Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 23:25 - ಪರಿಶುದ್ದ ಬೈಬಲ್‌

25 ಇದಕ್ಕೆ ಮೊದಲು ಯೋಷೀಯನಂತಹ ರಾಜನು ಇರಲೇ ಇಲ್ಲ. ಯೋಷೀಯನು ತನ್ನ ಪೂರ್ಣ ಹೃದಯದಿಂದಲೂ ತನ್ನ ಪೂರ್ಣ ಆತ್ಮದಿಂದಲೂ ತನ್ನ ಪೂರ್ಣ ಶಕ್ತಿಯಿಂದಲೂ ಯೆಹೋವನ ಕಡೆಗೆ ತಿರುಗಿದನು. ಮೋಶೆಯ ಧರ್ಮಶಾಸ್ತ್ರವನ್ನು ಯೋಷೀಯನಂತೆ ಬೇರೆ ಯಾವ ರಾಜನೂ ಅನುಸರಿಸಿರಲಿಲ್ಲ. ಆ ಕಾಲದವರೆಗೆ ಯೋಷೀಯನಂತಹ ಮತ್ತೊಬ್ಬ ರಾಜನು ಇರಲೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಯೆಹೋವನ ಕಡೆಗೆ ತಿರುಗಿಕೊಂಡು ಪೂರ್ಣಮನಸ್ಸಿನಿಂದಲೂ, ಪೂರ್ಣಪ್ರಾಣದಿಂದಲೂ, ಪೂರ್ಣಬಲದಿಂದಲೂ ಮೋಶೆಯ ಧರ್ಮಶಾಸ್ತ್ರವನ್ನು ಅನುಸರಿಸಿದ ಯೋಷೀಯನಿಗೆ ಸಮಾನನಾದ ಅರಸನು ಹಿಂದಿನ ಕಾಲದಲ್ಲೂ ಆ ನಂತರದ ಕಾಲದಲ್ಲೂ ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಸರ್ವೇಶ್ವರನಿಗೆ ಅಭಿಮುಖನಾಗಿ, ಪೂರ್ಣಮನಸ್ಸಿನಿಂದಲೂ ಪೂರ್ಣಪ್ರಾಣದಿಂದಲೂ ಪೂರ್ಣಶಕ್ತಿಯಿಂದಲೂ ಮೋಶೆಯ ಧರ್ಮಶಾಸ್ತ್ರವನ್ನು ಅನುಸರಿಸಿದ ಈ ಯೋಷೀಯನಿಗೆ ಸಮಾನನಾದ ಅರಸನು ಹಿಂದೆಯೂ ಅನಂತರವೂ ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಯೆಹೋವನ ಕಡೆಗೆ ತಿರುಗಿಕೊಂಡು ಪೂರ್ಣಮನಸ್ಸಿನಿಂದಲೂ ಪೂರ್ಣಪ್ರಾಣದಿಂದಲೂ ಪೂರ್ಣಬಲದಿಂದಲೂ ಮೋಶೆಯ ಧರ್ಮಶಾಸ್ತ್ರವನ್ನು ಅನುಸರಿಸಿದ ಯೋಷೀಯನಿಗೆ ಸಮಾನನಾದ ಅರಸನು ಮುಂಚೆಯೂ ತರುವಾಯವೂ ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ತನ್ನ ಪೂರ್ಣಹೃದಯದಿಂದಲೂ, ತನ್ನ ಪೂರ್ಣಪ್ರಾಣದಿಂದಲೂ, ತನ್ನ ಪೂರ್ಣ ಬಲದಿಂದಲೂ ಮೋಶೆಯ ಸಮಸ್ತ ನಿಯಮದ ಪ್ರಕಾರ ಯೆಹೋವ ದೇವರ ಕಡೆಗೆ ತಿರುಗಿಕೊಂಡ ಯೋಷೀಯ ಅರಸನಿಗೆ ಸಮಾನನಾದ ಅರಸನು ಹಿಂದೆಯೂ ಅನಂತರವೂ ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 23:25
14 ತಿಳಿವುಗಳ ಹೋಲಿಕೆ  

ಹಿಜ್ಕೀಯನು ಇಸ್ರೇಲಿನ ದೇವರಾದ ಯೆಹೋವನಲ್ಲಿ ನಂಬಿಕೆಯಿಟ್ಟನು. ಯೆಹೂದದ ರಾಜರುಗಳಲ್ಲೆಲ್ಲಾ ಹಿಜ್ಕೀಯನಂಥವರು ಅವನ ಮುಂಚೆಯಾಗಲಿ ಅವನ ನಂತರವಾಗಲಿ ಇರಲಿಲ್ಲ.


ನೀವು ನನ್ನನ್ನು ಹುಡುಕುವಿರಿ. ನೀವು ಮನಃಪೂರ್ವಕವಾಗಿ ಹುಡುಕಿದಾಗ ನನ್ನನ್ನು ಕಂಡುಕೊಳ್ಳುವಿರಿ.


ಧರ್ಮಶಾಸ್ತ್ರವು ಮೋಶೆಯ ಮೂಲಕ ಕೊಡಲ್ಪಟ್ಟಿತು. ಆದರೆ ಕೃಪೆಯೂ ಸತ್ಯವೂ ಯೇಸು ಕ್ರಿಸ್ತನ ಮೂಲಕ ಬಂದವು.


ರಾಜನು ಸ್ತಂಭದ ಬಳಿ ನಿಂತು ತಾನು ಯೆಹೋವನ ಮಾರ್ಗದಲ್ಲಿ ನಡೆಯುವುದಾಗಿಯೂ ಆತನ ಆಜ್ಞೆಗಳಿಗೆ, ಒಡಂಬಡಿಕೆಗೆ ಮತ್ತು ಆತನ ನಿಯಮಗಳಿಗೆ ಪೂರ್ಣಹೃದಯದಿಂದಲೂ ಪೂರ್ಣಆತ್ಮದಿಂದಲೂ ವಿಧೇಯನಾಗಿರುವುದಾಗಿಯೂ ನಿಬಂಧನ ಗ್ರಂಥದಲ್ಲಿ ಬರೆದಿರುವ ಎಲ್ಲಾ ವಾಕ್ಯಗಳನ್ನು ನೆರವೇರಿಸುವುದಾಗಿಯೂ ಯೆಹೋವನಿಗೆ ಪ್ರಮಾಣಮಾಡಿದನು. ರಾಜನ ಪ್ರಮಾಣಕ್ಕೆ ಬೆಂಬಲ ನೀಡಲು ಜನರೆಲ್ಲರೂ ಎದ್ದುನಿಂತರು.


ಅವರು ಆ ದೂರದ ದೇಶದಲ್ಲಿರುತ್ತಾರೆ. ಆದರೆ ಅವರು ತಮ್ಮ ಪೂರ್ವಿಕರಿಗೆ ನೀನು ದಯಪಾಲಿಸಿದ ಈ ದೇಶದ ಕಡೆಗೂ ನಿನ್ನಿಂದ ಆರಿಸಲ್ಪಟ್ಟ ಈ ನಗರದ ಕಡೆಗೂ ನಿನ್ನ ಗೌರವಕ್ಕಾಗಿ ನಾನು ನಿರ್ಮಿಸಿದ ಈ ಆಲಯದ ಕಡೆಗೂ ತಿರುಗಿಕೊಂಡು ನಾವು ನಿನ್ನ ಆಜ್ಞೆಗಳನ್ನು ಮೀರಿ ಪಾಪಿಗಳಾದೆವು ಎಂದು ಒಪ್ಪಿ, ಪೂರ್ಣಮನಸ್ಸಿನಿಂದಲೂ, ಪೂರ್ಣಪ್ರಾಣದಿಂದಲೂ ನಿನ್ನಲ್ಲಿ ಪ್ರಾರ್ಥಿಸುವುದಾದರೆ,


ನಿಮ್ಮ ದೇವರಾದ ಯೆಹೋವನನ್ನು ನಿಮ್ಮ ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ಪೂರ್ಣಶಕ್ತಿಯಿಂದಲೂ ಪ್ರೀತಿಸಬೇಕು.


ಮೋಶೆಯು ನಿಮಗೆ ಧರ್ಮಶಾಸ್ತ್ರವನ್ನು ಕೊಟ್ಟನು. ಹೌದಲ್ಲವೇ? ಆದರೆ ನಿಮ್ಮಲ್ಲಿ ಒಬ್ಬರೂ ಧರ್ಮಶಾಸ್ತ್ರಕ್ಕೆ ವಿಧೇಯರಾಗುತ್ತಿಲ್ಲ. ನೀವು ನನ್ನನ್ನು ಕೊಲ್ಲಲು ಏಕೆ ಪ್ರಯತ್ನಿಸುತ್ತಿದ್ದೀರಿ?” ಎಂದು ಉತ್ತರಕೊಟ್ಟನು.


“ನನ್ನ ಸೇವಕನಾದ ಮೋಶೆಯ ಕಟ್ಟಳೆಗಳನ್ನು ಅನುಸರಿಸಲು ಮರೆಯಬೇಡಿ. ಹೋರೇಬ್ ಬೆಟ್ಟದಲ್ಲಿ ನಾನು ಆ ನ್ಯಾಯವಿಧಿಗಳನ್ನು ಅವನಿಗೆ ಕೊಟ್ಟೆನು. ಆ ಕಟ್ಟಳೆಗಳೆಲ್ಲಾ ಇಸ್ರೇಲ್ ಜನರಿಗಾಗಿ ಇರುವದು.”


ಯೆಹೋವನು ಇಚ್ಛಿಸಿದ ಕಾರ್ಯಗಳನ್ನು ದಾವೀದನು ಯಾವಾಗಲೂ ಮಾಡುತ್ತಿದ್ದನು. ಯೆಹೋವನ ಆಜ್ಞೆಗಳಿಗೆ ಅವನು ಯಾವಾಗಲೂ ವಿಧೇಯತೆಯಿಂದಿದ್ದನು. ದಾವೀದನು ಹಿತ್ತಿಯನಾದ ಊರೀಯನ ವಿಷಯದಲ್ಲಿ ಮಾತ್ರ ಯೆಹೋವನಿಗೆ ಅವಿಧೇಯನಾದನು.


ನೀನು ಯೆಹೋವನಿಗೆ ವಿಧೇಯನಾದರೆ, ಆಗ ಯೆಹೋವನು ನನಗೆ ಮಾಡಿದ ವಾಗ್ದಾನವನ್ನು ಈಡೇರಿಸುವನು. ಯೆಹೋವನು ನನಗೆ ಈ ರೀತಿ ವಾಗ್ದಾನ ಮಾಡಿರುವನು: ‘ನಿನ್ನ ಮಕ್ಕಳು ನಂಬಿಗಸ್ತರಾಗಿ ಪೂರ್ಣಮನಸ್ಸಿನಿಂದಲೂ ಪೂರ್ಣಪ್ರಾಣದಿಂದಲೂ ನನ್ನ ಆಜ್ಞೆಗಳಿಗೆ ವಿಧೇಯರಾಗಿ ಜೀವಿಸುವುದಾಗಿದ್ದರೆ, ನಿನ್ನ ವಂಶದವರಲ್ಲಿ ಒಬ್ಬನು ಯಾವಾಗಲೂ ಇಸ್ರೇಲಿನ ಜನರನ್ನು ಆಳುವವನಾಗಿರುತ್ತಾನೆ.’”


ಆಗ ನೀವು ನಿಮ್ಮ ದೇವರಾದ ಯೆಹೋವನನ್ನು ಹುಡುಕುವಿರಿ. ನೀವು ನಿಮ್ಮ ಹೃದಯ ಆತ್ಮಗಳಿಂದ ಹುಡುಕಿದಾಗ ಆತನು ನಿಮಗೆ ಸಿಗುವನು.


“ಯೆಹೋಯಾಕೀಮನೇ, ನಿನ್ನ ಮನೆಯಲ್ಲಿ ದೇವದಾರಿನ ಮರವನ್ನು ಬಹಳವಾಗಿ ಇಟ್ಟುಕೊಳ್ಳುವದರಿಂದ ನೀನು ದೊಡ್ಡ ರಾಜನಾಗುವದಿಲ್ಲ. ನಿನ್ನ ತಂದೆಯಾದ ಯೋಷೀಯನು ಅನ್ನಪಾನೀಯಗಳಿಂದ ತೃಪ್ತಿಪಟ್ಟುಕೊಳ್ಳುತ್ತಿದ್ದನು. ಅವನು ನೀತಿ ಮತ್ತು ನ್ಯಾಯ ಸಮ್ಮತವಾದದ್ದನ್ನು ಮಾಡುತ್ತಿದ್ದನು. ಯೋಷೀಯನು ಹಾಗೆ ಮಾಡಿದ್ದರಿಂದ ಎಲ್ಲವೂ ಸರಿಹೋಯಿತು.


“ನಮ್ಮ ಗಂಡು ಮತ್ತು ಹೆಣ್ಣುಮಕ್ಕಳು ನಮ್ಮ ಸುತ್ತಲಿರುವ ಅನ್ಯರನ್ನು ಮದುವೆಯಾಗಲು ಬಿಡುವುದಿಲ್ಲ” ಎಂದು ಪ್ರತಿಜ್ಞೆ ಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು