2 ಅರಸುಗಳು 25:25 - ಪರಿಶುದ್ದ ಬೈಬಲ್25 ಆದರೆ ಏಳನೆಯ ತಿಂಗಳಲ್ಲಿ, ರಾಜನ ಕುಲದವನೂ ಎಲೀಷಾಮನ ಮೊಮ್ಮಗನೂ ನೆತನ್ಯನ ಮಗನೂ ಆದ ಇಷ್ಮಾಯೇಲನು ಹತ್ತು ಜನರೊಂದಿಗೆ ಬಂದು ಗೆದಲ್ಯನನ್ನು ಕೊಂದುಹಾಕಿದನು. ಇಷ್ಮಾಯೇಲ ಮತ್ತು ಅವನ ಜನರು ಮಿಚ್ಛದಲ್ಲಿ ಗೆದಲ್ಯನ ಜೊತೆಗಿದ್ದ ಯೆಹೂದ್ಯರನ್ನು ಮತ್ತು ಬಾಬಿಲೋನಿನವರನ್ನು ಕೊಂದುಹಾಕಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಆದರೆ ಏಳನೆಯ ತಿಂಗಳಿನಲ್ಲಿ ರಾಜವಂಶದವನೂ, ಎಲೀಷಾಮನ ಮೊಮ್ಮಗನೂ, ನೆತನ್ಯನ ಮಗನೂ ಆದ ಇಷ್ಮಾಯೇಲನು ಹತ್ತು ಮಂದಿ ಆಳುಗಳೊಡನೆ ಬಂದು ಗೆದಲ್ಯನನ್ನೂ, ಅವನ ಸಂಗಡ ಮಿಚ್ಪದಲ್ಲಿದ್ದ ಯೆಹೂದ್ಯರನ್ನೂ, ಕಸ್ದೀಯರನ್ನೂ ಸಂಹರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಆದರೆ ಏಳನೆಯ ತಿಂಗಳಿನಲ್ಲಿ ರಾಜವಂಶದವನೂ ಎಲೀಷಮನ ಮೊಮ್ಮಗನೂ ನೆತನ್ಯನ ಮಗನೂ ಆದ ಇಷ್ಮಾಯೇಲನು ಹತ್ತುಮಂದಿ ಆಳುಗಳೊಡನೆ ಬಂದು ಗೆದಲ್ಯನನ್ನು, ಅವನ ಸಂಗಡ ಮಿಚ್ಪದಲ್ಲಿದ್ದ ಯೆಹೂದ್ಯರನ್ನು ಹಾಗು ಬಾಬಿಲೋನಿಯಾದವರನ್ನು ಸಂಹರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಆದರೆ ಏಳನೆಯ ತಿಂಗಳಿನಲ್ಲಿ ರಾಜವಂಶದವನೂ ಎಲೀಷಾಮನ ಮೊಮ್ಮಗನೂ ನೆತನ್ಯನ ಮಗನೂ ಆದ ಇಷ್ಮಾಯೇಲನು ಹತ್ತು ಮಂದಿ ಆಳುಗಳೊಡನೆ ಬಂದು ಗೆದಲ್ಯನನ್ನೂ ಅವನ ಸಂಗಡ ವಿುಚ್ಪದಲ್ಲಿದ್ದ ಯೆಹೂದ್ಯರನ್ನೂ ಕಸ್ದೀಯರನ್ನೂ ಸಂಹರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಆದರೆ ಏಳನೆಯ ತಿಂಗಳಲ್ಲಿ ಅರಸನ ಸಂತಾನದವನೂ, ಎಲೀಷಾಮನ ಮೊಮ್ಮಗನೂ, ನೆತನ್ಯನ ಮಗನೂ ಆದ ಇಷ್ಮಾಯೇಲನು ಅವನ ಸಂಗಡ ಹತ್ತು ಮಂದಿಯೂ ಬಂದು ಗೆದಲ್ಯನನ್ನೂ, ಅವನ ಸಂಗಡ ಮಿಚ್ಪದಲ್ಲಿದ್ದ ಯೆಹೂದ್ಯರನ್ನೂ, ಬಾಬಿಲೋನಿಯರನ್ನೂ ಕೊಂದುಹಾಕಿದರು. ಅಧ್ಯಾಯವನ್ನು ನೋಡಿ |
ಆಗ ಕಾರೇಹನ ಮಗನಾದ ಯೋಹಾನಾನನು ಮಿಚ್ಫದಲ್ಲಿ ಗೆದಲ್ಯನೊಂದಿಗೆ ರಹಸ್ಯವಾಗಿ ಮಾತನಾಡಿದನು. ಯೋಹಾನಾನನು ಗೆದಲ್ಯನಿಗೆ ಹೀಗೆ ಹೇಳಿದನು: “ನಾನು ಹೋಗಿ ನೆತನ್ಯನ ಮಗನಾದ ಇಷ್ಮಾಯೇಲನ ಕೊಲೆ ಮಾಡುವೆನು. ಯಾರಿಗೂ ಆ ವಿಷಯ ತಿಳಿಯುವುದಿಲ್ಲ. ನಾವು ಇಷ್ಮಾಯೇಲನಿಗೆ ನಿನ್ನನ್ನು ಕೊಲ್ಲುವ ಅವಕಾಶ ಕೊಡಬಾರದು. ಅದರಿಂದ ನಿನ್ನ ಆಶ್ರಯದಲ್ಲಿ ಬಂದು ನೆಲೆಸಿದ ಎಲ್ಲಾ ಯೆಹೂದ್ಯರು ಮತ್ತೆ ಬೇರೆಬೇರೆ ದೇಶಗಳಲ್ಲಿ ಚದುರಿ ಹೋಗಬೇಕಾಗುತ್ತದೆ. ಆಗ ಅಳಿದುಳಿದ ಕೆಲವೇ ಜನ ಯೆಹೂದಿಗಳು ಸಹ ಇಲ್ಲವಾಗುತ್ತಾರೆ.”