2 ಅರಸುಗಳು 24:17 - ಪರಿಶುದ್ದ ಬೈಬಲ್17 ಬಾಬಿಲೋನ್ ರಾಜನು ಮತ್ತನ್ಯನನ್ನು ಹೊಸ ರಾಜನನ್ನಾಗಿ ನೇಮಿಸಿದನು. ಅವನು ಯೆಹೋಯಾಖೀನನ ಸ್ಥಳವನ್ನು ಪಡೆದನು. ಮತ್ತನ್ಯನು ಯೆಹೋಯಾಖೀನನ ಚಿಕ್ಕಪ್ಪ. ಬಾಬಿಲೋನ್ ರಾಜನು ಮತ್ತನ್ಯನ ಹೆಸರನ್ನು ಚಿದ್ಕೀಯ ಎಂದು ಬದಲಾಯಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಬಾಬೆಲಿನ ಅರಸನು ಯೆಹೋಯಾಖೀನನಿಗೆ ಬದಲಾಗಿ ಅವನ ಚಿಕ್ಕಪ್ಪನಾದ ಮತ್ತನ್ಯ ಎಂಬುವವನನ್ನು ಅರಸನನ್ನಾಗಿ ನೇಮಿಸಿ ಅವನಿಗೆ ಚಿದ್ಕೀಯನೆಂದು ಹೆಸರಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಬಾಬಿಲೋನಿನ ಅರಸನು ಯೆಹೋಯಾಖೀನನಿಗೆ ಬದಲಾಗಿ ಅವನ ಚಿಕ್ಕಪ್ಪನಾದ ಮತ್ತನ್ಯ ಎಂಬುವನನ್ನು ಅರಸನನ್ನಾಗಿ ನೇಮಿಸಿ ಅವನಿಗೆ ‘ಚಿದ್ಕೀಯ’ ಎಂಬ ಹೆಸರಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಬಾಬೆಲಿನ ಅರಸನು ಯೆಹೋಯಾಖೀನನಿಗೆ ಬದಲಾಗಿ ಅವನ ಚಿಕ್ಕಪ್ಪನಾದ ಮತ್ತನ್ಯ ಎಂಬವನನ್ನು ಅರಸನನ್ನಾಗಿ ನೇವಿುಸಿ ಅವನಿಗೆ ಚಿದ್ಕೀಯ ಎಂಬ ಹೆಸರಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಬಾಬಿಲೋನಿನ ಅರಸನು ಯೆಹೋಯಾಖೀನನ ಚಿಕ್ಕಪ್ಪನಾದ ಮತ್ತನ್ಯನನ್ನು ಅವನಿಗೆ ಬದಲಾಗಿ ಅರಸನನ್ನಾಗಿ ಮಾಡಿ, ಅವನಿಗೆ ಚಿದ್ಕೀಯನೆಂದು ಬೇರೆ ಹೆಸರನ್ನಿಟ್ಟನು. ಅಧ್ಯಾಯವನ್ನು ನೋಡಿ |
ಯೆಹೋಯಾಕೀಮನು ಯೆಹೂದದಲ್ಲಿ ಆಳುವಾಗಲೂ ಯೆಹೋವನು ಯೆರೆಮೀಯನೊಂದಿಗೆ ಮಾತನಾಡುವದನ್ನು ಮುಂದುವರೆಸಿದನು. ಯೆಹೋಯಾಕೀಮನು ಯೋಷೀಯನ ಮಗನು. ಯೆಹೂದದಲ್ಲಿ ಚಿದ್ಕೀಯನು ಆಳಿದ ಹನ್ನೊಂದು ವರ್ಷ ಐದು ತಿಂಗಳ ಕಾಲ ಯೆಹೋವನು ಯೆರೆಮೀಯನೊಂದಿಗೆ ಮಾತನಾಡುವದನ್ನು ಮುಂದುವರೆಸಿದನು. ಚಿದ್ಕೀಯನು ಸಹ ಯೋಷೀಯನ ಮಗನಾಗಿದ್ದನು. ಚಿದ್ಕೀಯನ ಆಳ್ವಿಕೆಯ ಹನ್ನೊಂದನೇ ವರ್ಷದ ಐದನೆಯ ತಿಂಗಳಿನಲ್ಲಿ ಜೆರುಸಲೇಮಿನ ನಿವಾಸಿಗಳು ಸೆರೆ ಒಯ್ಯಲ್ಪಟ್ಟರು.