2 ಅರಸುಗಳು 23:20 - ಪರಿಶುದ್ದ ಬೈಬಲ್20 ಯೋಷೀಯನು ಸಮಾರ್ಯದ ಉನ್ನತಸ್ಥಳಗಳಲ್ಲಿದ್ದ ಯಾಜಕರನ್ನೆಲ್ಲ ಕೊಂದುಹಾಕಿದನು. ಅವನು ಯಾಜಕರನ್ನು ಯಜ್ಞವೇದಿಕೆಗಳ ಮೇಲೆಯೇ ಕೊಂದುಹಾಕಿದನು. ಅವನು ಜನರ ಎಲುಬುಗಳನ್ನು ಯಜ್ಞವೇದಿಕೆಯ ಮೇಲೆ ಸುಟ್ಟನು. ಈ ರೀತಿ ಅವನು ಪೂಜೆಯ ಸ್ಥಳಗಳನ್ನು ನಾಶಗೊಳಿಸಿದನು. ನಂತರ ಅವನು ಜೆರುಸಲೇಮಿಗೆ ಹಿಂದಿರುಗಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಯೋಷೀಯನು ಅವುಗಳನ್ನು ಕೆಡವಿಬಿಟ್ಟು ಅವುಗಳ ಪೂಜಾರಿಗಳನ್ನು ಯಜ್ಞವೇದಿಯ ಮೇಲೆ ವಧಿಸಿ ಆ ಮನುಷ್ಯರ ಎಲುಬುಗಳನ್ನು ಸುಟ್ಟು ಯೆರೂಸಲೇಮಿಗೆ ಹಿಂದಿರುಗಿ ಹೋದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಯೋಷೀಯನು ಅವುಗಳನ್ನು ಕೆಡವಿಬಿಟ್ಟು, ಅವುಗಳ ಪೂಜಾರಿಗಳನ್ನು ಬಲಿಪೀಠಗಳ ಮೇಲೆ ವಧಿಸಿ ಮನುಷ್ಯರ ಎಲುಬುಗಳನ್ನು ಅವುಗಳ ಮೇಲೆ ಸುಡಿಸಿ ಜೆರುಸಲೇಮಿಗೆ ಹಿಂದಿರುಗಿ ಹೋದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಯೋಷೀಯನು ಅವುಗಳನ್ನು ಕೆಡವಿಬಿಟ್ಟು ಅವುಗಳ ಪೂಜಾರಿಗಳನ್ನು ಯಜ್ಞವೇದಿಗಳ ಮೇಲೆ ವಧಿಸಿ ಮನುಷ್ಯರ ಎಲುಬುಗಳನ್ನು ಸುಡಿಸಿ ಯೆರೂಸಲೇವಿುಗೆ ಹಿಂದಿರುಗಿ ಹೋದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಅಲ್ಲಿದ್ದ ಉನ್ನತ ಪೂಜಾಸ್ಥಳಗಳ ಯಾಜಕರನ್ನೆಲ್ಲಾ ಬಲಿಪೀಠಗಳ ಮೇಲೆ ಕೊಂದುಹಾಕಿ, ಅವುಗಳ ಮೇಲೆ ಮನುಷ್ಯರ ಎಲುಬುಗಳನ್ನು ಸುಟ್ಟು, ಯೋಷೀಯನು ಯೆರೂಸಲೇಮಿಗೆ ತಿರುಗಿಬಂದನು. ಅಧ್ಯಾಯವನ್ನು ನೋಡಿ |
ಯೇಹುವು ಸರ್ವಾಂಗಹೋಮಗಳನ್ನು ಅರ್ಪಿಸಿದ ತಕ್ಷಣ, ಕಾವಲುಗಾರರಿಗೂ ಸೇನಾಧಿಪತಿಗಳಿಗೂ, “ಒಳಕೋಣೆಗೆ ಹೋಗಿ ಬಾಳನ ಆರಾಧಕರನ್ನೆಲ್ಲ ಕೊಂದುಹಾಕಿ! ಜೀವಸಹಿತ ಯಾರೂ ಆಲಯದಿಂದ ಹೊರಕ್ಕೆ ಬರಲು ಬಿಡಬೇಡಿ!” ಎಂದು ಹೇಳಿದನು. ಸೇನಾಧಿಪತಿಗಳು ಚೂಪಾದ ಖಡ್ಗದಿಂದ ಬಾಳನ ಭಕ್ತರನ್ನೆಲ್ಲ ಕೊಂದುಹಾಕಿದರು. ಬಾಳನ ಭಕ್ತರ ದೇಹಗಳನ್ನು ಕಾವಲುಗಾರರು ಮತ್ತು ಸೇನಾಧಿಪತಿಗಳು ಹೊರಕ್ಕೆ ಎಸೆದರು. ನಂತರ ಆ ಕಾವಲುಗಾರರು ಮತ್ತು ಸೇನಾಧಿಪತಿಗಳು ಬಾಳನ ಆಲಯದ ಒಳಕೋಣೆಯನ್ನು ಪ್ರವೇಶಿಸಿದರು.
ಯಜ್ಞವೇದಿಕೆಯ ವಿರುದ್ಧ ಮಾತನಾಡುವಂತೆ ಆ ದೇವಮನುಷ್ಯನಿಗೆ ಯೆಹೋವನು ಆಜ್ಞಾಪಿಸಿದನು. ಆಗ ಅವನು ಹೇಳಿದ್ದೇನೆಂದರೆ: “ಯಜ್ಞವೇದಿಕೆಯೇ, ಯೆಹೋವನು ನಿನಗೆ ಹೀಗೆನ್ನುತ್ತಾನೆ: ‘ದಾವೀದನ ವಂಶದಲ್ಲಿ ಯೋಷೀಯನೆಂಬ ಮಗನು ಹುಟ್ಟುವನು. ಈಗ ಈ ಪೂಜಾಸ್ಥಳಗಳಲ್ಲಿ ಧೂಪಸುಡುತ್ತಿರುವ ಈ ಯಾಜಕರನ್ನು ಅವನು ಹಿಡಿದು ಅವರನ್ನು ನಿನ್ನ ಮೇಲೆಯೇ ಕೊಲ್ಲುವನು; ಈಗ ನಿನ್ನ ಮೇಲೆ ಧೂಪಸುಡುತ್ತಿರುವ ಯಾಜಕರನ್ನು ಅವನು ಹಿಡಿದು ಅವರ ಮೂಳೆಗಳನ್ನು ನಿನ್ನ ಮೇಲೆ ಸುಡುವನು.’”