Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 23:15 - ಪರಿಶುದ್ದ ಬೈಬಲ್‌

15 ಯೋಷೀಯನು ಬೇತೇಲಿನ ಉನ್ನತಸ್ಥಳವನ್ನು ಮತ್ತು ಯಜ್ಞವೇದಿಕೆಯನ್ನು ಕೆಡವಿಬಿಟ್ಟನು. ನೆಬಾಟನ ಮಗನಾದ ಯಾರೊಬ್ಬಾಮನು ಈ ಯಜ್ಞವೇದಿಕೆಯನ್ನು ನಿರ್ಮಿಸಿದ್ದನು. ಇಸ್ರೇಲರು ಪಾಪಮಾಡುವಂತೆ ಯಾರೊಬ್ಬಾಮನು ಪ್ರೇರೇಪಿಸಿದ್ದನು. ಯೋಷೀಯನು ಯಜ್ಞವೇದಿಕೆಯನ್ನು ಮತ್ತು ಉನ್ನತಸ್ಥಳವನ್ನು ಕೆಡವಿಬಿಟ್ಟನು. ಯೋಷೀಯನು ಯಜ್ಞವೇದಿಕೆಯ ಕಲ್ಲುಗಳನ್ನು ಪುಡಿಪುಡಿಮಾಡಿ ಧೂಳಿನಲ್ಲಿ ಬೆರಸಿದನು. ಅವನು ಅಶೇರಸ್ತಂಭವನ್ನು ಸುಟ್ಟುಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಇದಲ್ಲದೆ, ಅವನು ಇಸ್ರಾಯೇಲರನ್ನು ಪಾಪಕ್ಕೆ ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನು ಬೇತೇಲಿನಲ್ಲಿ ನಿರ್ಮಿಸಿದ್ದ ಪೂಜಾಸ್ಥಳವನ್ನೂ, ಅದರಲ್ಲಿದ್ದ ಯಜ್ಞವೇದಿಯನ್ನೂ ಕೆಡವಿಬಿಟ್ಟನು. ಪೂಜಾಸ್ಥಳವನ್ನೂ ಅದರಲ್ಲಿದ್ದ ಅಶೇರ ವಿಗ್ರಹಸ್ತಂಭವನ್ನೂ ಸುಟ್ಟು ಬೂದಿಮಾಡಿನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಇದಲ್ಲದೆ ಇಸ್ರಯೇಲರನ್ನು ಪಾಪಕ್ಕೆ ಪ್ರೇರಿಸಿದ ನೆಬಾಟನ ಮಗ ಯಾರೊಬ್ಬಾಮನು ಬೇತೇಲಿನಲ್ಲಿ ಏರ್ಪಡಿಸಿದ ಪೂಜಾಸ್ಥಳವನ್ನೂ ಅದರಲ್ಲಿದ್ದ ಬಲಿಪೀಠವನ್ನೂ ಕೆಡವಿಬಿಟ್ಟನು. ಪೂಜಾಸ್ಥಳವನ್ನೂ ಅದರಲ್ಲಿದ್ದ ಅಶೇರ ವಿಗ್ರಹಸ್ತಂಭವನ್ನೂ ಸುಟ್ಟು ಬೂದಿಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಇದಲ್ಲದೆ ಅವನು ಇಸ್ರಾಯೇಲ್ಯರನ್ನು ಪಾಪಕ್ಕೆ ಪ್ರೇರಿಸಿದ ನೆಬಾಟನ ಮಗನಾದ ಯಾರೊಬ್ಬಾಮನು ಬೇತೇಲಿನಲ್ಲಿ ಏರ್ಪಡಿಸಿದ ಪೂಜಾಸ್ಥಳವನ್ನೂ ಅದರಲ್ಲಿದ್ದ ಯಜ್ಞವೇದಿಯನ್ನೂ ಕೆಡವಿಬಿಟ್ಟನು. ಪೂಜಾಸ್ಥಳವನ್ನೂ ಅದರಲ್ಲಿದ್ದ ಅಶೇರವಿಗ್ರಹಸ್ತಂಭವನ್ನೂ ಸುಟ್ಟು ಬೂದಿಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಇದಲ್ಲದೆ ಬೇತೇಲಿನಲ್ಲಿ ಇದ್ದ ಬಲಿಪೀಠವನ್ನೂ, ಇಸ್ರಾಯೇಲನ್ನು ಪಾಪಮಾಡಲು ಪ್ರೇರೇಪಿಸಿದ ನೆಬಾಟನ ಮಗ ಯಾರೊಬ್ಬಾಮನು ಮಾಡಿದ ಉನ್ನತ ಪೂಜಾಸ್ಥಳವನ್ನೂ ಸುಟ್ಟುಬಿಟ್ಟು, ಅದನ್ನು ಧೂಳಾಗಲು ಪುಡಿಮಾಡಿ ಅಶೇರ ಸ್ತಂಭವನ್ನು ಸುಟ್ಟುಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 23:15
16 ತಿಳಿವುಗಳ ಹೋಲಿಕೆ  

ಯೋಷೀಯನು ಅಶೇರಸ್ತಂಭವನ್ನು ದೇವಾಲಯದಿಂದ ತೆಗೆದುಹಾಕಿದನು. ಅವನು ಅಶೇರಸ್ತಂಭವನ್ನು ನಗರದ ಹೊರವಲಯದ ಕಿದ್ರೋನ್ ಕಣಿವೆಗೆ ತೆಗೆದುಕೊಂಡು ಹೋಗಿ ಅದನ್ನು ಅಲ್ಲಿ ಸುಟ್ಟುಹಾಕಿದನು. ನಂತರ ಅವನು ಅದನ್ನು ಪುಡಿಪುಡಿ ಮಾಡಿಸಿ ಧೂಳಿನಲ್ಲಿ ಬೆರಸಿ ಸಾಮಾನ್ಯ ಜನರ ಸ್ಮಶಾನದಲ್ಲಿ ಆ ಧೂಳನ್ನು ಚೆಲ್ಲಿದನು.


ಯಾರೊಬ್ಬಾಮನು ಪಾಪವನ್ನು ಮಾಡಿದನು. ನಂತರ ಇಸ್ರೇಲಿನ ಜನರೂ ಪಾಪ ಮಾಡುವಂತೆ ಯಾರೊಬ್ಬಾಮನು ಪ್ರೇರೇಪಿಸಿದನು. ಆದ್ದರಿಂದ ಇಸ್ರೇಲಿನ ಜನರು ಸೋಲಿಸಲ್ಪಡುವಂತೆ ಯೆಹೋವನು ಅವಕಾಶ ಮಾಡುತ್ತಾನೆ” ಎಂದು ಹೇಳಿದನು.


ಆದರೆ ಯೇಹು ಇಸ್ರೇಲಿನ ದೇವರಾದ ಯೆಹೋವನ ನಿಯಮಗಳನ್ನು ಪೂರ್ಣಮನಸ್ಸಿನಿಂದಲೂ ಎಚ್ಚರಿಕೆಯಿಂದಲೂ ಪಾಲಿಸಲಿಲ್ಲ. ಇಸ್ರೇಲಿನ ಪಾಪಗಳಿಗೆ ಪ್ರೇರಕನಾದ ಯಾರೊಬ್ಬಾಮನ ಪಾಪಗಳನ್ನು ಯೇಹುವು ಮಾಡುವುದನ್ನು ನಿಲ್ಲಿಸಲೇ ಇಲ್ಲ.


ನೆಬಾಟನ ಮಗನಾದ, ರಾಜನಾದ ಯಾರೊಬ್ಬಾಮನ ಕುಟುಂಬಕ್ಕೆ ಆದ ಗತಿಯೇ ನಿನ್ನ ಕುಟುಂಬಕ್ಕೂ ಆಗುವುದು. ರಾಜನಾದ ಬಾಷನ ಕುಟುಂಬಕ್ಕೆ ಆದ ಗತಿಯೇ ನಿನ್ನ ಕುಟುಂಬಕ್ಕೂ ಆಗುವುದು. ಈ ಎರಡು ಕುಟುಂಬಗಳೂ ಸಂಪೂರ್ಣವಾಗಿ ನಾಶಗೊಂಡವು. ನೀನು ನನ್ನನ್ನು ಕೋಪಗೊಳಿಸಿದ್ದಕ್ಕಾಗಿ ನಾನು ನಿನಗೆ ಹೀಗೆ ಮಾಡುತ್ತೇನೆ. ಇಸ್ರೇಲಿನ ಜನರು ಪಾಪಮಾಡುವುದಕ್ಕೆ ನೀನು ಕಾರಣನಾದೆ’ ಎನ್ನುತ್ತಾನೆ.


ರಾಜನಾದ ಯಾರೊಬ್ಬಾಮನು ಅನೇಕ ಪಾಪಗಳನ್ನು ಮಾಡಿದ್ದರಿಂದ ಇದು ಸಂಭವಿಸಿತು. ಇಸ್ರೇಲಿನ ಜನರು ಅನೇಕ ಪಾಪಗಳನ್ನು ಮಾಡುವಂತೆ ಯಾರೊಬ್ಬಾಮನು ಪ್ರೇರೇಪಿಸಿದ್ದನು. ಇಸ್ರೇಲಿನ ದೇವರಾದ ಯೆಹೋವನು ಹೆಚ್ಚು ಕೋಪಗೊಳ್ಳುವಂತೆ ಯಾರೊಬ್ಬಾಮನು ಮಾಡಿದ್ದನು.


ಬಳಿಕ ರಾಜನು ಈಗ ತಾನೇನು ಮಾಡಬೇಕೆಂದು ತನ್ನ ಸಲಹೆಗಾರರನ್ನು ಕೇಳಿದನು. ಅವರು ತಮ್ಮ ಸಲಹೆಯನ್ನು ಅವನಿಗೆ ನೀಡಿದರು. ಯಾರೊಬ್ಬಾಮನು ಎರಡು ಬಂಗಾರದ ಕರುಗಳನ್ನು ಮಾಡಿಸಿ ಜನರಿಗೆ, “ನೀವು ಆರಾಧಿಸಲು ಜೆರುಸಲೇಮಿಗೆ ಹೋಗಲೇಬಾರದು. ಇಸ್ರೇಲರೇ, ನಿಮ್ಮನ್ನು ಈಜಿಪ್ಟಿನಿಂದ ಹೊರತಂದ ದೇವರುಗಳು ಇಲ್ಲಿವೆ” ಎಂದು ಹೇಳಿದನು.


ಯೆಹೂದ ದೇಶದವನಾದ ಒಬ್ಬ ದೇವಮನುಷ್ಯನು ಯೆಹೋವನ ಆಜ್ಞೆಯಂತೆ ಬೇತೇಲಿಗೆ ಬಂದನು. ಆಗ ಯಾರೊಬ್ಬಾಮನು ಧೂಪವನ್ನು ಅರ್ಪಿಸುತ್ತಾ, ಯಜ್ಞವೇದಿಕೆಯ ಹತ್ತಿರ ನಿಂತಿದ್ದನು.


ಯಜ್ಞವೇದಿಕೆಯ ವಿರುದ್ಧ ಮಾತನಾಡುವಂತೆ ಆ ದೇವಮನುಷ್ಯನಿಗೆ ಯೆಹೋವನು ಆಜ್ಞಾಪಿಸಿದನು. ಆಗ ಅವನು ಹೇಳಿದ್ದೇನೆಂದರೆ: “ಯಜ್ಞವೇದಿಕೆಯೇ, ಯೆಹೋವನು ನಿನಗೆ ಹೀಗೆನ್ನುತ್ತಾನೆ: ‘ದಾವೀದನ ವಂಶದಲ್ಲಿ ಯೋಷೀಯನೆಂಬ ಮಗನು ಹುಟ್ಟುವನು. ಈಗ ಈ ಪೂಜಾಸ್ಥಳಗಳಲ್ಲಿ ಧೂಪಸುಡುತ್ತಿರುವ ಈ ಯಾಜಕರನ್ನು ಅವನು ಹಿಡಿದು ಅವರನ್ನು ನಿನ್ನ ಮೇಲೆಯೇ ಕೊಲ್ಲುವನು; ಈಗ ನಿನ್ನ ಮೇಲೆ ಧೂಪಸುಡುತ್ತಿರುವ ಯಾಜಕರನ್ನು ಅವನು ಹಿಡಿದು ಅವರ ಮೂಳೆಗಳನ್ನು ನಿನ್ನ ಮೇಲೆ ಸುಡುವನು.’”


ನಂತರ ರಾಜನು ಪ್ರಧಾನಯಾಜಕನಾದ ಹಿಲ್ಕೀಯನಿಗೆ, ಇತರ ಯಾಜಕರಿಗೆ, ದ್ವಾರಪಾಲಕರಿಗೆ, ಬಾಳ್‌ದೇವರಿಗೂ ಅಶೇರ ದೇವತೆಗೂ ಮತ್ತು ಆಕಾಶದ ನಕ್ಷತ್ರಗಳಿಗೂ ಉಪಯೋಗಿಸುತ್ತಿದ್ದ ಎಲ್ಲಾ ಸಲಕರಣೆಗಳನ್ನು ದೇವಾಲಯದಿಂದ ಹೊರತರುವಂತೆ ಆಜ್ಞಾಪಿಸಿದನು. ಯೋಷೀಯನು ಜೆರುಸಲೇಮಿನ ಹೊರಗೆ ಕಿದ್ರೋನ್ ಹೊಲಗಳಲ್ಲಿ ಅವುಗಳನ್ನು ಸುಟ್ಟುಹಾಕಿದನು. ಅವರು ಬೂದಿಯನ್ನು ಬೇತೇಲಿಗೆ ತೆಗೆದುಕೊಂಡು ಹೋದರು.


ಅದೇ ಪ್ರಕಾರ ಎಫ್ರಾಯೀಮ್, ಮನಸ್ಸೆ, ಸಿಮೆಯೋನ್ ಮತ್ತು ನಫ್ತಾಲಿ ಪ್ರಾಂತ್ಯಗಳ ಉದ್ದಕ್ಕೂ ಮಾಡಿದನು. ಆ ಪಟ್ಟಣಗಳ ಸಮೀಪದಲ್ಲಿದ್ದ ಹಾಳುಬಿದ್ದವುಗಳಿಗೂ ಅವನು ಹಾಗೆಯೇ ಮಾಡಿದನು.


ಇಸ್ರೇಲು ಪಾಪಮಾಡಿದೆ. ಅದಕ್ಕಾಗಿ ನಾನು ಅದನ್ನು ಶಿಕ್ಷಿಸುವೆನು. ಬೇತೇಲಿನಲ್ಲಿರುವ ವೇದಿಕೆಗಳನ್ನು ನಾನು ನಾಶಮಾಡುವೆನು. ವೇದಿಕೆಯ ಕೊಂಬುಗಳು ಮುರಿಯಲ್ಪಟ್ಟು ನೆಲದ ಮೇಲೆ ಬೀಳುವವು.


ಸಮುವೇಲನು ಇಸ್ರೇಲರಿಗೆ, “ನೀವು ಯೆಹೋವನ ಬಳಿಗೆ ಪೂರ್ಣಮನಸ್ಸಿನಿಂದ ಮತ್ತೆ ಬರುವುದಾದರೆ ನಿಮ್ಮ ಬಳಿಯಿರುವ ಅನ್ಯದೇವರುಗಳನ್ನು ಎಸೆಯಬೇಕು. ನೀವು ಅಷ್ಟೋರೆತ್ ದೇವತೆಯ ವಿಗ್ರಹಗಳನ್ನು ತ್ಯಜಿಸಬೇಕು. ನೀವು ನಿಮ್ಮನ್ನು ಯೆಹೋವನಿಗೆ ಸಂಪೂರ್ಣವಾಗಿ ಒಪ್ಪಿಸಿಕೊಟ್ಟು ಆತನ ಸೇವೆಯನ್ನು ಮಾತ್ರ ಮಾಡಬೇಕು. ಆಗ ಆತನು ನಿಮ್ಮನ್ನು ಫಿಲಿಷ್ಟಿಯರಿಂದ ರಕ್ಷಿಸುತ್ತಾನೆ” ಎಂದು ಹೇಳಿದನು.


ಆದ್ದರಿಂದ ಇಸ್ರೇಲರು ಬಾಳ್‌ದೇವರನ್ನೂ ಅಷ್ಟೋರೆತ್ ದೇವತೆಯನ್ನೂ ತ್ಯಜಿಸಿ ಯೆಹೋವನ ಸೇವೆಯನ್ನು ಮಾತ್ರ ಮಾಡಿದರು.


ಆದರೆ ನೆಬಾಟನ ಮಗನಾದ ಯಾರೊಬ್ಬಾಮನು ಮಾಡಿದ ಪಾಪಗಳನ್ನೇ ಅವನು ಮುಂದುವರಿಸಿದನು. ಇಸ್ರೇಲರು ಪಾಪಗಳನ್ನು ಮಾಡುವಂತೆ ಯಾರೊಬ್ಬಾಮನು ಪ್ರೇರೇಪಿಸಿದ್ದನು. ಯೋರಾಮನು ಯಾರೊಬ್ಬಾಮನ ಪಾಪಗಳನ್ನು ನಿಲ್ಲಿಸಲಿಲ್ಲ.


ಅಲ್ಲಿಂದ ಮುಂದೆ ಇಸ್ರೇಲ್ ದೇಶದಲ್ಲೂ ಪೂಜಾಸ್ಥಳಗಳನ್ನು ಕೆಡವಿ, ಅಶೇರಸ್ತಂಭಗಳನ್ನು ತುಂಡರಿಸಿ ಎರಕದ ಕೆತ್ತನೆಯ ವಿಗ್ರಹಗಳನ್ನು ಪುಡಿಮಾಡಿ, ಧೂಪವೇದಿಕೆಗಳನ್ನೆಲ್ಲಾ ನಾಶಮಾಡಿ ಜೆರುಸಲೇಮಿಗೆ ಹಿಂತಿರುಗಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು