Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 24:12 - ಪರಿಶುದ್ದ ಬೈಬಲ್‌

12 ಯೆಹೂದದ ರಾಜನಾದ ಯೆಹೋಯಾಖೀನನು ಬಾಬಿಲೋನ್ ರಾಜನನ್ನು ಭೇಟಿಮಾಡಲು ಹೋದನು. ಯೆಹೋಯಾಖೀನನ ತಾಯಿ, ಅವನ ಅಧಿಕಾರಿಗಳು, ನಾಯಕರು ಮತ್ತು ಸಿಬ್ಬಂದಿಯೆಲ್ಲವೂ ಅವನೊಂದಿಗೆ ಹೋದರು. ಆಗ ಬಾಬಿಲೋನ್ ರಾಜ ಯೆಹೋಯಾಖೀನನನ್ನು ಸೆರೆಹಿಡಿದನು. ಇದು ಸಂಭವಿಸಿದ್ದು ನೆಬೂಕದ್ನೆಚ್ಚರನ ಆಳ್ವಿಕೆಯ ಎಂಟನೆಯ ವರ್ಷದಲ್ಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಆಗ ಯೆಹೂದದ ಅರಸನಾದ ಯೆಹೋಯಾಖೀನನು ತನ್ನ ತಾಯಿಯ ಪರಿವಾರದವರು, ಸೇನಾಪತಿಗಳು, ಕಂಚುಕಿಗಳು ಇವರೊಡನೆ ಬಾಬೆಲಿನ ಅರಸನ ಬಳಿಗೆ ಹೋದನು. ಬಾಬೆಲಿನ ಅರಸನು ಇವನನ್ನು ತನ್ನ ಆಳ್ವಿಕೆಯ ಎಂಟನೆಯ ವರ್ಷದಲ್ಲಿ ಸೆರೆಹಿಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಆಗ ಜುದೇಯದ ಅರಸ ಯೆಹೋಯಾಖೀನನು, ತನ್ನ ತಾಯಿ, ಪರಿವಾರದವರು, ಸೇನಾಪತಿಗಳು, ಕಂಚುಕಿಗಳು ಇವರೊಡನೆ ಅವನ ಬಳಿಗೆ ಹೋದನು. ಅವನು ಇವನನ್ನು ತನ್ನ ಆಳ್ವಿಕೆಯ ಎಂಟನೆಯ ವರ್ಷದಲ್ಲಿ ಸೆರೆಹಿಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಆಗ ಯೆಹೂದದ ಅರಸನಾದ ಯೆಹೋಯಾಖೀನನು ತನ್ನ ತಾಯಿ ಪರಿವಾರದವರು ಸೇನಾಪತಿಗಳು ಕಂಚುಕಿಗಳು ಇವರೊಡನೆ ಅವನ ಬಳಿಗೆ ಹೋದನು; ಅವನು ಇವನನ್ನು ತನ್ನ ಆಳಿಕೆಯ ಎಂಟನೆಯ ವರುಷದಲ್ಲಿ ಸೆರೆಹಿಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಆಗ ಯೆಹೂದದ ಅರಸನಾದ ಯೆಹೋಯಾಖೀನನೂ, ಅವನ ತಾಯಿಯೂ, ಅವನ ಸೇವಕರೂ, ಅವನ ಪ್ರಧಾನರೂ, ಅವನ ಕಂಚುಕಿಯರೂ ಅಧಿಕಾರಿಗಳ ಸಹಿತವಾಗಿ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನಿಗೆ ಶರಣಾದರು. ಬಾಬಿಲೋನಿನ ಅರಸನು ತನ್ನ ಆಳಿಕೆಯ ಎಂಟನೆಯ ವರ್ಷದಲ್ಲಿ ಯೆಹೋಯಾಕೀನನನ್ನು ಸೆರೆಹಿಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 24:12
26 ತಿಳಿವುಗಳ ಹೋಲಿಕೆ  

ನೆಬೂಕದ್ನೆಚ್ಚರನು ಸೆರೆಹಿಡಿದುಕೊಂಡವರ ವಿವರ ಹೀಗಿದೆ: ರಾಜನಾದ ನೆಬೂಕದ್ನೆಚ್ಚರನ ಆಳ್ವಿಕೆಯ ಏಳನೇ ವರ್ಷದಲ್ಲಿ ಯೆಹೂದದಿಂದ ಒಯ್ಯಲ್ಪಟ್ಟ ಜನರು 3,023.


ಯೆಹೋವನು ನನಗೆ ಈ ವಸ್ತುಗಳನ್ನು ತೋರಿಸಿದನು: ಯೆಹೋವನು ಪವಿತ್ರಾಲಯದ ಎದುರುಗಡೆಯಲ್ಲಿ ಅಂಜೂರದ ಎರಡು ಬುಟ್ಟಿಗಳನ್ನು ಜೋಡಿಸಿಟ್ಟಿದ್ದು ನನಗೆ ಕಂಡುಬಂತು. (ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನು ಯೆಕೊನ್ಯನನ್ನು ಸೆರೆಹಿಡಿದ ಮೇಲೆ ನಾನು ಈ ದರ್ಶನವನ್ನು ಕಂಡೆ. ಯೆಕೊನ್ಯನು ರಾಜನಾದ ಯೆಹೋಯಾಕೀಮನ ಮಗ. ಯೆಕೊನ್ಯನನ್ನು ಮತ್ತು ಅವನ ಪ್ರಮುಖ ಅಧಿಕಾರಿಗಳನ್ನು ಜೆರುಸಲೇಮಿನಿಂದ ಬಾಬಿಲೋನಿಗೆ ತೆಗೆದುಕೊಂಡು ಹೋಗಲಾಯಿತು. ನೆಬೂಕದ್ನೆಚ್ಚರನು ಯೆಹೂದದ ಎಲ್ಲಾ ಬಡಗಿಗಳನ್ನು ಮತ್ತು ಕಮ್ಮಾರರನ್ನು ತೆಗೆದುಕೊಂಡು ಹೋಗಿದ್ದನು.)


ವಸಂತ ಕಾಲದಲ್ಲಿ ನೆಬೂಕದ್ನೆಚ್ಚರನು ತನ್ನ ಸೇವಕರನ್ನು ಕಳುಹಿಸಿ ಯೆಹೋಯಾಕೀನನನ್ನು ಕರೆಯಿಸಿದನು. ಆ ಸೇವಕರು ದೇವಾಲಯದ ಕೆಲವು ವಸ್ತುಗಳನ್ನೂ ಅವನ ಜೊತೆಯಲ್ಲಿ ಬಾಬಿಲೋನಿಗೆ ತೆಗೆದುಕೊಂಡು ಹೋದರು. ನೆಬೂಕದ್ನೆಚ್ಚರನು ಯೆಹೂದ ಮತ್ತು ಜೆರುಸಲೇಮಿಗೆ ಚಿದ್ಕೀಯನನ್ನು ಹೊಸ ಅರಸನನ್ನಾಗಿ ಮಾಡಿದನು. ಚಿದ್ಕೀಯನು ಯೆಹೋಯಾಕೀನನ ಸಂಬಂಧಿಕನಾಗಿದ್ದನು.


ಬಾಬಿಲೋನ್ ರಾಜನಾದ ಎವೀಲ್ಮೆರೋದಕನು, ಯೆಹೂದದ ರಾಜನಾದ ಯೆಹೋಯಾಖೀನನನ್ನು ಸೆರೆಯಿಂದ ಬಿಡುಗಡೆ ಮಾಡಿದನು. ಯೆಹೋಯಾಖೀನನನ್ನು ಸೆರೆಹಿಡಿದ ಮೂವತ್ತೇಳನೆಯ ವರ್ಷದ ನಂತರ ಇದು ಸಂಭವಿಸಿತು. ಎವೀಲ್ಮೆರೋದಕನ ಆಳ್ವಿಕೆಯ ಹನ್ನೆರಡನೆ ತಿಂಗಳಿನ ಇಪ್ಪತ್ತೇಳನೆಯ ದಿನದಂದು ಇದು ಸಂಭವಿಸಿತು.


“ದಂಗೆಕೋರರಿಗೆ ಇದನ್ನು ಹೇಳು: ಈ ಸಂಗತಿಗಳ ಅರ್ಥವು ನಿಮಗೆ ಗೊತ್ತಿಲ್ಲವೇ? ಅವರಿಗೆ ಹೇಳು: ಮೊದಲಿನ ಗರುಡ ಪಕ್ಷಿ ಬಾಬಿಲೋನ್ ರಾಜನಾದ ನೆಬೂಕದ್ನೆಚ್ಚರನು. ಅವನು ಜೆರುಸಲೇಮಿಗೆ ಬಂದು ಅದರ ರಾಜನನ್ನೂ ಅದರ ಹಿರಿಯರನ್ನೂ ಬಂಧಿಸಿ, ಅವರನ್ನು ತನ್ನ ರಾಜ್ಯವಾದ ಬಾಬಿಲೋನಿಗೆ ಕೊಂಡೊಯ್ದನು.


ಯೆಹೂದದ ಎಲ್ಲಾ ಜನರ ಬಗ್ಗೆ ಯೆರೆಮೀಯನಿಗೆ ಈ ಸಂದೇಶವು ಬಂದಿತು. ಈ ಸಂದೇಶವು ಯೆಹೂದದ ಅರಸನಾದ ಯೆಹೋಯಾಕೀಮನ ಆಳ್ವಿಕೆಯ ನಾಲ್ಕನೆಯ ವರ್ಷದಲ್ಲಿ ಬಂದಿತು. ಯೆಹೋಯಾಕೀಮನು ಯೋಷೀಯನ ಮಗ. ಅವನ ಆಳ್ವಿಕೆಯ ನಾಲ್ಕನೇ ವರ್ಷದಲ್ಲಿ ಅಂದರೆ ಬಾಬಿಲೋನಿನಲ್ಲಿ ನೆಬೂಕದ್ನೆಚ್ಚರನ ಆಳ್ವಿಕೆಯ ಮೊದಲನೇ ವರ್ಷದಲ್ಲಿ


ಯೆಹೂದದ ರಾಜನಾಗಿದ್ದ ಯೆಹೋಯಾಖೀನನು ಮೂವತ್ತೇಳು ವರ್ಷ ಬಾಬಿಲೋನಿನ ಸೆರೆಮನೆಯಲ್ಲಿದ್ದನು. ಆತನ ಕಾರಾಗೃಹವಾಸದ ಮೂವತ್ತೇಳನೇ ವರ್ಷದಲ್ಲಿ ಬಾಬಿಲೋನಿನ ರಾಜನಾದ ಎವೀಲ್ಮೆರೋದಕನು ಯೆಹೋಯಾಖೀನನ ಮೇಲೆ ದಯೆತೋರಿದನು. ಆ ವರ್ಷ ಅವನು ಯೆಹೋಯಾಖೀನನನ್ನು ಸೆರೆಮನೆಯಿಂದ ಬಿಡುಗಡೆ ಮಾಡಿದನು. ಇದೇ ವರ್ಷ ಎವೀಲ್ಮೆರೋದಕನು ಯೆಹೋಯಾಖೀನನನ್ನು ಆ ವರ್ಷದ ಹನ್ನೆರಡನೆ ತಿಂಗಳಿನ ಇಪ್ಪತ್ತೈದನೆ ದಿನ ಬಿಡುಗಡೆ ಮಾಡಿದನು.


“ಯೆಹೋವನು ನಿಮ್ಮನ್ನೂ ನಿಮ್ಮ ಅರಸನನ್ನೂ ನೀವು ಅರಿಯದ ದೇಶಕ್ಕೆ ಅಟ್ಟಿಬಿಡುವನು. ನೀವಾಗಲಿ ನಿಮ್ಮ ಪೂರ್ವಿಕರಾಗಲಿ ಆ ದೇಶವನ್ನು ಎಂದೂ ನೋಡಲಿಲ್ಲ. ಅಲ್ಲಿ ಮರ, ಕಲ್ಲುಗಳಿಂದ ಮಾಡಿದ ಸುಳ್ಳುದೇವರನ್ನು ಆರಾಧಿಸುವಿರಿ.


ಬಾಬಿಲೋನಿನವರು ನಿನ್ನ ಮಕ್ಕಳನ್ನೂ ತೆಗೆದುಕೊಂಡು ಹೋಗುವರು. ನಿನ್ನ ಮಕ್ಕಳು ಬಾಬಿಲೋನಿನ ರಾಜನ ಅರಮನೆಯಲ್ಲಿ ಕಂಚುಕಿಗಳಾಗುತ್ತಾರೆ” ಎಂದು ಹೇಳಿದನು.


ಆಗ ಬಾಬಿಲೋನ್ ರಾಜನಾದ ನೆಬೂಕದ್ನೆಚ್ಚರನು ಆ ನಗರಕ್ಕೆ ಬಂದನು.


ಈ ಸಂಗತಿಗಳನ್ನು ರಾಜನಿಗೂ ರಾಣಿಗೂ ಹೇಳಿರಿ: “ನಿಮ್ಮ ಸಿಂಹಾಸನಗಳಿಂದ ಕೆಳಗಿಳಿದು ಬನ್ನಿ. ನಿಮ್ಮ ಸುಂದರವಾದ ಕಿರೀಟಗಳು ನಿಮ್ಮ ತಲೆಯಿಂದ ಉರುಳಿ ಕೆಳಗೆ ಬಿದ್ದಿವೆ” ಎಂದು ಹೇಳಿರಿ.


ನೆಬೂಕದ್ನೆಚ್ಚರನು ಯೆಹೂದದ ರಾಜನಾದ ಯೆಹೋಯಾಕೀನನನ್ನು ಸೆರೆಯಾಳಾಗಿ ತೆಗೆದುಕೊಂಡು ಹೋಗುವಾಗ ಆ ವಸ್ತುಗಳನ್ನು ತೆಗೆದುಕೊಂಡು ಹೋಗಲಿಲ್ಲ. ಯೆಹೋಯಾಕೀನನು ಯೆಹೋಯಾಕೀಮನ ಮಗನಾಗಿದ್ದನು. ನೆಬೂಕದ್ನೆಚ್ಚರನು ಯೆಹೂದ ಮತ್ತು ಜೆರುಸಲೇಮಿನಿಂದ ಬೇರೆ ಪ್ರಮುಖ ಜನರನ್ನು ಸಹ ತೆಗೆದುಕೊಂಡು ಹೋದನು.


ಇಗೋ ಯೆಹೂದದ ರಾಜನಾದ ಯೆಹೋಯಾಕೀಮನ ಬಗ್ಗೆ ಯೆಹೋವನು ಹೀಗೆ ಹೇಳುತ್ತಾನೆ: ಯೆಹೋಯಾಕೀಮನ ಸಂತಾನದವರು ದಾವೀದನ ಸಿಂಹಾಸನದ ಮೇಲೆ ಕುಳಿತುಕೊಳ್ಳಲಾಗದು. ಯೆಹೋಯಾಕೀಮನು ಸತ್ತರೆ ರಾಜ ಮರ್ಯಾದೆಯಿಂದ ಅವನ ಶವಸಂಸ್ಕಾರ ಮಾಡಲಾಗುವದಿಲ್ಲ. ಅವನ ಶವವನ್ನು ನೆಲದ ಮೇಲೆ ಎಸೆಯಲಾಗುವುದು. ಅವನ ಶವ ಹಗಲಿನ ತಾಪದಲ್ಲಿ ಮತ್ತು ರಾತ್ರಿಯ ಚಳಿಯಲ್ಲಿ ಹೊರಗೆ ಬಿದ್ದಿರುವದು.


ನೆಬೂಕದ್ನೆಚ್ಚರನು ಬಾಬಿಲೋನಿನ ರಾಜನಾಗಿದ್ದನು. ನೆಬೂಕದ್ನೆಚ್ಚರನು ಯೆಹೋಯಾಕೀಮನ ಮಗನಾದ ಕೊನ್ಯನ ಸ್ಥಾನದಲ್ಲಿ ಚಿದ್ಕೀಯನನ್ನು ಯೆಹೂದದ ರಾಜನನ್ನಾಗಿ ನೇಮಿಸಿದ್ದನು. ಚಿದ್ಕೀಯನು ರಾಜನಾದ ಯೋಷೀಯನ ಮಗನಾಗಿದ್ದನು.


ನೆಬೂಕದ್ನೆಚ್ಚರನ ಆಳ್ವಿಕೆಯ ಹತ್ತೊಂಭತ್ತನೆ ವರ್ಷದ ಐದನೆ ತಿಂಗಳಿನ ಹತ್ತನೆ ದಿನ ಬಾಬಿಲೋನಿನ ವಿಶೇಷ ರಕ್ಷಕದಳದ ಅಧಿಪತಿಯಾದ ನೆಬೂಜರದಾನನು ಜೆರುಸಲೇಮಿಗೆ ಬಂದನು. ನೆಬೂಜರದಾನನು ಬಾಬಿಲೋನಿನ ಒಬ್ಬ ಪ್ರಮುಖ ವ್ಯಕ್ತಿಯಾಗಿದ್ದನು.


ದೇವರು ನನಗೆ, “ಇಸ್ರೇಲರ ಅಧಿಪತಿಗಳ ವಿಷಯವಾದ ಈ ಶೋಕಗೀತೆಯನ್ನು ನೀನು ಹಾಡಬೇಕು” ಎಂದು ಹೇಳಿದನು:


“‘ಈಗ ಆ ದ್ರಾಕ್ಷಾಬಳ್ಳಿಯನ್ನು ಮರುಭೂಮಿಯಲ್ಲಿ ನೆಡಲ್ಪಟ್ಟಿರುತ್ತದೆ. ಅದು ನೀರಿಲ್ಲದ ಬಂಜರು ಭೂಮಿ.


ಬಾಬಿಲೋನ್ ರಾಜನಾಗಿದ್ದ ನೆಬೂಕದ್ನೆಚ್ಚರನು ತನ್ನ ಆಳ್ವಿಕೆಯ ಹತ್ತೊಂಭತ್ತನೆಯ ವರ್ಷದ ಐದನೆಯ ತಿಂಗಳ ಏಳನೆಯ ದಿನದಂದು ಜೆರುಸಲೇಮಿಗೆ ಬಂದನು. ನೆಬೂಜರದಾನ ಎಂಬವನು ನೆಬೂಕದ್ನೆಚ್ಚರನ ರಕ್ಷಕ ದಳದ ಅಧಿಪತಿಯಾಗಿದ್ದನು.


ಆ ಸಮಯದಲ್ಲಿ ಬೆನ್ಯಾಮೀನ್ ಕುಲಕ್ಕೆ ಸೇರಿದ ಮೊರ್ದೆಕೈ ಎಂಬ ಹೆಸರಿನ ಒಬ್ಬ ಯೊಹೂದ್ಯನಿದ್ದನು. ಇವನು ಯಾಯೀರನ ಮಗನೂ ಕೀಷನ ಮೊಮ್ಮಗನೂ ಆಗಿದ್ದು ರಾಜಧಾನಿಯಾದ ಶೂಷನ್‌ನಲ್ಲಿಯೇ ವಾಸಮಾಡುತ್ತಿದ್ದನು.


ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ಜೆರುಸಲೇಮಿನಿಂದ ಮೊರ್ದೆಕೈಯನ್ನು ಸೆರೆಹಿಡಿದು ತಂದಿದ್ದನು. ಯೆಹೂದದ ಅರಸನಾದ ಯೆಹೋಯಾಕೀನನೊಂದಿಗೆ ಸೆರೆಒಯ್ಯಲ್ಪಟ್ಟ ಗುಂಪಿನೊಂದಿಗೆ ಇವನೂ ಇದ್ದನು.


ಆ ದೇಶದಲ್ಲಿ ವಾಸಿಸುವ ಜನರು ದೇವರಿಗೆ ವಿರುದ್ಧವಾಗಿ ನಡೆದರು. ಆದ್ದರಿಂದ ದೇವರು ಈ ದೇಶವನ್ನು ನಾಶಮಾಡಲು ತೀರ್ಮಾನಿಸಿದನು. ಜನರು ಶಿಕ್ಷಿಸಲ್ಪಡುವರು. ಕೆಲವೇ ಮಂದಿ ಮಾತ್ರ ಉಳಿಯುವರು.


ಆ ಹದ್ದು ದೇವದಾರು ಮರದ (ಯೆಹೂದದ ರಾಜನಾದ ಯೆಹೋಯಾಖೀನ್) ಮೇಲ್ಭಾಗವನ್ನು ಮುರಿದುಬಿಟ್ಟಿತು. ಅದನ್ನು ವ್ಯಾಪಾರಿಗಳ ದೇಶಕ್ಕೆ ತಂದುಹಾಕಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು