Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 23:17 - ಪರಿಶುದ್ದ ಬೈಬಲ್‌

17 ಯೋಷೀಯನು, “ನಾನು ನೋಡುತ್ತಿರುವ ಆ ಸ್ಮಾರಕ ಯಾವುದು?” ಎಂದು ಕೇಳಿದನು. ಆ ನಗರದ ಜನರು ಅವನಿಗೆ, “ಅದು ಯೆಹೂದದಿಂದ ಬಂದ ದೇವಮನುಷ್ಯನ ಸಮಾಧಿ. ನೀನು ಬೇತೇಲಿನ ಯಜ್ಞವೇದಿಕೆಗೆ ಮಾಡಿದ ಕಾರ್ಯಗಳನ್ನು ಕುರಿತು ಈ ಪ್ರವಾದಿಯು ಬಹಳ ಕಾಲದ ಹಿಂದೆಯೇ ಹೇಳಿದ್ದನು” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಇದಲ್ಲದೆ, ಅವನು ಒಂದು ಸಮಾಧಿಶಿಲೆಯನ್ನು ಕಂಡು, ಅದು ಏನು? ಎಂದು ವಿಚಾರಿಸಲು ಆ ಊರಿನವರು, “ನೀನು ಈಗ ಬೇತೇಲಿನ ಯಜ್ಞವೇದಿಗೆ ಮಾಡಿದ್ದನ್ನು ಮುಂತಿಳಿಸಿದ ಯೆಹೂದ ದೇಶದವನಾದ ದೇವರ ಮನುಷ್ಯನ ಸಮಾಧಿ” ಎಂದು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಇದಲ್ಲದೆ, ಅವನು ಒಂದು ಸಮಾಧಿ ಶಿಲೆಯನ್ನು ಕಂಡು ಅದೇನೆಂದು ವಿಚಾರಿಸಿದನು. ಆ ಊರಿನವರು, “ನೀವು ಈಗ ಬೇತೇಲಿನ ಬಲಿಪೀಠಕ್ಕೆ ಮಾಡಿದ್ದನ್ನು ಮುಂತಿಳಿಸಿದ್ದ ಜುದೇಯ ನಾಡಿನವನಾದ ದೈವಪುರುಷನ ಸಮಾಧಿ ಇದು,” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಇದಲ್ಲದೆ ಅವನು ಒಂದು ಸಮಾಧಿಶಿಲೆಯನ್ನು ಕಂಡು ಅದೇನೆಂದು ವಿಚಾರಿಸಲು ಆ ಊರಿನವರು - ನೀನು ಈಗ ಬೇತೇಲಿನ ಯಜ್ಞವೇದಿಗೆ ಮಾಡಿದ್ದನ್ನು ಮುಂತಿಳಿಸಿದ ಯೆಹೂದ ದೇಶದವನಾದ ದೇವರ ಮನುಷ್ಯನ ಸಮಾಧಿಯೆಂದು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಆಗ ಅರಸನು, “ನಾನು ಕಾಣುವ ಈ ಸಮಾಧಿ ಕಲ್ಲು ಯಾರದು?” ಎಂದು ಕೇಳಿದನು. ಅದಕ್ಕೆ ಆ ಊರಿನವರು ಅವನಿಗೆ, “ನೀನು ಈಗ ಬೇತೇಲಿನ ಬಲಿಪೀಠಕ್ಕೆ ಮಾಡಿದ್ದನ್ನು ಮುಂತಿಳಿಸಿದ ಯೆಹೂದದ ದೇವರ ಮನುಷ್ಯನ ಸಮಾಧಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 23:17
2 ತಿಳಿವುಗಳ ಹೋಲಿಕೆ  

ಯೆಹೂದ ದೇಶದವನಾದ ಒಬ್ಬ ದೇವಮನುಷ್ಯನು ಯೆಹೋವನ ಆಜ್ಞೆಯಂತೆ ಬೇತೇಲಿಗೆ ಬಂದನು. ಆಗ ಯಾರೊಬ್ಬಾಮನು ಧೂಪವನ್ನು ಅರ್ಪಿಸುತ್ತಾ, ಯಜ್ಞವೇದಿಕೆಯ ಹತ್ತಿರ ನಿಂತಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು