2 ಅರಸುಗಳು 23:34 - ಪರಿಶುದ್ದ ಬೈಬಲ್34 ಫರೋಹ ನೆಕೋವನು ಯೋಷೀಯನ ಮಗನಾದ ಎಲ್ಯಾಕೀಮನನ್ನು ಹೊಸರಾಜನನ್ನಾಗಿ ಮಾಡಿ ಎಲ್ಯಾಕೀಮನ ಹೆಸರನ್ನು ಯೆಹೋಯಾಕೀಮನೆಂದು ಬದಲಾಯಿಸಿದನು. ಯೆಹೋವಾಹಾಜನನ್ನು ಫರೋಹ ನೆಕೋವನು ಈಜಿಪ್ಟಿಗೆ ಕರೆದೊಯ್ದುನು. ಯೆಹೋವಾಹಾಜನು ಈಜಿಪ್ಟಿನಲ್ಲಿ ಸತ್ತುಹೋದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201934 ಫರೋಹ ನೆಕೋವನು ಯೋಷೀಯನಿಗೆ ಬದಲಾಗಿ ಅವನ ಮಗನಾದ ಎಲ್ಯಾಕೀಮನನ್ನು ಅರಸನನ್ನಾಗಿ ನೇಮಿಸಿ ಅವನಿಗೆ ಯೆಹೋಯಾಕೀಮನೆಂಬ ಹೊಸ ಹೆಸರನ್ನಿಟ್ಟು ಯೆಹೋವಾಹಾಜನನ್ನು ಐಗುಪ್ತ ದೇಶಕ್ಕೆ ಕರೆದುಕೊಂಡು ಹೋದನು. ಯೆಹೋವಾಹಾಜನು ಅಲ್ಲಿ ಮರಣ ಹೊಂದಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)34 ಫರೋಹ ನೆಕೋವನು, ಯೋಷೀಯನಿಗೆ ಬದಲಾಗಿ ಅವನ ಮಗ ಎಲ್ಯಾಕೀಮನನ್ನು ಅರಸನನ್ನಾಗಿ ನೇಮಿಸಿ ಅವನಿಗೆ ಯೆಹೋಯಾಕೀಮನೆಂಬ ಹೊಸ ಹೆಸರನ್ನಿಟ್ಟು, ಯೆಹೋವಾಹಾಜನನ್ನು ಈಜಿಪ್ಟ್ ದೇಶಕ್ಕೆ ತೆಗೆದುಕೊಂಡು ಹೋದನು; ಯೆಹೋವಾಹಾಜನು ಅಲ್ಲೆ ಮೃತನಾದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)34 ಫರೋಹ ನೆಕೋವನು ಯೋಷೀಯನಿಗೆ ಬದಲಾಗಿ ಅವನ ಮಗನಾದ ಎಲ್ಯಾಕೀಮನನ್ನು ಅರಸನನ್ನಾಗಿ ನೇವಿುಸಿ ಅವನಿಗೆ ಯೆಹೋಯಾಕೀಮನೆಂಬ ಹೊಸ ಹೆಸರನ್ನಿಟ್ಟು ಯೆಹೋವಾಹಾಜನನ್ನು ಐಗುಪ್ತ ದೇಶಕ್ಕೆ ತೆಗೆದುಕೊಂಡು ಹೋದನು. ಯೆಹೋವಾಹಾಜನು ಅಲ್ಲಿ ಮೃತಿಹೊಂದಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ34 ಫರೋಹ ನೆಕೋವನು ಯೋಷೀಯನಿಗೆ ಬದಲಾಗಿ ಅವನ ಮಗನಾದ ಎಲ್ಯಾಕೀಮನನ್ನು ಅರಸನನ್ನಾಗಿ ಮಾಡಿ, ಅವನಿಗೆ ಯೆಹೋಯಾಕೀಮನೆಂಬ ಹೆಸರನ್ನಿಟ್ಟನು. ಯೆಹೋವಾಹಾಜನನ್ನು ತೆಗೆದುಕೊಂಡು ಈಜಿಪ್ಟಿಗೆ ಒಯ್ದನು. ಯೆಹೋವಾಹಾಜನು ಅಲ್ಲೇ ಮರಣಹೊಂದಿದನು. ಅಧ್ಯಾಯವನ್ನು ನೋಡಿ |
ಯೆಹೋಯಾಕೀಮನು ಯೆಹೂದದಲ್ಲಿ ಆಳುವಾಗಲೂ ಯೆಹೋವನು ಯೆರೆಮೀಯನೊಂದಿಗೆ ಮಾತನಾಡುವದನ್ನು ಮುಂದುವರೆಸಿದನು. ಯೆಹೋಯಾಕೀಮನು ಯೋಷೀಯನ ಮಗನು. ಯೆಹೂದದಲ್ಲಿ ಚಿದ್ಕೀಯನು ಆಳಿದ ಹನ್ನೊಂದು ವರ್ಷ ಐದು ತಿಂಗಳ ಕಾಲ ಯೆಹೋವನು ಯೆರೆಮೀಯನೊಂದಿಗೆ ಮಾತನಾಡುವದನ್ನು ಮುಂದುವರೆಸಿದನು. ಚಿದ್ಕೀಯನು ಸಹ ಯೋಷೀಯನ ಮಗನಾಗಿದ್ದನು. ಚಿದ್ಕೀಯನ ಆಳ್ವಿಕೆಯ ಹನ್ನೊಂದನೇ ವರ್ಷದ ಐದನೆಯ ತಿಂಗಳಿನಲ್ಲಿ ಜೆರುಸಲೇಮಿನ ನಿವಾಸಿಗಳು ಸೆರೆ ಒಯ್ಯಲ್ಪಟ್ಟರು.