2 ಅರಸುಗಳು 24:4 - ಪರಿಶುದ್ದ ಬೈಬಲ್4 ಜೆರುಸಲೇಮನ್ನು ನಿರಪರಾಧದ ರಕ್ತದಿಂದ ತುಂಬಿಸಿದ ಮನಸ್ಸೆಯ ದುಷ್ಕೃತ್ಯಗಳನ್ನು ಯೆಹೋವನು ಕ್ಷಮಿಸಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಅವುಗಳಿಗಾಗಿ ಯೆಹೋವನು ಯೆರೂಸಲೇಮಿನವರನ್ನು ಕ್ಷಮಿಸದೆ ತನ್ನ ಸನ್ನಿಧಿಯಿಂದ ತೆಗೆದುಹಾಕಬೇಕೆಂದಿದ್ದರಿಂದ ಅವರಿಗೆ ಶಿಕ್ಷೆಯಾಯಿತು. ಇದು ಯೆಹೋವನ ಅಪ್ಪಣೆಯ ಪ್ರಕಾರ ನಡೆಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಅವುಗಳಿಗಾಗಿ ಯೆಹೂದ್ಯರನ್ನು ತನ್ನ ಸನ್ನಿಧಿಯಿಂದ ತೆಗೆದುಹಾಕಬೇಕೆಂದಿದ್ದುದರಿಂದ ಸರ್ವೇಶ್ವರನ ಅಪ್ಪಣೆಯ ಪ್ರಕಾರ ಈ ಶಿಕ್ಷೆ ಅವರಿಗೆ ವಿಧಿಸಲಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಅವುಗಳಿಗಾಗಿ ಆತನು ಯೆಹೂದ್ಯರನ್ನು ತನ್ನ ಸನ್ನಿಧಿಯಿಂದ ತೆಗೆದುಹಾಕಬೇಕೆಂದಿದ್ದದರಿಂದ ಆತನ ಅಪ್ಪಣೆಯ ಪ್ರಕಾರ ಈ ಶಿಕ್ಷೆಯು ಅವರಿಗೆ ಆಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಇದಲ್ಲದೆ ಮನಸ್ಸೆಯು ಚೆಲ್ಲಿದ ನಿರಪರಾಧದ ರಕ್ತದ ನಿಮಿತ್ತ ಇದಾಯಿತು. ಅವನು ನಿರಪರಾಧದ ರಕ್ತದಿಂದ ಯೆರೂಸಲೇಮನ್ನು ತುಂಬಿಸಿದ್ದನು. ಯೆಹೋವ ದೇವರು ಅದನ್ನು ಕ್ಷಮಿಸಲು ಸಿದ್ಧವಾಗಿರಲಿಲ್ಲ. ಅಧ್ಯಾಯವನ್ನು ನೋಡಿ |
ಯೆಹೂದದ ಜನರು ನನ್ನ ಅನುಸರಣೆಯನ್ನು ಬಿಟ್ಟಿದ್ದರಿಂದ ನಾನು ಹೀಗೆ ಮಾಡುವೆನು. ಇದನ್ನು ಅವರು ಅನ್ಯದೇವರುಗಳ ಸ್ಥಳವನ್ನಾಗಿ ಮಾಡಿದ್ದಾರೆ. ಯೆಹೂದದ ಜನರು ಈ ಸ್ಥಳದಲ್ಲಿ ಅನ್ಯದೇವರುಗಳಿಗಾಗಿ ಧೂಪವನ್ನು ಹಾಕಿದ್ದಾರೆ. ಬಹಳ ಹಿಂದೆ ಈ ಜನರು ಆ ದೇವರುಗಳನ್ನು ಪೂಜಿಸುತ್ತಿರಲಿಲ್ಲ. ಅವರ ಹಿರಿಯರೂ ಆ ದೇವರುಗಳನ್ನು ಪೂಜಿಸುತ್ತಿರಲಿಲ್ಲ. ಇವುಗಳು ಅನ್ಯದೇಶದ ಹೊಸ ದೇವರುಗಳು. ಯೆಹೂದದ ರಾಜರು ಈ ಸ್ಥಳವನ್ನು ಮುಗ್ಧಮಕ್ಕಳ ರಕ್ತದಿಂದ ತುಂಬಿದರು.
“‘ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: ಕೊಲೆಗಾರರ ಪಟ್ಟಣವಾದ ಜೆರುಸಲೇಮಿಗೆ ಆಪತ್ತು ಬರುವುದು. ಕೊಲೆಗಾರರ ನಗರಕ್ಕೆ ಕೇಡಾಗುವದು. ಜೆರುಸಲೇಮು ಕಿಲುಬು ಹಿಡಿದ ಹಂಡೆಯಂತಿದೆ. ಆ ಕಿಲುಬಿನ ಕಲೆಯನ್ನು ತೆಗೆಯಲಾಗುವುದೇ ಇಲ್ಲ. ಆ ಹಂಡೆಯು ಅಶುದ್ಧವಾಗಿರುವುದರಿಂದ ಅದರೊಳಗಿರುವ ಮಾಂಸವನ್ನೆಲ್ಲಾ ಹೊರಗೆ ತೆಗೆದುಬಿಡು. ಆ ಮಾಂಸವನ್ನು ನೀನಾಗಲಿ ಯಾಜಕರಾಗಲಿ ತಿನ್ನಕೂಡದು.