2 ಅರಸುಗಳು 25:18 - ಪರಿಶುದ್ದ ಬೈಬಲ್18 ನಂತರ, ನೆಬೂಜರದಾನನು, ಪ್ರಧಾನಯಾಜಕನಾದ ಸೆರಾಯನನ್ನು, ಎರಡನೆಯ ಯಾಜಕನಾದ ಚೆಫನ್ಯನನ್ನು ಮತ್ತು ಮೂವರು ದ್ವಾರಪಾಲಕರನ್ನು ಹಿಡಿದುಕೊಂಡು ಹೋದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಕಾವಲುದಂಡಿನ ಅಧಿಪತಿಯಾದ ನೆಬೂಜರದಾನನು ಹಿಡಿದುಕೊಂಡು ಹೋಗಿದ್ದ ಜನರಲ್ಲಿ ಮಹಾಯಾಜಕನಾದ ಸೆರಾಯನು, ಎರಡನೆಯ ಯಾಜಕನಾದ ಚೆಫನ್ಯನು ಮೂರು ಮಂದಿ ದ್ವಾರಪಾಲಕರು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ರಕ್ಷಾದಳದ ನಾಯಕ ನೆಬೂಜರದಾನನು ಹಿಡಿದುಕೊಂಡು ಹೋದ ಜನರಲ್ಲಿ ಪ್ರಧಾನ ಯಾಜಕ ಸೆರಾಯನು, ಮುಖ್ಯ ಯಾಜಕ ಚೆಫನ್ಯನು, ಮೂರು ಮಂದಿ ದ್ವಾರಪಾಲಕರು ಸೇರಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಕಾವಲುದಂಡಿನ ಅಧಿಪತಿಯಾದ ನೆಬೂಜರದಾನನು ಹಿಡಿದುಕೊಂಡುಹೋದ ಜನರಲ್ಲಿ ಮಹಾಯಾಜಕನಾದ ಸೆರಾಯನು, ಎರಡನೆಯ ತರಗತಿಯ ಯಾಜಕನಾದ ಚೆಫನ್ಯನು, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಕಾವಲುಗಾರರ ಅಧಿಪತಿಯು ಮುಖ್ಯಯಾಜಕನಾದ ಸೆರಾಯನನ್ನೂ, ಎರಡನೆಯ ಯಾಜಕನಾದ ಚೆಫನ್ಯನನ್ನೂ, ಮೂವರು ದ್ವಾರಪಾಲಕರನ್ನೂ ಹಿಡಿದುಕೊಂಡು ಹೋದನು. ಅಧ್ಯಾಯವನ್ನು ನೋಡಿ |
ನಂತರ ರಾಜನು ಪ್ರಧಾನಯಾಜಕನಾದ ಹಿಲ್ಕೀಯನಿಗೆ, ಇತರ ಯಾಜಕರಿಗೆ, ದ್ವಾರಪಾಲಕರಿಗೆ, ಬಾಳ್‌ದೇವರಿಗೂ ಅಶೇರ ದೇವತೆಗೂ ಮತ್ತು ಆಕಾಶದ ನಕ್ಷತ್ರಗಳಿಗೂ ಉಪಯೋಗಿಸುತ್ತಿದ್ದ ಎಲ್ಲಾ ಸಲಕರಣೆಗಳನ್ನು ದೇವಾಲಯದಿಂದ ಹೊರತರುವಂತೆ ಆಜ್ಞಾಪಿಸಿದನು. ಯೋಷೀಯನು ಜೆರುಸಲೇಮಿನ ಹೊರಗೆ ಕಿದ್ರೋನ್ ಹೊಲಗಳಲ್ಲಿ ಅವುಗಳನ್ನು ಸುಟ್ಟುಹಾಕಿದನು. ಅವರು ಬೂದಿಯನ್ನು ಬೇತೇಲಿಗೆ ತೆಗೆದುಕೊಂಡು ಹೋದರು.
“‘ಇದಾದ ಮೇಲೆ ನಾನು ಯೆಹೂದದ ರಾಜನಾದ ಚಿದ್ಕೀಯನನ್ನು ಮತ್ತು ಅಧಿಪತಿಗಳನ್ನು ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನಿಗೆ ಒಪ್ಪಿಸುತ್ತೇನೆ. ಜೆರುಸಲೇಮಿನ ಕೆಲವು ಜನರು ಭಯಂಕರವಾದ ರೋಗದಿಂದ ಸಾಯುವುದಿಲ್ಲ; ಕೆಲವು ಜನರು ಖಡ್ಗಗಳಿಗೆ ಆಹುತಿಯಾಗುವದಿಲ್ಲ; ಕೆಲವರು ಹಸಿವಿನಿಂದ ಸಾಯುವುದಿಲ್ಲ. ಅಂಥವರನ್ನು ನಾನು ನೆಬೂಕದ್ನೆಚ್ಚರನಿಗೆ ಕೊಡುತ್ತೇನೆ. ಯೆಹೂದದ ವೈರಿಯು ಗೆಲ್ಲುವಂತೆ ನಾನು ಮಾಡುತ್ತೇನೆ. ನೆಬೂಕದ್ನೆಚ್ಚರನ ಸೈನಿಕರು ಯೆಹೂದ್ಯರನ್ನು ಕೊಲ್ಲಬಯಸುತ್ತಾರೆ. ಆದ್ದರಿಂದ ಯೆಹೂದ ಮತ್ತು ಜೆರುಸಲೇಮಿನ ಜನರು ಖಡ್ಗಗಳಿಗೆ ಬಲಿಯಾಗುವರು. ನೆಬೂಕದ್ನೆಚ್ಚರನು ಸ್ವಲ್ಪವೂ ದಯೆ ತೋರುವದಿಲ್ಲ. ಆ ಜನರ ಸಲುವಾಗಿ ಅವನು ಮರುಗುವದಿಲ್ಲ.’