Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 23:6 - ಪರಿಶುದ್ದ ಬೈಬಲ್‌

6 ಯೋಷೀಯನು ಅಶೇರಸ್ತಂಭವನ್ನು ದೇವಾಲಯದಿಂದ ತೆಗೆದುಹಾಕಿದನು. ಅವನು ಅಶೇರಸ್ತಂಭವನ್ನು ನಗರದ ಹೊರವಲಯದ ಕಿದ್ರೋನ್ ಕಣಿವೆಗೆ ತೆಗೆದುಕೊಂಡು ಹೋಗಿ ಅದನ್ನು ಅಲ್ಲಿ ಸುಟ್ಟುಹಾಕಿದನು. ನಂತರ ಅವನು ಅದನ್ನು ಪುಡಿಪುಡಿ ಮಾಡಿಸಿ ಧೂಳಿನಲ್ಲಿ ಬೆರಸಿ ಸಾಮಾನ್ಯ ಜನರ ಸ್ಮಶಾನದಲ್ಲಿ ಆ ಧೂಳನ್ನು ಚೆಲ್ಲಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಯೆಹೋವನ ಆಲಯದಲ್ಲಿದ್ದ ಅಶೇರ್ ವಿಗ್ರಹಸ್ತಂಭವನ್ನು ತರಿಸಿ ಯೆರೂಸಲೇಮಿನ ಹೊರಗಿರುವ ಕಿದ್ರೋನ್ ಹಳ್ಳಕ್ಕೆ ತೆಗೆದುಕೊಂಡು ಹೋಗಿ ಅಲ್ಲಿ ಅದನ್ನು ಸುಟ್ಟು ಪುಡಿಪುಡಿ ಮಾಡಿಸಿ ಆ ಪುಡಿಯನ್ನು ಸಾಮಾನ್ಯ ಜನರ ಸ್ಮಶಾನದಲ್ಲಿ ಹಾಕಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಸರ್ವೇಶ್ವರನ ಆಲಯದಲ್ಲಿದ್ದ ಅಶೇರವಿಗ್ರಹಸ್ತಂಭವನ್ನು ತರಿಸಿ, ಜೆರುಸಲೇಮಿನ ಹೊರಗಿರುವ ಕಿದ್ರೋನ್ ಹಳ್ಳಕ್ಕೆ ತೆಗೆದುಕೊಂಡು ಹೋಗಿ, ಅಲ್ಲಿ ಅದನ್ನು ಸುಡಿಸಿ, ಪುಡುಪುಡಿಮಾಡಿಸಿ, ಆ ಪುಡಿಯನ್ನು ಸಾರ್ವಜನಿಕ ಸ್ಮಶಾನದಲ್ಲಿ ಹಾಕಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಯೆಹೋವನ ಆಲಯದಲ್ಲಿದ್ದ ಅಶೇರವಿಗ್ರಹಸ್ತಂಭವನ್ನು ತರಿಸಿ ಯೆರೂಸಲೇವಿುನ ಹೊರಗಿರುವ ಕಿದ್ರೋನ್‍ಹಳ್ಳಕ್ಕೆ ತೆಗೆದುಕೊಂಡು ಹೋಗಿ ಅಲ್ಲಿ ಅದನ್ನು ಸುಡಿಸಿ ಪುಡಿಪುಡಿ ಮಾಡಿಸಿ ಆ ಪುಡಿಯನ್ನು ಕನಿಷ್ಠಜನರ ಶ್ಮಶಾನದಲ್ಲಿ ಹಾಕಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಅವನು ಅಶೇರ ಸ್ತಂಭವನ್ನು ಯೆಹೋವ ದೇವರ ಆಲಯದೊಳಗಿಂದ ಯೆರೂಸಲೇಮಿನ ಹೊರಗೆ ಕಿದ್ರೋನ್ ಹಳ್ಳಕ್ಕೆ ತರಿಸಿ, ಅದನ್ನು ಕಿದ್ರೋನ್ ಕಣಿವೆಯ ಬಳಿಯಲ್ಲಿ ಸುಟ್ಟು, ಅದನ್ನು ಧೂಳಾಗಿ ಪುಡಿಮಾಡಿ, ಆ ಧೂಳಿನ ಪುಡಿಯನ್ನು ಸಾಮಾನ್ಯ ಜನರ ಸಮಾಧಿಗಳ ಮೇಲೆ ಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 23:6
20 ತಿಳಿವುಗಳ ಹೋಲಿಕೆ  

ಜನರು ಬಾಳ್ ದೇವರ ವಿಗ್ರಹಗಳನ್ನೂ ಯಜ್ಞವೇದಿಕೆಗಳನ್ನೂ ಯೋಷೀಯನ ಮುಂದೆಯೇ ಕೆಡವಿಹಾಕಿದರು. ಆಮೇಲೆ ಯೋಷೀಯನು ಉನ್ನತಸ್ಥಳದಲ್ಲಿದ್ದ ಧೂಪವೇದಿಕೆಯನ್ನು ಕೆಡವಿ ಹಾಕಿ, ವಿಗ್ರಹಗಳನ್ನೆಲ್ಲಾ ಒಡೆದು ಪುಡಿಮಾಡಿ ಬಾಳ್ ದೇವರ ಪೂಜಾರಿಗಳ ಸಮಾಧಿಯ ಮೇಲೆ ಚೆಲ್ಲಿದನು.


ಯೋಷೀಯನು ಬೇತೇಲಿನ ಉನ್ನತಸ್ಥಳವನ್ನು ಮತ್ತು ಯಜ್ಞವೇದಿಕೆಯನ್ನು ಕೆಡವಿಬಿಟ್ಟನು. ನೆಬಾಟನ ಮಗನಾದ ಯಾರೊಬ್ಬಾಮನು ಈ ಯಜ್ಞವೇದಿಕೆಯನ್ನು ನಿರ್ಮಿಸಿದ್ದನು. ಇಸ್ರೇಲರು ಪಾಪಮಾಡುವಂತೆ ಯಾರೊಬ್ಬಾಮನು ಪ್ರೇರೇಪಿಸಿದ್ದನು. ಯೋಷೀಯನು ಯಜ್ಞವೇದಿಕೆಯನ್ನು ಮತ್ತು ಉನ್ನತಸ್ಥಳವನ್ನು ಕೆಡವಿಬಿಟ್ಟನು. ಯೋಷೀಯನು ಯಜ್ಞವೇದಿಕೆಯ ಕಲ್ಲುಗಳನ್ನು ಪುಡಿಪುಡಿಮಾಡಿ ಧೂಳಿನಲ್ಲಿ ಬೆರಸಿದನು. ಅವನು ಅಶೇರಸ್ತಂಭವನ್ನು ಸುಟ್ಟುಹಾಕಿದನು.


ಅವರ ಮಕ್ಕಳು ಸುಳ್ಳುದೇವರುಗಳಿಗೆ ಅರ್ಪಿಸಿದ ಯಜ್ಞವೇದಿಕೆಗಳನ್ನು ಜ್ಞಾಪಿಸಿಕೊಳ್ಳುವರು. ಅವರು ಅಶೇರಳಿಗೆ ಅರ್ಪಿಸಿದ ಮರದ ವಿಗ್ರಹಸ್ತಂಭಗಳನ್ನು ಜ್ಞಾಪಿಸಿಕೊಳ್ಳುವರು. ಅವರು ಸೊಂಪಾಗಿ ಬೆಳೆದ ಮರದ ಕೆಳಗೆ ಮತ್ತು ಬೆಟ್ಟಗಳ ಮೇಲೆ ಆ ವಸ್ತುಗಳನ್ನು ಜ್ಞಾಪಿಸಿಕೊಳ್ಳುವರು.


ಮನಸ್ಸೆಯು ಅಶೇರ ವಿಗ್ರಹಗಳನ್ನು ಕೆತ್ತಿಸಿದನು. ಅವನು ಈ ವಿಗ್ರಹಗಳನ್ನು ಆಲಯದಲ್ಲಿ ಇರಿಸಿದನು. ಯೆಹೋವನು ದಾವೀದನಿಗೆ ಮತ್ತು ದಾವೀದನ ಮಗನಾದ ಸೊಲೊಮೋನನಿಗೆ ಈ ಆಲಯವನ್ನು ಕುರಿತು ಹೀಗೆ ಹೇಳಿದ್ದನು: “ಇಸ್ರೇಲಿನಲ್ಲಿರುವ ಎಲ್ಲಾ ನಗರಗಳಿಂದ ನಾನು ಜೆರುಸಲೇಮನ್ನು ಆರಿಸಿದ್ದೇನೆ. ನಾನು ನನ್ನ ಹೆಸರನ್ನು ಜೆರುಸಲೇಮಿನ ಆಲಯದಲ್ಲಿ ಎಂದೆಂದಿಗೂ ಇರಿಸುತ್ತೇನೆ.


ಬಾಳನ ಆಲಯವನ್ನೂ ಅವರು ಹಾಳುಗೆಡವಿದರು. ಅವರು ಬಾಳನ ಆಲಯವನ್ನು ಶೌಚಗೃಹವನ್ನಾಗಿ ಮಾಡಿದರು. ಇಂದೂ ಸಹ ಅದನ್ನು ಶೌಚಗೃಹವಾಗಿ ಬಳಸುತ್ತಾರೆ.


ಅಹಾಬನು ಅಶೇರ ದೇವತೆಯನ್ನು ಆರಾಧಿಸಲು ಒಂದು ವಿಶೇಷ ಸ್ತಂಭವನ್ನು ನೆಡಿಸಿದನು. ಹೀಗೆ ಎಷ್ಟೋ ಕೆಟ್ಟಕಾರ್ಯಗಳನ್ನು ಮಾಡಿ ತನ್ನ ಮುಂಚೆ ಇದ್ದ ಇಸ್ರೇಲ್ ರಾಜರುಗಳಿಗಿಂತಲೂ ಹೆಚ್ಚಾಗಿ ಇಸ್ರೇಲ್ ದೇವರಾದ ಯೆಹೋವನನ್ನು ರೇಗಿಸಿದನು.


ಈ ಜನರು ಎತ್ತರವಾದ ಸ್ಥಳಗಳಲ್ಲಿ ಕಲ್ಲಿನ ಸ್ಮಾರಕಗಳನ್ನು, ಪವಿತ್ರ ಸ್ತಂಭಗಳನ್ನು ನಿರ್ಮಿಸಿದರು. ಅವರು ಅವುಗಳನ್ನು ಎತ್ತರವಾದ ಪ್ರತಿಯೊಂದು ಬೆಟ್ಟದ ಮೇಲೂ ಪ್ರತಿಯೊಂದು ಹಸಿರುಮರದ ಕೆಳಗಡೆಯೂ ನಿರ್ಮಿಸಿದರು.


ಇಸ್ರೇಲರ ದುಷ್ಕೃತ್ಯಗಳನ್ನು ಯೆಹೋವನು ನೋಡಿದನು. ಇಸ್ರೇಲರು ತಮ್ಮ ದೇವರಾದ ಯೆಹೋವನನ್ನು ಮರೆತು ಬಾಳ್ ಮತ್ತು ಅಶೇರ್ ಎಂಬ ಸುಳ್ಳುದೇವರುಗಳ ಸೇವೆ ಮಾಡುತ್ತಿದ್ದರು.


ನೀವು ಮಾಡಿದ ಬಂಗಾರದ ಬಸವನನ್ನು ತೆಗೆದುಕೊಂಡು ಚೂರುಚೂರು ಮಾಡಿ, ಬೆಂಕಿಯಲ್ಲಿ ಸುಟ್ಟುಬಿಟ್ಟೆನು. ಮತ್ತೆ ಅದನ್ನು ಒಡೆದು ಧೂಳನ್ನಾಗಿ ಮಾಡಿ ಆ ಧೂಳನ್ನು ಬೆಟ್ಟದಿಂದ ಹರಿಯುತ್ತಿದ್ದ ನದಿಯಲ್ಲಿ ಬಿಸಾಡಿಬಿಟ್ಟೆನು.


“ಅವರ ದೇವರುಗಳ ಪ್ರತಿಮೆಗಳನ್ನು ಬೆಂಕಿಯಲ್ಲಿ ಸುಟ್ಟುಬಿಡಬೇಕು. ಅವರ ವಿಗ್ರಹಗಳಲ್ಲಿರುವ ಬೆಳ್ಳಿಬಂಗಾರಗಳನ್ನು ನೀವು ತೆಗೆದುಕೊಳ್ಳಬೇಡಿ. ನೀವು ತೆಗೆದುಕೊಂಡರೆ ಅವು ನಿಮಗೆ ಉರುಲಾಗಿ ನಿಮ್ಮನ್ನೇ ನಾಶಮಾಡುತ್ತವೆ. ಯಾಕೆಂದರೆ ನಿಮ್ಮ ದೇವರಾದ ಯೆಹೋವನು ವಿಗ್ರಹಗಳನ್ನು ದ್ವೇಷಿಸುತ್ತಾನೆ.


ಬಳಿಕ ಮೋಶೆಯು ಆ ಬಸವನ ಮೂರ್ತಿಯನ್ನು ಬೆಂಕಿಯಲ್ಲಿ ಕರಗಿಸಿ ಅದರ ಚಿನ್ನವನ್ನು ಧೂಳಿನಂತೆ ಅರೆದು ನೀರಿಗೆ ಹಾಕಿ ಆ ನೀರನ್ನು ಇಸ್ರೇಲರಿಗೆ ಕುಡಿಸಿದನು.


ಯೇಸು ಪ್ರಾರ್ಥಿಸಿದ ಮೇಲೆ ತನ್ನ ಶಿಷ್ಯರೊಂದಿಗೆ ಹೊರಟನು. ಅವರು ಕಿದ್ರೋನ್ ಕಣಿವೆಯನ್ನು ದಾಟಿಹೋದರು. ಅದರ ಮತ್ತೊಂದು ಕಡೆಯಲ್ಲಿ ಆಲಿವ್ ಮರಗಳ ತೋಟವಿತ್ತು. ಯೇಸು ಮತ್ತು ಆತನ ಶಿಷ್ಯರು ಅಲ್ಲಿಗೆ ಹೋದರು.


ನೀನು ನಗರವನ್ನು ಬಿಟ್ಟು ಕಿದ್ರೋನ್ ಹೊಳೆಯ ಹಿಂದಕ್ಕೆ ಹೋದರೆ, ನಿನ್ನನ್ನು ಕೊಲ್ಲಲಾಗುವುದು. ಅದು ನಿನ್ನ ಸ್ವಂತ ತಪ್ಪಾಗುವುದು” ಎಂದು ಹೇಳಿದನು.


ಪೂರ್ವಕಾಲದಲ್ಲಿ, ಯೆಹೂದದ ರಾಜರುಗಳು ಅಹಾಬನ ಕಟ್ಟಡದ ಮಾಳಿಗೆಯ ಮೇಲೆ ಯಜ್ಞವೇದಿಕೆಗಳನ್ನು ನಿರ್ಮಿಸಿದ್ದರು. ರಾಜನಾದ ಮನಸ್ಸೆಯು ದೇವಾಲಯದ ಎರಡು ಪ್ರಾಕಾರಗಳಲ್ಲಿ ಯಜ್ಞವೇದಿಕೆಗಳನ್ನು ನಿರ್ಮಿಸಿದ್ದನು. ಯೋಷೀಯನು ಆ ಯಜ್ಞವೇದಿಕೆಗಳನ್ನೆಲ್ಲ ನಾಶಗೊಳಿಸಿ, ಅವುಗಳ ಚೂರುಗಳನ್ನು ಕಿದ್ರೋನ್ ಕಣಿವೆಗೆ ಎಸೆದನು.


ಮನಸ್ಸೆಯ ತಂದೆಯಾದ ಹಿಜ್ಕೀಯನು ಕೆಡವಿದ ಉನ್ನತಸ್ಥಳಗಳನ್ನು ಅವನು ಮತ್ತೆ ಕಟ್ಟಿಸಿದನು. ಬಾಳ್ ದೇವರ ವೇದಿಕೆಯನ್ನು ಕಟ್ಟಿಸಿ ಅಶೇರಸ್ತಂಭಗಳನ್ನು ನಿಲ್ಲಿಸಿದನು. ಆಕಾಶದ ನಕ್ಷತ್ರಸಮೂಹಗಳನ್ನು ಪೂಜಿಸಿದನು.


ಯೋಷೀಯನ ಮಗನಾದ ಯೆಹೋಯಾಕೀಮನಿಗೆ ಯೆಹೋವನು ಹೀಗೆ ಹೇಳುವನು, “ಯೆಹೂದದ ಜನರು ಯೆಹೋಯಾಕೀಮನಿಗೋಸ್ಕರ ಗೋಳಾಡುವದಿಲ್ಲ. ಅವರು ಒಬ್ಬರಿಗೊಬ್ಬರು, ‘ನನ್ನ ಸೋದರನೇ, ಯೆಹೋಯಾಕೀಮನಿಗೋಸ್ಕರ ನನಗೆ ತುಂಬ ದುಃಖವಾಗಿದೆ, ನನ್ನ ಸೋದರಿಯೇ, ಯೆಹೋಯಾಕೀಮನಿಗೋಸ್ಕರ ನನಗೆ ತುಂಬ ದುಃಖವಾಗಿದೆ’ ಎಂದು ಹೇಳುವದಿಲ್ಲ. ಯೆಹೂದದ ಜನರು ಯೆಹೋಯಾಕೀಮನಿಗೋಸ್ಕರ ಅಳುವದಿಲ್ಲ. ಅವರು ಅವನ ಬಗ್ಗೆ ‘ಒಡೆಯನೇ, ನನ್ನ ರಾಜನೇ, ನನಗೆ ತುಂಬಾ ದುಃಖವಾಗಿದೆ’ ಎಂದು ಹೇಳುವದಿಲ್ಲ.


ಹೆಣಗಳನ್ನು ಮತ್ತು ಬೂದಿಯನ್ನು ಚೆಲ್ಲುವ ಇಡೀ ಕಣಿವೆ ಪ್ರದೇಶ ಯೆಹೋವನಿಗೆ ಪವಿತ್ರಸ್ಥಳವಾಗುವುದು. ಕಿದ್ರೋನ್ ಹಳ್ಳ, ಪೂರ್ವದಿಕ್ಕಿನ ಕುದುರೆಬಾಗಿಲಿನ ಮೂಲೆ, ಇವುಗಳವರೆಗಿರುವ ಬೆಟ್ಟಪ್ರದೇಶ ಅದರಲ್ಲಿ ಸೇರುವುದು. ಆ ಪ್ರದೇಶವೆಲ್ಲ ಯೆಹೋವನಿಗೆ ಪವಿತ್ರಸ್ಥಳವಾಗುವುದು. ಜೆರುಸಲೇಮ್ ನಗರವು ಇನ್ನುಮೇಲೆ ಎಂದಿಗೂ ಕೆಡವಲ್ಪಡದು; ಹಾಳಾಗದು!”


ಆಸನು ತನ್ನ ಅಜ್ಜಿ ಮಾಕಳನ್ನು ರಾಣಿಯ ಪಟ್ಟದಿಂದ ಕೆಳಗಿಳಿಸಿದನು. ಮಾಕಳು ಅಶೇರ ದೇವತೆಯ ಒಂದು ಭೀಕರ ಮೂರ್ತಿಯನ್ನು ಮಾಡಿಸಿದ್ದಳು. ಅವನು ಅದನ್ನು ಕಿದ್ರೋನ್ ಕಣಿವೆಯಲ್ಲಿ ಸುಟ್ಟುಹಾಕಿದನು.


ಅವರು ಬಾಳನ ಆಲಯದಲ್ಲಿದ್ದ ಸ್ಮಾರಕಸ್ತಂಭಗಳನ್ನು ಹೊರತಂದು, ಆಲಯವನ್ನು ಸುಟ್ಟುಹಾಕಿದರು. ನಂತರ ಅವರು ಬಾಳನ ಸ್ಮಾರಕಸ್ತಂಭಗಳನ್ನು ಚೂರುಚೂರು ಮಾಡಿದರು.


ಆಸನು ತನ್ನ ತಾಯಿಯಾದ ಮಾಕಳನ್ನು ರಾಜಮಾತೆ ಎಂಬ ಪದವಿಯಿಂದ ತಳ್ಳಿಬಿಟ್ಟನು. ಯಾಕೆಂದರೆ ಆಕೆಯು ಅಶೇರ್ ದೇವತೆಯ ಅಸಹ್ಯವಾದ ಕಂಬವನ್ನು ಮಾಡಿಸಿದ್ದಳು. ಆಸನು ಅದನ್ನು ಕಡಿದು ಚೂರುಚೂರಾಗಿ ಮಾಡಿಸಿದನು. ನಂತರ ಅದನ್ನು ಕಿದ್ರೋನ್ ಕಣಿವೆಯಲ್ಲಿ ಸುಟ್ಟುಬಿಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು