2 ಅರಸುಗಳು 23:33 - ಪರಿಶುದ್ದ ಬೈಬಲ್33 ಫರೋಹ ನೆಕೋವನು ಹಮಾತ್ ದೇಶದ ರಿಬ್ಲಾ ಎಂಬಲ್ಲಿ ಯೆಹೋವಾಹಾಜನನ್ನು ಸೆರೆಹಿಡಿದನು. ಆದ್ದರಿಂದ ಯೆಹೋವಾಹಾಜನು ಜೆರುಸಲೇಮಿನಲ್ಲಿ ಆಳಲಿಲ್ಲ. ಫರೋಹ ನೆಕೋವನು ಮೂರುಸಾವಿರದ ನಾನೂರು ಕಿಲೋಗ್ರಾಂ ಬೆಳ್ಳಿಯನ್ನು ಮತ್ತು ಮೂವತ್ನಾಲ್ಕು ಕಿಲೋಗ್ರಾಂ ಚಿನ್ನವನ್ನು ಕೊಡುವಂತೆ ಯೆಹೂದದವರನ್ನು ಬಲವಂತಪಡಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201933 ಫರೋಹ ನೆಕೋವನು ಇವನನ್ನು ಯೆರೂಸಲೇಮಿನಲ್ಲಿ ಬಹು ದಿನಗಳವರೆಗೆ ಆಳಗೊಡಲಿಲ್ಲ. ಅವನು ಹಮಾತ ದೇಶದ ರಿಬ್ಲಾ ಎಂಬ ಊರಲ್ಲಿ ಇವನನ್ನು ಸೆರೆಯಲ್ಲಿಟ್ಟದ್ದಲ್ಲದೆ ಯೆಹೂದ್ಯರು ಅವನಿಗೆ ನೂರು ತಲಾಂತು ಬೆಳ್ಳಿಯನ್ನೂ, ಒಂದು ತಲಾಂತು ಬಂಗಾರವನ್ನೂ ದಂಡ ತೆರಬೇಕಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)33 ಫರೋಹ ನೆಕೋವನು ಇವನನ್ನು ಜೆರುಸಲೇಮಿನಲ್ಲಿ ಬಹುದಿನಗಳವರೆಗೆ ಆಳಗೊಡಲಿಲ್ಲ. ಅವನು ಹಮಾತ್ ದೇಶದ ದಿಬ್ಲಾ ಎಂಬ ಊರಲ್ಲಿ ಇವನನ್ನು ಸೆರೆಯಲ್ಲಿಟ್ಟನು. ಯೆಹೂದ್ಯರು ಅವನಿಗೆ ಮೂರು ಸಾವಿರದ ನಾಲ್ಕುನೂರು ಕಿಲೋಗ್ರಾಂ ಬೆಳ್ಳಿಯನ್ನೂ ಮೂವತ್ತನಾಲ್ಕು ಕಿಲೋಗ್ರಾಂ ಬಂಗಾರವನ್ನೂ ದಂಡ ತೆರಬೇಕಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)33 ಫರೋಹ ನೆಕೋವನು ಇವನನ್ನು ಯೆರೂಸಲೇವಿುನಲ್ಲಿ ಬಹು ದಿವಸಗಳವರೆಗೆ ಆಳಗೊಡಲಿಲ್ಲ. ಅವನು ಹಮಾತ್ ದೇಶದ ರಿಬ್ಲಾ ಎಂಬ ಊರಲ್ಲಿ ಇವನನ್ನು ಸೆರೆಯಲ್ಲಿಟ್ಟನು. ಯೆಹೂದ್ಯರು ಅವನಿಗೆ ನೂರು ತಲಾಂತು ಬೆಳ್ಳಿಯನ್ನೂ ಒಂದು ತಲಾಂತು ಬಂಗಾರವನ್ನೂ ದಂಡ ತೆರಬೇಕಾಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ33 ಆದರೆ ಫರೋಹ ನೆಕೋವನು ಇವನನ್ನು ಯೆರೂಸಲೇಮಿನಲ್ಲಿ ಆಳದ ಹಾಗೆ ಹಮಾತ್ ದೇಶದ ರಿಬ್ಲಾ ಎಂಬ ಊರಲ್ಲಿ ಬಂಧಿಸಿಟ್ಟನು. ಯೆಹೂದ್ಯರು ಅವನಿಗೆ ಮೂರು ಸಾವಿರದ ನಾಲ್ಕುನೂರು ಕಿಲೋಗ್ರಾಂ ಬೆಳ್ಳಿಯನ್ನೂ, ಮೂವತ್ತ ನಾಲ್ಕು ಕಿಲೋಗ್ರಾಂ ಬಂಗಾರವನ್ನೂ ದಂಡ ತೆರಬೇಕಾಯಿತು. ಅಧ್ಯಾಯವನ್ನು ನೋಡಿ |
ರಾಜನಾದ ಸೊಲೊಮೋನನು ಮತ್ತು ಇಸ್ರೇಲಿನ ಜನರೆಲ್ಲರು ವಿಶ್ರಾಂತಿ ಹಬ್ಬವನ್ನು ಆಚರಿಸಿದರು. ಉತ್ತರದಲ್ಲಿದ್ದ ಹಮಾತ್ ದಾರಿಯಿಂದ ದಕ್ಷಿಣದ ಈಜಿಪ್ಟಿನ ಗಡಿಯವರೆಗಿನ ಎಲ್ಲ ಇಸ್ರೇಲರು ಅಲ್ಲಿದ್ದರು. ಅವರೆಲ್ಲರೂ ಒಟ್ಟಾಗಿ ಏಳು ದಿನಗಳ ಕಾಲ ಯೆಹೋವನ ಮುಂದೆ ತಿಂದು, ಕುಡಿದು ಆನಂದಿಸಿದರು. ಆಗ ಅವರು ಮತ್ತೆ ಏಳು ದಿನಗಳು ಅಲ್ಲಿಯೇ ಉಳಿದರು. ಅವರು ಒಟ್ಟಿಗೆ ಹದಿನಾಲ್ಕು ದಿನಗಳು ಹಬ್ಬವನ್ನು ಆಚರಿಸಿದರು!
ಆಗ ಯೆಹೂದದ ರಾಜನಾದ ಹಿಜ್ಕೀಯನು ಲಾಕೀಷಿನಲ್ಲಿದ್ದ ಅಶ್ಶೂರದ ರಾಜನಿಗೆ ಒಂದು ಸಂದೇಶವನ್ನು ಕಳುಹಿಸಿದನು. ಹಿಜ್ಕೀಯನು, “ನಾನು ತಪ್ಪು ಮಾಡಿದ್ದೇನೆ. ನನ್ನನ್ನು ಒಬ್ಬಂಟಿಗನನ್ನಾಗಿ ಬಿಡು. ನಂತರ ನೀನು ಅಪೇಕ್ಷಿಸಿದ್ದನ್ನೆಲ್ಲಾ ಕೊಡುತ್ತೇನೆ” ಎಂದು ಹೇಳಿದನು. ಆಗ ಅಶ್ಶೂರದ ರಾಜನು ಯೆಹೂದದ ರಾಜನಾದ ಹಿಜ್ಕೀಯನಿಗೆ ಸುಮಾರು ಹನ್ನೊಂದು ಟನ್ ಬೆಳ್ಳಿಯನ್ನು ಮತ್ತು ಒಂದು ಟನ್ ಚಿನ್ನವನ್ನು ಕೊಡುವಂತೆ ಹೇಳಿದನು.
ಈ ಸಂದೇಶವು ಈಜಿಪ್ಟ್ ಜನಾಂಗದ ಬಗ್ಗೆ ಇದೆ. ಈ ಸಂದೇಶವು ಫರೋಹನೆಕೋವಿನ ಸೈನ್ಯದ ಬಗ್ಗೆ ಇದೆ. ಫರೋಹನೆಕೋವು ಈಜಿಪ್ಟಿನ ರಾಜನಾಗಿದ್ದನು. ಅವನ ಸೈನ್ಯವನ್ನು ಕರ್ಕೆಮೀಷ್ ಪಟ್ಟಣದಲ್ಲಿ ಸೋಲಿಸಲಾಯಿತು. ಕರ್ಕೆಮೀಷ್ ಪಟ್ಟಣವು ಯೂಫ್ರೇಟೀಸ್ ನದಿಯ ದಂಡೆಯ ಮೇಲಿದೆ. ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನು ಯೆಹೂದದಲ್ಲಿ ಯೆಹೋಯಾಕೀಮನ ಆಳ್ವಿಕೆಯ ನಾಲ್ಕನೆಯ ವರ್ಷದಲ್ಲಿ ಫರೋಹನೆಕೋವಿನ ಸೈನ್ಯವನ್ನು ಕರ್ಕೆಮೀಷಿನಲ್ಲಿ ಸೋಲಿಸಿದನು. ಯೆಹೋಯಾಕೀಮನು ರಾಜನಾದ ಯೋಷೀಯನ ಮಗನಾಗಿದ್ದನು. ಈಜಿಪ್ಟಿಗೆ ಯೆಹೋವನ ಸಂದೇಶ ಹೀಗಿತ್ತು: