Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 23:11 - ಪರಿಶುದ್ದ ಬೈಬಲ್‌

11 ಪೂರ್ವಕಾಲದಲ್ಲಿ ಯೆಹೂದದ ರಾಜರುಗಳು ದೇವಾಲಯದ ಬಾಗಿಲಿನ ಹತ್ತಿರ ಕೆಲವು ಕುದುರೆಗಳನ್ನು ಮತ್ತು ರಥಗಳನ್ನು ನಿಲ್ಲಿಸುತ್ತಿದ್ದರು. ಇದು ನಾತಾನ್ ಮೆಲೆಕನೆಂಬ ಮುಖ್ಯ ಅಧಿಕಾರಿಯ ಕೋಣೆಯ ಹತ್ತಿರದಲ್ಲಿತ್ತು. ಆ ಕುದುರೆಗಳು ಮತ್ತು ರಥಗಳು ಸೂರ್ಯದೇವತೆಯ ಗೌರವಾರ್ಥವಾಗಿದ್ದವು. ಯೋಷೀಯನು ಕುದುರೆಗಳನ್ನು ತೆಗೆಸಿ ರಥಗಳನ್ನು ಸುಡಿಸಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಯೆಹೂದ ರಾಜರು ಸೂರ್ಯದೇವತೆಗೋಸ್ಕರ ಪ್ರತಿಷ್ಠಿಸಿದ ಕುದುರೆಗಳನ್ನು ತೆಗೆದುಹಾಕಿ ರಥಗಳನ್ನು ಸುಟ್ಟುಬಿಟ್ಟನು. ಅವು ಯೆಹೋವನ ಆಲಯದ ಹೆಬ್ಬಾಗಿಲಿನ ಹೊರಗೆ “ಪರ್ವರೀಮ್” ಎಂಬ ಸ್ಥಳದಲ್ಲಿ ಕಂಚುಕಿಯಾದ ನಾತಾನ್ ಮೆಲೆಕನ ಕೋಣೆಯ ಹತ್ತಿರ ಇಡಲ್ಪಟ್ಟಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಜುದೇಯದ ರಾಜರು ಸೂರ್ಯದೇವತೆಗಾಗಿ ಪ್ರತಿಷ್ಠಿಸಿದ್ದ ಕುದುರೆಗಳನ್ನು ತೆಗೆದುಹಾಕಿ ರಥಗಳನ್ನು ಸುಡಿಸಿಬಿಟ್ಟನು. ಅವು ಸರ್ವೇಶ್ವರನ ಆಲಯದ ಕಂಚುಕಿಯಾದ ನಾತಾನ್ ಮೆಲೆಕನ ಕೋಣೆಯ ಹತ್ತಿರ ಇಡಲಾಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಯೆಹೂದರಾಜರು ಸೂರ್ಯದೇವತೆಗೋಸ್ಕರ ಪ್ರತಿಷ್ಠಿಸಿದ ಕುದುರೆಗಳನ್ನು ತೆಗೆದುಹಾಕಿ ರಥಗಳನ್ನು ಸುಡಿಸಿಬಿಟ್ಟನು. ಅವು ಯೆಹೋವನ ಆಲಯದ ಹೆಬ್ಬಾಗಲಿನ ಹೊರಗೆ ಪರ್ವರೀಮೆಂಬ ಸ್ಥಳದಲ್ಲಿ ಕಂಚುಕಿಯಾದ ನಾತಾನ್ ಮೆಲೆಕನ ಕೋಣೆಯ ಹತ್ತಿರ ಇಡಲ್ಪಟ್ಟಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಯೆಹೂದದ ಅರಸರು ಸೂರ್ಯನಿಗೆ ಪ್ರತಿಷ್ಠೆಪಡಿಸಿದ್ದ ಕುದುರೆಗಳನ್ನು ತೆಗೆದುಹಾಕಿ ರಥಗಳನ್ನು ಯೋಷೀಯನು ಸುಟ್ಟುಹಾಕಿದನು. ಅವು ಯೆಹೋವ ದೇವರ ಆಲಯದ ದ್ವಾರದಲ್ಲಿ ಪ್ರಧಾನನಾದ ನಾತಾನ್ ಮೆಲೆಕನ ಕೊಠಡಿಯ ಹತ್ತಿರ ಇದ್ದವು. ಅರಸರು ಸೂರ್ಯನಿಗೆ ಸಮರ್ಪಿಸಿ ನಿಲ್ಲಿಸಿದ್ದ ರಥಗಳನ್ನು ಸಹ ಸುಟ್ಟುಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 23:11
8 ತಿಳಿವುಗಳ ಹೋಲಿಕೆ  

ದೇವರು ನನ್ನನ್ನು ಯೆಹೋವನಾಲಯದ ಒಳಗಿನ ಅಂಗಳಕ್ಕೆ ಕರಕೊಂಡು ಹೋದನು. ಯೆಹೋವನಾಲಯದ ಪ್ರವೇಶ ಸ್ಥಳದಲ್ಲಿ ಮಂಟಪಕ್ಕೂ ಯಜ್ಞವೇದಿಕೆಗೂ ನಡುವೆ ಪವಿತ್ರ ಸ್ಥಳದ ಕಡೆಗೆ ಬೆನ್ನು ಮಾಡಿಕೊಂಡಿದ್ದ ಇಪ್ಪತ್ತೈದು ಮಂದಿ ಇದ್ದರು. ಪೂರ್ವಕ್ಕೆ ಮುಖಮಾಡಿಕೊಂಡಿದ್ದ ಅವರು ಸೂರ್ಯನನ್ನು ಪೂಜಿಸುತ್ತಿದ್ದರು.


ಜನರು ಬಾಳ್ ದೇವರ ವಿಗ್ರಹಗಳನ್ನೂ ಯಜ್ಞವೇದಿಕೆಗಳನ್ನೂ ಯೋಷೀಯನ ಮುಂದೆಯೇ ಕೆಡವಿಹಾಕಿದರು. ಆಮೇಲೆ ಯೋಷೀಯನು ಉನ್ನತಸ್ಥಳದಲ್ಲಿದ್ದ ಧೂಪವೇದಿಕೆಯನ್ನು ಕೆಡವಿ ಹಾಕಿ, ವಿಗ್ರಹಗಳನ್ನೆಲ್ಲಾ ಒಡೆದು ಪುಡಿಮಾಡಿ ಬಾಳ್ ದೇವರ ಪೂಜಾರಿಗಳ ಸಮಾಧಿಯ ಮೇಲೆ ಚೆಲ್ಲಿದನು.


ಯೆಹೂದ ದೇಶದ ಪಟ್ಟಣಗಳಲ್ಲಿದ್ದ ಎಲ್ಲಾ ವಿಗ್ರಹಗಳನ್ನೂ ಪೂಜಾಸ್ಥಳಗಳನ್ನೂ ಕಿತ್ತುಹಾಕಿಸಿದನು. ಆತನ ಆಳ್ವಿಕೆಯಲ್ಲಿ ರಾಜ್ಯದಲ್ಲೆಲ್ಲಾ ಶಾಂತಿ ನೆಲೆಸಿತ್ತು.


ಯೆಹೂದದ ರಾಜರುಗಳು ಯಾಜಕರಾಗಿ ಸೇವೆಮಾಡಲು ಕೆಲವು ಸಾಮಾನ್ಯ ಜನರನ್ನು ಆರಿಸಿಕೊಂಡರು. ಈ ಜನರು ಆರೋನನ ಕುಲದಿಂದ ಬಂದವರಲ್ಲ! ಈ ಸುಳ್ಳುಯಾಜಕರು ಯೆಹೂದದ ನಗರಗಳಲ್ಲಿನ ಮತ್ತು ಜೆರುಸಲೇಮಿನ ಊರುಗಳಲ್ಲಿನ ಉನ್ನತಸ್ಥಳಗಳಲ್ಲಿ ಧೂಪವನ್ನು ಸುಡುತ್ತಿದ್ದರು. ಅವರು ಬಾಳನನ್ನು, ಸೂರ್ಯನನ್ನು, ಚಂದ್ರನನ್ನು, ಆಕಾಶ ಸೈನ್ಯವಾದ ನಕ್ಷತ್ರಗಳನ್ನು ಗೌರವಿಸಲು ಧೂಪವನ್ನು ಸುಡುತ್ತಿದ್ದರು. ಆದರೆ ಯೋಷೀಯನು ಆ ಸುಳ್ಳು ಯಾಜಕರನ್ನು ನಿಲ್ಲಿಸಿದನು.


ನೀವು ಆಕಾಶವನ್ನು ತಲೆಯೆತ್ತಿ ನೋಡುವಾಗ ಅಲ್ಲಿ ಕಾಣುವ ಸೂರ್ಯಚಂದ್ರ ನಕ್ಷತ್ರಾದಿಗಳನ್ನು ಪೂಜಿಸಬೇಡಿ. ಇವುಗಳನ್ನೆಲ್ಲಾ ಅನ್ಯರು ಪೂಜಿಸುವರು.


ಪಶ್ಚಿಮದ ಅಂಗಳದಲ್ಲಿ ನಾಲ್ಕು ಮಂದಿ ಕಾವಲುಗಾರರಿದ್ದರು.


ಪ್ರಕಾಶಮಾನವಾದ ಸೂರ್ಯನನ್ನಾಗಲಿ ಸುಂದರವಾದ ಚಂದ್ರನನ್ನಾಗಲಿ ನಾನೆಂದೂ ಪೂಜಿಸಲಿಲ್ಲ.


ಆಮೇಲೆ ಅವನು ನನ್ನನ್ನು ಹೊರಗಿನ ಪ್ರಾಕಾರಕ್ಕೆ ಕರೆದುಕೊಂಡು ಹೋದನು. ಆ ಪ್ರಾಕಾರದ ಸುತ್ತಲೂ ಮೂವತ್ತು ಕೋಣೆಗಳೂ ನೆಲಗಟ್ಟೂ ಇದ್ದವು. ಆ ಕೋಣೆಗಳು ಗೋಡೆಗೆ ತಾಗಿ ನೆಲಗಟ್ಟಿಗೆ ಮುಖ ಮಾಡಿದ್ದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು