7 ಬಾಬಿಲೋನಿನ ಅರಸನು ಈಜಿಪ್ಟಿನ ಪ್ರವಾಹಕ್ಕೂ ಯೂಫ್ರಟಿಸ್ ನದಿಗೂ ಮಧ್ಯದಲ್ಲಿದ್ದ ಈಜಿಪ್ಟ್ ರಾಜನ ಎಲ್ಲಾ ದೇಶವನ್ನು ಸ್ವಾಧೀನ ಮಾಡಿಕೊಂಡನು. ಅಂದಿನಿಂದ ಈಜಿಪ್ಟಿನ ಅರಸನು ತನ್ನ ದೇಶದಿಂದ ಈಚೆಗೆ ಬರಲೇ ಇಲ್ಲ.
7 ಬಾಬೆಲಿನ ಅರಸನು ಐಗುಪ್ತದ ಹಳ್ಳಕ್ಕೂ ಯೂಫ್ರೇಟೀಸ್ ನದಿಗೂ ಮಧ್ಯದಲಿದ್ದ ಐಗುಪ್ತ ರಾಜನ ಎಲ್ಲಾ ದೇಶವನ್ನು ಸ್ವಾಧೀನಮಾಡಿಕೊಂಡನು. ಅಂದಿನಿಂದ ಐಗುಪ್ತದ ಅರಸನು ತನ್ನ ದೇಶದಿಂದ ಈಚೆಗೆ ಬರಲೇ ಇಲ್ಲ.
7 ಆದರೆ ಈಜಿಪ್ಟಿನ ಅರಸನು ತನ್ನ ದೇಶದಿಂದ ತಿರುಗಿ ಬರಲಿಲ್ಲ. ಏಕೆಂದರೆ ಈಜಿಪ್ಟ್ ನದಿ ಮೊದಲುಗೊಂಡು ಯೂಫ್ರೇಟೀಸ್ ನದಿಯವರೆಗೂ ಈಜಿಪ್ಟಿನ ಅರಸನಿಗೆ ಇದ್ದದ್ದನ್ನೆಲ್ಲಾ ಬಾಬಿಲೋನಿನ ಅರಸನು ಸ್ವಾಧೀನಮಾಡಿಕೊಂಡಿದ್ದನು.
ಈ ಸಂದೇಶವು ಈಜಿಪ್ಟ್ ಜನಾಂಗದ ಬಗ್ಗೆ ಇದೆ. ಈ ಸಂದೇಶವು ಫರೋಹನೆಕೋವಿನ ಸೈನ್ಯದ ಬಗ್ಗೆ ಇದೆ. ಫರೋಹನೆಕೋವು ಈಜಿಪ್ಟಿನ ರಾಜನಾಗಿದ್ದನು. ಅವನ ಸೈನ್ಯವನ್ನು ಕರ್ಕೆಮೀಷ್ ಪಟ್ಟಣದಲ್ಲಿ ಸೋಲಿಸಲಾಯಿತು. ಕರ್ಕೆಮೀಷ್ ಪಟ್ಟಣವು ಯೂಫ್ರೇಟೀಸ್ ನದಿಯ ದಂಡೆಯ ಮೇಲಿದೆ. ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನು ಯೆಹೂದದಲ್ಲಿ ಯೆಹೋಯಾಕೀಮನ ಆಳ್ವಿಕೆಯ ನಾಲ್ಕನೆಯ ವರ್ಷದಲ್ಲಿ ಫರೋಹನೆಕೋವಿನ ಸೈನ್ಯವನ್ನು ಕರ್ಕೆಮೀಷಿನಲ್ಲಿ ಸೋಲಿಸಿದನು. ಯೆಹೋಯಾಕೀಮನು ರಾಜನಾದ ಯೋಷೀಯನ ಮಗನಾಗಿದ್ದನು. ಈಜಿಪ್ಟಿಗೆ ಯೆಹೋವನ ಸಂದೇಶ ಹೀಗಿತ್ತು:
ಆದ್ದರಿಂದ ಅಂದು ಯೆಹೋವನು ಒಂದು ವಾಗ್ದಾನವನ್ನು ಮಾಡಿ ಅಬ್ರಾಮನೊಡನೆ ಒಂದು ಒಡಂಬಡಿಕೆಯನ್ನು ಮಾಡಿಕೊಂಡನು. ಯೆಹೋವನು ಅವನಿಗೆ, “ನಾನು ನಿನ್ನ ಸಂತತಿಯವರಿಗೆ ಈ ನಾಡನ್ನು ಕೊಡುವೆನು. ನಾನು ಅವರಿಗೆ ಈಜಿಪ್ಟ್ ನದಿಯಿಂದ ಯೂಫ್ರೇಟೀಸ್ ಮಹಾನದಿಯವರೆಗೂ ಇರುವ ನಾಡನ್ನು ಕೊಡುವೆನು.
ಆ ಸಮಯದಲ್ಲಿ, ಯೆಹೋವನು ತನ್ನ ಜನರನ್ನು ಬೇರೆಯವರಿಂದ ಬೇರ್ಪಡಿಸುವನು. ಆತನು ಯೂಫ್ರೇಟೀಸ್ ನದಿಯಿಂದ ಪ್ರಾರಂಭಿಸಿ ಈಜಿಪ್ಟಿನ ನದಿಯತನಕ ಎಲ್ಲಾ ಜನರನ್ನು ಒಟ್ಟುಗೂಡಿಸುವನು. ಇಸ್ರೇಲ್ ಜನರೇ, ನೀವು ಒಬ್ಬೊಬ್ಬರಾಗಿಯೇ ಒಟ್ಟುಗೂಡಿಸಲ್ಪಡುವಿರಿ.
ಸೊಲೊಮೋನನು ಯೂಫ್ರೇಟೀಸ್ ನದಿಯಿಂದ ಮೊದಲುಗೊಂಡು ಫಿಲಿಷ್ಟಿಯರ ದೇಶದವರೆಗಿನ ರಾಜ್ಯಗಳನ್ನೆಲ್ಲ ಆಳುತ್ತಿದ್ದನು. ಅವನ ರಾಜ್ಯಾಧಿಕಾರವು ಈಜಿಪ್ಟಿನ ಗಡಿಯವರೆಗೆ ವಿಸ್ತರಿಸಿತ್ತು. ಈ ದೇಶಗಳು ಸೊಲೊಮೋನನಿಗೆ ಕಪ್ಪಕಾಣಿಕೆಯನ್ನು ಕೊಡುತ್ತ ಅವನ ಜೀವಮಾನ ಪೂರ್ತಿ ಅವರು ಅವನಿಗೆ ಆಧೀನರಾಗಿದ್ದರು.
ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ, “ನಾನು ಈಜಿಪ್ಟಿನ ರಾಜನಾದ ಫರೋಹನಿಗೆ ವಿರುದ್ಧವಾಗಿದ್ದೇನೆ. ಅವನ ಎರಡು ಕೈಗಳನ್ನೂ ಮುರಿಯುವೆನು. ಒಂದು ಕೈ ಮುರಿಯಲ್ಪಟ್ಟಿತ್ತು. ಇನ್ನೊಂದು ಸರಿಯಾಗಿದ್ದ ಕೈಯೂ ಮುರಿಯಲ್ಪಡುವದು. ಅವನ ಕೈಯಿಂದ ಖಡ್ಗವು ಬೀಳುವಂತೆ ಮಾಡುವೆನು.
“ನರಪುತ್ರನೇ, ನಾನು ಈಜಿಪ್ಟಿನ ರಾಜನಾದ ಫರೋಹನ ಕೈಯ ಬಲವನ್ನು ಮುರಿದಿದ್ದೇನೆ. ಯಾರೂ ಅವನನ್ನು ಶೂಶ್ರೂಷೆ ಮಾಡಲಾರರು. ಅದು ಗುಣವಾಗದು. ಅವನ ಕೈಗೆ ಖಡ್ಗ ಹಿಡಿದುಕೊಳ್ಳುವಷ್ಟೂ ಬಲವಿರದು.”