Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 25:22 - ಪರಿಶುದ್ದ ಬೈಬಲ್‌

22 ಬಾಬಿಲೋನ್ ರಾಜನಾದ ನೆಬೂಕದ್ನೆಚ್ಚರನು ಯೆಹೂದ ದೇಶದಲ್ಲಿ ಕೆಲವು ಜನರನ್ನು ಬಿಟ್ಟನು. ಅವನು ಅಹೀಕಾಮನ ಮಗನೂ ಶಾಫಾನನ ಮೊಮ್ಮಗನೂ ಆದ ಗೆದಲ್ಯನನ್ನು ಯೆಹೂದದಲ್ಲಿ ಜನರಿಗೆ ರಾಜ್ಯಪಾಲನನ್ನಾಗಿ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ತಾನು ಯೆಹೂದ ದೇಶದಲ್ಲಿ ಉಳಿಸಿದ ಜನರ ಮೇಲೆ ಅಹೀಕಾಮನ ಮಗನೂ, ಶಾಫಾನನ ಮೊಮ್ಮಗನೂ ಆದ ಗೆದಲ್ಯ ಎಂಬುವನನ್ನು ಅಧಿಪತಿಯನ್ನಾಗಿ ನೇಮಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಬಾಬಿಲೋನಿನ ಅರಸ ನೆಬೂಕದ್ನೆಚ್ಚರನು ತಾನು ಜುದೇಯ ದೇಶದಲ್ಲಿ ಉಳಿಸಿದ ಜನರ ಮೇಲೆ, ಅಹೀಕಾಮನ ಮಗನೂ ಶಾಫಾನನ ಮೊಮ್ಮಗನೂ ಆದ ಗೆದಲ್ಯ ಎಂಬವನನ್ನು ರಾಜ್ಯಪಾಲನನ್ನಾಗಿ ನೇಮಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ತಾನು ಯೆಹೂದದೇಶದಲ್ಲಿ ಉಳಿಸಿದ ಜನರ ಮೇಲೆ ಅಹೀಕಾಮನ ಮಗನೂ ಶಾಫಾನನ ಮೊಮ್ಮಗನೂ ಆದ ಗೆದಲ್ಯ ಎಂಬವನನ್ನು ಅಧಿಪತಿಯನ್ನಾಗಿ ನೇವಿುಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ಯೆಹೂದ ದೇಶದಲ್ಲಿ ಉಳಿಸಿದ ಜನರ ಮೇಲೆ, ಶಾಫಾನನ ಮೊಮ್ಮಗನೂ, ಅಹೀಕಾಮನ ಮಗನೂ ಆದ ಗೆದಲ್ಯನನ್ನು ರಾಜ್ಯಪಾಲನನ್ನಾಗಿ ನೇಮಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 25:22
10 ತಿಳಿವುಗಳ ಹೋಲಿಕೆ  

ಅವರು ಯೆರೆಮೀಯನನ್ನು ಕಾರಾಗೃಹದ ಅಂಗಳದಿಂದ ಹೊರಗೆ ಕರೆದು ತಂದರು. ಬಾಬಿಲೋನಿನ ಆ ಸೈನ್ಯಾಧಿಕಾರಿಗಳು ಯೆರೆಮೀಯನನ್ನು ಗೆದಲ್ಯನ ವಶಕ್ಕೆ ಕೊಟ್ಟರು. ಗೆದಲ್ಯನು ಅಹೀಕಾಮನ ಮಗ ಮತ್ತು ಅಹೀಕಾಮನು ಶಾಫಾನನ ಮಗನಾಗಿದ್ದನು. ಯೆರೆಮೀಯನನ್ನು ಮನೆಗೆ ಕರೆದುಕೊಂಡು ಹೋಗಬೇಕೆಂದು ಗೆದಲ್ಯನಿಗೆ ಆಜ್ಞಾಪಿಸಲಾಯಿತು. ಅದರಂತೆ ಯೆರೆಮೀಯನನ್ನು ಮನೆಗೆ ಕರೆದುಕೊಂಡು ಹೋಗಲಾಯಿತು; ಅವನು ತನ್ನ ಜನರೊಂದಿಗೆ ವಾಸಿಸತೊಡಗಿದನು.


ಅವರು ಒಟ್ಟಿಗೆ ಊಟ ಮಾಡುತ್ತಿದ್ದಾಗ, ಇಷ್ಮಾಯೇಲ್ ಮತ್ತು ಅವನ ಹತ್ತು ಜನರು ಎದ್ದು ಅಹೀಕಾಮನ ಮಗನಾದ ಗೆದಲ್ಯನನ್ನು ಖಡ್ಗದಿಂದ ಕೊಂದರು. ಗೆದಲ್ಯನನ್ನು ಬಾಬಿಲೋನಿನ ರಾಜನು ಯೆಹೂದದ ಅಧಿಪತಿಯಾಗಿ ನೇಮಿಸಿದ್ದನು.


ಶಾಫಾನನ ಮಗನಾದ ಅಹೀಕಾಮನು ಒಬ್ಬ ಪ್ರಮುಖ ವ್ಯಕ್ತಿಯಾಗಿದ್ದನು. ಅಹೀಕಾಮನು ಯೆರೆಮೀಯನಿಗೆ ಬೆಂಬಲ ಕೊಟ್ಟನು; ಯಾಜಕರು ಮತ್ತು ಪ್ರವಾದಿಗಳು ಅವನನ್ನು ಕೊಲ್ಲದಂತೆ ಕಾಪಾಡಿದರು.


ಆಗ ಅರಸನು ಹಿಲ್ಕೀಯ, ಶಾಫಾನನ ಮಗನಾದ ಅಹೀಕಾಮ್, ಮೀಕನ ಮಗನಾದ ಅಬ್ದೋನ್, ಕಾರ್ಯದರ್ಶಿಯಾದ ಶಾಫಾನ್ ಮತ್ತು ಸೇವಕನಾದ ಅಸಾಯ ಇವರಿಗೆ ಹೇಳಿದ್ದೇನೆಂದರೆ,


ಅನಂತರ ರಾಜನು ಯಾಜಕನಾದ ಹಿಲ್ಕೀಯನಿಗೆ, ಶಾಫಾನನ ಮಗನಾದ ಅಹೀಕಾಮನಿಗೆ, ಮೀಕಾಯನ ಮಗನಾದ ಅಕ್ಬೋರನಿಗೆ, ಕಾರ್ಯದರ್ಶಿಯಾದ ಶಾಫಾನನಿಗೆ ಮತ್ತು ರಾಜಸೇವಕನಾದ ಅಸಾಯನಿಗೆ ಒಂದು ಆಜ್ಞೆಯನ್ನು ನೀಡಿದನು.


ಆದರೆ ಏಳನೆಯ ತಿಂಗಳಲ್ಲಿ, ರಾಜನ ಕುಲದವನೂ ಎಲೀಷಾಮನ ಮೊಮ್ಮಗನೂ ನೆತನ್ಯನ ಮಗನೂ ಆದ ಇಷ್ಮಾಯೇಲನು ಹತ್ತು ಜನರೊಂದಿಗೆ ಬಂದು ಗೆದಲ್ಯನನ್ನು ಕೊಂದುಹಾಕಿದನು. ಇಷ್ಮಾಯೇಲ ಮತ್ತು ಅವನ ಜನರು ಮಿಚ್ಛದಲ್ಲಿ ಗೆದಲ್ಯನ ಜೊತೆಗಿದ್ದ ಯೆಹೂದ್ಯರನ್ನು ಮತ್ತು ಬಾಬಿಲೋನಿನವರನ್ನು ಕೊಂದುಹಾಕಿದರು.


ಏಳನೇ ತಿಂಗಳಿನಲ್ಲಿ ನೆತನ್ಯನ ಮಗನೂ ಎಲೀಷಾಮನ ಮೊಮ್ಮಗನೂ ಆದ ಇಷ್ಮಾಯೇಲನು ಅಹೀಕಾಮನ ಮಗನಾದ ಗೆದಲ್ಯನಲ್ಲಿಗೆ ಬಂದನು. ಇಷ್ಮಾಯೇಲನು ತನ್ನ ಹತ್ತು ಮಂದಿಯೊಂದಿಗೆ ಬಂದನು. ಆ ಜನರು ಮಿಚ್ಫ ಪಟ್ಟಣಕ್ಕೆ ಬಂದರು. ಇಷ್ಮಾಯೇಲನು ರಾಜವಂಶೀಯನಾಗಿದ್ದನು. ಅವನು ಯೆಹೂದದ ರಾಜನ ಒಬ್ಬ ಅಧಿಕಾರಿಯಾಗಿದ್ದನು. ಇಷ್ಮಾಯೇಲ್ ಮತ್ತು ಅವನ ಜನರು ಗೆದಲ್ಯನೊಂದಿಗೆ ಊಟಮಾಡಿದರು.


ಆದರೆ ಯೆಹೋವನ ಆಜ್ಞೆಯನ್ನು ಉಲ್ಲಂಘಿಸಿ ಯೋಹಾನಾನನು ಮತ್ತು ಸೇನಾಧಿಪತಿಗಳು ಅಳಿದುಳಿದ ಜನರನ್ನು ಯೆಹೂದದಿಂದ ಈಜಿಪ್ಟಿಗೆ ಕರೆದುಕೊಂಡು ಹೋದರು. ಈ ಮುಂಚೆ ಶತ್ರುಗಳು ಆ ಜನರನ್ನು ಬೇರೆ ದೇಶಗಳಿಗೆ ತೆಗೆದುಕೊಂಡು ಹೋಗಿದ್ದರು. ಆದರೆ ಅವರು ಯೆಹೂದಕ್ಕೆ ತಿರುಗಿ ಬಂದಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು