20 ಯೆಹೋವನ ಕೋಪದಿಂದ ಯೆಹೂದಕ್ಕೆ ಮತ್ತು ಜೆರುಸಲೇಮಿಗೆ ಇವೆಲ್ಲವೂ ಸಂಭವಿಸಿದವು. ಹೀಗೆ ಯೆಹೋವನು ಅವರನ್ನು ತನ್ನಿಂದ ದೂರಸರಿಸಿದನು. ಚಿದ್ಕೀಯನು ಬಾಬಿಲೋನ್ ರಾಜನಿಗೆ ವಿರುದ್ಧವಾಗಿ ದಂಗೆ ಎದ್ದನು.
20 ಯೆಹೋವನು ಯೆರೂಸಲೇಮಿನವರ ಮೇಲೆಯೂ ಬೇರೆ ಎಲ್ಲಾ ಯೆಹೂದ್ಯರ ಮೇಲೆಯೂ ಇದನ್ನೆಲ್ಲಾ ಬರಮಾಡಿ ಕೊನೆಯಲ್ಲಿ ಅವರನ್ನು ತನ್ನ ಸನ್ನಿಧಿಯಿಂದ ನಾಶಮಾಡುವಷ್ಟು ರೋಷವುಳ್ಳವನಾಗಿದ್ದನು. ಆದರೆ ಚಿದ್ಕೀಯನು ಬಾಬೆಲಿನ ಅರಸನಿಗೆ ವಿರುದ್ಧವಾಗಿ ತಿರುಗಿಬಿದ್ದನು.
20 ಯೆಹೋವ ದೇವರ ಕೋಪದಿಂದ ಯೆರೂಸಲೇಮಿನ ಮತ್ತು ಯೆಹೂದದ ಮೇಲೆ ಇವೆಲ್ಲ ಉಂಟಾದವು. ಹೀಗೆ ಯೆಹೋವ ದೇವರು ಅವರನ್ನು ತಮ್ಮ ಸಮ್ಮುಖದಿಂದ ತಳ್ಳಿಬಿಟ್ಟರು. ಅನಂತರ ಚಿದ್ಕೀಯನು ಬಾಬಿಲೋನಿನ ಅರಸನಿಗೆ ವಿರೋಧವಾಗಿ ತಿರುಗಿಬಿದ್ದನು.
ಚಿದ್ಕೀಯನು ನೆಬೂಕದ್ನೆಚ್ಚರನಿಗೆ ವಿರುದ್ಧವಾಗಿ ದಂಗೆ ಎದ್ದನು. ನೆಬೂಕದ್ನೆಚ್ಚರನು ತನಗೆ ವಿಧೇಯನಾಗಿರುವಂತೆ ಚಿದ್ಕೀಯನಿಂದ ಪ್ರಮಾಣ ಮಾಡಿಸಿಕೊಂಡಿದ್ದನು. ಚಿದ್ಕೀಯನು ದೇವರ ಹೆಸರಿನಲ್ಲಿ ಆಣೆಯಿಟ್ಟು ತಾನು ನೆಬೂಕದ್ನೆಚ್ಚರನಿಗೆ ನಂಬಿಗಸ್ತನಾಗಿರುವುದಾಗಿ ಪ್ರಮಾಣಮಾಡಿದ್ದನು. ಆದರೆ ಚಿದ್ಕೀಯನು ಮನಸ್ಸನ್ನು ಕಠಿಣಮಾಡಿಕೊಂಡು ಇಸ್ರೇಲಿನ ದೇವರಾದ ಯೆಹೋವನಿಗೆ ವಿಧೇಯನಾಗಲು ನಿರಾಕರಿಸಿದನು.
ಯೆಹೂದದ ರಾಜರು ನನ್ನನ್ನು ತ್ಯಜಿಸಿದರು ಮತ್ತು ಇತರ ದೇವರುಗಳಿಗೆ ಧೂಪವನ್ನು ಸುಟ್ಟರು. ಅವರು ನನ್ನಲ್ಲಿ ಹೆಚ್ಚು ಕೋಪವನ್ನು ಉಂಟುಮಾಡಿದರು. ಅವರು ಅನೇಕ ವಿಗ್ರಹಗಳನ್ನು ನಿರ್ಮಿಸಿದರು. ಆದಕಾರಣವೇ ನಾನು ನನ್ನ ಕೋಪವನ್ನು ಈ ಸ್ಥಳದ ವಿರುದ್ಧ ತೋರ್ಪಡಿಸುತ್ತೇನೆ. ನನ್ನ ಕೋಪವು ಆರಿಹೋಗದ ಬೆಂಕಿಯಂತಿರುತ್ತದೆ!’
“ಆದರೆ ಸೀಹೋನನು ನಮಗೆ ದಾಟಿಹೋಗಲು ಬಿಡಲಿಲ್ಲ. ನಮ್ಮ ದೇವರಾದ ಯೆಹೋವನು ಅವನ ಹೃದಯವನ್ನು ಕಠಿಣಗೊಳಿಸಿದನು. ನಾವು ಅವನನ್ನು ಸೋಲಿಸಿ ಅವನ ರಾಜ್ಯವನ್ನು ವಶಪಡಿಸಿಕೊಳ್ಳಬೇಕೆಂದು ಯೆಹೋವನು ಹಾಗೆ ಮಾಡಿದನು. ಆ ರಾಜ್ಯವು ಇಂದಿಗೂ ನಮ್ಮ ವಶದಲ್ಲಿದೆ.
ಯೆಹೋವನಿಗೆ ಅವರ ಮೇಲೆ ಕೋಪ ಬಂದುದರಿಂದ ಜೆರುಸಲೇಮ್ ಮತ್ತು ಯೆಹೂದಗಳಿಗೆ ವಿಪತ್ತುಗಳು ಸಂಭವಿಸಿದವು. ಕೊನೆಗೆ, ಯೆಹೋವನು ಜೆರುಸಲೇಮ್ ಮತ್ತು ಯೆಹೂದದ ಜನರನ್ನು ತನ್ನಿದ ದೂರ ಎಸೆದುಬಿಟ್ಟನು. ಚಿದ್ಕೀಯನು ಬಾಬಿಲೋನ್ ರಾಜನ ವಿರುದ್ಧವಾಗಿ ದಂಗೆ ಎದ್ದನು.
ಯೆಹೋಯಾಕೀಮನ ಕಾಲದಲ್ಲಿ ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನು ಯೆಹೂದ ದೇಶಕ್ಕೆ ಬಂದನು. ಯೆಹೋಯಾಕೀಮನು ಮೂರು ವರ್ಷಗಳವರೆಗೆ ನೆಬೂಕದ್ನೆಚ್ಚರನ ಸೇವೆಮಾಡಿದನು. ನಂತರ ಯೆಹೋಯಾಕೀಮನು ನೆಬೂಕದ್ನೆಚ್ಚರನಿಗೆ ವಿರುದ್ಧವಾಗಿ ದಂಗೆ ಎದ್ದು ಅವನ ಆಳ್ವಿಕೆಯಿಂದ ದೂರವಾದನು.
“ದಂಗೆಕೋರರಿಗೆ ಇದನ್ನು ಹೇಳು: ಈ ಸಂಗತಿಗಳ ಅರ್ಥವು ನಿಮಗೆ ಗೊತ್ತಿಲ್ಲವೇ? ಅವರಿಗೆ ಹೇಳು: ಮೊದಲಿನ ಗರುಡ ಪಕ್ಷಿ ಬಾಬಿಲೋನ್ ರಾಜನಾದ ನೆಬೂಕದ್ನೆಚ್ಚರನು. ಅವನು ಜೆರುಸಲೇಮಿಗೆ ಬಂದು ಅದರ ರಾಜನನ್ನೂ ಅದರ ಹಿರಿಯರನ್ನೂ ಬಂಧಿಸಿ, ಅವರನ್ನು ತನ್ನ ರಾಜ್ಯವಾದ ಬಾಬಿಲೋನಿಗೆ ಕೊಂಡೊಯ್ದನು.
ಅದರ ಸ್ವಂತ ಕಾಂಡದಿಂದಲೇ ಬೆಂಕಿಯು ಹೊರಟುಬಂದು ಅದರ ಚಿಕ್ಕ ಕೊಂಬೆಗಳನ್ನು ಮತ್ತು ಫಲಗಳನ್ನು ನಾಶಮಾಡಿತು. ಈಗ ಬಲವಾದ ಕಾಂಡ ಅದರಲ್ಲಿಲ್ಲ. ಆಳುವದಕ್ಕೆ ರಾಜದಂಡವೂ ಅದರಲ್ಲಿಲ್ಲ.’ ಇದು ಮರಣದ ಶೋಕಗೀತೆ. ಇದನ್ನು ಶೋಕಗೀತೆಯನ್ನಾಗಿಯೇ ಬಳಸಲಾಗುತ್ತಿದೆ.”