Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 23:29 - ಪರಿಶುದ್ದ ಬೈಬಲ್‌

29 ಯೋಷೀಯನ ಕಾಲದಲ್ಲಿ ಈಜಿಪ್ಟಿನ ರಾಜನಾದ ಫರೋಹ-ನೆಕೋ ಎಂಬವನು ಅಶ್ಶೂರದ ರಾಜನ ವಿರುದ್ಧವಾಗಿ ಹೋರಾಡಲು ಯೂಫ್ರೇಟೀಸ್ ನದಿಯ ಬಳಿಗೆ ಹೋದನು. ರಾಜನಾದ ಯೋಷೀಯನು ಫರೋಹ ನೆಕೋವನ ವಿರುದ್ಧ ಹೋರಾಡಲು ಯೂಫ್ರೇಟೀಸ್ ನದಿಯ ಬಳಿಗೆ ಹೋದನು. ಆದರೆ ಮೆಗಿದ್ದೋವಿನಲ್ಲಿ ಫರೋಹ ನೆಕೋವನು ಯೋಷೀಯನನ್ನು ನೋಡಿ, ಅವನನ್ನು ಕೊಂದು ಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಅವನ ಕಾಲದಲ್ಲಿ, ಐಗುಪ್ತದ ಅರಸನಾದ ಫರೋಹ ನೆಕೋ ಎಂಬುವವನು ಅಶ್ಶೂರದ ಅರಸನಿಗೆ ವಿರುದ್ಧವಾಗಿ ಎದ್ದು ಯುದ್ಧಮಾಡುವುದಕ್ಕಾಗಿ ಯೂಫ್ರೆಟಿಸ್ ನದಿಯ ಬಳಿಗೆ ಹೋದನು. ಅವನು ಅಲ್ಲಿಗೆ ಹೋಗುತ್ತಿರುವಾಗ ಯೋಷೀಯನು ಮೆಗಿದ್ದೋವಿನಲ್ಲಿ ಅವನನ್ನು ಎದುರುಗೊಂಡು ಅಲ್ಲಿ ಅವನಿಂದ ಹತನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಅವನ ಕಾಲದಲ್ಲಿ ಈಜಿಪ್ಟಿನ ಅರಸ ಫರೋಹ ನೆಕೋ ಎಂಬವನು ಅಸ್ಸೀರಿಯದ ಅರಸನಿಗೆ ವಿರುದ್ಧ ಯುದ್ಧಮಾಡುವುದಕ್ಕಾಗಿ ಯೂಫ್ರಟಿಸ್ ನದಿಯ ಬಳಿಗೆ ಹೋದನು. ಅವನು ಅಲ್ಲಿಗೆ ಹೋಗುತ್ತಿರುವಾಗ ಯೋಷೀಯನು ಮೆಗಿದ್ದೋವಿನಲ್ಲಿ ಅವನನ್ನು ಎದುರುಗೊಂಡು, ಕೂಡಲೆ ಅವನಿಂದ ಹತನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಅವನ ಕಾಲದಲ್ಲಿ ಐಗುಪ್ತದ ಅರಸನಾದ ಫರೋಹ ನೆಕೋ ಎಂಬವನು ಅಶ್ಶೂರದ ಅರಸನಿಗೆ ವಿರೋಧವಾಗಿ ಯುದ್ಧಮಾಡುವದಕ್ಕೋಸ್ಕರ ಯೂಫ್ರೇಟೀಸ್ ನದಿಯ ಬಳಿಗೆ ಹೋದನು. ಅವನು ಅಲ್ಲಿಗೆ ಹೋಗುತ್ತಿರುವಾಗ ಯೋಷೀಯನು ಮೆಗಿದ್ದೋವಿನಲ್ಲಿ ಅವನನ್ನು ಎದುರುಗೊಂಡು ಕೂಡಲೆ ಅವನಿಂದ ಹತನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಅವನ ಕಾಲದಲ್ಲಿ ಈಜಿಪ್ಟಿನ ಅರಸ ಫರೋಹ ನೆಕೋ ಎಂಬವನು ಅಸ್ಸೀರಿಯದ ಅರಸನಿಗೆ ಸಹಾಯಮಾಡಲು ಯೂಫ್ರೇಟೀಸ್ ನದಿಯವರೆಗೆ ಹೋದನು. ಅರಸನಾದ ಯೋಷೀಯನು ಅವನನ್ನು ಯುದ್ಧದಲ್ಲಿ ಎದುರಿಸಲು ಹೋದಾಗ, ನೆಕೋ ಅವನನ್ನು ಎದುರಿಸಿ ಮೆಗಿದ್ದೋವಿನಲ್ಲಿ ಕೊಂದುಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 23:29
24 ತಿಳಿವುಗಳ ಹೋಲಿಕೆ  

ಈ ಸಂದೇಶವು ಈಜಿಪ್ಟ್ ಜನಾಂಗದ ಬಗ್ಗೆ ಇದೆ. ಈ ಸಂದೇಶವು ಫರೋಹನೆಕೋವಿನ ಸೈನ್ಯದ ಬಗ್ಗೆ ಇದೆ. ಫರೋಹನೆಕೋವು ಈಜಿಪ್ಟಿನ ರಾಜನಾಗಿದ್ದನು. ಅವನ ಸೈನ್ಯವನ್ನು ಕರ್ಕೆಮೀಷ್ ಪಟ್ಟಣದಲ್ಲಿ ಸೋಲಿಸಲಾಯಿತು. ಕರ್ಕೆಮೀಷ್ ಪಟ್ಟಣವು ಯೂಫ್ರೇಟೀಸ್ ನದಿಯ ದಂಡೆಯ ಮೇಲಿದೆ. ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನು ಯೆಹೂದದಲ್ಲಿ ಯೆಹೋಯಾಕೀಮನ ಆಳ್ವಿಕೆಯ ನಾಲ್ಕನೆಯ ವರ್ಷದಲ್ಲಿ ಫರೋಹನೆಕೋವಿನ ಸೈನ್ಯವನ್ನು ಕರ್ಕೆಮೀಷಿನಲ್ಲಿ ಸೋಲಿಸಿದನು. ಯೆಹೋಯಾಕೀಮನು ರಾಜನಾದ ಯೋಷೀಯನ ಮಗನಾಗಿದ್ದನು. ಈಜಿಪ್ಟಿಗೆ ಯೆಹೋವನ ಸಂದೇಶ ಹೀಗಿತ್ತು:


ಜೆರುಸಲೇಮಿನಲ್ಲಿ ಅತೀವ ಗೋಳಾಟದ ಮತ್ತು ದುಃಖದ ಕಾಲ ಬರುವದು. ಅದು ಮೆಗಿದ್ದೋ ತಗ್ಗಿನಲ್ಲಿ ಹದದ್ ರಿಮ್ಮೋನನು ಸತ್ತಾಗ ಜನರು ಗೋಳಾಡಿದ ಸಮಯದಂತೆ ಇರುವದು.


ಕಾನಾನ್ಯ ಅರಸರು ಬಂದು ಯುದ್ಧಮಾಡಿದರು; ಅವರು ಮೆಗಿದ್ದೋ ಪ್ರವಾಹಗಳ ಬಳಿಯಲ್ಲಿರುವ ತಾನಾಕದಲ್ಲಿ ಹೋರಾಡಿದರು. ಆದರೆ ಅವರು ಯಾವ ಸಂಪತ್ತನ್ನು ತೆಗೆದುಕೊಂಡು ಹೋಗಲಿಲ್ಲ!


ಬಳಿಕ ಅಶುದ್ಧಾತ್ಮಗಳು ರಾಜರುಗಳನ್ನು ಹೀಬ್ರೂ ಭಾಷೆಯಲ್ಲಿ ಹರ್ಮೆಗದೋನ್ ಎಂಬ ಹೆಸರುಳ್ಳ ಸ್ಥಳದಲ್ಲಿ ಒಟ್ಟಾಗಿ ಸೇರಿಸಿದವು.


ಹೌದು, ದೇವರ ಐಶ್ವರ್ಯವು ಎಷ್ಟೋ ಅಪಾರವಾಗಿದೆ! ದೇವರ ವಿವೇಕಕ್ಕೂ ಜ್ಞಾನಕ್ಕೂ ಕೊನೆಯೇ ಇಲ್ಲ! ದೇವರು ನಿರ್ಧರಿಸುವ ಸಂಗತಿಗಳನ್ನು ಯಾವನೂ ವಿವರಿಸಲಾರನು. ದೇವರ ಮಾರ್ಗಗಳನ್ನು ಯಾವನೂ ಅರ್ಥಮಾಡಿಕೊಳ್ಳಲಾರನು.


ಲೋಕದಲ್ಲಿ ಮತ್ತೊಂದು ಅನ್ಯಾಯವಿದೆ. ದುಷ್ಟರಿಗೆ ಕೇಡಾಗಬೇಕು, ಕೆಟ್ಟವುಗಳು ಕೆಟ್ಟ ಜನರಿಗೆ ಆಗಬೇಕು. ನೀತಿವಂತರಿಗೆ ಒಳ್ಳೆಯದಾಗಬೇಕು. ಆದರೆ ಕೆಲವು ಸಲ ನೀತಿವಂತರಿಗೆ ಕೇಡಾಗುತ್ತದೆ. ದುಷ್ಟರಿಗೆ ಒಳ್ಳೆಯದಾಗುತ್ತದೆ. ಅದು ನ್ಯಾಯವಲ್ಲ.


ಈಜಿಪ್ಟಿನ ರಾಜನು ಈಜಿಪ್ಟನ್ನು ಬಿಟ್ಟು ಹೊರಗೆ ಹೋಗಲಿಲ್ಲ. ಏಕೆಂದರೆ ಬಾಬಿಲೋನ್ ರಾಜನು, ಈಜಿಪ್ಟಿನ ಹಳ್ಳದಿಂದ ಯೂಫ್ರೇಟೀಸ್ ನದಿಯವರೆಗಿನ ದೇಶವನ್ನೆಲ್ಲಾ ಆಕ್ರಮಿಸಿಕೊಂಡಿದ್ದನು.


‘ನೀನು ನಿನ್ನ ಪೂರ್ವಿಕರ ಜೊತೆ ಸೇರುವಂತೆ ನಾನು ಮಾಡುತ್ತೇನೆ. ನೀನು ಶಾಂತಿಯಿಂದ ಸತ್ತು ನಿನ್ನ ಸಮಾಧಿಯನ್ನು ಸೇರುವೆ. ಈ ದೇಶದ (ಜೆರುಸಲೇಮಿನ) ಮೇಲೆ ನಾನು ತರಲಿರುವ ಕೇಡುಗಳನ್ನು ನಿನ್ನ ಕಣ್ಣುಗಳು ನೋಡುವುದಿಲ್ಲ’ ಎಂಬುದೇ” ಎಂದು ಹೇಳಿದಳು. ನಂತರ ಯಾಜಕನಾದ ಹಿಲ್ಕೀಯ, ಅಹೀಕಾಮ್, ಅಕ್ಬೋರ್, ಶಾಫಾನ್ ಮತ್ತು ಅಸಾಯ ಹಿಂತಿರುಗಿ ಬಂದು ರಾಜನಿಗೆ ತಿಳಿಸಿದರು.


ಆದರೆ ಯೋವಾಷನ ಎಚ್ಚರಿಕೆಯನ್ನು ಅಮಚ್ಯನು ಆಲಿಸಲೇ ಇಲ್ಲ. ಆದ್ದರಿಂದ ಇಸ್ರೇಲಿನ ರಾಜನಾದ ಯೋವಾಷನು ಯೆಹೂದದ ರಾಜನಾದ ಅಮಚ್ಯನ ವಿರುದ್ಧ ಹೋರಾಟ ಮಾಡಲು ಯೆಹೂದದ ಬೇತ್ಷೆಮೆಷಿಗೆ ಹೋದನು.


ಇಸ್ರೇಲರ ರಾಜನೂ ಯೇಹುವಿನ ಮೊಮ್ಮಗನೂ ಯೆಹೋವಾಹಾಜನ ಮಗನೂ ಆದ ಯೋವಾಷನ ಬಳಿಗೆ ಅಮಚ್ಯನು ಸಂದೇಶಕರನ್ನು ಕಳುಹಿಸಿದನು. ಅಮಚ್ಯನು ಸಂದೇಶದಲ್ಲಿ, “ಬಾ, ನಾವು ಪರಸ್ಪರ ಯುದ್ಧ ಮಾಡೋಣ!” ಎಂದು ಹೇಳಿದ್ದನು.


ಯೆಹೂದದ ರಾಜನಾದ ಅಹಜ್ಯನು ಇದನ್ನು ಕಂಡು ತೋಟದ ಮನೆಯ ಮೂಲಕ ಓಡಿಹೋದನು. ಯೇಹು ಅವನನ್ನು ಹಿಂಬಾಲಿಸಿಕೊಂಡು ಹೋಗಿ, “ಅಹಜ್ಯನನ್ನೂ ಅವನ ರಥದಲ್ಲಿಯೇ ಹೊಡೆಯಿರಿ!” ಎಂದು ಹೇಳಿದನು. ಯೇಹುವಿನ ಜನರು ಅಹಜ್ಯನನ್ನು ಇಬ್ಲೆಯಾಮಿನ ಬಳಿಯಿರುವ ಗೂರ್‌ನಲ್ಲಿ ಹೊಡೆದುಹಾಕಿದರು. ಅಹಜ್ಯನು ಮೆಗಿದ್ದೋವಿಗೆ ಓಡಿಹೋದರೂ ಅಲ್ಲಿ ಸತ್ತುಹೋದನು.


ತಾಣಕ್, ಮೆಗಿದ್ದೋ ಮತ್ತು ಚಾರೆತಾನಿನ ಅಂಚಿನಲ್ಲಿದ್ದ ಬೇತ್‌ಷೆಯಾನಿನ ಎಲ್ಲ ಪ್ರದೇಶಕ್ಕೆ ಅಹೀಲೂದನ ಮಗನಾದ ಬಾಣಾ ರಾಜ್ಯಪಾಲನಾಗಿದ್ದನು. ಇದು ಇಜ್ರೇಲಿನ ತಳದಲ್ಲಿ ಬೇತ್‌ಷೆಯಾನಿನಿಂದ ಅಬೇಲ್ ಮೆಹೋಲವರೆಗಿರುವ, ಯೊಕ್ಮೆಯಾನಿನ ಆಚೆಗಿರುವ ಪ್ರದೇಶ.


ಬೇತ್‌ಷೆಯಾನ್, ತಾನಾಕ್, ದೋರ್, ಇಬ್ಲೆಯಾಮ್, ಮೆಗಿದ್ದೋ ನಗರಗಳಲ್ಲಿ ಮತ್ತು ಅವುಗಳ ಸುತ್ತಮುತ್ತಲಿನ ಸಣ್ಣ ಪಟ್ಟಣಗಳಲ್ಲಿ ಕಾನಾನ್ಯರು ವಾಸವಾಗಿದ್ದರು. ಕಾನಾನ್ಯರನ್ನು ಈ ನಗರಗಳಿಂದ ಹೊರದೂಡುವುದು ಮನಸ್ಸೆ ಕುಲದವರಿಗೆ ಸಾಧ್ಯವಾಗಲಿಲ್ಲ. ಆದ್ದರಿಂದ ಕಾನಾನ್ಯರು ನೆಲೆನಿಂತರು. ಅವರು ತಮ್ಮ ಮನೆಗಳನ್ನು ಬಿಡಲು ಸಮ್ಮತಿಸಲಿಲ್ಲ.


ಮನಸ್ಸೆ ಕುಲದವರು ಇಸ್ಸಾಕಾರ್, ಆಶೇರ್ ಪ್ರಾಂತಗಳಲ್ಲಿಯೂ ಕೆಲವು ಊರುಗಳನ್ನು ಹೊಂದಿದ್ದರು. ಬೇತ್‌ಷೆಯಾನ್, ಇಬ್ಲೆಯಾಮ್ ಮತ್ತು ಅವುಗಳ ಸುತ್ತಮುತ್ತಲಿನ ಸಣ್ಣ ಊರುಗಳು ಮನಸ್ಸೆಯ ಜನರ ಅಧೀನದಲ್ಲಿದ್ದವು. ಮನಸ್ಸೆಯ ಜನರು ದೋರ್, ಎಂದೋರ್, ತಾನಕ್, ಮೆಗಿದ್ದೋ ಮತ್ತು ಆ ಪಟ್ಟಣಗಳ ಸುತ್ತಮುತ್ತಲಿನ ಹಳ್ಳಿಗಳಲ್ಲಿಯೂ ವಾಸವಾಗಿದ್ದರು. ಅವರು ನಾಫೊತ್‌ನ ಮೂರು ಊರುಗಳಲ್ಲಿಯೂ ಇದ್ದರು.


“ಯೆಹೂದದ ರಾಜರುಗಳ ಇತಿಹಾಸ” ಎಂಬ ಪುಸ್ತಕದಲ್ಲಿ ಯೋಷೀಯನು ಮಾಡಿದ ಇತರ ಕಾರ್ಯಗಳೆಲ್ಲವನ್ನು ಕುರಿತು ಬರೆಯಲಾಗಿದೆ.


ದೇವರು ನನಗೆ, “ಇಸ್ರೇಲರ ಅಧಿಪತಿಗಳ ವಿಷಯವಾದ ಈ ಶೋಕಗೀತೆಯನ್ನು ನೀನು ಹಾಡಬೇಕು” ಎಂದು ಹೇಳಿದನು:


ಸತ್ತ ರಾಜನ ಬಗ್ಗೆ ಅಳಬೇಡಿ. ಅವನಿಗೋಸ್ಕರ ಅಳಬೇಡಿ. ಆದರೆ ಇಲ್ಲಿಂದ ಹೋಗುತ್ತಿರುವ ರಾಜನ ಬಗ್ಗೆ ಗಟ್ಟಿಯಾಗಿ ರೋಧಿಸಿರಿ. ಅವನು ಮತ್ತೆ ಇಲ್ಲಿಗೆ ಬರುವದಿಲ್ಲ. ಆದ್ದರಿಂದ ಅವನಿಗೋಸ್ಕರ ರೋಧಿಸಿರಿ. ಯೋಹಾಜನು ತನ್ನ ಜನ್ಮಭೂಮಿಯನ್ನು ಮತ್ತೆಂದಿಗೂ ನೋಡುವುದಿಲ್ಲ.


ಯೋಷೀಯನ ಮಗನಾದ ಯೋಹಾಜನ (ಶಲ್ಲೂಮನ) ಬಗ್ಗೆ ಯೆಹೋವನು ಹೀಗೆಂದನು: (ಶಲ್ಲೂಮನು ತನ್ನ ತಂದೆಯಾದ ಯೋಷೀಯನ ಮರಣಾನಂತರ ರಾಜನಾದನು.) “ಯೋಹಾಜನು ಜೆರುಸಲೇಮಿನಿಂದ ಹೊರಟುಹೋದನು. ಅವನು ಮತ್ತೆಂದಿಗೂ ಜೆರುಸಲೇಮಿಗೆ ಹಿಂದಿರುಗುವುದಿಲ್ಲ.


ಈಜಿಪ್ಟಿನವರು ಅವನನ್ನು ತೆಗೆದುಕೊಂಡು ಹೋದ ಸ್ಥಳದಲ್ಲಿಯೇ ಸತ್ತುಹೋಗುವನು. ಅವನು ಮತ್ತೊಮ್ಮೆ ಈ ಪ್ರದೇಶವನ್ನು ನೋಡಲಾರನು.”


“ವೇಗಶಾಲಿಗಳೂ ಓಡಿಹೋಗಲಾರರು. ಶೂರಸೈನಿಕರೂ ತಪ್ಪಿಸಿಕೊಳ್ಳಲಾರರು. ಅವರೆಲ್ಲರೂ ಎಡವಿ ಬಿದ್ದುಬಿಡುವರು. ಇದೆಲ್ಲ ಉತ್ತರದಲ್ಲಿ ಯೂಫ್ರೇಟೀಸ್ ನದಿಯ ಹತ್ತಿರ ನಡೆಯುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು