2 ಅರಸುಗಳು 25:13 - ಪರಿಶುದ್ದ ಬೈಬಲ್13 ಬಾಬಿಲೋನ್ ಸೈನಿಕರು ದೇವಾಲಯದಲ್ಲಿದ್ದ ತಾಮ್ರದ ಸ್ತಂಭಗಳನ್ನು ಚೂರುಚೂರು ಮಾಡಿದರು. ಅವರು ಯೆಹೋವನ ಆಲಯದಲ್ಲಿದ್ದ ತಾಮ್ರದ ದೊಡ್ಡ ತೊಟ್ಟಿಯನ್ನು ಮತ್ತು ತಾಮ್ರದ ಬಂಡಿಯನ್ನು ಚೂರುಚೂರಾಗಿ ಒಡೆದುಹಾಕಿದರು. ನಂತರ ಬಾಬಿಲೋನ್ ಸೈನಿಕರು ತಾಮ್ರದ ಚೂರುಗಳನ್ನು ಬಾಬಿಲೋನಿಗೆ ತೆಗೆದುಕೊಂಡು ಹೋದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಕಸ್ದೀಯರು ಯೆಹೋವನ ಆಲಯದಲ್ಲಿದ್ದ ತಾಮ್ರದ ಕಂಬಗಳನ್ನು, ಪೀಠಗಳನ್ನೂ, ಕಡಲಿನ ಆಕಾರದ ಪಾತ್ರೆಯನ್ನೂ ಒಡೆದು ಅವುಗಳ ತಾಮ್ರವನ್ನೂ ಬಾಬಿಲೋನಿಗೆ ತೆಗೆದುಕೊಂಡು ಹೋದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಬಾಬಿಲೋನಿಯದವರು ಸರ್ವೇಶ್ವರನ ಆಲಯದಲ್ಲಿದ್ದ ಕಂಚಿನ ಕಂಬಗಳನ್ನೂ ಚಕ್ರದ ಬಂಡಿಗಳನ್ನೂ, ಕಡಲಿನ ಆಕಾರದ ಕಂಚಿನ ಪಾತ್ರೆಯನ್ನೂ ಒಡೆದು ಅವುಗಳ ಕಂಚನ್ನೆಲ್ಲ ಕೊಂಡೊಯ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಕಸ್ದೀಯರು ಯೆಹೋವನ ಆಲಯದ ಬಳಿಯಲ್ಲಿದ್ದ ತಾಮ್ರದ ಕಂಬಗಳನ್ನೂ ಪೀಠಗಳನ್ನೂ ಸಮುದ್ರವೆನಿಸಿಕೊಂಡ ಪಾತ್ರೆಯನ್ನೂ ಒಡೆದು ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಯೆಹೋವ ದೇವರ ಆಲಯದಲ್ಲಿದ್ದ ಕಂಚಿನ ಸ್ತಂಭಗಳನ್ನೂ, ಪೀಠಗಳನ್ನೂ, ಕಂಚಿನ ಸಮುದ್ರವೆಂಬ ಪಾತ್ರೆಯನ್ನೂ ಬಾಬಿಲೋನಿಯರು ಒಡೆದುಹಾಕಿ, ಅದರ ಕಂಚನ್ನು ಬಾಬಿಲೋನಿಗೆ ತೆಗೆದುಕೊಂಡು ಹೋದರು. ಅಧ್ಯಾಯವನ್ನು ನೋಡಿ |