19 ಯೋಷೀಯನು ಸಮಾರ್ಯದ ನಗರಗಳಲ್ಲಿದ್ದ ಉನ್ನತಸ್ಥಳಗಳ ಆಲಯಗಳನ್ನೆಲ್ಲ ನಾಶಗೊಳಿಸಿದನು. ಇಸ್ರೇಲಿನ ರಾಜರುಗಳು ಈ ಆಲಯಗಳನ್ನು ನಿರ್ಮಿಸಿದ್ದರು. ಇದರಿಂದ ಯೆಹೋವನು ಬಹಳ ಕೋಪಗೊಂಡಿದ್ದನು. ಯೋಷೀಯನು ಬೇತೇಲಿನಲ್ಲಿ ಆರಾಧನೆಯ ಸ್ಥಳಗಳನ್ನು ನಾಶಪಡಿಸಿದಂತೆ ಆ ಆಲಯಗಳನ್ನೂ ನಾಶಗೊಳಿಸಿದನು.
19 ಇಸ್ರಾಯೇಲಿನ ಅರಸರು ಸಮಾರ್ಯದ ಪಟ್ಟಣಗಳಲ್ಲಿ ಮಾಡಿದ ಯೆಹೋವ ದೇವರ ಕೋಪಕ್ಕೆ ಕಾರಣವಾಗಿದ್ದ ಉನ್ನತ ಪೂಜಾಸ್ಥಳಗಳನ್ನು ಯೋಷೀಯನು ಕೆಡವಿಹಾಕಿ, ಬೇತೇಲಿನಲ್ಲಿ ತಾನು ಮಾಡಿದಂತೆ ಅವುಗಳಿಗೆ ಮಾಡಿದನು.
ಯಾಕೆಂದರೆ ನೀವು ಒಮ್ರಿಯ ಆಜ್ಞೆಯನ್ನು ಪರಿಪಾಲಿಸಿದಿರಿ. ಅಹಾಬನ ಮನೆಯವರು ಮಾಡುತ್ತಿದ್ದ ದುಷ್ಕೃತ್ಯಗಳನ್ನು ನೀವು ಮಾಡುತ್ತೀರಿ. ನೀವು ಅವರ ಬೋಧನೆಯನ್ನು ಅನುಸರಿಸುತ್ತೀರಿ. ಆದ್ದರಿಂದ ನೀವು ನಾಶವಾಗುವಂತೆ ಮಾಡುವೆನು. ಕೆಡವಲ್ಪಟ್ಟ ನಿಮ್ಮ ನಗರವನ್ನು ನೋಡಿದ ಜನರು ಆಶ್ಚರ್ಯದಿಂದ ಸಿಳ್ಳುಹಾಕುವರು. ಆಗ ಬೇರೆ ಜನಾಂಗದವರು ನಿಮ್ಮ ಮೇಲೆ ಹೊರಿಸಿದ ಅವಮಾನವನ್ನು ನೀವು ಸಹಿಸಿಕೊಳ್ಳುವಿರಿ.”
ಪಸ್ಕಹಬ್ಬದ ಆಚರಣೆಯು ಮುಕ್ತಾಯವಾಯಿತು. ಇಸ್ರೇಲಿನಿಂದ ಜೆರುಸಲೇಮಿಗೆ ಬಂದಿದ್ದವರು ಯೆಹೂದದ ಪಟ್ಟಣಗಳಿಗೆ ಹೋದರು. ಅಲ್ಲಿದ್ದ ಕಲ್ಲಿನ ವಿಗ್ರಹಗಳನ್ನು ಒಡೆದು ನಾಶಮಾಡಿದರು; ಅಶೇರಸ್ತಂಭಗಳನ್ನು ಮತ್ತು ಪೂಜಾಸ್ಥಳಗಳನ್ನು ಕೆಡವಿಹಾಕಿದರು. ಹೀಗೆ ಅವರು ಯೆಹೂದ ಮತ್ತು ಬೆನ್ಯಾಮೀನ್ ಪ್ರಾಂತ್ಯಗಳಲ್ಲೆಲ್ಲಾ ಸಂಚಾರ ಮಾಡಿದರು. ಆ ಜನರು ಎಫ್ರಾಯೀಮ್ ಮನಸ್ಸೆ ಪ್ರಾಂತ್ಯಗಳಲ್ಲಿಯೂ ಹಾಗೆಯೇ ಮಾಡಿದರು. ವಿಗ್ರಹಗಳನ್ನು ಪೂಜಿಸಲು ಮಾಡಿದ ಎಲ್ಲಾ ವಸ್ತುಗಳನ್ನು ನಾಶಮಾಡಿದರು. ಬಳಿಕ ಆ ಇಸ್ರೇಲರೆಲ್ಲಾ ತಮ್ಮತಮ್ಮ ಮನೆಗಳಿಗೆ ಹಿಂದಿರುಗಿದರು.
ಮನಸ್ಸೆಯು ತನ್ನ ಮಗನನ್ನು ಆಹುತಿಕೊಟ್ಟು ಅವನನ್ನು ಯಜ್ಞವೇದಿಕೆಯ ಮೇಲೆ ಹೋಮಮಾಡಿದನು. ಮನಸ್ಸೆಯು ಭವಿಷ್ಯತ್ಕಾಲವನ್ನು ಅರಿಯಲು ಅನೇಕ ಮಾರ್ಗಗಳಲ್ಲಿ ಪ್ರಯತ್ನಿಸುತ್ತಿದ್ದನು. ಅವನು ಪ್ರೇತಾತ್ಮಗಳನ್ನು ವಶಪಡಿಸಿಕೊಂಡಿರುವ ಮಾಂತ್ರಿಕರನ್ನು ಮತ್ತು ತಾಂತ್ರಿಕರನ್ನು ಭೇಟಿಮಾಡಿದನು. ಯೆಹೋವನು ಕೆಟ್ಟದ್ದೆಂದು ಹೇಳಿದ ಅನೇಕಾನೇಕ ಕಾರ್ಯಗಳನ್ನು ಮನಸ್ಸೆಯು ಮಾಡಿದನು. ಯೆಹೋವನು ಕೋಪಗೊಳ್ಳಲು ಇದು ಕಾರಣವಾಯಿತು.
ಇಸ್ರೇಲರು ತಮ್ಮ ದೇವರಾದ ಯೆಹೋವನ ವಿರುದ್ಧ ರಹಸ್ಯವಾದ ಕೆಟ್ಟಕಾರ್ಯಗಳನ್ನು ಮಾಡಿದರು. ಇಸ್ರೇಲರು ಚಿಕ್ಕ ಊರಿನಿಂದಿಡಿದು ದೊಡ್ಡ ನಗರದವರೆಗೂ ತಮ್ಮ ಎಲ್ಲಾ ನಗರಗಳಲ್ಲಿ ಉನ್ನತಸ್ಥಳಗಳನ್ನು ನಿರ್ಮಿಸಿದರು.
ಆದರೆ ಯೆಹೋರಾಮನು ಇಸ್ರೇಲಿನ ರಾಜರುಗಳಂತೆ ಜೀವಿಸಿದನು ಮತ್ತು ಯೆಹೋವನು ಕೆಟ್ಟಕಾರ್ಯಗಳೆಂದು ಹೇಳಿದ್ದನ್ನೇ ಮಾಡಿದನು. ಯೆಹೋರಾಮನು ಅಹಾಬನ ಕುಟುಂಬದ ಜನರಂತೆ ಜೀವಿಸಿದನು. ಅವನ ಪತ್ನಿಯು ಅಹಾಬನ ಮಗಳಾದ್ದರಿಂದ ಯೆಹೋರಾಮನು ಹೀಗೆ ಜೀವಿಸಿದನು.
ಅಹಾಬನು ಅಶೇರ ದೇವತೆಯನ್ನು ಆರಾಧಿಸಲು ಒಂದು ವಿಶೇಷ ಸ್ತಂಭವನ್ನು ನೆಡಿಸಿದನು. ಹೀಗೆ ಎಷ್ಟೋ ಕೆಟ್ಟಕಾರ್ಯಗಳನ್ನು ಮಾಡಿ ತನ್ನ ಮುಂಚೆ ಇದ್ದ ಇಸ್ರೇಲ್ ರಾಜರುಗಳಿಗಿಂತಲೂ ಹೆಚ್ಚಾಗಿ ಇಸ್ರೇಲ್ ದೇವರಾದ ಯೆಹೋವನನ್ನು ರೇಗಿಸಿದನು.
ಅವನ ಮೂಲಕ ಯೆಹೋವನು ಹೇಳಿದ ಸಂಗತಿಗಳು ಖಂಡಿತವಾಗಿಯೂ ನಿಜವಾಗುತ್ತವೆ. ಬೇತೇಲಿನ ಯಜ್ಞವೇದಿಕೆಯ ವಿರುದ್ಧವಾಗಿಯೂ ಸಮಾರ್ಯದ ಇತರ ಪಟ್ಟಣಗಳಲ್ಲಿರುವ ಉನ್ನತಸ್ಥಳಗಳ ವಿರುದ್ಧವಾಗಿಯೂ ಯೆಹೋವನು ಅವನ ಮೂಲಕವಾಗಿ ಮಾತನಾಡಿದನು” ಎಂದು ಹೇಳಿದನು.
ಯಾರೊಬ್ಬಾಮನು ಎತ್ತರದ ಸ್ಥಳಗಳಲ್ಲಿ ಆಲಯಗಳನ್ನು ನಿರ್ಮಿಸಿದನು. ಅವನು ಇಸ್ರೇಲಿನ ಬೇರೆಬೇರೆ ಕುಲಗಳಿಂದ ಯಾಜಕರನ್ನು ಆರಿಸಿಕೊಂಡನು. (ಅವನು ಲೇವಿಯರ ಕುಲವೊಂದರಿಂದಲೇ ಯಾಜಕರನ್ನು ಆರಿಸಿಕೊಳ್ಳಲಿಲ್ಲ.)