Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 24:1 - ಪರಿಶುದ್ದ ಬೈಬಲ್‌

1 ಯೆಹೋಯಾಕೀಮನ ಕಾಲದಲ್ಲಿ ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನು ಯೆಹೂದ ದೇಶಕ್ಕೆ ಬಂದನು. ಯೆಹೋಯಾಕೀಮನು ಮೂರು ವರ್ಷಗಳವರೆಗೆ ನೆಬೂಕದ್ನೆಚ್ಚರನ ಸೇವೆಮಾಡಿದನು. ನಂತರ ಯೆಹೋಯಾಕೀಮನು ನೆಬೂಕದ್ನೆಚ್ಚರನಿಗೆ ವಿರುದ್ಧವಾಗಿ ದಂಗೆ ಎದ್ದು ಅವನ ಆಳ್ವಿಕೆಯಿಂದ ದೂರವಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೆಹೋಯಾಕೀಮನ ಕಾಲದಲ್ಲಿ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಹೊರಟು ಬಂದನು. ಯೆಹೋಯಾಕೀಮನು ಅವನಿಗೆ ಅಧೀನನಾಗಿ ಮೂರು ವರ್ಷಗಳಾದ ನಂತರ ಅವನ ವಿರುದ್ಧವಾಗಿ ತಿರುಗಿ ಬಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಯೆಹೋಯಾಕೀಮನು ಅವನಿಗೆ ಅಧೀನನಾಗಿ ಮೂರು ವರ್ಷಗಳಾದ ನಂತರ ಅವನಿಗೆ ವಿರುದ್ಧ ದಂಗೆಯೆದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಅವನ ಕಾಲದಲ್ಲಿ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಬಂದನು; ಯೆಹೋಯಾಕೀಮನು ಅವನಿಗೆ ಅಧೀನನಾಗಿ ಮೂರು ವರುಷಗಳಾದನಂತರ ಅವನಿಗೆ ವಿರೋಧವಾಗಿ ತಿರುಗಿಬಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಯೆಹೋಯಾಕೀಮನ ಆಳಿಕೆಯಲ್ಲಿ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ದೇಶವನ್ನು ದಾಳಿಮಾಡಿದನು. ಯೆಹೋಯಾಕೀಮನು ಮೂರು ವರ್ಷ ಅವನ ಸೇವಕನಾಗಿದ್ದು, ತರುವಾಯ ಅವನ ಮೇಲೆ ತಿರುಗಿಬಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 24:1
19 ತಿಳಿವುಗಳ ಹೋಲಿಕೆ  

ನೆಬೂಕದ್ನೆಚ್ಚರನು ಬಾಬಿಲೋನಿನ ಅರಸನಾಗಿದ್ದನು. ನೆಬೂಕದ್ನೆಚ್ಚರನು ಜೆರುಸಲೇಮಿಗೆ ಬಂದನು. ನೆಬೂಕದ್ನೆಚ್ಚರನು ತನ್ನ ಸೈನ್ಯ ಸಮೇತ ಜೆರುಸಲೇಮಿಗೆ ಮುತ್ತಿಗೆ ಹಾಕಿದನು. ಯೆಹೂದದ ಅರಸನಾದ ಯೆಹೋಯಾಕೀಮನ ಆಳ್ವಿಕೆಯ ಮೂರನೆಯ ವರ್ಷದಲ್ಲಿ ಈ ಘಟನೆ ನಡೆಯಿತು.


ಯೆಹೂದದ ಎಲ್ಲಾ ಜನರ ಬಗ್ಗೆ ಯೆರೆಮೀಯನಿಗೆ ಈ ಸಂದೇಶವು ಬಂದಿತು. ಈ ಸಂದೇಶವು ಯೆಹೂದದ ಅರಸನಾದ ಯೆಹೋಯಾಕೀಮನ ಆಳ್ವಿಕೆಯ ನಾಲ್ಕನೆಯ ವರ್ಷದಲ್ಲಿ ಬಂದಿತು. ಯೆಹೋಯಾಕೀಮನು ಯೋಷೀಯನ ಮಗ. ಅವನ ಆಳ್ವಿಕೆಯ ನಾಲ್ಕನೇ ವರ್ಷದಲ್ಲಿ ಅಂದರೆ ಬಾಬಿಲೋನಿನಲ್ಲಿ ನೆಬೂಕದ್ನೆಚ್ಚರನ ಆಳ್ವಿಕೆಯ ಮೊದಲನೇ ವರ್ಷದಲ್ಲಿ


ಆದ್ದರಿಂದ ನಾನು ಉತ್ತರದ ಎಲ್ಲಾ ಜನಾಂಗಗಳನ್ನು ಕರೆಸುತ್ತೇನೆ.” ಇದು ಯೆಹೋವನ ಸಂದೇಶ. “ನಾನು ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನನ್ನು ಕೂಡಲೇ ಕರೆಸುವೆನು. ಅವನು ನನ್ನ ಸೇವಕ. ನಾನು ಆ ಜನರನ್ನು ಯೆಹೂದ ದೇಶದ ವಿರುದ್ಧವಾಗಿಯೂ ಯೆಹೂದ್ಯರ ವಿರುದ್ಧವಾಗಿಯೂ ತರುತ್ತೇನೆ. ನಾನು ನಿಮ್ಮ ಸುತ್ತಮುತ್ತಲಿನಲ್ಲಿದ್ದ ಜನಾಂಗಗಳ ವಿರುದ್ಧವಾಗಿಯೂ ಅವರನ್ನು ಕರೆತರುವೆನು. ನಾನು ಆ ದೇಶಗಳನ್ನೆಲ್ಲ ನಾಶಮಾಡುವೆನು. ನಾನು ಆ ಭೂಮಿಗಳನ್ನು ಶಾಶ್ವತವಾಗಿ ಬರಿದಾದ ಮರುಭೂಮಿಗಳನ್ನಾಗಿ ಮಾಡುವೆನು. ಜನರು ಆ ದೇಶಗಳನ್ನು ನೋಡಿ ಅವು ಹಾಳಾಗಿರುವುದನ್ನು ಕಂಡು ಬೆರಗಾಗಿ ಸಿಳ್ಳುಹಾಕುವರು.


ಈ ಸಂದೇಶವು ಈಜಿಪ್ಟ್ ಜನಾಂಗದ ಬಗ್ಗೆ ಇದೆ. ಈ ಸಂದೇಶವು ಫರೋಹನೆಕೋವಿನ ಸೈನ್ಯದ ಬಗ್ಗೆ ಇದೆ. ಫರೋಹನೆಕೋವು ಈಜಿಪ್ಟಿನ ರಾಜನಾಗಿದ್ದನು. ಅವನ ಸೈನ್ಯವನ್ನು ಕರ್ಕೆಮೀಷ್ ಪಟ್ಟಣದಲ್ಲಿ ಸೋಲಿಸಲಾಯಿತು. ಕರ್ಕೆಮೀಷ್ ಪಟ್ಟಣವು ಯೂಫ್ರೇಟೀಸ್ ನದಿಯ ದಂಡೆಯ ಮೇಲಿದೆ. ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನು ಯೆಹೂದದಲ್ಲಿ ಯೆಹೋಯಾಕೀಮನ ಆಳ್ವಿಕೆಯ ನಾಲ್ಕನೆಯ ವರ್ಷದಲ್ಲಿ ಫರೋಹನೆಕೋವಿನ ಸೈನ್ಯವನ್ನು ಕರ್ಕೆಮೀಷಿನಲ್ಲಿ ಸೋಲಿಸಿದನು. ಯೆಹೋಯಾಕೀಮನು ರಾಜನಾದ ಯೋಷೀಯನ ಮಗನಾಗಿದ್ದನು. ಈಜಿಪ್ಟಿಗೆ ಯೆಹೋವನ ಸಂದೇಶ ಹೀಗಿತ್ತು:


ನಂತರ ಅಶ್ಶೂರದ ರಾಜನು ಇಸ್ರೇಲಿನಲ್ಲೆಲ್ಲಾ ಸಂಚರಿಸಿ ಸಮಾರ್ಯಕ್ಕೆ ಬಂದನು. ಅವನು ಸಮಾರ್ಯವನ್ನು ಮೂರು ವರ್ಷ ಮುತ್ತಿಗೆ ಹಾಕಿದನು.


ಯೆಹೋಯಾಕೀಮನು ಯೆಹೂದವನ್ನು ಆಳುತ್ತಿದ್ದ ಕಾಲದಲ್ಲಿ ಯೆರೆಮೀಯನಿಗೆ ಯೆಹೋವನಿಂದ ಒಂದು ಸಂದೇಶ ಬಂದಿತು. ಯೆಹೋಯಾಕೀಮನು ರಾಜನಾದ ಯೋಷೀಯನ ಮಗನಾಗಿದ್ದನು. ಯೆಹೋವನ ಸಂದೇಶ ಹೀಗಿತ್ತು:


ಆದರೆ ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನು ಯೆಹೂದ ದೇಶದ ಮೇಲೆ ಧಾಳಿ ಮಾಡಿದಾಗ ನಾವು ಜೆರುಸಲೇಮ್ ನಗರದಲ್ಲಿ ಪ್ರವೇಶ ಮಾಡಿ ಹೀಗೆ ಮಾತನಾಡಿಕೊಂಡೆವು, ‘ಬನ್ನಿ, ನಾವು ಬಾಬಿಲೋನಿನ ಸೈನ್ಯದಿಂದ ಮತ್ತು ಅರಾಮ್ಯರ ಸೈನ್ಯದಿಂದ ತಪ್ಪಿಸಿಕೊಳ್ಳುವದಕ್ಕಾಗಿ ಜೆರುಸಲೇಮ್ ನಗರವನ್ನು ಪ್ರವೇಶಿಸೋಣ.’ ಹೀಗಾಗಿ ನಾವು ಜೆರುಸಲೇಮ್ ನಗರದಲ್ಲಿ ವಾಸಿಸುತ್ತಿದ್ದೇವೆ” ಎಂದು ಹೇಳಿದರು.


ಯೋಷೀಯನ ಮಗನಾದ ಯೆಹೋಯಾಕೀಮನ ಆಳ್ವಿಕೆಯ ನಾಲ್ಕನೇ ವರ್ಷದಲ್ಲಿ ಯೆರೆಮೀಯನಿಗೆ ಯೆಹೋವನಿಂದ ಒಂದು ಸಂದೇಶ ಬಂದಿತು. ಯೆಹೋವನ ಸಂದೇಶ ಹೀಗಿತ್ತು:


ಯೆಹೋಯಾಕೀಮನು ಯೋಷೀಯನ ಮಗ. ಯೆಹೋಯಾಕೀಮನು ಯೆಹೂದದ ರಾಜನಾದ ನಾಲ್ಕನೇ ವರ್ಷದಲ್ಲಿ ಪ್ರವಾದಿಯಾದ ಯೆರೆಮೀಯನು ನೇರೀಯನ ಮಗನಾದ ಬಾರೂಕನಿಗೆ ಹೀಗೆ ಹೇಳಿದನು. ಬಾರೂಕನು ಅದನ್ನು ಒಂದು ಸುರುಳಿಯ ಮೇಲೆ ಬರೆದನು. ಯೆರೆಮೀಯನು ಬಾರೂಕನಿಗೆ ಹೇಳಿದ್ದು ಹೀಗೆ:


“ಇಸ್ರೇಲು ದೇಶಗಳಲ್ಲೆಲ್ಲಾ ಚದರಿಹೋದ ಕುರಿಹಿಂಡಿನಂತಾಗಿದೆ. ಸಿಂಹಗಳಿಗೆ ಹೆದರಿ ಓಡಿಹೋದ ಕುರಿಗಳಂತಾಗಿದೆ ಇಸ್ರೇಲು. ಅದನ್ನು ತಿಂದು ಮುಗಿಸಿದ ಮೊದಲನೆ ಸಿಂಹವೆಂದರೆ ಅಶ್ಶೂರದ ರಾಜನು. ಅದರ ಎಲುಬುಗಳನ್ನು ಜಗಿದ ಕೊನೆಯ ಸಿಂಹವೆಂದರೆ ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನು.


ಆತನು ಹೀಗೆ ಹೇಳಿದನು: “ನರಪುತ್ರನೇ, ಕೈತಟ್ಟಿ ನನ್ನ ಪರವಾಗಿ ಜನರೊಂದಿಗೆ ಮಾತನಾಡು. “ಖಡ್ಗವು ಎರಡು ಬಾರಿ ಕೆಳಕ್ಕೆ ಹಾಕಲ್ಪಡಲಿ, ಹೌದು, ಮೂರು ಬಾರಿ! ಈ ಖಡ್ಗವು ಜನರನ್ನು ಕೊಲ್ಲುವದಕ್ಕಾಗಿಯೇ ಇದೆ. ಇದು ಮಹಾಹತ್ಯೆ ಮಾಡುವದಕ್ಕಾಗಿ ಇದೆ. ಈ ಖಡ್ಗವು ಅವರನ್ನು ತೂರಿಹೋಗುವುದು.


ನೆಬೂಕದ್ನೆಚ್ಚರನು ಯೆಹೂದದ ಅರಸನಾದ ಯೆಹೋಯಾಕೀಮನನ್ನು ಸೋಲಿಸುವಂತೆ ಯೆಹೋವನು ಮಾಡಿದನು. ಅವನು ಆಲಯದ ಸಾಮಾಗ್ರಿಗಳನ್ನು ಬಾಬಿಲೋನಿಗೆ ತೆಗೆದುಕೊಂಡು ಹೋದನು. ಆ ಸಾಮಾಗ್ರಿಗಳನ್ನು ಅವನು ತನ್ನ ವಿಗ್ರಹಾಲಯದಲ್ಲಿಟ್ಟನು.


ಯೆಹೋವನ ಕೋಪದಿಂದ ಯೆಹೂದಕ್ಕೆ ಮತ್ತು ಜೆರುಸಲೇಮಿಗೆ ಇವೆಲ್ಲವೂ ಸಂಭವಿಸಿದವು. ಹೀಗೆ ಯೆಹೋವನು ಅವರನ್ನು ತನ್ನಿಂದ ದೂರಸರಿಸಿದನು. ಚಿದ್ಕೀಯನು ಬಾಬಿಲೋನ್ ರಾಜನಿಗೆ ವಿರುದ್ಧವಾಗಿ ದಂಗೆ ಎದ್ದನು.


ಯೆಹೂದದ ಜನರು ಯೆಹೋವಾಹಾಜನನ್ನು ತಮ್ಮ ಹೊಸ ಅರಸನನ್ನಾಗಿ ಜೆರುಸಲೇಮಿನಲ್ಲಿ ಆರಿಸಿದರು. ಯೆಹೋವಾಹಾಜನು ಯೋಷೀಯನ ಮಗನು.


ಅರ್ತಷಸ್ತ ರಾಜರೇ, ನಿಮ್ಮ ಸನ್ನಿಧಾನದಲ್ಲಿ ನಾವು ತಿಳಿಸುವ ವಿಷಯವೇನೆಂದರೆ, ನೀವು ಕಳುಹಿಸಿರುವ ಯೆಹೂದ್ಯರು ಇಲ್ಲಿಗೆ ಬಂದಿದ್ದಾರೆ. ಅವರು ತಮ್ಮ ನಗರವಾದ ಜೆರುಸಲೇಮನ್ನು ತಿರುಗಿ ಕಟ್ಟುತ್ತಿದ್ದಾರೆ. ಜೆರುಸಲೇಮ್ ಕೆಟ್ಟ ನಗರವಾಗಿದೆ. ಅದರ ನಿವಾಸಿಗಳು ಯಾವಾಗಲೂ ಬೇರೆ ಅರಸುಗಳಿಗೆ ಎದುರು ಬೀಳುವವರಾಗಿದ್ದಾರೆ. ಈಗ ಆ ಯೆಹೂದ್ಯರು ಅಸ್ತಿವಾರವನ್ನು ಹಾಕಿ ಗೋಡೆಯನ್ನು ಕಟ್ಟುತ್ತಿದ್ದಾರೆ.


ನೀನು ನಿನ್ನ ಶಕ್ತಿಯಲ್ಲಿಯೂ ಯುದ್ಧದ ತಂತ್ರೋಪಾಯಗಳ ಮೇಲೆಯೂ ಭರವಸವಿಟ್ಟಿದ್ದರೆ ಅವು ಕೇವಲ ನಿಷ್ಪ್ರಯೋಜಕವಾಗಿವೆ; ಕೇವಲ ಬಡಾಯಿ ಕೊಚ್ಚಿಕೊಳ್ಳುತ್ತಿರುವೆ? ನೀನು ನನ್ನ ವಿರುದ್ಧ ದಂಗೆ ಏಳಬೇಕಾದರೆ ಯಾರ ಮೇಲೆ ಭರವಸವಿಟ್ಟಿರುವೆ?


ಸುತ್ತಮುತ್ತಲಿನ ಜನಾಂಗಗಳವರು ಕೂಡಿಬಂದು ಅದರ ವಿರುದ್ಧವಾಗಿ ನಿಂತು, ಬಲೆಹರಡಿ ಅದನ್ನು ಬಂಧಿಸಿದರು.


ನಾನು ಬಾಬಿಲೋನಿನವರನ್ನು ಬಲಾಢ್ಯ ಜನಾಂಗವಾಗಿ ಮಾಡುವೆನು. ಅವರು ಬಲಶಾಲಿಗಳೂ ನಿರ್ದಯಿಗಳೂ ಆಗಿದ್ದಾರೆ. ಅವರು ಲೋಕದಲ್ಲೆಲ್ಲಾ ಸಂಚರಿಸುವರು. ತಮ್ಮದಲ್ಲದ ಮನೆಗಳನ್ನು ಮತ್ತು ನಗರಗಳನ್ನು ತಮ್ಮ ವಶಮಾಡಿಕೊಳ್ಳುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು