Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 24:14 - ಪರಿಶುದ್ದ ಬೈಬಲ್‌

14 ನೆಬೂಕದ್ನೆಚ್ಚರನು ಜೆರುಸಲೇಮಿನ ಜನರನ್ನೆಲ್ಲಾ ಸೆರೆಹಿಡಿದನು. ಅವನು ಎಲ್ಲಾ ನಾಯಕರನ್ನು ಮತ್ತು ಹಣವಂತರನ್ನು ಸೆರೆಹಿಡಿದನು. ಅವನು ಹತ್ತು ಸಾವಿರ ಜನರನ್ನು ಸೆರೆಯಾಳುಗಳನ್ನಾಗಿ ಒಯ್ದನು. ನೆಬೂಕದ್ನೆಚ್ಚರನು ನುರಿತ ತಜ್ಞರನ್ನು ಮತ್ತು ಕಮ್ಮಾರರನ್ನು ಕರೆದೊಯ್ದನು. ಸಾಮಾನ್ಯ ಜನರನ್ನೂ ಕಡುಬಡವರನ್ನೂ ಬಿಟ್ಟು ಉಳಿದ ಯಾರನ್ನೂ ಬಿಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಯೆರೂಸಲೇಮಿನಲ್ಲಿದ್ದ ಎಲ್ಲಾ ಪ್ರಭುಗಳನ್ನೂ, ಭಟರನ್ನೂ, ಕಮ್ಮಾರರನ್ನೂ, ಪರಾಕ್ರಮಶಾಲಿಗಳನ್ನು ಒಟ್ಟಾಗಿ ಹತ್ತು ಸಾವಿರ ಜನರನ್ನು ಸೆರೆಹಿಡಿದು ತನ್ನ ದೇಶಕ್ಕೆ ಕರೆದುಕೊಂಡು ಹೋದನು. ದೇಶದಲ್ಲಿ ಕೇವಲ ಸಾಮಾನ್ಯ ಜನರಾಗಿದ್ದ ಬಡವರು ಹೊರತಾಗಿ ಯಾರನ್ನೂ ಬಿಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಜೆರುಸಲೇಮಿನಲ್ಲಿದ್ದ ಎಲ್ಲಾ ಪದಾಧಿಕಾರಿಗಳನ್ನೂ ಯೋಧರನ್ನೂ ಕಮ್ಮಾರರು ಮೊದಲಾದ ಕೈಗಾರಿಕೆಯವರನ್ನೂ ಒಟ್ಟಾರೆ ಹತ್ತು ಸಾವಿರ ಜನರನ್ನು ಸೆರೆಗೊಯ್ದನು. ನಾಡಿನ ಜನರಲ್ಲಿ ಕೇವಲ ಬಡವರನ್ನು ಹೊರತಾಗಿ ಬೇರೆ ಯಾರನ್ನೂ ಬಿಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಯೆರೂಸಲೇವಿುನಲ್ಲಿದ್ದ ಎಲ್ಲಾ ಪ್ರಭುಗಳನ್ನೂ ಭಟರನ್ನೂ ಕಮ್ಮಾರರು ಮೊದಲಾದ ಕೈಗಾರಿಕೆಯವರನ್ನೂ ಒಟ್ಟಾಗಿ ಹತ್ತು ಸಾವಿರ ಜನರನ್ನು ಸೆರೆಯೊಯ್ದನು. ದೇಶದ ಜನರಲ್ಲಿ ಕೇವಲ ಬಡವರು ಹೊರತಾಗಿ ಯಾರನ್ನೂ ಬಿಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಅವನು ಯೆರೂಸಲೇಮಿನವರೆಲ್ಲರನ್ನೂ, ಸಮಸ್ತ ಪ್ರಧಾನರನ್ನೂ, ಸಮಸ್ತ ಸ್ಥಿತಿಯುಳ್ಳ ಪರಾಕ್ರಮಶಾಲಿಗಳನ್ನೂ, ಹತ್ತು ಸಾವಿರ ಸೆರೆಯವರನ್ನೂ ಮತ್ತು ಸಮಸ್ತ ಕೌಶಲಗಾರರನ್ನೂ, ಕಮ್ಮಾರರನ್ನೂ ಅಲ್ಲಿಂದ ಒಯ್ದನು. ದೇಶದಲ್ಲಿ ಬಡವರು ಹೊರತು ಉಳಿದವರು ಯಾರೂ ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 24:14
25 ತಿಳಿವುಗಳ ಹೋಲಿಕೆ  

ನೆಬೂಕದ್ನೆಚ್ಚರನು ಸೆರೆಹಿಡಿದುಕೊಂಡವರ ವಿವರ ಹೀಗಿದೆ: ರಾಜನಾದ ನೆಬೂಕದ್ನೆಚ್ಚರನ ಆಳ್ವಿಕೆಯ ಏಳನೇ ವರ್ಷದಲ್ಲಿ ಯೆಹೂದದಿಂದ ಒಯ್ಯಲ್ಪಟ್ಟ ಜನರು 3,023.


ಸಾಮಾನ್ಯ ಜನರಲ್ಲಿ ತೀರ ಬಡವರಾದ ಜನರನ್ನು ಮಾತ್ರ ನೆಬೂಜರದಾನನು ಅಲ್ಲಿಯೇ ನೆಲೆಸಲು ಬಿಟ್ಟನು. ಆ ಬಡಜನರು ಅಲ್ಲಿಯೇ ನೆಲೆಸಿ, ಬೇಸಾಯಮಾಡಿ ದ್ರಾಕ್ಷಿಯನ್ನು ಬೆಳೆಯಲು ಅವರನ್ನು ಬಿಟ್ಟುಬಿಟ್ಟನು.


ಬಾಬಿಲೋನ್ ರಾಜನು ಏಳು ಸಾವಿರ ಮಂದಿ ಸೈನಿಕರನ್ನು ಮತ್ತು ಒಂದು ಸಾವಿರ ಮಂದಿ ನುರಿತ ತಜ್ಞರನ್ನು ಮತ್ತು ಕಮ್ಮಾರರನ್ನು ಕರೆದೊಯ್ದನು. ಈ ಜನರೆಲ್ಲರೂ ಸೈನಿಕರಾಗಿದ್ದು, ಯುದ್ಧಗಳಲ್ಲಿ ಹೋರಾಡಲು ಸಮರ್ಥರಾಗಿದ್ದರು. ಬಾಬಿಲೋನ್ ರಾಜನು ಅವರನ್ನು ಸೆರೆಯಾಳುಗಳನ್ನಾಗಿ ಬಾಬಿಲೋನಿಗೆ ಒಯ್ದನು.


ಆದರೆ ಕೆಲವು ಕಡುಬಡವರನ್ನು ನೆಬೂಜರದಾನನು ಆ ಪ್ರದೇಶದಲ್ಲಿಯೇ ಬಿಟ್ಟುಹೋದನು. ಅವನು ಆ ಜನರನ್ನು ದ್ರಾಕ್ಷಿತೋಟಗಳಲ್ಲಿ ಮತ್ತು ಹೊಲಗಳಲ್ಲಿ ಕೆಲಸ ಮಾಡಲು ಬಿಟ್ಟುಹೋದನು.


ಜೆರುಸಲೇಮ್ ನಗರವನ್ನು ನಾಶಮಾಡಿದಾಗ ಯೆಹೂದದ ಕೆಲವು ಜನ ಸೈನ್ಯಾಧಿಕಾರಿಗಳು ಮತ್ತು ಅವನ ಸೈನಿಕರು ಇನ್ನೂ ಕಾಡುಮೇಡುಗಳಲ್ಲಿದ್ದರು. ಬಾಬಿಲೋನಿನ ರಾಜನು ಅಹೀಕಾಮನ ಮಗನಾದ ಗೆದಲ್ಯನನ್ನು ಅಳಿದುಳಿದ ಜನರ ಮೇಲ್ವಿಚಾರಕನನ್ನಾಗಿ ನೇಮಿಸಿದ್ದಾನೆಂಬ ಸಮಾಚಾರ ಕಿವಿಗೆ ಬಿತ್ತು. ಇಲ್ಲಿ ಅಳಿದುಳಿದವರು ಬಹಳ ಬಡವರಾದ ಗಂಡಸರು, ಹೆಂಗಸರು ಮತ್ತು ಮಕ್ಕಳು. ಅವರನ್ನು ಬಂಧಿಗಳನ್ನಾಗಿ ಮಾಡಿಕೊಂಡು ಬಾಬಿಲೋನಿಗೆ ತೆಗೆದುಕೊಂಡು ಹೋಗಿರಲಿಲ್ಲ.


ಆದರೆ ಬಾಬಿಲೋನ್ ರಾಜನ ವಿಶೇಷ ರಕ್ಷಕದಳದ ಅಧಿಪತಿಯಾದ ನೆಬೂಜರದಾನನು ಯೆಹೂದದ ಕೆಲ ಬಡಜನರನ್ನು ಅಲ್ಲಿಯೇ ಬಿಟ್ಟನು. ಆ ಜನಗಳಿಗೆ ಯಾವ ಆಸ್ತಿಪಾಸ್ತಿ ಇದ್ದಿರಲಿಲ್ಲ. ಆದ್ದರಿಂದ ಅಂದು ನೆಬೂಜರದಾನನು ಯೆಹೂದದ ಆ ಬಡಜನರಿಗೆ ದ್ರಾಕ್ಷಿತೋಟಗಳನ್ನು ಮತ್ತು ಹೊಲಗಳನ್ನು ಕೊಟ್ಟನು.


ಯೆಹೂದ ರಾಜ್ಯವು ದೀನತೆಯಿಂದಿದ್ದು ದಂಗೆ ಏಳದೆ ತನ್ನ ಒಪ್ಪಂದಕ್ಕೆ ಶಾಶ್ವತವಾಗಿ ಬದ್ಧವಾಗಿರಬೇಕೆಂಬುದು ನೆಬೂಕದ್ನೆಚ್ಚರನ ಬಯಕೆಯಾಗಿತ್ತು.


(ರಾಜನಾದ ಯೆಹೋಯಾಕೀನನನ್ನು, ರಾಜಮಾತೆಯನ್ನು, ಯೆಹೂದದ ಮತ್ತು ಜೆರುಸಲೇಮಿನ ಅಧಿಕಾರಿಗಳನ್ನು, ಮುಂದಾಳುಗಳನ್ನು, ಬಡಗಿಗಳನ್ನು ಮತ್ತು ಕಮ್ಮಾರರನ್ನು ಜೆರುಸಲೇಮಿನಿಂದ ತೆಗೆದುಕೊಂಡು ಹೋದ ಮೇಲೆ ಈ ಪತ್ರವನ್ನು ಕಳಿಸಲಾಯಿತು.)


ಯೋಷೀಯನು ಯೆಕೊನ್ಯ ಮತ್ತು ಅವನ ಸಹೋದರರ ತಂದೆ. (ಈ ಸಮಯದಲ್ಲಿಯೇ ಯೆಹೂದ್ಯ ಜನರನ್ನು ಗುಲಾಮಗಿರಿಗಾಗಿ ಬಾಬಿಲೋನಿಗೆ ಕೊಂಡೊಯ್ದದ್ದು.)


ಯೆಹೂದ್ಯರನ್ನು ಬಾಬಿಲೋನಿಗೆ ಕೊಂಡೊಯ್ದ ನಂತರದ ಕುಟುಂಬದ ಚರಿತ್ರೆ: ಯೆಕೊನ್ಯನು ಶೆಯಲ್ತಿಯೇಲನ ತಂದೆ. ಶೆಯಲ್ತಿಯೇಲನು ಜೆರುಬ್ಬಾಬೆಲನ ತಂದೆ.


ಅಬ್ರಹಾಮನಿಂದಿಡಿದು ದಾವೀದನವರೆಗೆ ಹದಿನಾಲ್ಕು ತಲೆಮಾರುಗಳು. ದಾವೀದನಿಂದಿಡಿದು ಬಾಬಿಲೋನಿಗೆ ಸೆರೆಯೊಯ್ದ ಸಮಯದವರೆಗೆ ಹದಿನಾಲ್ಕು ತಲೆಮಾರುಗಳು. ಬಾಬಿಲೋನಿಗೆ ಸೆರೆಹಿಡಿದುಕೊಂಡು ಹೋದಂದಿನಿಂದ ಕ್ರಿಸ್ತನು ಹುಟ್ಟುವವರೆಗೆ ಹದಿನಾಲ್ಕು ತಲೆಮಾರುಗಳು.


“ಯೆಹೋವನು ನಿಮ್ಮನ್ನೂ ನಿಮ್ಮ ಅರಸನನ್ನೂ ನೀವು ಅರಿಯದ ದೇಶಕ್ಕೆ ಅಟ್ಟಿಬಿಡುವನು. ನೀವಾಗಲಿ ನಿಮ್ಮ ಪೂರ್ವಿಕರಾಗಲಿ ಆ ದೇಶವನ್ನು ಎಂದೂ ನೋಡಲಿಲ್ಲ. ಅಲ್ಲಿ ಮರ, ಕಲ್ಲುಗಳಿಂದ ಮಾಡಿದ ಸುಳ್ಳುದೇವರನ್ನು ಆರಾಧಿಸುವಿರಿ.


ಕಬ್ಬಿಣದಿಂದ ಆಯುಧಗಳನ್ನು ತಯಾರಿಸಲು ಇಸ್ರೇಲರಿಗೆ ಗೊತ್ತಿರಲಿಲ್ಲ. ಇಸ್ರೇಲಿನಲ್ಲಿ ಯಾವ ಕಮ್ಮಾರರೂ ಇರಲಿಲ್ಲ. ಇಸ್ರೇಲರು ಕಬ್ಬಿಣದಿಂದ ಕತ್ತಿಗಳನ್ನು ಮತ್ತು ಈಟಿಗಳನ್ನು ತಯಾರಿಸಬಹುದೆಂಬ ಭೀತಿಯು ಫಿಲಿಷ್ಟಿಯರಿಗೆ ಇದ್ದಕಾರಣ ಅವರು ಇಸ್ರೇಲರಿಗೆ ಕಬ್ಬಿಣದಿಂದ ತಯಾರಿಸುವ ವಸ್ತುಗಳ ಬಗ್ಗೆ ತಿಳುವಳಿಕೆ ನೀಡಿರಲಿಲ್ಲ.


ಸೆರೆಯಿಂದ ಮರಳಿಬಂದ ಸಂಸ್ಥಾನದವರ ವಿವರ, ಬಹಳ ವರ್ಷಗಳ ಹಿಂದೆ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ಇವರನ್ನು ಸೆರೆಹಿಡಿದು ಬಾಬಿಲೋನಿಗೆ ಒಯ್ದಿದ್ದನು. ಇವರು ಜೆರುಸಲೇಮಿಗೆ ಹಿಂತಿರುಗಿ ಬಂದು ಎಲ್ಲರೂ ತಮ್ಮತಮ್ಮ ಸ್ವಂತ ಊರುಗಳಿಗೆ ಹೊರಟು ಹೋದರು.


ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ಜೆರುಸಲೇಮಿನಿಂದ ಮೊರ್ದೆಕೈಯನ್ನು ಸೆರೆಹಿಡಿದು ತಂದಿದ್ದನು. ಯೆಹೂದದ ಅರಸನಾದ ಯೆಹೋಯಾಕೀನನೊಂದಿಗೆ ಸೆರೆಒಯ್ಯಲ್ಪಟ್ಟ ಗುಂಪಿನೊಂದಿಗೆ ಇವನೂ ಇದ್ದನು.


ಆತನು ಎಲ್ಲಾ ವೀರರನ್ನೂ ಮಹಾಸೈನಿಕರನ್ನೂ ತೆಗೆದುಬಿಡುವನು. ದೇವರು ಎಲ್ಲಾ ನ್ಯಾಯಾಧೀಶರನ್ನೂ ಪ್ರವಾದಿಗಳನ್ನೂ ಹಿರಿಯರನ್ನೂ ಇಂದ್ರಜಾಲಗಾರರನ್ನು ತೆಗೆದುಬಿಡುವನು.


ನೆಬೂಕದ್ನೆಚ್ಚರನು ಯೆಹೂದದ ರಾಜನಾದ ಯೆಹೋಯಾಕೀನನನ್ನು ಸೆರೆಯಾಳಾಗಿ ತೆಗೆದುಕೊಂಡು ಹೋಗುವಾಗ ಆ ವಸ್ತುಗಳನ್ನು ತೆಗೆದುಕೊಂಡು ಹೋಗಲಿಲ್ಲ. ಯೆಹೋಯಾಕೀನನು ಯೆಹೋಯಾಕೀಮನ ಮಗನಾಗಿದ್ದನು. ನೆಬೂಕದ್ನೆಚ್ಚರನು ಯೆಹೂದ ಮತ್ತು ಜೆರುಸಲೇಮಿನಿಂದ ಬೇರೆ ಪ್ರಮುಖ ಜನರನ್ನು ಸಹ ತೆಗೆದುಕೊಂಡು ಹೋದನು.


ಇಸ್ರೇಲ್ ಜನರ ಎಲ್ಲಾ ಹೆಸರುಗಳು ಅವರವರ ವಂಶಾವಳಿ ಪಟ್ಟಿಯಲ್ಲಿ ಬರೆಯಲ್ಪಟ್ಟಿದೆ. ಈ ವಂಶಾವಳಿಗಳು ಇಸ್ರೇಲ್ ರಾಜರ ಇತಿಹಾಸದಲ್ಲಿ ಸೇರಿಸಲ್ಪಟ್ಟಿದೆ. ಯೆಹೂದ ಪ್ರಾಂತ್ಯದ ಜನರನ್ನು ಸೆರೆಹಿಡಿದು ಬಾಬಿಲೋನಿಗೆ ಒಯ್ಯಲಾಯಿತು. ಅವರು ದೇವರಿಗೆ ಅವಿಧೇಯರಾದ್ದರಿಂದ ಅವರಿಗೆ ಇಂಥ ಸ್ಥಿತಿ ಬಂದೊದಗಿತು.


ನಾನು ಶೂಷನ್‌ನಲ್ಲಿದ್ದಾಗ ನನ್ನ ಸಹೋದರರಲ್ಲಿ ಒಬ್ಬನಾದ ಹನಾನೀ ಮತ್ತು ಇನ್ನಿತರರು ಯೆಹೂದ ಪ್ರಾಂತ್ಯದಿಂದ ಬಂದಿದ್ದರು. ನಾನು ಅಲ್ಲಿರುವ ಯೆಹೂದ್ಯರ ಯೋಗಕ್ಷೇಮದ ಬಗ್ಗೆ ವಿಚಾರಿಸಿದೆನು. ಈ ಯೆಹೂದ್ಯರು ಸೆರೆವಾಸದಿಂದ ತಪ್ಪಿಸಿಕೊಂಡು ಇನ್ನೂ ಯೆಹೂದದಲ್ಲಿ ವಾಸವಾಗಿದ್ದರು. ಜೆರುಸಲೇಮ್ ನಗರದ ವಿಷಯವಾಗಿಯೂ ವಿಚಾರಿಸಿದೆನು.


ನಾನು ಯೆಹೂದದ ರಾಜನಾದ ಯೆಹೋಯಾಕೀನನನ್ನು ಇಲ್ಲಿಗೆ ಕರೆದುಕೊಂಡು ಬರುತ್ತೇನೆ. ಯೆಹೋಯಾಕೀನನು ಯೆಹೋಯಾಕೀಮನ ಮಗನು. ನೆಬೂಕದ್ನೆಚ್ಚರನು ಬಾಬಿಲೋನಿಗೆ ತೆಗೆದುಕೊಂಡು ಹೋದ ಎಲ್ಲಾ ಯೆಹೂದ್ಯರನ್ನು ನಾನು ಮತ್ತೆ ಕರೆದುಕೊಂಡು ಬರುತ್ತೇನೆ. ಬಾಬಿಲೋನಿನ ರಾಜನು ಯೆಹೂದದ ಜನರ ಮೇಲೆ ಹೇರಿದ ನೊಗವನ್ನು ನಾನು ಮುರಿದುಹಾಕುತ್ತೇನೆ.’” ಇದು ಯೆಹೋವನ ಸಂದೇಶ.


ಅವರಿಗೆ ಹೀಗೆ ಹೇಳು, ದೇವರಾದ ಯೆಹೋವನು ಹೀಗೆನ್ನುತ್ತಾನೆ: “‘ಅಗಲವಾದ ರೆಕ್ಕೆಗಳುಳ್ಳ ದೊಡ್ಡ ಹದ್ದು (ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನು) ಲೆಬನೋನಿಗೆ ಬಂದಿತು. ಅದರ ರೆಕ್ಕೆಗಳು ಅನೇಕ ಚುಕ್ಕೆಗಳನ್ನು ಹೊಂದಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು