2 ಅರಸುಗಳು 25:14 - ಪರಿಶುದ್ದ ಬೈಬಲ್14 ಬಾಬಿಲೋನಿನವರು ದೇವಾಲಯದಲ್ಲಿ ಉಪಯೋಗಿಸುತ್ತಿದ್ದ ಬೋಗುಣಿ, ಸಲಿಕೆ, ಕತ್ತರಿ, ಧೂಪಾರತಿ ಮೊದಲಾದ ತಾಮ್ರದ ವಸ್ತುಗಳನ್ನು ತೆಗೆದುಕೊಂಡು ಹೋದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ದೇವಾಲಯದ ಸೇವೆಗಾಗಿ ಉಪಯೋಗಿಸುತ್ತಿದ್ದ ಬೋಗುಣಿ, ಸಲಿಕೆ, ಕತ್ತರಿ, ಧೂಪಾರತಿ ಮೊದಲಾದ ತಾಮ್ರದ ಸಾಮಾನುಗಳನ್ನೂ ತೆಗೆದುಕೊಂಡು ಹೋದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಅದು ಮಾತ್ರವಲ್ಲ, ದೇವಾಲಯದ ಸೇವೆಗಾಗಿ ಉಪಯೋಗಿಸುತ್ತಿದ್ದ ಬೋಗುಣಿ, ಸಲಿಕೆ, ಕತ್ತರಿ, ಸಾಂಬ್ರಾಣಿಕಳಸ ಮುಂತಾದ ಕಂಚಿನ ಸಾಮಾನುಗಳನ್ನೂ ಬಾಬಿಲೋನಿಗೆ ತೆಗೆದುಕೊಂಡು ಹೋದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಅವುಗಳ ತಾಮ್ರವನ್ನೂ ದೇವಾಲಯದ ಸೇವೆಗಾಗಿ ಉಪಯೋಗಿಸುತ್ತಿದ್ದ ಬೋಗುಣಿ ಸಲಿಕೆ ಕತ್ತರಿ ಧೂಪಾರತಿ ಮೊದಲಾದ ತಾಮ್ರದ ಸಾಮಾನುಗಳನ್ನೂ ಬಾಬೆಲಿಗೆ ತೆಗೆದುಕೊಂಡು ಹೋದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಇದಲ್ಲದೆ ಅವರು ಆಲಯದ ಸೇವೆಗಾಗಿ ಉಪಯೋಗಿಸುತ್ತಿದ್ದ ಬೋಗುಣಿ, ಸಲಿಕೆ, ಕತ್ತರಿ, ಬಟ್ಟಲು ಮತ್ತು ಸಮಸ್ತ ಕಂಚಿನ ಸಲಕರಣೆಗಳನ್ನೂ ತೆಗೆದುಕೊಂಡು ಹೋದರು. ಅಧ್ಯಾಯವನ್ನು ನೋಡಿ |
ಕೆಲಸಗಾರರು ತಮ್ಮ ಕೆಲಸವು ಮುಗಿದ ಬಳಿಕ ಉಳಿದ ಹಣವನ್ನು ಅರಸನಾದ ಯೆಹೋವಾಷನಿಗೆ ಮತ್ತು ಯೆಹೋಯಾದನಿಗೆ ತಂದುಕೊಟ್ಟರು. ಆ ಹಣವನ್ನು ದೇವಾಲಯದ ಉಪಕರಣಗಳನ್ನು ಮಾಡಿಸಲು ಉಪಯೋಗಿಸಿದರು. ಅವು ದೇವಾಲಯದೊಳಗಿನ ಸೇವೆಗೂ ಸರ್ವಾಂಗಹೋಮಕ್ಕೂ ಉಪಯುಕ್ತವಾಗಿದ್ದವು. ಮಾತ್ರವಲ್ಲದೆ ಬೆಳ್ಳಿಬಂಗಾರಗಳಿಂದ ಬೋಗುಣಿ ಮತ್ತು ಇತರ ವಸ್ತುಗಳನ್ನು ಮಾಡಿದರು. ಯೆಹೋಯಾದನು ಜೀವದಿಂದಿರುವ ತನಕ ಪ್ರತೀ ದಿವಸ ಸರ್ವಾಂಗಹೋಮವನ್ನರ್ಪಿಸುತ್ತಿದ್ದನು.