಂಬ ಯಜ್ಞವೇದಿಯ ಸ್ಥಳವನ್ನು ಹೊಲೆಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ತಮ್ಮ ಗಂಡುಹೆಣ್ಣುಮಕ್ಕಳನ್ನು ಯಾರೂ ಮೋಲೆಕನಿಗಾಗಿ ಬಲಿಯಗ್ನಿಪರೀಕ್ಷೆಗೆ ಈಡುಮಾಡದಂತೆ ಬೆನ್ಹಿನ್ನೋಮ್ ಕಣಿವೆಯಲ್ಲಿದ್ದ ತೋಫೆತ್ ಎಂಬ ಸ್ಥಳವನ್ನು ಹೊಲೆಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ತಮ್ಮ ಗಂಡುಹೆಣ್ಣು ಮಕ್ಕಳನ್ನು ಯಾರೂ ಮೋಲೆಕನಿಗೋಸ್ಕರ ಆಹುತಿ ಕೊಡದಂತೆ ಬೇನ್‍ಹಿನ್ನೋಮ್ ತಗ್ಗಿನಲ್ಲಿದ್ದ ತೋಫೆತ್ ಎಂಬ ಸ್ಥಳವನ್ನು ಹೊಲೆಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಯಾವನೂ ತನ್ನ ಮಗನನ್ನಾದರೂ, ಮಗಳನ್ನಾದರೂ ಮೋಲೆಕನಿಗೋಸ್ಕರ ಬೆಂಕಿಯಲ್ಲಿ ಬಲಿ ಅರ್ಪಿಸದಂತೆ ಹಿನ್ನೋಮ್ ತಗ್ಗಿನಲ್ಲಿದ್ದ ತೋಫೆತನ್ನು ಅಶುದ್ಧ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 23:10
24 ತಿಳಿವುಗಳ ಹೋಲಿಕೆ  

ಬಹುಕಾಲದವರೆಗೆ ಅಗ್ನಿಕುಂಡ ಸಿದ್ಧವಾಗಿತ್ತು. ಅದು ರಾಜನಿಗಾಗಿ ಸಿದ್ಧವಾಗಿದೆ. ಅದು ಆಳವಾಗಿಯೂ ಅಗಲವಾಗಿಯೂ ಮಾಡಲ್ಪಟ್ಟಿದೆ. ಅಲ್ಲಿ ಒಂದು ದೊಡ್ಡ ಕಟ್ಟಿಗೆಯ ರಾಶಿಯೂ ಬೆಂಕಿಯೂ ಇದೆ ಮತ್ತು ಯೆಹೋವನ ಬಾಯುಸಿರು ಗಂಧಕದ ಪ್ರವಾಹದಂತೆ ಬಂದು ಎಲ್ಲವನ್ನು ನಾಶಮಾಡುವದು.


ಈಗ, ಬೆನ್‌ಹಿನ್ನೊಮೀನ ಕಣಿವೆಯಲ್ಲಿದ್ದ ಈ ಸ್ಥಳವನ್ನು ಜನರು “ತೋಫೆತ್” ಎಂದು ಕರೆಯುತ್ತಾರೆ. ಆದರೆ ಜನರು ಇದನ್ನು “ಕೊಲೆಯ ಕಣಿವೆ” ಎಂದು ಕರೆಯುವ ದಿನಗಳು ಬರುತ್ತಿವೆ ಎಂದು ನಾನು ನಿಮಗೆ ಮುನ್ನೆಚ್ಚರಿಕೆಯನ್ನು ಕೊಡುತ್ತೇನೆ. ಇದು ಯೆಹೋವನ ನುಡಿ.


“ನೀವು ನಿಮ್ಮ ಯಾವ ಮಕ್ಕಳನ್ನೂ ಅಗ್ನಿಯ ಮೂಲಕ ಮೊಲೆಕನಿಗೆ ಕೊಡಬಾರದು. ಇಲ್ಲವಾದರೆ ನೀವು ನಿಮ್ಮ ದೇವರ ಹೆಸರನ್ನು ಅಪಕೀರ್ತಿಗೆ ಗುರಿಮಾಡುವಿರಿ. ನಾನೇ ಯೆಹೋವನು!


“ಬೆನ್‌ಹಿನ್ನೊಮ್ ಕಣಿವೆಯಲ್ಲಿ ಅವರು ಸುಳ್ಳುದೇವರಾದ ಬಾಳನಿಗಾಗಿ ಎತ್ತರವಾದ ಸ್ಥಳಗಳನ್ನು ಕಟ್ಟಿದ್ದಾರೆ. ತಮ್ಮ ಮಕ್ಕಳನ್ನು ಆಹುತಿಕೊಡುವದಕ್ಕಾಗಿ ಈ ಪೂಜಾಸ್ಥಳಗಳನ್ನು ಕಟ್ಟಿಸಿದ್ದಾರೆ. ಇಂಥಾ ಭಯಂಕರವಾದ ಕೆಲಸವನ್ನು ಮಾಡಲು ನಾನು ಅವರಿಗೆ ಆಜ್ಞಾಪಿಸಿಲ್ಲ. ಯೆಹೂದದ ಜನರು ಇಂಥಾ ಭಯಂಕರವಾದ ಕಾರ್ಯವನ್ನು ಮಾಡುವರೆಂದು ನಾನೆಂದೂ ಊಹಿಸಿರಲಿಲ್ಲ.


ಆ ಸೀಮೆಯು ಜೆರುಸಲೇಮ್ ಎಂದು ಕರೆಯಲ್ಪಟುವ ಯೆಬೂಸಿಯ ನಗರದ ದಕ್ಷಿಣ ಮಾರ್ಗವಾಗಿ ಬೆನ್‌ಹಿನ್ನೋಮ್ ಕಣಿವೆಗೆ ಹೋಗುತ್ತದೆ. ಆ ಸ್ಧಳದಲ್ಲಿ ಸೀಮೆಯು ಹಿನ್ನೋಮ್ ಕಣಿವೆಯ ಪಶ್ಚಿಮದಿಕ್ಕಿನ ಬೆಟ್ಟದ ತುದಿಗೆ ಹೋಗುತ್ತದೆ. ಇದು ರೆಫಾಯೀಮ್ ಕಣಿವೆಯ ಉತ್ತರದ ಕೊನೆ.


ನಿಮ್ಮ ಗಂಡುಮಕ್ಕಳನ್ನಾಗಲಿ ಹೆಣ್ಣುಮಕ್ಕಳನ್ನಾಗಲಿ ನಿಮ್ಮ ಯಜ್ಞವೇದಿಕೆಯ ಬೆಂಕಿಯ ಮೇಲೆ ಬಲಿಯನ್ನಾಗಿ ಅರ್ಪಿಸಬೇಡಿ. ನಿಮ್ಮ ಭವಿಷ್ಯವನ್ನು ತಿಳಿದುಕೊಳ್ಳುವುದಕ್ಕಾಗಿ ಕಣಿಹೇಳುವವರ ಬಳಿಗಾಗಲಿ, ಮಂತ್ರಗಾರರ ಬಳಿಗಾಗಲಿ ಬೇತಾಳಿಕರ ಬಳಿಗಾಗಲಿ, ಮಾಟಗಾರರ ಬಳಿಗಾಗಲಿ ಹೋಗಬೇಡಿ.


ಆದರೆ ನಾನು ನಿಮಗೆ ಹೇಳುವುದೇನೆಂದರೆ ಯಾರ ಮೇಲೂ ಕೋಪಗೊಳ್ಳಬೇಡಿ. ಪ್ರತಿಯೊಬ್ಬನೂ ನಿಮ್ಮ ಸಹೋದರ. ನೀವು ಬೇರೆಯವರ ಮೇಲೆ ಕೋಪಗೊಂಡರೆ ನ್ಯಾಯತೀರ್ಪಿಗೆ ಗುರಿಯಾಗುವಿರಿ. ನೀವು ಯಾರಿಗಾದರೂ ಕೆಟ್ಟ ಮಾತುಗಳನ್ನಾಡಿದರೆ, ಯೆಹೂದ್ಯರ ನ್ಯಾಯಸಭೆಯ ವಿಚಾರಣೆಗೆ ಗುರಿಯಾಗುವಿರಿ. ನೀವು ಯಾರನ್ನಾದರೂ ‘ಮೂರ್ಖ’ ಎಂದು ಕರೆದರೆ, ಅಗ್ನಿನರಕಕ್ಕೆ ಸೇರುವ ಅಪಾಯದಲ್ಲಿದ್ದೀರಿ.


ನೀವು ಅವುಗಳಿಗೆ ಅದೇ ರೀತಿಯ ಕಾಣಿಕೆಗಳನ್ನರ್ಪಿಸುತ್ತೀರಿ. ಆ ಸುಳ್ಳು ದೇವರುಗಳಿಗೆ ನೀವು ನಿಮ್ಮ ಮಕ್ಕಳನ್ನು ಬೆಂಕಿಯ ಮೂಲಕ ಆಹುತಿ ಮಾಡುತ್ತೀರಿ. ಈ ಹೊತ್ತಿನ ದಿನದ ತನಕವೂ ಆ ಹೊಲಸು ವಿಗ್ರಹಗಳ ಮೂಲಕ ನೀವು ನಿಮ್ಮನ್ನು ಅಶುದ್ಧಪಡಿಸಿಕೊಳ್ಳುತ್ತಿದ್ದೀರಿ. ನೀವು ನನ್ನ ಬಳಿಗೆ ಬಂದು ನನ್ನ ಸಲಹೆಗಳನ್ನು ಕೇಳಲು ನಿಮ್ಮನ್ನು ನಾನು ಸ್ವಾಗತಿಸಬೇಕೋ? ನಾನು ಒಡೆಯನಾದ ಯೆಹೋವನು. ನನ್ನ ಜೀವದಾಣೆ, ನಾನು ನಿಮಗೆ ಉತ್ತರಿಸುವುದಿಲ್ಲ; ನಿಮಗೆ ಸಲಹೆಗಳನ್ನೂ ಕೊಡುವದಿಲ್ಲ.


ಅವರು ತಮ್ಮ ಕಾಣಿಕೆಗಳಿಂದ ತಮ್ಮನ್ನೆ ಹೊಲಸು ಮಾಡಿಕೊಳ್ಳಲು ಅವರನ್ನು ಬಿಟ್ಟುಕೊಟ್ಟೆನು. ಅವರು ತಮ್ಮ ವಿಗ್ರಹಗಳಿಗೆ ತಮ್ಮ ಸ್ವಂತ ಚೊಚ್ಚಲು ಗಂಡುಮಕ್ಕಳನ್ನು ಆಹುತಿಕೊಡಲು ಪ್ರಾರಂಭಿಸಿದರು. ಈ ರೀತಿಯಾಗಿ ನಾನು ಆ ಜನರನ್ನು ನಾಶಮಾಡುವೆನು. ಆಗ ಅವರು ನಾನು ಒಡೆಯನಾದ ಯೆಹೋವನೆಂದು ತಿಳಿದುಕೊಳ್ಳುವರು.’


ನೀನು ನನ್ನ ಗಂಡುಮಕ್ಕಳನ್ನು ಸಂಹರಿಸಿ ಬೆಂಕಿಯಲ್ಲಿ ದಾಟಿಸಿ ಆ ಸುಳ್ಳುದೇವರಿಗೆ ಕೊಟ್ಟೆ.


ಬೋಕಿಯ ದ್ವಾರದ ಸಮೀಪದಲ್ಲಿರುವ ಬೆನ್‌ಹಿನ್ನೊಮ್ ತಗ್ಗಿಗೆ ಹೋಗು. ನಿನ್ನ ಸಂಗಡ ಜನರ ಹಿರಿಯರಲ್ಲಿ ಕೆಲವರನ್ನೂ ಯಾಜಕರ ಹಿರಿಯರಲ್ಲಿ ಕೆಲವರನ್ನೂ ಕರೆದುಕೊಂಡು ಹೋಗು. ನಾನು ನಿನಗೆ ಹೇಳುವುದನ್ನು ನೀನು ಅಲ್ಲಿ ಅವರಿಗೆ ಹೇಳು.


ಬೆನ್‌ಹಿನ್ನೋಮ್ ಕಣಿವೆಯಲ್ಲಿ ಮನಸ್ಸೆಯು ತನ್ನ ಸ್ವಂತ ಮಕ್ಕಳನ್ನು ಅನ್ಯದೇವತೆಗಳಿಗೆ ಯಜ್ಞವಾಗಿ ಅರ್ಪಿಸಿದನು; ಮಾಟಮಂತ್ರಗಳನ್ನು ಮಾಡಿದನು; ಪಿಶಾಚಿಗಳೊಂದಿಗೂ ದುರಾತ್ಮಗಳೊಂದಿಗೂ ಸಂಪರ್ಕವನ್ನಿಟ್ಟುಕೊಂಡಿದ್ದನು. ಯೆಹೋವನು ಕೆಟ್ಟದ್ದು ಎಂದು ಹೇಳಿದ್ದನ್ನೆಲ್ಲಾ ಅವನು ಮಾಡಿದ್ದರಿಂದ ಆತನು ಅವನ ಮೇಲೆ ಬಹಳವಾಗಿ ಕೋಪಗೊಂಡನು.


ಬೆನ್‌ಹಿನ್ನೋಮ್ ಕಣಿವೆಯಲ್ಲಿ ಧೂಪಹಾಕಿದನು. ತನ್ನ ಸ್ವಂತ ಮಕ್ಕಳನ್ನು ಬೆಂಕಿಯಲ್ಲಿ ಸುಟ್ಟು ವಿಗ್ರಹಗಳಿಗೆ ಆಹುತಿಕೊಟ್ಟನು. ಆ ದೇಶದ ಜನರು ಮಾಡಿದ ಭಯಂಕರ ಪಾಪಗಳನ್ನು ತಾನೂ ಮಾಡಿದನು. ಇಸ್ರೇಲ್ ಜನರು ಆ ದೇಶವನ್ನು ಪ್ರವೇಶಿಸಿದಾಗ ದೇವರು ಅವರನ್ನು ಹೊರಗೆ ಹೊರಡಿಸಿದ್ದನು.


ಮನಸ್ಸೆಯು ತನ್ನ ಮಗನನ್ನು ಆಹುತಿಕೊಟ್ಟು ಅವನನ್ನು ಯಜ್ಞವೇದಿಕೆಯ ಮೇಲೆ ಹೋಮಮಾಡಿದನು. ಮನಸ್ಸೆಯು ಭವಿಷ್ಯತ್ಕಾಲವನ್ನು ಅರಿಯಲು ಅನೇಕ ಮಾರ್ಗಗಳಲ್ಲಿ ಪ್ರಯತ್ನಿಸುತ್ತಿದ್ದನು. ಅವನು ಪ್ರೇತಾತ್ಮಗಳನ್ನು ವಶಪಡಿಸಿಕೊಂಡಿರುವ ಮಾಂತ್ರಿಕರನ್ನು ಮತ್ತು ತಾಂತ್ರಿಕರನ್ನು ಭೇಟಿಮಾಡಿದನು. ಯೆಹೋವನು ಕೆಟ್ಟದ್ದೆಂದು ಹೇಳಿದ ಅನೇಕಾನೇಕ ಕಾರ್ಯಗಳನ್ನು ಮನಸ್ಸೆಯು ಮಾಡಿದನು. ಯೆಹೋವನು ಕೋಪಗೊಳ್ಳಲು ಇದು ಕಾರಣವಾಯಿತು.


ಅವರು ತಮ್ಮ ಗಂಡುಮಕ್ಕಳನ್ನು ಮತ್ತು ಹೆಣ್ಣುಮಕ್ಕಳನ್ನು ಬೆಂಕಿಯಲ್ಲಿ ಆಹುತಿಕೊಟ್ಟರು. ಅವರು ಭವಿಷ್ಯವನ್ನು ತಿಳಿಯಲು ಮಾಂತ್ರಿಕ ವಿದ್ಯೆಯನ್ನು ಮತ್ತು ಕಣಿಹೇಳುವುದನ್ನು ಕಲಿತರು. ಯೆಹೋವನು ಕೆಟ್ಟದ್ದೆಂದು ಹೇಳಿದ್ದಕ್ಕೆ ತಮ್ಮನ್ನು ತಾವು ಮಾರಿಕೊಂಡು ಯೆಹೋವನಿಗೆ ಕೋಪವನ್ನು ಉಂಟುಮಾಡಿದರು.


ಅಹಾಜನು ಇಸ್ರೇಲಿನ ರಾಜರುಗಳಂತೆ ಜೀವಿಸಿದನು. ಅವನು ತನ್ನ ಮಗನನ್ನೇ ಬೆಂಕಿಯಲ್ಲಿ ಆಹುತಿಕೊಟ್ಟನು. ಇಸ್ರೇಲರು ದೇಶಕ್ಕೆ ಬಂದ ಕಾಲದಲ್ಲಿ ಯೆಹೋವನು ಬಲಾತ್ಕಾರದಿಂದ ಓಡಿಸಿದ ಜನಾಂಗಗಳ ಅಸಹ್ಯ ಪಾಪಗಳನ್ನು ಅವನು ಅನುಸರಿಸಿದನು.


ಸೊಲೊಮೋನನು ಕೆಮೋಷನನ್ನು ಆರಾಧಿಸಲು ಒಂದು ಸ್ಥಳವನ್ನು ನಿರ್ಮಿಸಿದನು. ಮೋವಾಬ್ಯರ ಭಯಂಕರ ವಿಗ್ರಹವೇ ಕೆಮೋಷ್. ಜೆರುಸಲೇಮಿನ ಪಕ್ಕದಲ್ಲಿದ್ದ ಬೆಟ್ಟದ ಮೇಲೆ ಸೊಲೊಮೋನನು ಆರಾಧನೆಯ ಸ್ಥಳವನ್ನು ನಿರ್ಮಿಸಿದನು. ಆ ಬೆಟ್ಟದ ಮೇಲೆಯೇ ಸೊಲೊಮೋನನು ಮೋಲೆಕ್ ದೇವತೆಯ ಪೂಜಾಸ್ಥಳವನ್ನು ನಿರ್ಮಿಸಿದನು. ಅಮ್ಮೋನಿಯರ ಭಯಂಕರ ವಿಗ್ರಹವೇ ಮೋಲೆಕ್.


ಅಲ್ಲಿಂದ ಆ ಮೇರೆಯು ರೆಫಾಯಿಮ್ ತಗ್ಗಿನ ಉತ್ತರದಲ್ಲಿರುವ ಬೆನ್‌ಹಿನ್ನೋಮ್ ತಗ್ಗಿನ ಹತ್ತಿರ ಆ ಬೆಟ್ಟದ ಬುಡಕ್ಕೆ ಇಳಿಯುತ್ತದೆ. ಆ ಮೇರೆಯು ಹಿನ್ನೋಮ್ ತಗ್ಗಿನಿಂದ ಯೆಬೂಸಿಯ ಪಟ್ಟಣದ ದಕ್ಷಿಣದವರೆಗೆ ಮುಂದುವರೆಯುತ್ತದೆ. ಅಲ್ಲಿಂದ ಅದು ಏನ್‌ರೋಗೆಲಿಗೆ ಬರುತ್ತದೆ.


ನೀವು ಮಾಡಬೇಕೆನ್ನುವುದು, ಪ್ರತಿಯೊಂದು ಹಸಿರು ಮರದಡಿಯಲ್ಲಿ ಸುಳ್ಳುದೇವರ ಪೂಜೆ ಮಾಡುವದೊಂದನ್ನೇ, ಪ್ರತಿಯೊಂದು ನೀರಿನ ಬುಗ್ಗೆಗಳ ಬಳಿಯಲ್ಲಿ ನಿಮ್ಮ ಮಕ್ಕಳನ್ನು ಕೊಂದು ಬಂಡೆಕಲ್ಲಿನ ಮೇಲೆ ಅವರ ಯಜ್ಞಮಾಡುವಿರಿ.


ಯೆಹೂದದ ಜನರು ನನ್ನ ಅನುಸರಣೆಯನ್ನು ಬಿಟ್ಟಿದ್ದರಿಂದ ನಾನು ಹೀಗೆ ಮಾಡುವೆನು. ಇದನ್ನು ಅವರು ಅನ್ಯದೇವರುಗಳ ಸ್ಥಳವನ್ನಾಗಿ ಮಾಡಿದ್ದಾರೆ. ಯೆಹೂದದ ಜನರು ಈ ಸ್ಥಳದಲ್ಲಿ ಅನ್ಯದೇವರುಗಳಿಗಾಗಿ ಧೂಪವನ್ನು ಹಾಕಿದ್ದಾರೆ. ಬಹಳ ಹಿಂದೆ ಈ ಜನರು ಆ ದೇವರುಗಳನ್ನು ಪೂಜಿಸುತ್ತಿರಲಿಲ್ಲ. ಅವರ ಹಿರಿಯರೂ ಆ ದೇವರುಗಳನ್ನು ಪೂಜಿಸುತ್ತಿರಲಿಲ್ಲ. ಇವುಗಳು ಅನ್ಯದೇಶದ ಹೊಸ ದೇವರುಗಳು. ಯೆಹೂದದ ರಾಜರು ಈ ಸ್ಥಳವನ್ನು ಮುಗ್ಧಮಕ್ಕಳ ರಕ್ತದಿಂದ ತುಂಬಿದರು.


ಜನೋಹ, ಅದುಲ್ಲಾಮ್, ಅದರ ಸುತ್ತಲಿದ್ದ ಚಿಕ್ಕ ನಗರಗಳು, ಲಾಕೀಷ್ ಅದರ ಸುತ್ತಲಿದ್ದ ಹೊಲಗಳು, ಅಜೇಕ, ಅದರ ಸುತ್ತಲಿದ್ದ ಚಿಕ್ಕ ಪಟ್ಟಣಗಳು. ಹೀಗೆ ಯೆಹೂದ ಪ್ರಾಂತ್ಯದ ಜನರು ಬೇರ್ಷೆಬದಿಂದ ಹಿಡಿದು ಹಿನ್ನೋಮ್ ಕಣಿವೆಯ ತನಕ ಬೇರೆಬೇರೆ ಪಟ್ಟಣಗಳಲ್ಲಿ ವಾಸಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು