2 ಅರಸುಗಳು 25:23 - ಪರಿಶುದ್ದ ಬೈಬಲ್23 ಬಾಬಿಲೋನ್ ರಾಜನು ಗೆದಲ್ಯನನ್ನು ರಾಜ್ಯಪಾಲನನ್ನಾಗಿ ನೇಮಿಸಿರುವುದನ್ನು ಸೇನಾಧಿಪತಿಗಳು ಮತ್ತು ಅವನ ಜನರು ಕೇಳಿ ಮಿಚ್ಛದಲ್ಲಿದ್ದ ಗೆದಲ್ಯನ ಬಳಿಗೆ ಬಂದರು. ಈ ಸೇನಾಧಿಪತಿಗಳು ಯಾರೆಂದರೆ: ನೆತನ್ಯನ ಮಗನಾದ ಇಷ್ಮಾಯೇಲ, ಕಾರೇಹನ ಮಗನಾದ ಯೋಹಾನಾನ್, ನೆಟೋಫದವನೂ ತನ್ಹುಮೆತನ ಮಗನೂ ಆದ ಸೆರಾಯ, ಮಾಕಾತ್ಯರಲ್ಲಿ ಒಬ್ಬನ ಮಗನಾದ ಯಾಜನ್ಯ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ತಪ್ಪಿಸಿಕೊಂಡು ಉಳಿದಿದ್ದ ಯೆಹೂದ ಸೇನಾಧಿಪತಿಗಳು ಗೆದಲ್ಯನು ಬಾಬೆಲಿನ ಅರಸನಿಂದ ಅಧಿಪತಿಯಾಗಿ ನೇಮಿಸಲ್ಪಟ್ಟಿದ್ದಾನೆಂಬ ವರ್ತಮಾನವನ್ನು ಕೇಳಿ, ತಮ್ಮ ಜನರೊಡನೆ ಮಿಚ್ಪದಲ್ಲಿ ವಾಸವಾಗಿದ್ದ ಗೆದಲ್ಯನ ಬಳಿಗೆ ಹೋದರು. ಅವರು ಯಾರೆಂದರೆ, ನೆತನ್ಯನ ಮಗನಾದ ಇಷ್ಮಾಯೇಲನು, ಕಾರೇಹನ ಮಗನಾದ ಯೋಹಾನಾನ್, ನೆಟೋಫದವನಾದ, ತನ್ಹುಮೆತನ ಮಗನಾದ ಸೆರಾಯನು, ಮಾಕಾ ಊರಿನವನಾದ ಯಾಜನ್ಯನು ಇವರೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಅಳಿದು ಉಳಿದಿದ್ದ ಯೆಹೂದ ಸೇನಾಪತಿಗಳು, ಗೆದಲ್ಯನು ಬಾಬಿಲೋನಿನ ಅರಸನಿಂದ ರಾಜ್ಯಪಾಲನಾಗಿ ನೇಮಕವಾಗಿದ್ದಾನೆಂಬ ಸಮಾಚಾರವನ್ನು ಕೇಳಿ, ತಮ್ಮ ಜನರೊಡನೆ ಮಿಚ್ಪದಲ್ಲಿ ವಾಸವಾಗಿದ್ದ ಅವನ ಬಳಿಗೆ ಬಂದರು. ಅವರ ಹೆಸರುಗಳು ಇವು: ನೆತನ್ಯನ ಮಗ ಇಷ್ಮಾಯೇಲನು, ಕಾರೇಹನ ಮಗ ಯೋಹಾನಾನ್, ನೆಟೋಫದವನೂ ತನ್ಹುಮೆತನ ಮಗನೂ ಆದ ಸೆರಾಯನು, ಮಾಕಾ ಊರಿನವನಾದ ಯಾಜನ್ಯನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 [ತಪ್ಪಿಸಿಕೊಂಡು ಉಳಿದಿದ್ದ] ಯೆಹೂದ ಸೇನಾಪತಿಗಳು ಗೆದಲ್ಯನು ಬಾಬೆಲಿನ ಅರಸನಿಂದ ಅಧಿಪತಿಯಾಗಿ ನೇವಿುಸಲ್ಪಟ್ಟನೆಂಬ ವರ್ತಮಾನವನ್ನು ಕೇಳಿ ತಮ್ಮ ಜನರೊಡನೆ ವಿುಚ್ಪದಲ್ಲಿ ವಾಸವಾಗಿದ್ದ ಅವನ ಬಳಿಗೆ ಹೋದರು. ಅವರು ಯಾರಂದರೆ - ನೆತನ್ಯನ ಮಗನಾದ ಇಷ್ಮಾಯೇಲನು, ಕಾರೇಹನ ಮಗನಾದ ಯೋಹಾನಾನ್, ನೆಟೋಫದವನೂ ತನ್ಹುಮೆತನ ಮಗನೂ ಆದ ಸೆರಾಯನು, ಮಾಕಾ ಊರಿನವನಾದ ಯಾಜನ್ಯನು ಇವರೇ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಆದರೆ ಬಾಬಿಲೋನಿನ ಅರಸನು ಗೆದಲ್ಯನನ್ನು ರಾಜ್ಯಪಾಲನಾಗಿ ಮಾಡಿದ್ದಾನೆಂಬ ಸುದ್ದಿಯನ್ನು ಕೇಳಿದ ಮೇಲೆ, ಉಳಿದಿದ್ದ ಯೆಹೂದ ಸೇನಾಧಿಪತಿಗಳೂ ಅವರ ಜನರೂ, ನೆತನ್ಯನ ಮಗ ಇಷ್ಮಾಯೇಲನೂ, ಕಾರೇಹನ ಮಗ ಯೋಹಾನಾನ್, ನೆಟೋಫದವನಾದ ತನ್ಹುಮೆತನ ಮಗ ಸೆರಾಯ್, ಮಾಕಾತ್ಯರಲ್ಲಿ ಒಬ್ಬನ ಮಗ ಯಾಜನ್ಯ, ಇವರೆಲ್ಲರೂ ತಮ್ಮ ಜನರಸಹಿತವಾಗಿ ಮಿಚ್ಪದಲ್ಲಿದ್ದ ಗೆದಲ್ಯನ ಬಳಿಗೆ ಬಂದರು. ಅಧ್ಯಾಯವನ್ನು ನೋಡಿ |