15 ನೆಬೂಜರದಾನನು ಅಗ್ಗಿಷ್ಟಿಕೆಗಳನ್ನು ಮತ್ತು ಬಟ್ಟಲುಗಳನ್ನು ತೆಗೆದುಕೊಂಡು ಹೋದನು. ಅವನು ಬಂಗಾರದ ವಸ್ತುಗಳನ್ನು ಬಂಗಾರಕ್ಕಾಗಿಯೂ ಬೆಳ್ಳಿಯ ವಸ್ತುಗಳನ್ನು ಬೆಳ್ಳಿಗಾಗಿಯೂ ತೆಗೆದುಕೊಂಡು ಹೋದನು.
ಕೆಲಸಗಾರರು ತಮ್ಮ ಕೆಲಸವು ಮುಗಿದ ಬಳಿಕ ಉಳಿದ ಹಣವನ್ನು ಅರಸನಾದ ಯೆಹೋವಾಷನಿಗೆ ಮತ್ತು ಯೆಹೋಯಾದನಿಗೆ ತಂದುಕೊಟ್ಟರು. ಆ ಹಣವನ್ನು ದೇವಾಲಯದ ಉಪಕರಣಗಳನ್ನು ಮಾಡಿಸಲು ಉಪಯೋಗಿಸಿದರು. ಅವು ದೇವಾಲಯದೊಳಗಿನ ಸೇವೆಗೂ ಸರ್ವಾಂಗಹೋಮಕ್ಕೂ ಉಪಯುಕ್ತವಾಗಿದ್ದವು. ಮಾತ್ರವಲ್ಲದೆ ಬೆಳ್ಳಿಬಂಗಾರಗಳಿಂದ ಬೋಗುಣಿ ಮತ್ತು ಇತರ ವಸ್ತುಗಳನ್ನು ಮಾಡಿದರು. ಯೆಹೋಯಾದನು ಜೀವದಿಂದಿರುವ ತನಕ ಪ್ರತೀ ದಿವಸ ಸರ್ವಾಂಗಹೋಮವನ್ನರ್ಪಿಸುತ್ತಿದ್ದನು.
ಅವನು ತೆಗೆದುಕೊಂಡು ಹೋದ ವಸ್ತುಗಳ ಪಟ್ಟಿಯು ಹೀಗಿದೆ: ಎರಡು ತಾಮ್ರ ಕಂಬಗಳು, ಒಂದು ತೊಟ್ಟಿ ಮತ್ತು ದೇವಾಲಯಕ್ಕೆ ಸೊಲೊಮೋನನು ನಿರ್ಮಿಸಿದ್ದ ಬಂಡಿಗಳು. ಈ ವಸ್ತುಗಳ ತಾಮ್ರವು ತೂಕ ಮಾಡಲಾರದಷ್ಟು ಅಧಿಕವಾಗಿತ್ತು.
ರಾಜನ ವಿಶೇಷ ರಕ್ಷಕದಳದ ಅಧಿಪತಿಯು ಬೋಗುಣಿಗಳನ್ನು, ಧೂಪಾರತಿಗಳನ್ನು, ದೊಡ್ಡ ಬಟ್ಟಲುಗಳನ್ನು, ಪಾತ್ರೆಗಳನ್ನು, ದೀಪಸ್ತಂಭಗಳನ್ನು, ತಟ್ಟೆಗಳನ್ನು, ಪಾನನೈವೇದ್ಯಕ್ಕೆ ಉಪಯೋಗಿಸುವ ಬೋಗುಣಿಗಳನ್ನು ತೆಗೆದುಕೊಂಡು ಹೋದನು. ಚಿನ್ನ ಅಥವಾ ಬೆಳ್ಳಿಯ ಪ್ರತಿಯೊಂದು ವಸ್ತುವನ್ನು ಅವನು ತೆಗೆದುಕೊಂಡನು.
ಹೀರಾಮನು ಗುಂಬಗಳನ್ನು, ಚಿಕ್ಕ ಸಲಿಕೆಗಳನ್ನು ಮತ್ತು ಚಿಕ್ಕ ಗಂಗಾಳಗಳನ್ನು ಮಾಡಿದನು. ರಾಜನಾದ ಸೊಲೊಮೋನನು ಅಪೇಕ್ಷಿಸಿದ್ದ ವಸ್ತುಗಳನ್ನೆಲ್ಲ ಹೀರಾಮನು ಮಾಡಿ ಮುಗಿಸಿದನು. ಯೆಹೋವನ ದೇವಾಲಯಕ್ಕಾಗಿ ಹೀರಾಮನು ಮಾಡಿದ ವಸ್ತುಗಳ ಪಟ್ಟಿ ಹೀಗಿದೆ: